ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೆ ಸಿದ್ಧಗೊಂಡಿರುವ ಕಾರ್ಲಿನೋ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ತಮಿಳುನಾಡಿನ ಕೊಯಂಬತ್ತೂರ್ ರಹದಾರಿಯಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವ ವೇಳೆ ಕಾಣಿಸಿಕೊಂಡಿದ್ದು, ವರದಿಗಳ ಪ್ರಕಾರ ಹ್ಯುಂಡೈ ಹೊಸ ಕಾರು ಮಾದರಿಯು 2019ರ ಮೊದಲ ತ್ರೈಮಾಸಿಕ ವೇಳೆಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡುವ ಬಗ್ಗೆ ಸುಳಿವು ನೀಡಿದೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಹ್ಯುಂಡೈ ಸಂಸ್ಥೆಯು ಕ್ರೇಟಾ ಮತ್ತು ಕೋನಾ ಎಸ್‍‍ಯುವಿ ಕಾರುಗಳ ಭರ್ಜರಿ ಯಶಸ್ಸಿನ ನಂತರ ಕಾರ್ಲಿನೋ ಕಾರುಗಳ ಬಿಡುಗಡೆಗಾಗಿ ಯೋಜನೆ ರೂಪಿಸುತ್ತಿದ್ದು, ಹಲವು ವಿಶೇಷತೆಗಳಿಗಳಿಗೆ ಕಾರಣವಾಗಿರುವ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಮಧ್ಯಮ ವರ್ಗದ ಕಾರು ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಹ್ಯುಂಡೈ ಹೊಸ ಕಂಪ್ಯಾಕ್ಟ್ ಎಸ್‍‍ಯುವಿ ಅರ್ಬನ್ ಕಮ್ಯೂಟರ್ ವಿಭಾಗಕ್ಕಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಿರುವ ಬಗ್ಗೆ ಮಾಹಿತಿಯಿದ್ದು, ಕ್ರಾಸ್‍ ಓವರ್ ವಿನ್ಯಾಸದೊಂದಿಗೆ ಕ್ರೇಟಾ ಹಾಗೂ ಕೊನಾ ಕಾರುಗಳ ಮಧ್ಯದ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಹೊಸ ಕಾರಿನ ಕುರಿತಾಗಿ ಈಗಾಗಲೇ ಎಂಜಿನ್ ಕಾರ್ಯಕ್ಷಮತೆ ನಡೆಯುತ್ತಿದ್ದು, ಹ್ಯುಂಡೈ ಸಂಸ್ಥೆಯು ಈ ಹೊಸ ಕಾರಿಗಾಗಿ ಪ್ರತ್ಯೇಕವಾದ ಪ್ಲಾಟ್‍‍ಫಾರ್ಮ್ ಅನ್ನೇ ಸಿದ್ದಪಡಿಸಿದೆ. ಈ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಈ ಕಾರ್ಲಿನೋ ಕಾರುಗಳು ಮಾರುತಿ ಸುಜುಕಿ ಬ್ರೆಝಾ ಮತ್ತು ಟಾಟಾ ನೆಕ್ಸಾನ್ ಕಾರಿಗಳಿಗೆ ನೇರ ಪ್ರತಿಸ್ಪರ್ಧಿಸಲಾಗಲಿವೆ ಎನ್ನಬಹುದು.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಪ್ರಸ್ತುತ ಮಾಹಿತಿಗಳ ಪ್ರಕಾರ, ಈ ಕಾರು 2019ರ ಆರಂಭದಲ್ಲಿ ಯುಎಸ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಳ್ಳಲಿದ್ದು, ತದನಂತರವಷ್ಟೇ ಭಾರತ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಈ ಕಾರು ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಕಂಪ್ಯಾಕ್ಟ್ ಎಸ್‍‍ಯುವಿ ವಿನ್ಯಾಸ ಆಧಾರಿತ ಕಾರ್ಲಿನೊ ಪರಿಕಲ್ಪನೆಯನ್ನು ಮೊದಲು ಹ್ಯುಂಡೈ ಸಂಸ್ಥೆಯು 2016ರ ದೆಹಲಿ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶಿಸಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆ ಮುಂದೂಡಿದ್ದ ಹ್ಯುಂಡೈ, ಇದೀಗ ಕಾರ್ಲಿನೋ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಇದಲ್ಲದೇ ಹ್ಯುಂಡೈ ಸಂಸ್ಥೆಯ ಕ್ಯೂಎಕ್ಸ್ಐ ಹೆಸರಿನ ಮತ್ತೊಂದು ಹೊಸ ಕಾರು ಮಾದರಿಯನ್ನು 2019ರ ಅಂತ್ಯದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಅದೇ ಕಾರಿನ ಎಂಜಿನ್ ಮಾದರಿಯನ್ನು ಸಹ ಕಾರ್ಲಿನೋ ಕಾರಗಳಲ್ಲೂ ಬಳಕೆ ಮಾಡಲಾಗಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಇದರಿಂದಾಗಿ ಕಾರ್ಲಿನೋ ಕಾರುಗಳು 1.0 ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.4 ಲೀಟರ್ ಡೀಸೆಲ್ ಎಂಜಿನ್ ಅನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಕ್ರೇಟಾ ಮತ್ತು ಗ್ರ್ಯಾಂಡ್ ಐ10 ನಿಂದಲೂ ಹಲವಾರು ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲಾಗಿದೆಯೆಂತೆ.

ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಟಾಂಗ್ ನೀಡಲು ಬರಲಿದೆ ಹ್ಯುಂಡೈ ಕಾರ್ಲಿನೋ

ಬಿಡುಗಡೆಯ ಅವಧಿ ಮತ್ತು ಕಾರಿನ ಬೆಲೆಗಳು(ಅಂದಾಜು)

2019ರ ಆರಂಭದಲ್ಲಿ ಯುಎಸ್ಎ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಹೊಸ ಕಾರ್ಲಿನೋ ಕಾರುಗಳು 2019ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ರೂ.7 ಲಕ್ಷದಿಂದ ರೂ.10 ಲಕ್ಷ ತನಕ ಇರಬಹುದೆಂದು ಅಂದಾಜಿಸಲಾಗಿದೆ.

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ

ಹತ್ತು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಹ್ಯುಂಡೈ ಕಾರ್ಲಿನೋ ಕಂಪ್ಯಾಕ್ಟ್ ಎಸ್‌ಯುವಿ ಕಾರು ಅಗ್ಗದ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಕಂಪ್ಯಾಕ್ಟ್ ಎಸ್‌ಯುವಿಗಳಾದ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಲಿದೆ.

Source:N. I. John

Kannada
English summary
Hyundai Styx (Carlino) spied testing ahead of launch
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more