ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

2018ರ ಹ್ಯುಂಡೈ ಕ್ರೇಟಾ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ವೈಶಿಷ್ಟ್ಯತೆಗಳನ್ನು ಹೊತ್ತು ಮಾರುಕಟ್ಟೆಗೆ ಪ್ರವೇಶ ಪಡೆಯುತ್ತಿರುವ ಫೇಸ್‌ಲಿಫ್ಟ್ ಇದೇ ತಿಂಗಳ ಕೊನೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

By Praveen Sannamani

ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ತನ್ನ ಜನಪ್ರಿಯ ಕಾರುಗಳ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ 2018ರ ಹ್ಯುಂಡೈ ಕ್ರೇಟಾ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ವೈಶಿಷ್ಟ್ಯತೆಗಳನ್ನು ಹೊತ್ತು ಮಾರುಕಟ್ಟೆಗೆ ಪ್ರವೇಶ ಪಡೆಯುತ್ತಿರುವ ಫೇಸ್‌ಲಿಫ್ಟ್ ಆವೃತ್ತಿಯು ಇದೇ ತಿಂಗಳ ಕೊನೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಹೀಗಾಗಿ ಹೊಸ ಕಾರಿನ ಬಿಡುಗಡೆಗಾಗಿ ಸಜ್ಜಾಗುತ್ತಿರುವ ಹ್ಯುಂಡೈ ಸಂಸ್ಥೆಯು ಫೇಸ್‌ಲಿಫ್ಟ್ ಆವೃತ್ತಿಯ ಸ್ಪಾಟ್ ಟೆಸ್ಟಿಂಗ್ ಕಾರ್ಯವನ್ನು ತೀವ್ರಗೊಳಿಸಿದ್ದು, ತಮಿಳುನಾಡಿನ ಪ್ರಮುಖ ಸ್ಥಳಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿದೆ. ಈ ವೇಳೆ ಎಸ್‌ಯುವಿ ಪ್ರಿಯರ ಕುತೂಹಲಕ್ಕೆ ಕಾರಣವಾಗಿರುವ ಕ್ರೇಟಾ ಫೇಸ್‌ಲಿಫ್ಟ್ ಆವೃತ್ತಿಯು ದಕ್ಷಿಣ ಅಮೆರಿಕಾದಲ್ಲಿ ಮಾರಾಟಾವಾಗುತ್ತಿರುವ ಕಾರಿನ ವಿನ್ಯಾಸವನ್ನೇ ಆಧರಿಸಿರುವುದು ಖಚಿತವಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಬಿಡುಗಡೆಗೊಳ್ಳಲಿರುವ ಹೊಸ ಕ್ರೇಟಾ ಕಾರುಗಳು 1.6-ಲೀಟರ್ ಪೆಟ್ರೋಲ್, 1.4 ಮತ್ತು 1.6-ಲೀಟರ್ ಡೀಸೆಲ್ ಆವೃತ್ತಿಗಳಲ್ಲಿ ಲಭ್ಯವಿರಲಿದೆ ಎನ್ನಲಾಗಿದೆ.1.6 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 121-ಬಿಹೆಚ್‍ಪಿ ಮತ್ತು 154-ಎನ್ಎಂ ಟಾರ್ಕ್ ಉತ್ಪಾದಿಸಿದಲ್ಲಿ 1.4 ಲೀಟರ್ ಡೀಸೆಲ್ ಎಂಜಿನ್ ಮಾದರಿಯು 89-ಬಿಹೆಚ್‍ಪಿ ಮತ್ತು 224-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಹಾಗೆಯೇ 1.6 ಲೀಟರ್ ಡೀಸೆಲ್ ಎಂಜಿನ್ ಮಾದರಿಯು 126-ಬಿಹೆಚ್‍ಪಿ ಮತ್ತು 256-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಎಲ್ಲಾ ಎಂಜಿನ್‍ಗಳನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 1.6-ಡೀಸೆಲ್ ಎಂಜಿನ್ ಮಾದರಿಗಳನ್ನು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಇನ್ನು ಹೊಸ ಕ್ರೇಟಾ ಫೇಸ್‍ಲಿಫ್ಟ್ ಕಾರುಗಳು ನವಿಕರಿಸಲಾಗಿರುವ ಹೆಡ್‍ಲ್ಯಾಂಪ್‍ಗಳು, ಹೊಸ ಬಂಪರ್ ಮತ್ತು ಎಲ್ಇಡಿ ಡಿಎಲ್‍ಆರ್ ಗಳನ್ನು ಪಡೆದಿದ್ದು, ರಿಯರ್ ಭಾಗವು ಕೂಡಾ ಹೊಸ ಬಂಪರ್‍‍ನೊಂದಿಗೆ ಪರಿಷ್ಕರಿಸಿದ ಟೈಲ್‍ಲೈಟ್ ಗಳನ್ನು ಪಡೆದಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಇನ್ನುಳಿದಂತೆ ಕಾರಿನ ಒಳಭಾಗದಲ್ಲಿ 8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂನೊಂದಿಗೆ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಆಯ್ಕೆಯನ್ನು ನೀಡಲಾಗಿದ್ದು, ಇವು ಎಸ್‌ಯುವಿ ಪ್ರಿಯರಿಗೆ ಹೊಸ ಚಾಲನಾ ಅನುಭೂತಿ ನೀಡಲಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಇದರ ಜೊತೆಗೆ ಹೊಸ ಕಾರು ಸನ್‍ರೂಫ್, ರೈನ್ ಸೆಂಸಿಂಗ್ ವೈಪರ್ಸ್, ಕ್ರೂಸ್ ಕಂಟ್ರೋಲ್ ಮತ್ತು ಆಟೋಮ್ಯಾಟಿಕ್ ಹೆಡ್‍ಲ್ಯಾಂಪ್ ಗಳನ್ನು ಪಡೆದಿದ್ದು, ಸುರಕ್ಷಾ ವೈಶಿಷ್ಟ್ಯತೆಗಳಿಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಹೊಸ ಕ್ರೇಟಾ ಫೇಸ್‍ಲಿಫ್ಟ್ ಕಾರುಗಳ ಬೆಲೆಯು ಪ್ರಸ್ತುತ ಮಾದರಿಗಿಂತ ಕೊಂಚ ಹೆಚ್ಚಿರಲಿದ್ದು, ಬಿಡುಗಡೆಯ ನಂತರ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್, ರೆನಾಲ್ಟ್ ಕ್ಯಾಪ್ಚರ್, ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕ್ರೇಟಾ ಫೇಸ್‌ಲಿಫ್ಟ್...

ಕಾರಿನ ಬೆಲೆಗಳು ಮತ್ತು ಬುಕ್ಕಿಂಗ್

ಫೇಸ್‌ಲಿಫ್ಟ್ ಆವೃತ್ತಿಯು ರೂ.9.5 ಲಕ್ಷದಿಂದ ರೂ.15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹೀಗಾಗಿ ಆಸಕ್ತ ಗ್ರಾಹಕರು ಹ್ಯುಂಡೈ ಡೀಲರ್ಸ್ ಬಳಿ ರೂ.25 ಸಾವಿರ ನೀಡಿ ಬುಕ್ಕಿಂಗ್ ಮಾಡಬಹುದಾಗಿದೆ.

Most Read Articles

Kannada
Read more on hyundai suv
English summary
Hyundai Creta Facelift Spotted Testing In India; Expected Price, Specs And Features.
Story first published: Wednesday, May 9, 2018, 11:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X