ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

By Praveen Sannamani

ದೇಶಾದ್ಯಂತ ಪ್ರತಿದಿನ ಹತ್ತಾರು ಭೀಕರ ಅಪಘಾತ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸದ ಹಿನ್ನೆಲೆ ಅನೇಕ ವಾಹನ ಸವಾರರು ಮತ್ತು ಪ್ರಯಾಣಿಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರವು ಸದ್ಯ ಪಾವತಿ ಮಾಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಅಪಘಾತದಲ್ಲಿ ಸಾವನ್ನಪ್ಪಿದ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರಿಗೆ ಇದುವರೆಗೆ ಒದಗಿಸಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರವು, ಪರಿಹಾರದ ಮೊತ್ತವನ್ನು ಪಡೆಯುವಲ್ಲಿ ಇದುವರೆಗೆ ಇದ್ದ ಕೆಲವು ನಿಯಮಗಳನ್ನು ಸಡಿಸಲಾಗಿರುವುದು ಮತ್ತೊಂದು ಪ್ರಮುಖ ವಿಚಾರ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಸದ್ಯ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ರೂ. 50 ಸಾವಿರ ಪರಿಹಾರ ನೀಡುತ್ತಿದ್ದು, ಅಪಘಾತಗಳಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ರೂ.25 ಸಾವಿರ ಪರಿಹಾರ ಒದಗಿಸುತ್ತಿದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಆದ್ರೆ ಕೆಲವು ಅಪಘಾತ ಪ್ರಕರಣಗಳಲ್ಲಿ ಮೃತರ ಕುಟುಂಬಗಳಿಗೆ ಒದಗಿಸಲಾಗುವ ರೂ. 50 ಸಾವಿರ ಅಥವಾ ಗಾಯಾಳುಗಳಿಗೆ ಒದಗಿಸಲಾಗುವ ರೂ. 25 ಸಾವಿರ ಪರಿಹಾರ ಯಾವುದಕ್ಕೂ ಸಾಲದು. ಕಾರಣ, ಮೃತ ವ್ಯಕ್ತಿಯನ್ನು ನಂಬಿಕೊಂಡ ಕುಟುಂಬಸ್ಥರ ಪಾಡು ಹೇಳತಿರದು.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಪರಿಹಾರ ಮೊತ್ತವನ್ನು 50 ಸಾವಿರದಿಂದ 5 ಲಕ್ಷ ಹೆಚ್ಚಿಸಿದ್ದು, ಗಾಯಾಳುಗಳಿಗೆ 25 ಸಾವಿರದಿಂದ 2.5 ಲಕ್ಷ ಪರಿಹಾರ ಒದಗಿಸುವ ಸುತ್ತೋಲೆಗೆ ಸಹಿ ಹಾಕಿದೆ. ಜೊತೆಗೆ ಹೊಸ ನಿಯಮವು ಈ ಕೂಡಲೇ ಜಾರಿಗೆ ಬರುವಂತೆ ನಿರ್ದೇಶನ ನೀಡಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಕೇಂದ್ರ ಸರ್ಕಾರ ಹೊಸ ನಿಯಮದಂತೆ, ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರು 5 ಲಕ್ಷ ಪರಿಹಾರಕ್ಕೆ ಅರ್ಹರಾಗಿದ್ದು, ಕೆಲವು ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬಗಳು ಇನ್ನು ಹೆಚ್ಚಿನ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಮೃತರ ಕುಟಂಬಗಳಿಗೆ ಕೇಂದ್ರ ಸರ್ಕಾರವು ಒದಗಿಸುವ ರೂ. 5 ಲಕ್ಷ ಪರಿಹಾರವಲ್ಲದೇ ಇನ್ನು ಹೆಚ್ಚಿನ ಪರಿಹಾರ ಬಯಸಿದ್ದಲ್ಲಿ ಮೃತ ವ್ಯಕ್ತಿಯ ವಯಸ್ಸು 24ಕ್ಕಿಂತ ಹೆಚ್ಚು ಇರಬೇಕೆಂಬ ನಿಯಮವನ್ನು ಉಲ್ಲೇಖ ಮಾಡಿದ್ದು, ಅಂತವರು ಮಾತ್ರ ಮೋಟಾರ್ ಆಕ್ಸಿಡೆಂಟ್ ಕ್ಲೈಮ್ ಟ್ರಿಬ್ಯೂನಲ್(ಎಂಎಸಿಟಿ)ನಲ್ಲಿ ಹೆಚ್ಚಿನ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ರೂ. 5 ಲಕ್ಷಕ್ಕಿಂತ ಹೆಚ್ಚಿನ ಪರಿಹಾರ ಬೇಕಿದ್ದಲ್ಲಿ ಅಪಘಾತದಲ್ಲಿ ಮೃತ ವ್ಯಕ್ತಿಯ ವಯಸ್ಸು, ಆರ್ಥಿಕ ಹಿನ್ನೆಲೆ, ಮೃತ ವ್ಯಕ್ತಿಯ ಆದಾಯವನ್ನೇ ನಂಬಿಕೊಂಡವರ ಸಂಖ್ಯೆಯ ಆಧಾರದ ಮೇಲೆ ಹೆಚ್ಚಿನ ಪರಿಹಾರ ಸಿಗಲಿದ್ದು, ಇದಕ್ಕಾಗಿ ಕಾನೂನಾತ್ಮಾಕವಾಗಿ ಸೂಕ್ತ ದಾಖಲೆ ಒದಗಿಸಬೇಕಾಗುತ್ತದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿ ಕುಟುಂಬಕ್ಕೆ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕವಾಗಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದು, ಅಷ್ಟೇ ಪ್ರಮಾಣದಲ್ಲಿ ಅಪಘಾತಗಳ ಸಂಖ್ಯೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವು ಕಠಿಣ ರಸ್ತೆ ನಿಯಮಗಳನ್ನು ಜಾರಿಗೆ ತರುತ್ತಿದೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ವಾಹನಗಳ ವಿಮಾ ಪ್ರಿಯಿಮಂ ಮೊತ್ತ ಹೆಚ್ಚಳ?

ಕೇಂದ್ರ ಸರ್ಕಾರವು ಅಪಘಾತದಲ್ಲಿ ಮೃತ ಕುಟುಂಬಗಳಿಗೆ ದೊಡ್ಡ ಮೊತ್ತದ ಪರಿಹಾರ ಒದಗಿಸುವ ಸಲುವಾಗಿ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಿಸಿದ್ದು, ಅತ್ತ ವಾಹನಗಳ ಮೇಲೆ ನಿಗದಿಪಡಿಸುವ ವಿಮಾ ಪ್ರಿಯಿಯಂ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೂ ಈ ಬಗ್ಗೆ ಯಾವುದೇ ನಿಖರ ಮಾಹಿತಿಯಿಲ್ಲ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಇನ್ನು ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಒದಗಿಸುವ 5 ಲಕ್ಷ ಪರಿಹಾರ ಮೊತ್ತವನ್ನು ಹೊರತುಪಡಿಸಿ ವಾಹನ ಮಾಲೀಕರು ಪಾವತಿಸುವ ವಿಮಾ ಮೊತ್ತದ ಆಧಾರ ಮೇಲೂ ಸಂತ್ರಸ್ತರ ಪರಿಹಾರವು ನಿಗದಿಯಾಗಲಿದ್ದು, ಇದು ವಾಹನ ಮಾಲೀಕರು ವಿಮಾ ಸಂಸ್ಥೆಗೊಂದಿಗೆ ಮಾಡಿಕೊಂಡ ಥರ್ಡ್ ಪಾರ್ಟಿ ಇನ್ಸುರೆನ್ಸ್ ಮೇಲೆ ನಿರ್ಧಾರವಾಗುತ್ತೆ.

ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...

ಇದರಲ್ಲಿ ಕೆೇವಲ ಮೃತರ ಕುಟುಂಬಗಳಿಗೆ ಮಾತ್ರವಲ್ಲದೇ ಹಾನಿಗೊಳಗಾದ ವಾಹನಗಳಿಗೂ ಪರಿಹಾರ ಸಿಗಲಿದ್ದು, ಪ್ರತಿಯೊಬ್ಬ ವಾಹನ ಮಾಲೀಕರು ಕೂಡಾ ತಪ್ಪದೇ ಥರ್ಡ್ ಪಾರ್ಟಿ ಇನ್ಸುರೆನ್ಸ್ ಹೊಂದಿರಲೇಬೇಕು. ಆದ್ರೆ ಅದೇನೇ ಇರಲಿ ಸುರಕ್ಷಿತವಾಗಿ ವಾಹನೆ ಚಾಲನೆ ಮಾಡಿದಲ್ಲಿ ನಿಮಗೆ ಅಷ್ಟೇ ಅಲ್ಲದೇ ಇತರಿಗೂ ಒಳ್ಳೆಯದು. ಇಲ್ಲಿ ಭಾರೀ ಪ್ರಮಾಣದ ಪರಿಹಾರ ಮೊತ್ತ ದೊಡ್ಡ ವಿಚಾರವಲ್ಲ. ನೀವು ಚೆನ್ನಾಗಿದಲ್ಲಿ ಪರಿಹಾರದ ಹಣಕ್ಕಿಂತ ಹತ್ತು ಪಟ್ಟು ಗಳಿಕೆ ಮಾಡಬಹುದು.

ಹ್ಯಾಪಿ ಜರ್ನಿ.....

Most Read Articles

Kannada
Read more on auto news accident off beat
English summary
Compensation For Road Accident Victims To Increase Ten Fold — Revised First Time In Two Decades.
Story first published: Monday, May 14, 2018, 15:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more