ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಹ್ಯುಂಡೈ ಮೋಟಾರ್ಸ್ ಸಂಸ್ಥೆಯು ಜಿನೆವಾ ಆಟೋ ಎಕ್ಸ್‌ಪೋ ದಲ್ಲಿ ತನ್ನ ಹೊಸ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಅನಾವರಣಗೊಳಿಸುವ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದಲ್ಲಿ ಹೊಸ ನೀರಿಕ್ಷೆ ಹುಟ್ಟುಹಾಕಿದ್ದು, ಇದೀಗ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿರುವ ಹೊಸ ಕಾರುಗಳನ್ನು ಭಾರತದಲ್ಲೇ ಪೂರ್ಣಪ್ರಮಾಣದಲ್ಲಿ ಸಿದ್ದಗೊಳಿಸಿ ಮಾರಾಟ ಮಾಡುವ ಗುರಿಹೊಂದಲಾಗಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಇದಕ್ಕೆ ಪೂರಕ ಎನ್ನುವಂತೆ ಹ್ಯುಂಡೈ ಇಂಡಿಯಾ ಸಂಸ್ಥೆಯು ಇದೇ ಮೊದಲ ಬಾರಿಗೆ ಕೊನಾ ಎಲೆಕ್ಟ್ರಿಕ್ ಕಾರುಗಳನ್ನು ರಾಜಧಾನಿ ದೆಹಲಿಯಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಮುಂದಿನ ಕೆಲವೇ ತಿಂಗಳ ಅಂತರದಲ್ಲಿ ಹೊಸ ಕಾರು ಬಿಡುಗಡೆಯಾಗುವುದು ಖಚಿತವಾಗಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

2019ರ ಮೊದಲಾರ್ಧದಲ್ಲೇ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸುಳಿವು ನೀಡಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳು ಇದೀಗ ಭಾರೀ ಚರ್ಚೆಗೆ ಕಾರಣವಾಗಿವೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರುಗಳು 299 ಕಿ.ಮೀ ಮತ್ತು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿವೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಸುಧಾರಿತ ತಂತ್ರಜ್ಞಾನದೊಂದಿಗೆ ಚಾಲನೆಗೊಳ್ಳುವ ಈ ಕಾರು ಅನುಕೂಲಕರ ಮತ್ತು ಸಂಪರ್ಕದ ವೈಶಿಷ್ಟ್ಯಗಳೊಂದಿಗೆ ವ್ಯಾಪಕ ಶ್ರೇಣಿ ಮತ್ತು ಸಕ್ರಿಯ ಸುರಕ್ಷತೆ, ಡ್ರೈವಿಂಗ್ ಅಸಿಸ್ಟೆನ್ಸ್ ತಂತ್ರಜ್ಞಾನಗಳಿಂದ ಪ್ರಯೋಜನವನ್ನು ಪಡೆದಿರುತ್ತದೆ ಎಂದು ಹ್ಯುಂಡೈ ಸಂಸ್ಥೆಯು ಹೇಳಿಕೊಂಡಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಮಾಹಿತಿಗಳ ಪ್ರಕಾರ ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಕೊನಾ ಇವಿ 39.2 ಕಿಲೋವ್ಯಾಟ್ಸ್ ಮತ್ತು 64 ಕಿಲೋವ್ಯಾಟ್ಸ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಹುಂಡೈ ಸಂಸ್ಥೆಯು ತನ್ನ ಮೊದಲ ಇವಿ ಕಾರನ್ನು 2019ರ ಮೊದಲಾರ್ಧದಲ್ಲೇ ಪರಿಚಯಿಸುವ ಇರಾದೆಯಲ್ಲಿದ್ದು, ಜೊತೆಗೆ ಲೋನಿಕ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಮಾದರಿಯನ್ನು 2018ರ ಆಟೋ ಎಕ್ಸ್ ಪೋನಲ್ಲಿ ಪ್ರದರ್ಶಿಸಲಾಗಿತ್ತು. ಹೀಗಾಗಿ ಹೈಬ್ರಿಡ್ ಕಾರನ್ನು ಭಾರತದಲ್ಲಿ ಪರಿಚಯಿಸುವ ಯಾವುದೇ ಸುಳಿವು ಇಲ್ಲಾವಾದರೂ ಎಲೆಕ್ಟ್ರಿಕ್ ಕಾರನ್ನು ಮಾತ್ರ ಭಾರತದಲ್ಲಿ ಪರಿಚಯಿಸುವುದು ಖಚಿತವಾಗಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಬ್ಯಾಟರಿ ವೈಶಿಷ್ಟ್ಯತೆ

ಕೊನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರ ಆಯ್ಕೆ ಮೇಲೆ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೊನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

MOST READ: ಬಿಡುಗಡೆಗೂ ಮುನ್ನವೇ ಹೊಸ ಸ್ಯಾಂಟ್ರೋ ಕಾರಿನ ಬೆಲೆ ಪಟ್ಟಿ ಬಹಿರಂಗ..!

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

39.2 ಕೆವಿ ಬ್ಯಾಟರಿ ಪ್ರೇರಿಕ ಕೊನಾ ಕಾರುಗಳು ಪೂರ್ಣಪ್ರಮಾಣದಲ್ಲಿ ಚಾರ್ಜಿಂಗ್‌ಗೊಳ್ಳಲು 6 ತಾಸು 10 ನಿಮಿಷ ಸಮಯ ತೆಗೆದುಕೊಳ್ಳವುದಲ್ಲದೇ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್‌ ಮಾಡಬಹುದು. ಹಾಗೆಯೇ 64 ಕೆವಿ ಬ್ಯಾಟರಿ ಪ್ರೇರಿತ ಕೊನಾ ಕಾರುಗಳು ಸಹ ಪೂರ್ಣಪ್ರಮಾಣದ ಚಾರ್ಜಿಂಗ್‌ಗಾಗಿ 9 ತಾಸು 40 ನಿಮಿಷ ಸಮಯ ತೆಗೆದುಕೊಂಡರೇ, ಕೆವಲ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್ ಮಾಡಬಹುದು.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಕೊನಾ ಕಾರುಗಳ ಬೆಲೆ(ಅಂದಾಜು)

ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ರೂ.15 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಹೀಗಾಗಿ ಹ್ಯುಂಡೈ ಸಂಸ್ಥೆಯು ಬಿಡುಗಡೆ ಮಾಡುತ್ತಿರುವ ಕೊನಾ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಹೊಸ ಕಾರುಗಳನ್ನು ಸದ್ಯಕ್ಕೆ ಸಿಕೆಡಿ ಮೂಲಕ ಆಮದು ಮಾಡಿಕೊಂಡು ಚೆನ್ನೈ ಬಳಿ ಇರುವ ಹ್ಯುಂಡೈ ಉತ್ಪಾದನಾ ಘಟಕದಲ್ಲಿ ಬ್ಯಾಟರಿ ಜೋಡಣೆ ಮಾಡಲಾಗುತ್ತದೆ.

MOST READ: ನವೆಂಬರ್ ಅಂತ್ಯಕ್ಕೆ ಹೊಸ ಎರ್ಟಿಗಾ ಕಾರು ಬಿಡುಗಡೆಯಾಗುವುದು ಪಕ್ಕಾ..!

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ತದನಂತರ ಕಾರುಗಳ ಮಾರಾಟ ಪ್ರಮಾಣವನ್ನು ನೋಡಿಕೊಂಡು ಭಾರತದಲ್ಲೇ ಪೂರ್ಣಪ್ರಮಾಣದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದನೆ ಮಾಡಲಿರುವ ಹ್ಯುಂಡೈ, 2020ರ ವೇಳೆಗೆ ಬಿಡುಗಡೆಯಾಗಲಿರುವ ತನ್ನ ವಿವಿಧ 8 ಎಲೆಕ್ಟ್ರಿಕ್ ಕಾರುಗಳ ಬಗೆಗಿನ ಮಾಹಿತಿಯನ್ನು ಇಷ್ಟರಲ್ಲೇ ಹೊರಹಾಕಲಿದೆ.

ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು

ಇನ್ನು ಹ್ಯುಂಡೈ ಸಂಸ್ಥೆಯು ಮುಂದಿನ ತಿಂಗಳು ಕೋನಾ ಕನ್ವೆಷನಲ್ ಪವರ್ ಟ್ರೈನ್ ಆವೃತಿಯನ್ನು ಅಮೆರಿಕಾದ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು ಎನ್ನಲಾಗಿದ್ದು, ಹೊಸ ಎಸ್‌ಯುವಿ ಕಾರುಗಳು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ ಫ್ರಂಟ್ ವೀಲ್ಹ್ ಡ್ರೈವ್ ಹಾಗು ರಿಯರ್ ವೀಲ್ ಡ್ರೈವ್ ಆಯ್ಕೆ ಹೊಂದಿರಲಿದೆ.

Source: Hyundaifanclub

Article Published On: Sunday, October 14, 2018, 9:30 [IST]
English summary
Hyundai Kona Electric SUV Spotted Testing — India-Launch To Happen Next Year.
Read more on hyundai electric car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+