ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

By Praveen Sannamani

2030ರ ವೇಳೆಗೆ ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಇದಕ್ಕೆ ಪ್ರಮುಖ ವಾಹನ ಉತ್ಪಾದಕರು ಸಹ ಸ್ಪಂದಿಸುತ್ತಿರುವ ಹೊಸ ಮುನ್ನುಡಿಗೆ ಕಾರಣವಾಗಿದೆ. ಹೀಗಾಗಿ ಪರಿಸರ ಸ್ನೇಹಿಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರವು ವಿಶೇಷ ಸೌಲಭ್ಯಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಹೆಚ್ಚುತ್ತಿರುವ ಜಾಗತಿಕ ತಾಪಮಾನದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆಗೆ ಬ್ರೇಕ್ ಹಾಕುವ ಉದ್ದೇಶದಿಂದ ಎಲ್ಲಾ ಆಟೋ ಉತ್ಪಾದಕರು ಬೃಹತ್ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಮಧ್ಯೆ ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದೆ. ಇದು ಇವಿ ವಾಹನಗಳ ಉತ್ಪಾದನೆಗೆ ಮತ್ತಷ್ಟು ಬಲ ತುಂಬಲಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಉತ್ತೇಜಿಸಲು ಈ ಯೋಜನೆ ಭಾರೀ ಪ್ರಾಮುಖ್ಯತೆ ಪಡೆಯಲಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳಿಗೆ ಗ್ರಿನ್ ನಂಬರ್ ಪ್ಲೆಟ್ ಜೊತೆಗೆ ಟೋಲ್ ಶುಲ್ಕದಲ್ಲಿ ವಿನಾಯ್ತಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ ತನ್ನ ನಿಲವು ವ್ಯಕ್ತಪಡಿಸಲಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಆಫರ್‌ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಕೆಲವು ಬಲ್ಲ ಮೂಲಗಳ ಪ್ರಕಾರ ಎಲೆಕ್ಟ್ರಿಕ್ ಕಾರು ಖರೀದಿಸುವ ಮಾಲೀಕರಿಗೆ 3 ವರ್ಷದ ತನಕ ದೇಶಾದ್ಯಂತ ಪಾರ್ಕಿಂಗ್ ಶುಲ್ಕ ವಿನಾಯ್ತಿ ಕೂಡಾ ನೀಡಲಿದ್ದು, ಎಲೆಕ್ಟ್ರಿಕ್ ಕಾರುಗಳ ಮುಖ್ಯ ಮುಖ್ಯ ತಾಂತ್ರಿಕ ಅಂಶವಾದ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣವನ್ನು ತಗ್ಗಿಸಿರುವುದು ಇವಿ ಕಾರುಗಳ ಮೇಲಿನ ಬೆಲೆ ಇಳಿಕೆಗೆ ಸಹಕಾರಿಯಾಗುವುದರ ಜೊತೆಗೆ ಮಾರಾಟಕ್ಕೂ ಅನುಕೂಲವಾಗಲಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಹೀಗಾಗಿ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲೆ ಇಷ್ಟು ದಿನ ಇದ್ದ ಶೇ.28ರಷ್ಟು ಜಿಎಸ್‌ಟಿ ತೆರಿಗೆಯು ಇನ್ಮುಂದೆ ಶೇ.18ಕ್ಕೆ ಇಳಿಕೆಯಾಗಲಿದ್ದು, ಪರಿಸರಕ್ಕೆ ಪೂರಕವಾಗಿರುವ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹಲವು ಜನಪರ ಯೋಜನೆಗಳನ್ನ ರೂಪಿಸಿತ್ತಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಅಗ್ಗವಾಗಲಿವೆ ಎಲೆಕ್ಟ್ರಿಕ್ ಕಾರುಗಳ ಬೆಲೆ

ಎಲೆಕ್ಟ್ರಿಕ್ ಕಾರುಗಳು ಮುಖ್ಯ ತಾಂತ್ರಿಕ ಅಂಶವಾದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪನ್ನಗಳಿಗಾಗಿ ಇಷ್ಟು ದಿನ ವಿದೇಶಿ ಮಾರುಕಟ್ಟೆಯನ್ನು ಅವಲಂಭಿಸಿದ್ದ ಭಾರತವು ಇನ್ಮುಂದೆ ಸ್ವದೇಶಿ ನಿರ್ಮಿತ ಲೀಥಿಯಂ ಅಯಾನ್ ಬ್ಯಾಟರಿಗಳ ಉತ್ಪಾದನೆ ಆರಂಭಿಸುವ ಮಹತ್ವದ ಯೋಜನೆಗೆ ಚಾಲನೆ ನೀಡುತ್ತಿದ್ದು, ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳ ಅಭಿವೃದ್ಧಿಗೆ ವರವಾಗಿ ಪರಿಣಮಿಸಲಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಎಲೆಕ್ಟ್ರಿಕ್ ವಾಹನಳಲ್ಲಿ ಬಳಸಲಾಗುವ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ದೊಡ್ಡ ಮಟ್ಟದಲ್ಲಿ ಉತ್ಪಾದನೆ ಮಾಡಲು ಸಹಕರಿಸುವಂತೆ ಇಸ್ರೋ ಸಂಸ್ಥೆಗೆ ಕೇಂದ್ರ ಸರ್ಕಾರವು ಈ ಹಿಂದೆ ಮಹತ್ವದ ಸೂಚಿನೆ ನೀಡಿತ್ತು.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಹೀಗಾಗಿ ಇಸ್ರೋ ಸಂಸ್ಥೆಯು ಲೀಥಿಯಂ ಅಯಾನ್ ತಂತ್ರಜ್ಞಾನವನ್ನು ಅಭಿವೃದ್ಧಿ ಮಾಡಿದ್ದು, ಆರ್‌ಎಎಸ್ಐ ಸೋಲಾರ್ ಪ್ರೈ.ಲಿಮಿಟೆಡ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸ್ಥಳೀಯವಾಗಿಯೇ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿಗಳನ್ನು ಸಿದ್ದಪಡಿಸಲಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಪ್ರಸ್ತುತ ಭಾರತವು ಲೀಥಿಯಂ ಅಯಾನ್ ಬ್ಯಾಟರಿಗಳ ಆಮದಿಗಾಗಿ ಚೀನಾ, ಜಪಾನ್ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳನ್ನು ಅವಲಂಭಿಸಿದ್ದು, 2017ರ ಅವಧಿಯಲ್ಲಿಯೇ ಬರೋಬ್ಬರಿ 150 ಮಿಲಿಯನ್ ಡಾಲರ್ ಮೊತ್ತದ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ಆಮದು ಮಾಡಿಕೊಂಡಿತ್ತು.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಇದು ಎಲೆಕ್ಟ್ರಿಕ್ ಕಾರುಗಳ ಬೆಲೆಯ ಹೆಚ್ಚಳಕ್ಕೆ ಮೂಲ ಕಾರಣವಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳಿಂತಲೂ ಹೆಚ್ಚಿನ ಬೆಲೆ ಹೊಂದಿರುವ ಹಿನ್ನೆಲೆಯಲ್ಲಿ ಇವಿ ಕಾರುಗಳ ಮಾರಾಟ ಪ್ರಕ್ರಿಯೆಯಲ್ಲಿ ಅಷ್ಟಾಗಿ ಮುನ್ನಡೆ ಕಂಡುಬಂದಿರಲಿಲ್ಲ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ ಗೊತ್ತಾ?

ಇದರಿಂದ ಕೇಂದ್ರದ ಮೊರೆಹೊಗಿದ್ದ ಪ್ರಮುಖ ಆಟೋ ಉತ್ಪಾದಕ ಸಂಸ್ಥೆಗಳು ಸ್ಥಳೀಯವಾಗಿಯೇ ಲೀಥಿಯಂ ಅಯಾನ್ ಬ್ಯಾಟರಿಗಳ ಉತ್ಪಾದನೆ ಮಾಡುವತ್ತ ಗಮನಹರಿಸುವಂತೆ ಮನವಿ ಮಾಡಿದ್ದವು. ಇದರ ಫಲವಾಗಿ ದೇಶಿಯವಾಗಿ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ಉತ್ಪಾದನೆ ಮಾಡುವ ಪ್ರಮುಖ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

Most Read Articles

Kannada
Read more on electric cars evergreen
English summary
Discounts on Tolls for electric vehicles, Govt on Discussion.
Story first published: Saturday, August 11, 2018, 16:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X