ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಹೆಚ್ಚಾಗುತ್ತಿದ್ದು, ಹೀಗಿರುವಾಗ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಲು ಮುಂದಾಗಿರುವ ಕರ್ನಾಟಕ ಸರ್ಕಾರವು ಸದ್ಯದಲ್ಲೇ ಕೆಲವು ಕಠಿಣ ಸಾರಿಗೆ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ಮಾಲಿನ್ಯ ಪ್ರಮಾಣವು ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊನ್ನೆಯಷ್ಟೇ ಖಡಕ್ ವಾರ್ನ್ ಮಾಡಿದ್ದ ಸುಪ್ರೀಂಕೋರ್ಟ್, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಹಳೆಯ ಕಾರುಗಳನ್ನು ಬ್ಯಾನ್ ಮಾಡುವಂತೆ ಆದೇಶ ನೀಡಿತ್ತು.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಹೀಗಾಗಿ, ರಾಷ್ಟ್ರ ರಾಜಧಾನಿ ದಿಲ್ಲಿಯ ಪರಿಸ್ಥಿತಿ ಬೆಂಗಳೂರಿಗೆ ಬಾರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ಹೊಸ ವಾಹನಗಳ ನೋಂದಣಿಯನ್ನು ಮುಂದಿನ 2 ವರ್ಷಗಳ ರದ್ದುಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಚಿಂತನೆ ನಡೆಸಿದ್ದು, ಹೊಸ ಕಾಯ್ದೆ ಅನುಷ್ಠಾನದಿಂದ ಆಗಬಹುದಾದ ಸಾಧಕ-ಭಾದಕಗಳ ಕುರಿತಾಗಿ ಪರಿಶೀಲನೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಕಳೆದ ವಾರವಷ್ಟೇ ಈ ಬಗ್ಗೆ ಸಭೆ ನಡೆಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಅವರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಮುಂದಿನ 2-3 ವರ್ಷ ಹೊಸ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತಂತೆ ಚಿಂತನೆ ನಡೆಸಲಾಗಿದೆ ಎಂದಿದ್ದರು. ಅದೇ ವಿಚಾರ ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಈಗಾಗಲೇ 1 ಕೋಟಿಗೆ ಸನಿಹದಲ್ಲಿದ್ದು, ನಿತ್ಯ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಇದರಿಂದ ಸಾರಿಗೆ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಜತೆ ಚರ್ಚೆ ನಡೆಸಿದ್ದ ಉಪಮುಖ್ಯಮಂತ್ರಿಗಳು ಹೊಸ ವಾಹನಗಳ ನೋಂದಣಿಗೆ ಬ್ರೇಕ್ ಹಾಕುವ ಬಗ್ಗೆ ಸುಳಿವು ನೀಡಿದ್ದರು.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಇದಕ್ಕೆ ಪೂರಕವಾಗಿ ಸಾರಿಗೆ ಇಲಾಖೆಯು ನಿನ್ನೆಯು ಕೂಡಾ ಮಹತ್ವದ ಸಭೆ ನಡೆಸಿದೆ ಎನ್ನಲಾಗಿದ್ದು, ಹೊಸ ವಾಹನಗಳ ನೋಂದಣಿ ಬಂದ್ ಮಾಡುವುದಕ್ಕಿಂತ ಮಾಲಿನ್ಯಕ್ಕೆ ಮೂಲ ಕಾರಣವಾಗಿರುವ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಿಷೇಧಿಸುವುದು ಒಳಿತು ಎನ್ನುವ ಮಾತುಗಳು ಕೇಳಿಬಂದಿವೆ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಒಂದು ವೇಳೆ ಹೊಸ ವಾಹನಗಳ ನೋಂದಣಿಯನ್ನು ಬಂದ್ ಮಾಡಿದರು ಕೂಡಾ ಮಾಲಿನ್ಯ ಪ್ರಮಾಣ ತಗ್ಗುತ್ತೆ ಎನ್ನುವುದಕ್ಕಿಂತ ಅದರಿಂದ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬೀಳಲಿದೆ ಎನ್ನುವುದು ಸದ್ಯದ ಲೆಕ್ಕಾಚಾರ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಇದಲ್ಲದೇ ಹೊಸ ವಾಹನ ನೋಂದಣಿ ಬಂದ್ ಮಾಡಿದ್ದಲ್ಲಿ ವಾಹನ ಉತ್ಪಾದನಾ ಸಂಸ್ಥೆಗಳು ಸಾಕಷ್ಟು ನಷ್ಟ ಅನುಭವಿಸಲಿದ್ದು, ಈ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಉದ್ಯೋಗಿಗಳು ಸಹ ಕೆಲಸ ಕಳೆದುಕೊಳ್ಳುವ ಸಾಧ್ಯತೆಗಳಿವೆ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಇದರಿಂದ ಹೊಸ ವಾಹನ ನೋಂದಣಿ ನಿಷೇಧಕ್ಕಿಂತ ರಾಷ್ಟ್ರ ರಾಜಧಾನಿ ದೆಹಲಿ ಮಾದರಿಯಂತೆ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಿಷೇಧಿಸುವ ಸಾಧ್ಯಗಳಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಇನ್ನು ಯಾವೆಲ್ಲಾ ಬದಲಾವಣೆಗಳನ್ನು ಮಾಡಲಾಗುತ್ತೊ ಗೊತ್ತಿಲ್ಲ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

1 ಕೋಟಿಗೆ ತಲುಪಿದ ವಾಹನಗಳ ಸಂಖ್ಯೆ..!

ಸದ್ಯ ಬೆಂಗಳೂರಿನಲ್ಲಿ 80 ಲಕ್ಷಕ್ಕೂ ಹೆಚ್ಚು ನೋಂದಣಿ ಪಡೆದ ವಾಹನಗಳಿದ್ದು, ಹೊರಗಿನಿಂದ ಬಂದು ಹೋಗುವ ವಾಹನಗಳ ಸಂಖ್ಯೆಯು ಲೆಕ್ಕಕ್ಕಿಲ್ಲ. ಜೊತೆಗೆ ಪ್ರತಿ ದಿನ ಬೆಂಗಳೂರಿನಲ್ಲಿ 2500ಕ್ಕೂ ಹೆಚ್ಚು ಹೊಸ ವಾಹನಗಳು ನೋಂದಣಿ ಪಡೆದುಕೊಳ್ಳುತ್ತಿದ್ದು, ಇದು ಹೀಗೆ ಮುಂದುವರಿದಲ್ಲಿ 2020ಕ್ಕೆ ಒಂದು ಕೋಟಿ ತಲುಪಲಿದೆಯೆಂತೆ.

MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಕಳೆದ ತಿಂಗಳ ಹಿಂದಷ್ಟೇ 32 ಸಾವಿರ ಹಳೆಯ ವಾಹನಗಳ ಹೊಗೆ ತಪಾಸಣೆ ಮಾಡಿದ್ದ ರಾಜ್ಯ ಮಾಲಿನ್ಯ ನಿಯಂತ್ರಣವು, 14% ರಷ್ಟು ಪೆಟ್ರೋಲ್ ವಾಹನಗಳು ಹಾಗೂ 25% ರಷ್ಟು ಡೀಸೆಲ್ ವಾಹನಗಳಿಂದ ವಿಷಕಾರಿ ಅನಿಲ ಬರುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತಂದಿತ್ತು.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಮುಂದುವರಿದು, ಬೆಂಗಳೂರು ನಗರದಲ್ಲಿ ಬೃಹತ್ ಗಾತ್ರದ ವಾಹನಗಳ ಸಂಚಾರವನ್ನು ರಿಂಗ್ ರಸ್ತೆಗಳತ್ತ ಡೈವರ್ಟ್ ಮಾಡಬೇಕು ಎಂದು ಮನವಿ ಮಾಡಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು, ಕಾನೂನು ಮೀರಿದವರಿಗೆ ದೊಡ್ಡ ಪ್ರಮಾಣದ ದಂಡ ವಿಧಿಸಬೇಕು ಎಂಬ ಸಲಹೆ ನೀಡಿತ್ತು.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಅದ್ರೆ ಈ ಬಗ್ಗೆ ಮೊದಮೊದಲ ಅಸಡ್ಡೆ ಮಾಡಿದ್ದ ರಾಜ್ಯ ಸರ್ಕಾರವು ಇದೀಗ ಎಚ್ಚೆತ್ತಿಕೊಂಡಿದ್ದು, ಹೊಸ ವಾಹನ ಖರೀದಿದಾರರನ್ನು ಸಾರ್ವಜನಿಕ ಸಾರಿಗೆ ಬಳಸುವಂತೆ ಉತ್ತೇಜಿಸಲು ಅಧಿಕ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸುವ ಕುರಿತಂತೆ ನಿರ್ಣಯವನ್ನು ಸಹ ಕೈಗೊಂಡಿದೆ.

MOST READ: ವಾಹನ ಮಾಲೀಕರೇ ಇತ್ತ ಕಡೆ ಗಮನಹರಿಸಿ- ಇಲ್ಲವಾದ್ರೆ ನಿಮ್ಮ ವಾಹನವೂ ಸೀಜ್ ಆಗಬಹುದು..!

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಇಲ್ಲಿ ಇನ್ನೊಂದು ಪ್ರಮುಖ ವಿಚಾರ ಅಂದ್ರೆ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಮಾಲಿನ್ಯಕ್ಕೆ ಸರಿಯಾಗಿ ದುರಸ್ತಿ ಮಾಡದ ಹಳೆಯ ಬಿಎಂಟಿಸಿ ಬಸ್‌ಗಳೇ ಅತಿ ಹೆಚ್ಚು ಮಾಲಿನ್ಯ ಉತ್ಪತ್ತಿ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಖಾಸಗಿ ವಾಹನ ಬಳಕೆದಾರರು ಹೊಸ ವಾಹನ ಖರೀದಿ ಮೇಲೆ ನಿಯಂತ್ರಣ ಹೇರುವುದು ಎಷ್ಟು ಸರಿ ಎನ್ನುವ ಮಾತುಗಳು ಸಹ ಕೇಳಿಬರುತ್ತಿವೆ.

ಬೆಂಗಳೂರಿನಲ್ಲಿ 2 ವರ್ಷಗಳ ಕಾಲ ಹೊಸ ವಾಹನಗಳ ನೋಂದಣಿ ನಿಷೇಧಕ್ಕೆ ಸಿದ್ದತೆ?

ಒಟ್ಟಿನಲ್ಲಿ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಹೊಸ ಕ್ರಮಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರವು ಸದ್ಯದಲ್ಲೇ ಹೊಸ ವಾಹನ ನೋಂದಣಿಗೆ ಬ್ರೇಕ್ ಹಾಕಬೇಕೆ? ಅಥವಾ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಿಷೇಧ ಮಾಡಬೇಕಾ? ಎನ್ನುವ ಕುರಿತಂತೆ ಸದ್ಯದಲ್ಲೇ ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದ್ದು, ಜೊತೆಗೆ ವಾಹನಗಳ ವಿಮೆ, ಪಾರ್ಕಿಂಗ್ ಶುಲ್ಕಗಳನ್ನು ಸಹ ಹೆಚ್ಚುಸುವ ಬಗ್ಗೆ ಚರ್ಚಿಸಲಾಗಿದೆ.

Most Read Articles

Kannada
English summary
Ban On Registration Of New Vehicles In Bangalore — Does It Really Make A Difference?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X