ವೇಗದಲ್ಲಿದ್ದ ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಒಂದೇ ಕುಟುಂಬದ ಐವರು ದುರ್ಮರಣ

Written By:

ಹೊಸ ವರ್ಷದ ಮುಂಜಾನೆಯೇ ಭೀಕರ ಅಪಘಾತ ಒಂದು ನಡೆದಿದೆ. ವೇಗದಲ್ಲಿದ್ದ ಕಾರಿಗೆ ಅಡ್ಡ ಬಂದ ಬಾಲಕಿಯನ್ನು ರಕ್ಷಿಸಲು ಹೋಗಿ ಒಂದೇ ಕುಟಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ನಡೆದಿದೆ.

To Follow DriveSpark On Facebook, Click The Like Button
ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಐವರು ದುರ್ಮರಣ

ಬೆಳಂಬೆಳಗ್ಗೆ 5 ಗಂಟೆಗೆ ಕೊರಟಗೆರೆ ಗೊರವಹಳ್ಳಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಏಳು ಮಂದಿ ಕಾರಿನಲ್ಲಿ ಹೋಗುತ್ತಿದ್ದರು. ಮಗುವೊಂದು ಕಾರಿಗೆ ಅಡ್ಡ ಬಂದಿದ್ದರಿಂದ ಮಗುವನ್ನು ರಕ್ಷಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ನಿಂತಿದ್ದ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿದೆ.

ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಐವರು ದುರ್ಮರಣ

ಅಡ್ಡ ಬಂದ ಬಾಲಕಿಯನ್ನು ಬಚಾವ್ ಮಾಡಲು ಹೋಗಿ ರಸ್ತೆ ಬದಿ ನಿಂತ್ತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದಿದ್ದು, ರಭಸವಾಗಿ ಗುದ್ದಿದ್ದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Recommended Video - Watch Now!
Shocking Car Accident That Happened In Karunagappally, Kerala
ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಐವರು ದುರ್ಮರಣ

ಡಿಕ್ಕಿಯ ರಭಸಕ್ಕೆ ಮಾರುತಿ ಸುಜುಕಿ ಎರ್ಟಿಗಾ ಕಾರು ಮತ್ತು ಅದರಲ್ಲಿದ್ದವರ ದೇಹಗಳು ನಜ್ಜುಗುಜ್ಜಾಗಿದ್ದು, ಚೌಡನಕುಪ್ಪೆ ಹಾಲಿ ಮದ್ದೂರು ವಾಸಿಗಳಾದ ಸಿದ್ದೋಜೀರಾವ್(60), ಉಷಾಬಾಯಿ(35), ಕೀರ್ತನ(7), ಹಿತೇಶ್(3) ಹಾಗೂ ಭುವನ್(16) ಮೃತಪಟ್ಟವರು.

ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಐವರು ದುರ್ಮರಣ

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹೊಸ ವರ್ಷದ ಅಂಗವಾಗಿ ಕೊರಟಗೆರೆ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆಗಾಗಿ ತೆರಳುತ್ತಿದ್ದಾಗಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತಪ್ಪದೇ ಓದಿರಿ-ರಸ್ತೆ ಬದಿ ಇದ್ದ ಹೆಲ್ಮೆಟ್‌ಗಳನ್ನು ಟ್ರಾಫಿಕ್ ಪೊಲೀಸರು ಒಡೆದು ಹಾಕಿದ್ದೇಕೆ?

ಕಾರಿನ ಗೇರ್ ಸ್ಕಿಪ್ ಮಾಡುವುದರಿಂದ ಗೇರ್‌ಬಾಕ್ಸ್ ಹಾಳಾಗುತ್ತಾ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಐವರು ದುರ್ಮರಣ

ಇನ್ನು ಗಾಯಾಳುಗಳನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಿತ್ರ ಕೃಪೆ- ಪಬ್ಲಿಕ್ ಟಿವಿ

ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಐವರು ದುರ್ಮರಣ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ದೇಶದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ಚಾಲಕರು ಸರಿಯಾದ ಮಾರ್ಗದಲ್ಲಿ ಚಾಲನೆ ಮಾಡುವುದು ಒಳಿತು. ಇದರ ಜೊತೆಗೆ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳು ತುಂಬಾ ಮುಖ್ಯವಾಗಿದ್ದು, ಕುಣಿಗಲ್ ಬಳಿ ನಡೆದ ಅಪಘಾತ ಪ್ರಕರಣದಲ್ಲಿ ಮಾರುತಿ ಸುಜುಕಿ ಎರ್ಟಿಗಾದಲ್ಲೂ ಕೂಡಾ ಸುಧಾರಿತ ಮಾದರಿಯ ಸುರಕ್ಷಾ ಸೌಲಭ್ಯಗಳು ಇಲ್ಲದ ಹಿನ್ನೆಲೆ ಅಪಘಾತದ ತೀವ್ರತೆ ಹೆಚ್ಚಳಕ್ಕೆ ಮುಖ್ಯ ಕಾರಣ ಎನ್ನಬಹುದು.

ತಪ್ಪದೇ ಓದಿರಿ-ನಿಯಂತ್ರಣ ತಪ್ಪಿದ ಹೈ ಸ್ಪಿಡ್‌ ಕಾರು- ಎದುರಿಗೆ ಬರುತ್ತಿದ್ದ ಹಿರೋ ಬೈಕ್ ಪೀಸ್ ಪೀಸ್....

ಉಬರ್ ಚಾಲಕನ ದುರ್ವರ್ತನೆಯಿಂದ ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ..!!

ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!

Read more on accident ಅಪಘಾತ
English summary
5 People Dead On Spot As Car Hits Canter From Behind At Kunigal.
Please Wait while comments are loading...

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark