8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಒಡತಿಯಾದ ಭಾರತದ ಮೊದಲ ಮಹಿಳೆ..!

ಆಟೋ ಉದ್ಯಮದಲ್ಲಿ ಭಾರೀ ಕುತೂಹಲ ಹುಟ್ಟುಹಾಕಿದ್ದ ರೋಲ್ಸ್ ರಾಯ್ಸ್ ಮೊದಲ ಎಸ್‌ಯುವಿ(ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ಕಲಿನಿಯನ್ ಕಾರು ಇದೇ ಡಿಸೆಂಬರ್ 3ರಂದು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಮತ್ತು ಐಷಾರಾಮಿ ಗುಣಲಕ್ಷಣಗಳನ್ನು ಹೊಂದಿರುವ ಹೊಸ ಕಾರು ಖರೀದಿ ಭರಾಟೆ ಜೋರಾಗಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಐಷಾರಾಮಿ ಸೆಡಾನ್‌ ಕಾರುಗಳ ನಿರ್ಮಾಣದಲ್ಲಿ ಹೆಸರುವಾಸಿವಾಗಿರುವ ರೋಲ್ಸ್ ರಾಯ್ಸ್ ಸಂಸ್ಥೆಯು ಇದೇ ಮೊದಲ ಬಾರಿಗೆ ಎಸ್‌ಯುವಿ ಕಾರು ಅಭಿವೃದ್ಧಿ ಮಾಡಿದ್ದು, ಕೇವಲ ಐಷಾರಾಮಿ ಅಷ್ಟೇ ಅಲ್ಲದೇ ಆಪ್ ರೋಡ್ ವೈಶಿಷ್ಟ್ಯತೆಗಳನ್ನು ಹೊತ್ತು ಬಂದಿರುವ ಕಲಿನಿಯನ್ ಕಾರು ನೂರಕ್ಕೂ ಹೆಚ್ಚು ವಿನೂತನ ಸೌಲಭ್ಯಗಳೊಂದಿಗೆ ಜಗತ್ತಿನಲ್ಲಿ ಇದುವರೆಗೆ ಉತ್ಪಾದನೆಯಾದ ಇತರೆ ಐಷಾರಾಮಿ ಎಸ್‌ಯುವಿ ಕಾರುಗಳಿಂತಲೂ ಇದು ವಿಶೇಷ ಎನ್ನಿಸಲಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಆರ್ಕಿಟೆಕ್ಚರ್ ಆಫ್ ಲಗ್ಷುರಿ ಎನ್ನುವ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಲಿನಿಯನ್ ಕಾರು ಉತ್ಪಾದನೆಗೊಂಡಿದ್ದು, ಫ್ಯಾಂಟಮ್ VIII ಕಾರಿಗಿಂತಲೂ ಆಕರ್ಷಕ ನೋಟ ಹೊಂದಿರುವ ಹೊಸ ಕಾರು ಖರೀದಿಗಾಗಿ ಈಗಾಗಲೇ ಸಾವಿರಾರು ಉದ್ಯಮಿಗಳು ಮತ್ತು ರಾಜಕಾರಣಿಗಳು ತುದಿಗಾಲ ಮೇಲೆ ನಿಂತಿದ್ದಾರೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಕಾರು ಬಿಡುಗಡೆಗೂ ಮುನ್ನವೇ ಜಾಗತಿಕವಾಗಿ ಕುತೂಹಲ ಹಾಕಿದ್ದ ಕಲಿನಿಯನ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭವಾದ ಮೊದಲ ಬಾರಿಗೆ ಬುಕ್ ಮಾಡಿದ್ದ ಭಾರತೀಯ ಮೂಲದ ಮಹಿಳೆ ಅಭಿನಿ ಸೋಹಾನ್ ರಾಯ್ ಅವರು ಇದೀಗ ಹೊಸ ಕಾರನ್ನು ಪಡೆದುಕೊಂಡಿದ್ದಾರೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ದುಬೈನಲ್ಲಿ ನೆಲೆಸಿರುವ ಮುಂಬೈ ಮೂಲದ ಅಭಿನಿ ಸೋಹಾನ್ ರಾಯ್ ಅವರು ಅರೈಸ್ ಗ್ರೂಪ್‌ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ 25ನೇ ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅಭಿನಿ ಸೋಹಾನ್ ಅವರ ಪತಿಯಿಂದ ಈ ಗಿಫ್ಟ್ ಸಿಕ್ಕಿದೆ ಎನ್ನಲಾಗಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಇನ್ನು ವಿಶ್ವದರ್ಜೆ ಐಷಾರಾಮಿ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಕಲಿನಿಯನ್ ಕಾರಿನ ಬೆಲೆಯು ಭಾರತದಲ್ಲಿ ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 6.95 ಕೋಟಿ ಬೆಲೆ ಹೊಂದಿದ್ದು, ಇದು ಆನ್ ರೋಡ್ ಬೆಲೆ ಪ್ರಕಾರ ಇದು ರೂ. 8.50 ಕೋಟಿಯಿಂದ ರೂ.9 ಕೋಟಿ ಬೆಲೆ ಪಡೆದುಕೊಳ್ಳಲಿವೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಕಲಿನಿಯನ್ ಅಂದ್ರೆ ಏನು?

ರೋಲ್ಸ್ ರಾಯ್ಸ್ ಸಂಸ್ಥೆಯು ಅಭಿವೃದ್ಧಿ ಮಾಡಿರುವ ಮೊದಲ ಎಸ್‌ಯುವಿಗೆ ಕಲಿನಿಯನ್ ಎಂದು ನಾಮಕರಣ ಮಾಡಲು ಹಲವು ಕಾರಣಗಳಿದ್ದು, ಕಲಿನಿಯನ್ ಎನ್ನುವುದು ಜಗತ್ತಿನ ಅತಿ ದುಬಾರಿ ವಜ್ರದ ಮಾದರಿಯಾಗಿದೆ. ಇದು ಮೊದಲ ಬಾರಿಗೆ 1905ರಲ್ಲಿ ದಕ್ಷಿಣ ಆಫ್ರಿಕಾದ ವಜ್ರದ ಗಣಿಗಳಲ್ಲಿ ಪತ್ತೆಯಾಗಿದ್ದಲ್ಲದೆ 3,106 ಕ್ಯಾರೆಟ್ ವೈಶಿಷ್ಟ್ಯತೆಗಳೊಂದಿಗೆ ಜಗತ್ತಿನ ಅತಿ ದುಬಾರಿ ವಸ್ತುಗಳಲ್ಲಿ ಅದು ಒಂದು ಎಂಬ ಹೆಗ್ಗಳಿಕೆ ಪಡೆದುಕೊಂಡಿತ್ತು.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಹೀಗಾಗಿಯೇ ರೋಲ್ಸ್ ರಾಯ್ಸ್ ಸಂಸ್ಥೆಯು ತನ್ನ ಮೊದಲ ಎಸ್‌ಯುವಿಯನ್ನು ಕಲಿನಿಯನ್ ಎಂದು ನಾಮಕರಣ ಮಾಡುವ ಮೂಲಕ ಜಗತ್ತಿನ ಶ್ರೇಷ್ಠ ಎಸ್‌ಯುವಿ ಎಂದು ವರ್ಣನೆ ಮಾಡಿದ್ದು, ಕಾರಿನ ಪ್ರತಿ ಇಂಚಿಂಚೂ ಕೂಡಾ ಒಂದೊಂದು ವಿಶೇಷತೆಯನ್ನು ಪಡೆದುಕೊಂಡಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಕಾರಿನ ಡಿಸೈನ್

ಕಲಿನಿಯನ್ ಕಾರುಗಳು ಮುಂಭಾಗದಿಂದ ಫ್ಯಾಂಟಮ್ ಸೆಡಾನ್ ಕಾರಿನ ಹೋಲಿಕೆಯಿದ್ದರೂ ಸ್ಟೈನ್ ಲೆಸ್ ಸ್ಟೀಲ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಸ್ಲಾಟ್ ವಿನ್ಯಾಸಗಳಲ್ಲಿ ಸಾಕಷ್ಟು ಬದಲಾವಣೆ ಪಡೆದಿದ್ದು, ಫ್ರಂಟ್ ಬಂಪರ್ ಮತ್ತು ಲೋಗೋ ಡಿಸೈನ್‌ಗಳು ವಿಶೇಷ ಎನ್ನಿಸಲಿವೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಕಲಿನಿಯನ್ ಕಾರುಗಳು 5-ಸೀಟರ್ ಸೌಲಭ್ಯ ಹೊಂದಿರುವ ಎಸ್‌ಯುವಿ ಮಾದರಿಯಾಗಿದ್ದು, 22 ಇಂಚಿನ ಚಕ್ರಗಳನ್ನು ಹೊಂದಿದೆ. ಜೊತೆಗೆ ಅಲ್ಯೂಮಿನಿಯಂ ಪ್ಯಾಟ್‌ಫಾರ್ಮ್ ಮೇಲೆ ಸಿದ್ದವಾಗಿರುವ ಕಲ್ಲಿನನ್ ಕಾರುಗಳು ಫ್ಯಾಂಟಮ್ ಮಾದರಿಯಲ್ಲೇ ಎಂಜಿನ್ ಡಿಸೈನ್ ಪಡೆದಿದೆ.

MOST READ: ರೂ. 1,300 ಕೋಟಿ ವೆಚ್ಚದಲ್ಲಿ ಐಷಾರಾಮಿ ಖಾಸಗಿ ಜೆಟ್ ಖರೀದಿಸಿದ ರ‍್ಯಾಪ್ ಸಿಂಗರ್

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಜೊತೆಗೆ ಆಧುನಿಕ ಐಷಾರಾಮಿ ಎಸ್‌ಯುವಿ ಎಂದೇ ಬಿಂಬಿತವಾಗಿರುವ ಕಲಿನಿಯನ್ ಕಾರುಗಳು ಸೈಡ್ ಪ್ರೋಫೈಲ್‌ನಲ್ಲಿ ಬಲವಾದ ಭುಜ ರೇಖೆಗಳನ್ನು ಹೊಂದಿದ್ದು, ಇದು ಈ ಹಿಂದೆ 1930ರಲ್ಲಿ ನಿರ್ಮಾಣವಾಗಿದ್ದ 'ಡಿ ಬ್ಲ್ಯಾಕ್' ಕಾರಿನ ಕೆಲವು ವಿನ್ಯಾಸಗಳನ್ನು ಸಹ ಇದರಲ್ಲಿ ಎರವಲು ಪಡೆದುಕೊಳ್ಳಲಾಗಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಕಲಿನಿಯನ್ ಕಾರಿನ ಉದ್ದಳತೆ

ಎಸ್‌ಯುವಿ ಹೆಸರಿಗೆ ತಕ್ಕಂತೆ ಅತಿ ಎತ್ತರದ ಬಾಡಿ ಕಿಟ್ ಹೊಂದಿರುವ ಕಲಿನಿಯನ್ ಕಾರುಗಳು 5,341ಎಂಎಂ ಉದ್ದ, 2,164ಎಂಎಂ ಅಗಲ, 1,834ಎಂಎಂ ಎತ್ತರದೊಂದಿಗೆ 3,295ಎಂಎಂ ವೀಲ್ಹ್ ಬೆಸ್ ಸೌಲಭ್ಯ ಹೊಂದಿದೆ.

MOST READ: ಪ್ರಾಯೋಗಿಕ ಪರೀಕ್ಷೆಯಲ್ಲಿ ಅಬ್ಬರಿಸಿದ ಜಗತ್ತಿನ ಅತಿ ವೇಗದ ಬುಲೆಟ್ ಟ್ರೈನ್..!

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಕಾರಿನ ಒಳವಿನ್ಯಾಸ

ಆಧುನಿಕ ಒಳವಿನ್ಯಾಸದೊಂದಿಗೆ ಸಿದ್ದವಾಗಿರುವ ರೋಲ್ಸ್ ರಾಯ್ಸ್ ಕಲಿನಿಯನ್ ಕಾರುಗಳಲ್ಲಿ ಬಳಕೆ ಮಾಡಿರುವ ಐಷಾರಾಮಿ ವೈಶಿಷ್ಟ್ಯತೆಗಳು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಕಾರಿನ ಒಳಗೆ ಪ್ರವೇಶ ಮಾಡಿದ್ದಲ್ಲಿ ಸ್ಪರ್ಗಕ್ಕೆ ಮೂರೇ ಗೇಣು ಎನ್ನುವ ಭಾವನೆ ಮೂಡದೇ ಇರಲಾರದು.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

5-ಸೀಟರ್ ಸಾಮರ್ಥ್ಯವಿರುವ ಈ ಕಾರಿನಲ್ಲಿ ಪ್ರತಿ ಸೀಟುಗಳು ಸಹ ಪ್ರತ್ಯೇಕವಾಗಿ ಎಲೆಕ್ಟ್ರಿಕ್ ಆಪರೇಟ್ ಸೌಲಭ್ಯ ಹೊಂದಿದ್ದು, ನಿಮಗೆ ಬೇಕಾದ ರೀತಿಯಲ್ಲಿ ಹೋಂದಾಣಿಕೆ ಮಾಡಿಕೊಳ್ಳಬಹುದು. ಜೊತೆಗೆ ಬೆರಳುಗಳ ತುದಿಯಲ್ಲೇ ನಿಯಂತ್ರಣ ಮಾಡಬಹುದಾದ ಇನ್ಪೋಟೈನ್‌ಮೆಂಟ್ ಮತ್ತು ಎಂಟರ್‌ಟೈನ್‌ಮೆಂಟ್ ಸೌಲಭ್ಯವನ್ನು ಇದಲ್ಲಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಇದು ತ್ರಿ ಬಾಕ್ಸ್ ಎಸ್‌ಯುವಿ!

ಹೌದು, ಕಲಿನಿಯನ್ ಕಾರುಗಳನ್ನು ರೋಲ್ಸ್ ರಾಯ್ಸ್ ಸಂಸ್ಥೆಯು ತ್ರಿ ಬಾಕ್ಸ್ ಎಸ್‌ಯುವಿ ಎಂದು ಕರೆದಿದೆ. ಇದಕ್ಕೆ ಕಾರಣ, ಈ ಕಾರಿನಲ್ಲಿ ಎಂಜಿನ್‌ ರೂಂ, ಕ್ಯಾಬಿನ್ ಮತ್ತು ಬೂಟ್‌ ಎಂದು ಮೂರು ವಿಭಾಗಗಳನ್ನು ಪ್ರತ್ಯೇಕಿಸಿದೆ. ಇದನ್ನೇ ತ್ರಿ ಬಾಕ್ಸ್‌ ಎಸ್‌ಯುವಿ ಎನ್ನಲಾಗಿದೆ. ಇದು ಇತರೆ ಎಸ್‌ಯುವಿಗಳಲ್ಲಿ ಎಂಜಿನ್‌ ರೂಂ ಮತ್ತು ಕ್ಯಾಬಿನ್‌ಗಳು ಮಾತ್ರ ಇರುತ್ತವೆ. ಕ್ಯಾಬಿನ್‌ಗಳ ಒಳಗೆಯೇ ಬೂಟ್‌ ಇರುತ್ತದೆ. ಹೀಗಾಗಿ ಅವು ಟು ಬಾಕ್ಸ್ ಎಸ್‌ಯುವಿಗಳಾಗಿವೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಇನ್ನು ಮುಂದುವರೆದು, ಕಲಿನಿಯನ್ ಕಾರುಗಳಲ್ಲಿ ಸೂಟ್ ಪ್ಯಾಕೇಜ್ ಸೌಲಭ್ಯವನ್ನು ಸಹ ಸೇರಿಸಲಾಗಿದ್ದು, ಕಾರಿನ ಬೂಟ್ ಸ್ಪೆಸ್ ಬಳಿ ಬಟನ್ ಒತ್ತಿದ್ರೆ ಸಾಕು ಎರಡು ಐಷಾರಾಮಿ ಚೇರ್‌ಗಳು ಸಣ್ಣದೊಂದು ಸಭೆ ನಡೆಸಲು ಅನೂಕಲಕರ ಮಾಡಿಕೊಡುತ್ತವೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಎಂಜಿನ್ ಸಾಮರ್ಥ್ಯ

ಕಲಿನಿಯನ್ ಕಾರುಗಳು 6.75-ಲೀಟರ್(6,750 ಸಿಸಿ) ಟ್ವಿನ್ ಟರ್ಬೋ ವಿ12 ಪೆಟ್ರೋಲ್ ಎಂಜಿನ್ ಹೊಂದಿದ್ದು, 571-ಬಿಎಚ್‌ಪಿ ಮತ್ತು 650-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು. ಹೀಗಾಗಿ ಕಾರಿನ ವೇಗವನ್ನು ಪ್ರತಿ ಗಂಟೆಗೆ 250 ಕಿ.ಮೀ ಟಾಪ್ ಸ್ಪೀಡ್ ಇರಿಸಲಾಗಿದೆ.

MOST READ: ಬಿಡುಗಡೆಗೂ ಮುನ್ನವೇ ಹಾರುವ ಕಾರಿನ ಬೆಲೆ ಪಟ್ಟಿ ಬಿಡುಗಡೆ ಮಾಡಿದ ಪಿಎಲ್-ವಿ ಲಿಬರ್ಟಿ

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಇದಲ್ಲದೇ ರೋಲ್ಸ್ ರಾಯ್ಸ್ ಸಂಸ್ಥೆಯು ಮೊದಲ ಬಾರಿಗೆ ಕಲಿನಿಯನ್ ಕಾರುಗಳನ್ನು ಆಲ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ ಬಿಡುಗಡೆ ಮಾಡಿದ್ದು, ಆಪ್ ರೋಡ್‌ಗಳಲ್ಲೂ ಇದು ತನ್ನ ಕೌಶಲ್ಯ ಪ್ರದರ್ಶನ ಮಾಡಬಲ್ಲದು. ಇದಕ್ಕಾಗಿಯೇ ಕಾರಿನಲ್ಲಿ ವಿವಿಧ ರೀತಿಯ ಡ್ರೈವಿಂಗ್ ಮೊಡ್‌ಗಳನ್ನು ಒದಗಿಸಲಾಗಿದೆ.

8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಖರೀದಿ ಮಾಡಿದ ಭಾರತದ ಮೊದಲ ಮಹಿಳೆ..!

ಹೀಗಾಗಿ ಸದ್ಯದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟಗೊಳ್ಳುತ್ತಿರುವ ಬೆಂಟ್ಲಿ ಬೆಂಟಾಗಾ ಎಸ್‌ಯುವಿ ಮತ್ತು ಲಂಬೋರ್ಗಿನಿ ಉರಸ್ ಎಸ್‌ಯುವಿ ಕಾರುಗಳಿಗೆ ಕುಲಿನಿಯನ್ ಕಾರುಗಳು ತೀವ್ರ ಪೈಪೋಟಿ ನೀಡಲಿದ್ದು, ಭಾರತೀಯ ಮಾರುಕಟ್ಟೆಯಲ್ಲೂ ಸಹ ಕಲಿನಿಯನ್ ಖರೀದಿಗಾಗಿ ನೂರಕ್ಕೂ ಹೆಚ್ಚು ಉದ್ಯಮಿಗಳು ಮತ್ತು ರಾಜಕಾರಣಿಗಳು ಬುಕ್ಕಿಂಗ್ ಮಾಡಿದ್ದಾರೆ.

Source: Sohan Roy

Most Read Articles

Kannada
English summary
First Indian To Buy The Rolls Royce Cullinan Takes It For A Spin. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X