ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

By Praveen Sannamani

2030ರ ವೇಳೆಗೆ ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಇದಕ್ಕೆ ಪ್ರಮುಖ ವಾಹನ ಉತ್ಪಾದಕರು ಸಹ ಸ್ಪಂದಿಸುತ್ತಿರುವ ಹೊಸ ಮುನ್ನುಡಿಗೆ ಕಾರಣವಾಗಿದೆ. ಹೀಗಾಗಿ ಪರಿಸರ ಸ್ನೇಹಿಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರವು ವಿಶೇಷ ಸೌಲಭ್ಯಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಹೆಚ್ಚುತ್ತಿರುವ ಜಾಗತಿಕ ತಾಪಮಾನದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆಗೆ ಬ್ರೇಕ್ ಹಾಕುವ ಉದ್ದೇಶದಿಂದ ಎಲ್ಲಾ ಆಟೋ ಉತ್ಪಾದಕರು ಬೃಹತ್ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಮಧ್ಯೆ ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದೆ. ಇದು ಇವಿ ವಾಹನಗಳ ಉತ್ಪಾದನೆಗೆ ಮತ್ತಷ್ಟು ಬಲ ತುಂಬಲಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಉತ್ತೇಜಿಸಲು ಈ ಯೋಜನೆ ಭಾರೀ ಪ್ರಾಮುಖ್ಯತೆ ಪಡೆಯಲಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳಿಗೆ ಎರಡನೇ ಹಂತದ ಸಬ್ಸಿಡಿ ಯೋಜನೆಗೆ ಗ್ರೀನ್ ಸಿಗ್ನಲ್ ತೊರಿದ್ದು, ಇದಕ್ಕಾಗಿ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯು ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ಬೈಕ್, ಕಾರು, ಮೂರು ಚಕ್ರದ ವಾಹನಗಳು ಮತ್ತು ವಾಣಿಜ್ಯ ಬಳಕೆಯ ಕಾರುಗಳನ್ನು ಖರೀದಿಸುವ ಗ್ರಾಹಕರಿಗೆ ಬೆಂಬಲವಾಗಿ ರೂ. 5,500 ಕೋಟಿ ಮೀಸಲು ಇರಿಸಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಯಾವ ವಾಹನಕ್ಕೆ ಎಷ್ಟು ಸಬ್ಸಿಡಿ?

ವರದಿ ಪ್ರಕಾರ, ಎಲೆಕ್ಟ್ರಿಕ್ ಬೈಕ್‌ಗಳಿಗೆ ಬೆಲೆ ಆಧಾರದ ಮೇಲೆ ರೂ. 1,800 ದಿಂದ ರೂ. 29 ಸಾವಿರ ಸಬ್ಸಿಡಿ ಸಿಕ್ಕಲ್ಲಿ, ಕಾರುಗಳಿಗೆ ರೂ. 60 ಸಾವಿರದಿಂದ ರೂ. 2 ಲಕ್ಷದ ತನಕ ಸಬ್ಸಿಡಿ ಮತ್ತು ಮೂರು ಚಕ್ರದ ಎಲೆಕ್ಟ್ರಿಕ್ ವಾಹನಗಳಿಗೆ ರೂ. 3,300 ರಿಂದ ರೂ. 61 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳಿಗೆ ಗ್ರಿನ್ ನಂಬರ್ ಪ್ಲೆಟ್, ಟೋಲ್ ಶುಲ್ಕದಲ್ಲಿ ವಿನಾಯ್ತಿ ಸೌಲಭ್ಯವನ್ನು ಸಹ ಒದಗಿಸುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ ತನ್ನ ನಿಲವು ವ್ಯಕ್ತಪಡಿಸಲಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಆಫರ್‌ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಕೆಲವು ಬಲ್ಲ ಮೂಲಗಳ ಪ್ರಕಾರ ಎಲೆಕ್ಟ್ರಿಕ್ ಕಾರು ಖರೀದಿಸುವ ಮಾಲೀಕರಿಗೆ 3 ವರ್ಷದ ತನಕ ದೇಶಾದ್ಯಂತ ಪಾರ್ಕಿಂಗ್ ಶುಲ್ಕದಲ್ಲಿ ವಿನಾಯ್ತಿ ಕೂಡಾ ನೀಡಲಿದ್ದು, ಎಲೆಕ್ಟ್ರಿಕ್ ಕಾರುಗಳ ಮುಖ್ಯ ತಾಂತ್ರಿಕ ಅಂಶವಾದ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣವನ್ನು ತಗ್ಗಿಸಿರುವುದು ಇವಿ ಕಾರುಗಳ ಮೇಲಿನ ಬೆಲೆ ಇಳಿಕೆಗೆ ಸಹಕಾರಿಯಾಗುವುದರ ಜೊತೆಗೆ ಮಾರಾಟಕ್ಕೂ ಅನುಕೂಲವಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲೆ ಇಷ್ಟು ದಿನ ಇದ್ದ ಶೇ.28ರಷ್ಟು ಜಿಎಸ್‌ಟಿ ತೆರಿಗೆಯು ಇನ್ಮುಂದೆ ಶೇ.18ಕ್ಕೆ ಇಳಿಕೆಯಾಗಲಿದ್ದು, ಪರಿಸರಕ್ಕೆ ಪೂರಕವಾಗಿರುವ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹಲವು ಜನಪರ ಯೋಜನೆಗಳನ್ನ ರೂಪಿಸಿತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಅಧಿಕ ವೆಚ್ಚಕ್ಕೆ ಕಡಿವಾಣ ಹಾಕುತ್ತೆ ಇ-ವೆರಿಟೊ..!

ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ಕಾರುಗಳು ಭವಿಷ್ಯದಲ್ಲಿ ಭಾರೀ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಈ ಹಿನ್ನೆಲೆ ಪ್ರಮುಖ ಆಟೋ ಉತ್ಪಾದಕರು ಉತ್ತಮ ಮೈಲೇಜ್ ರೇಂಜ್ ಹೊಂದಿರುವ ಇವಿ ಕಾರುಗಳನ್ನು ಪರಿಚಯಿಸಲಾಗುತ್ತಿದೆ. ಇವುಗಳಲ್ಲಿ ಮಹೀಂದ್ರಾ ನಿರ್ಮಾಣದ ಇ-ವೆರಿಯೊ ಸೆಡಾನ್ ಭಾರೀ ಚರ್ಚೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಮಹೀಂದ್ರಾ ಸಂಸ್ಥೆಯು ಪರಿಚಯಿಸುತ್ತಿರುವ ಸುಧಾರಿತ ತಂತ್ರಜ್ಞಾನ ಪ್ರೇರಿತ ಇ-ವೆರಿಟೊ ಎಲೆಕ್ಟ್ರಿಕ್ ಕಾರುಗಳು 1 ಕಿಲೋ ಮೀಟರ್‍‍ಗೆ ಕೇವಲ ರೂ. 1.15 ಪೈಸೆ ಖರ್ಚಾಗಲಿದ್ದು, ನೆಮ್ಮದಿಯಾಗಿ ರೈಡಿಂಗ್ ಅನುಭವದೊಂದಿಗೆ ಹೆಚ್ಚುತ್ತಿರುವ ಇಂಧನ ವೆಚ್ಚವನ್ನು ಪರಿಣಾಮಕಾರಿಯಾಗಿ ತಗ್ಗಿಸಬಹುದು.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಇ-ವೆರಿಟೊ ಡಿ2 ಎಲೆಕ್ಟ್ರಿಕ್ ಕಾರುನಲ್ಲಿ 18.55 ಕಿಲೋ ವ್ಯಾಟ್ಸ್ ಲೀಥಿಯಂ ಅಯಾನ್ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಇದು 45-ಬಿಹೆಚ್‍‍ಪಿ ಮತ್ತು 91-ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಇದರಲ್ಲಿರುವ ಎಲೆಕ್ಟ್ರಿಕ್ ಪವರ್‌ಟ್ರೈನ್ ಬ್ಯಾಟರಿಯನ್ನ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದಲ್ಲಿ 140 ಕಿಲೋ ಮೀಟರ್ ಗರಿಷ್ಠ ಮೈಲೇಜ್ ನೀಡಲಿದ್ದು, ಗಂಟೆಗೆ 86 ಕಿಲೋಮೀಟರ್ ವೇಗದಲ್ಲಿ ಚಲಿಸಬಲ್ಲ ಟಾಪ್ ಸ್ಪೀಡ್ ಅನ್ನು ಪಡೆದುಕೊಂಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ 2ನೇ ಹಂತದ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ

ಮಹೀಂದ್ರಾ ಸಂಸ್ಥೆಯ ಇ-ವೆರಿಟೊ ಕಾರುಗಳು ಈಗಾಗಲೇ ದೆಹಲಿ, ಮುಂಬೈ, ಬೆಂಗಳೂರು, ಪುಣೆ, ಕೋಲ್ಕತ್ತಾ, ಚಂಡೀಘರ್, ಹೈದ್ರಾಬಾದ್, ಜೈಪುರ್ ಮತ್ತು ನಾಗ್‍‍ಪುರ್ ನಗರಗಳಲ್ಲಿನ ಮಹೀಂದ್ರಾ ಡೀಲರ್ಸ್‌ಗಳಲ್ಲಿ ಈ ಹೊಸ ಕಾರುಗಳನ್ನು ಪ್ರದರ್ಶನ ಮಾಡುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಿರಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ನಿಮ್ಮ ಕಥೆಯನ್ನು ಹಂಚಿಕೊಳ್ಳಿ ಮತ್ತು ಈಚರ್‌ನೊಂದಿಗೆ ಗೆಲ್ಲಲು ಸಿದ್ಧರಾಗಿ..

ಟೊಯೊಟಾ ಇಟಿಯಾಸ್ ಲಿವಾ ಲಿಮಿಟೆಡ್ ಎಡಿಷನ್- ಇದರ ವಿಶೇಷತೆ ಏನು ಗೊತ್ತಾ.?

Most Read Articles

Kannada
Read more on electric cars evergreen
English summary
Govt To Provide Subsidies For All Electric Vehicles Under FAME II.
Story first published: Saturday, August 25, 2018, 13:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X