ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಕಚ್ಚಾತೈಲ ಆಮದು ವಿಚಾರದಲ್ಲಿ ಆಗುತ್ತಿರುವ ಅಂತರಾಷ್ಟ್ರೀಯ ಸಂಘರ್ಷದಿಂದಾಗಿ ದೇಶದ ಪ್ರಗತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದ್ದು, ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ಅವಲಂಬನೆಯನ್ನು ತಗ್ಗಿಸಲು ಕೇಂದ್ರ ಸರ್ಕಾರವು ಪರ್ಯಾಯ ಇಂಧನಗಳ ಬಳಕೆ ಮೇಲೆ ಹೆಚ್ಚಿನ ಒತ್ತು ನೀಡುವಂತಹ ಹಲವು ಹೊಸ ಯೋಜನೆಯನ್ನು ಜಾರಿಗೆ ಮಾಡಲು ಮುಂದಾಗಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

2030ರ ಹೊತ್ತಿಗೆ ವಿಶ್ವಾದ್ಯಂತ ಶೇ.99ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ವಿಶ್ವದ ಪ್ರಮುಖ ರಾಷ್ಟ್ರಗಳು ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಪೂರಕವಾದ ಮಾರುಕಟ್ಟೆ ಒದಗಿಸುತ್ತಿದ್ದು, ಇದೀಗ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ದ್ವಿಗುಣಗೊಳಿಸುವ ಸಲುವಾಗಿ ಬೃಹತ್ ಯೋಜನೆಯೊಂದನ್ನು ಜಾರಿ ಮಾಡಲು ಮುಂದಾಗಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಕಾರುಗಳನ್ನ ಖರೀದಿಗೆ ಪೂರಕವಾದ ವಾತಾವರಣ ನಿರ್ಮಿಸಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಯೋಜನೆಗಳಿಗೆ ಚಾಲನೆ ನೀಡಲಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಕೇಂದ್ರ ಬಹತ್ ಕೈಗಾರಿಕಾ ಅಭಿವೃದ್ಧಿ ಸಚಿವಾಲಯವು ಕೇಂದ್ರ ಸಚಿವ ಸಂಪುಟಕ್ಕೆ ಹೊಸ ಶಿಫಾರಸ್ಸು ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟ ಮತ್ತು ಬಳಕೆಯನ್ನು ಹೆಚ್ಚಿಸಲು ಮೊದಲು ಎಲೆಕ್ಟ್ರಿಕ್ ಕಾರುಗಳ ಆಮದು ಮತ್ತು ಬಿಡಿಭಾಗಗಳ ಮೇಲಿನ ಆಮದು ಸುಂಕಗಳನ್ನು ತಗ್ಗಿಸುವಂತೆ ಮನವಿ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಇದಕ್ಕೆ ಕೇಂದ್ರ ಸಚಿವ ಸಂಪುಟ ಸಹ ಸಕಾರಾತ್ಮಕವಾಗಿಯೇ ಪ್ರಕ್ರಿಯಿಸಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ತ್ವರಿತಗತಿಯ ಬೆಳವಣಿಗೆ ಆಗಬೇಕಿದ್ದಲ್ಲಿ ಆಮದು ಸುಂಕಗಳನ್ನು ತಗ್ಗಿಸುವ ಅನಿವಾರ್ಯತೆ ಕುರಿತಂತೆ ಕೇಂದ್ರಕ್ಕೆ ಬಹತ್ ಕೈಗಾರಿಕಾ ಅಭಿವೃದ್ಧಿ ಸಚಿವಾಲಯವು ಮನವರಿಕೆ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಸದ್ಯ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಎಲೆಕ್ಟ್ರಿಕ್ ಕಾರುಗಳು ಖರೀದಿಗೆ ಲಭ್ಯವಿದ್ದು, ಎಲೆಕ್ಟ್ರಿಕ್ ಕಾರು ಖರೀದಿಗೆ ಆಸಕ್ತಿ ಇದ್ದರೂ ಸಹ ಬಹುತೇಕ ಗ್ರಾಹಕರು ಕೆಲವು ಕಾರಣಾಂತರಗಳಿಂದ ಅವುಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಮಾರುಕಟ್ಟೆಯಲ್ಲಿ ಇರುವ ಪ್ರಮುಖ ಎಲೆಕ್ಟ್ರಿಕ್ ಕಾರುಗಳು ಸಾಮಾನ್ಯ ಕಾರುಗಳಿಂತ ಎರಡು ಮೂರು ಪಟ್ಟು ಹೆಚ್ಚು ಬೆಲೆ ಹೊಂದಿರುವುದಲ್ಲದೇ, ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಸಹ ಇವಿ ಕಾರುಗಳ ಖರೀದಿಯು ವ್ಯರ್ಥ ಎನ್ನುವ ಭಾವನೆ ಗ್ರಾಹಕರಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಹೀಗಾಗಿ ಎಲೆಕ್ಟ್ರಿಕ್ ಕಾರುಗಳ ಆಮದು ಮೇಲಿನ ಸುಂಕ ತಗ್ಗಿಸುವುದರಿಂದ ಕಾರಿನ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವುದಲ್ಲದೇ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿರುವ ಕಚ್ಚಾ ತೈಲ ಆಮದು ಮೇಲಿನ ಅವಲಂಬನೆಯು ಸಹ ತಗ್ಗಲಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಮಹೀಂದ್ರಾ ಹೊರತು ಪಡಿಸಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಹೊಸ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯ ಬೀಡಿಭಾಗಗಳಿಗಾಗಿ ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳನ್ನೇ ಅವಲಂಬನೆ ಮಾಡಿದ್ದು, ಇದು ಸಹಜವಾಗಿಯೇ ಎಲೆಕ್ಟ್ರಿಕ್ ಕಾರುಗಳ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಬಹುದು.

MOST READ: ಜನಸಾಮಾನ್ಯರ ಮೇಲೆ ಕೇಸ್ ಜಡಿಯುವ ಪೊಲೀಸರಿಗೆ ಡಿಸಿಎಂ ಪುತ್ರಿಯ ದರ್ಬಾರ್ ಯಾಕೆ ಕಾಣಿಸ್ತಾ ಇಲ್ಲ?

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಇದರಲ್ಲಿ ಮಹೀಂದ್ರಾ ಸಂಸ್ಥೆ ಮಾತ್ರ ಸ್ಥಳೀಯವಾಗಿ ಬೀಡಿಭಾಗಗಳನ್ನು ಬಳಕೆ ಮಾಡುತ್ತಿದೆಯಾದ್ರು ಎಲೆಕ್ಟ್ರಿಕ್ ಕಾರುಗಳಿಗೆ ಬೇಕಿರುವ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಚೀನಾ ಮತ್ತು ತೈವಾನ್ ಮಾರುಕಟ್ಟೆಯನ್ನೇ ನೆಚ್ಚಿಕೊಂಡಿದ್ದು, ಇದನ್ನು ಸಹ ಸ್ಥಳೀಯವಾಗಿಯೇ ನಿರ್ಮಾಣ ಮಾಡಲು ಈಗಾಗಲೇ ಮಹತ್ವದ ಯೋಜನೆಯೊಂದಕ್ಕೆ ಚಾಲನೆ ನೀಡಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಕೇಂದ್ರದ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಮತ್ತು ರಾಶಿ ಸೋಲಾರ್ ಪವರ್ ಸಂಸ್ಥೆಗಳು ಲೀಥಿಯಂ ಅಯಾನ್ ಬ್ಯಾಟರಿ ಅಭಿವೃದ್ಧಿಗಾಗಿ ಪರಸ್ಪರ ಸಹಿ ಹಾಕಿದ್ದು, ಸ್ಥಳೀಯವಾಗಿ ಸದ್ಯದಲ್ಲೇ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ಉತ್ಪಾದನೆ ಆರಂಭ ಮಾಡಲಿವೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಇದರಿಂದಾಗಿ ಇಷ್ಟುಗಳ ಕಾಲ ಲೀಥಿಯಂ ಅಯಾನ್ ಬ್ಯಾಟರಿಗಳ ಆಮದು ಮಾಡಿಕೊಳ್ಳಲು ಚೀನಾ, ಜಪಾನ್, ಮಂಗೋಲಿಯಾ ದೇಶಗಗಳನ್ನೇ ಅವಲಂಭಿಸಿದ್ದ ಭಾರತಕ್ಕೆ ಹೊಸ ಯೋಜನೆಯಿಂದ ಭಾರೀ ಪ್ರಮಾಣದ ಆದಾಯ ಹರಿದು ಬರುವುದಲ್ಲದೇ ಸ್ಥಳೀಯವಾಗಿ ನಿರ್ಮಾಣವಾಗುವುದರಿಂದ ಎಲೆಕ್ಟ್ರಿಕ್ ಕಾರುಗಳನ್ನ ಖರೀದಿಸುವ ಗ್ರಾಹಕರಿಗೂ ಇದರಿಂದ ಲಾಭವಾಗಲಿದೆ.

MOST READ: ಹೈವೆನಲ್ಲಿ ದರೋಡೆ ಮಾಡುತ್ತಿದ್ದ ಖದೀಮರಿಗೆ ಡಿಸಿಪಿ ಅಣ್ಣಾಮಲೈ ಮಾಸ್ಟರ್ ಸ್ಟ್ರೋಕ್..!

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!

ಇನ್ನು ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಮತ್ತಷ್ಟು ಆಫರ್‌ಗಳನ್ನು ನೀಡಲು ಯೋಜನೆ ರೂಪಿಸಿರುವ ಕೇಂದ್ರ ಸರ್ಕಾರವು ಸಬ್ಸಡಿ ಯೋಜನೆ, ಮೂರು ವರ್ಷದ ತನಕ ಟ್ರೋಲ್ ಫ್ರಿ ಮತ್ತು ಎರಡು ವರ್ಷಗಳ ಇನ್ಸುರೆನ್ಸ್, ಬಿಡಿಭಾಗಗಳ ಖರೀದಿ ಮೇಲೆ ರಿಯಾಯ್ತಿ ದರ ಅನ್ವಯವಾಗುವಂತೆ ನಿಯಮ ರೂಪಿಸುತ್ತಿದೆ.

Most Read Articles

Kannada
English summary
Heavy Industries Ministry Proposes Customs Duty Reduction On More Electric Vehicle Parts. Read in Kannada
Story first published: Thursday, December 6, 2018, 18:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more