ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

Written By:

ಎಂಜಿನ್ ವಿಭಾಗದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ದುಬಾರಿ ಬೆಲೆಯ ಫೋರ್ಡ್ ಎಂಡೀವರ್ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಯಾದಗಿರಿ ಜಿಲ್ಲೆಯ ಶಹಾಪುರ ಹೊರವಲಯದಲ್ಲಿ ಈ ಅವಘಡ ಸಂಭವಿಸಿದ್ದು, ಬಿಜೆಪಿ ಮುಖಂಡ ಡಾ.ಶರಣ ಭೂಪಾಲರೆಡ್ಡಿ ಎಂಬುವರಿಗೆ ಸೇರಿದ ಕಾರು ಇದಾಗಿದೆ. ಮನೆಯಿಂದ ದೇವಾಲಯಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ಎಂಜಿನ್ ವಿಭಾಗದಲ್ಲಿನ ದೋಷವೇ ಈ ಅವಘಡಕ್ಕೆ ಕಾರಣವಾಗಿದೆ.

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಕಾರು ಚಾಲನೆಯಲ್ಲಿರುವಾಗಲೇ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಕೆಲವೇ ನಿಮಿಷಗಳಲ್ಲಿ ಫೋರ್ಡ್ ಎಂಡೀವರ್ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಈ ವೇಳೆ ಕಾರಿನಲ್ಲಿದ್ದ ನಾಲ್ವರು ಬೆಂಕಿಯ ಕಿಡಿ ಕಾಣಿಸಿಕೊಂಡ ತಕ್ಷಣವೇ ಕಾರು ನಿಲ್ಲಿಸಿ ಕೆಳಕ್ಕೆ ಇಳಿದುಕೊಂಡಿದ್ದು, ಎಂಜಿನ್‌ನಲ್ಲಿ ಏನಾಗುತ್ತಿದೆ ಎಂದು ನೋಡುವಷ್ಟರಲ್ಲೇ ಬೆಂಕಿಯ ಕೆನ್ನಾಲಿಯು ಕಾರಿನ ಒಳಭಾಗಕ್ಕೂ ಹರಡಿಕೊಂಡಿದೆ.

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಬೆಂಕಿ ನಂದಿಸುವ ವೇಳೆಗಾಗಲೇ ಕಾರು ಧಗಧಗನೇ ಹೊತ್ತಿ ಉರಿದಿದ್ದು, ಪರಿಣಾಮ ಕೆಲಕಾಲ ಯಾದಗಿರಿ-ಶಹಾಪೂರ ರಸ್ತೆ ಸಂಚಾರವೂ ಸಹ ಅಸ್ತವ್ಯಸ್ತಗೊಂಡಿತ್ತು. ತದನಂತರ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಯು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಎಂಡೀವರ್ ಕಾರಿನ ಎಂಜಿನ್ ನಲ್ಲಿರುವ ತಾಂತ್ರಿಕ ದೋಷದಿಂದಾಗಿಯೇ ಬೆಂಕಿ ಹೊತ್ತಿಕೊಂಡಿದೆ ಎನ್ನುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆ ಆಗಿಲ್ಲಾ ಎನ್ನುವುದೇ ಸಮಾಧಾನಕರ ಸಂಗತಿ.

Picture credit: Prajavani

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಆದರೇ, ಬಲಿಷ್ಠ ಎಂಜಿನ್ ಸೇರಿದಂತೆ ಹತ್ತು ಹಲವು ಸುಧಾರಿತ ತಂತ್ರಜ್ಞಾನಗಳನ್ನು ಹೊಂದಿರುವ ಫೋರ್ಡ್ ಎಂಡೀವರ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಲವು ಅನುಮಾನಗಳಿಗೆ ಎಡೆಮಾಡಿದ್ದು, ಪೂರ್ಣ ಪ್ರಮಾಣದ ತನಿಖೆ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ.

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಇನ್ನು ದೆಹಲಿ ಎಕ್ಸ್‌ಶೋರಂ ಪ್ರಕಾರ 28,29,000 ಬೆಲೆ ಹೊಂದಿರುವ ಫೋರ್ಡ್ ಎಂಡೀವರ್ ಕಾರುಗಳು 2.2-ಲೀಟರ್ ಮತ್ತು 3.2-ಲೀಟರ್ ಎರಡು ಎಂಜಿನ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಏಳು ಏರ್‌ಬ್ಯಾಗ್, ಎಬಿಎಸ್ ಸೇರಿದಂತೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯ ಹೊಂದಿದೆ.

ರಸ್ತೆಯ ಮಧ್ಯೆದಲ್ಲೇ ಹೊತ್ತಿ ಉರಿದ ಕಾರಿನ ವಿಡಿಯೋ ಇಲ್ಲಿದೆ ನೋಡಿ...

ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...

ಕಾರು ಮಾಲೀಕರೇ ಎಚ್ಚರ

ಕಾರುಗಳ ಎಂಜಿನ್ ವಿಭಾಗದಲ್ಲಿ ಈ ರೀತಿಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೇ ಇಂತಹ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆಯಿಂದ ಇರುವುದು ಒಳಿತು. ನಿಮ್ಮ ಕಾರುಗಳ ಎಂಜಿನ್ ವಿಭಾಗದಲ್ಲೂ ಯಾವುದೇ ಸಣ್ಣಪುಟ್ಟ ದೋಷಗಳಿದ್ದರೂ ಕೂಡಲೇ ಪರಿಹರಿಸಿಕೊಂಡು ಆಗಬಹುದಾದ ದುರಂತಗಳನ್ನು ತಪ್ಪಿಸುವುದು ಒಳಿತು.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಮಾರಾಟಕ್ಕಿರುವ 132 ಕೋಟಿ ಮೌಲ್ಯದ ಈ ನಂಬರ್ ಪ್ಲೇಟ್‌ ವಿಶೇಷತೆ ಏನು?

ನಟ ಸುದೀಪ್ ಹೊಸ ಜೀಪ್ ಕಂಪಾಸ್ ಖರೀದಿಸಿದ್ದು ಯಾರಿಗಾಗಿ ಗೊತ್ತಾ?

30 ಕೋಟಿಗೂ ಹೆಚ್ಚು ಬೆಲೆಬಾಳುವ ಈ ಐಷಾರಾಮಿ ಎಸ್‌ಯುವಿ ಕಾರಿನ ವಿಶೇಷತೆ ಏನು?

ವಾಹನ ಪ್ರಿಯರಿಗೆ ಸಿಹಿ ಸುದ್ಧಿ ನೀಡಿದ ಸಾರಿಗೆ ಇಲಾಖೆ..

ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಖರೀದಿ ಮಾಡೋದು ಲಾಭಕ್ಕಿಂತ ನಷ್ಟವೇ ಹೆಚ್ಚಂತೆ? ಇದು ನಿಜವೇ?

Read more on off beat accident
English summary
Ford Endeavour Catches Fire — Passengers Safe! Escape Without Injuries.

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark