ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆ ಇದ್ಯಾ? ಹಾಗಾದ್ರೆ ನಿಮಗೊಂದು ಕಹಿ ಸುದ್ದಿ..!

ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ಸಂಸ್ಥೆಯು ಕಳೆದ ತಿಂಗಳು 23ರಂದು ತಮ್ಮ ಜನಪ್ರಿಯ ಸ್ಯಾಂಟ್ರೊ ಕಾರನ್ನು ಹೊಸ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳನ್ನು ಅಳವಡಿಸಿ ಕಡಿಮೆ ಬೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಆದ್ರೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಸ್ಥಗಿತ ಮಾಡಲಾಗಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಹೊಸ ಸ್ಯಾಂಟ್ರೋ ಕಾರಿನ ಬುಕ್ಕಿಂಗ್ ವಿಚಾರದಲ್ಲಿ ಗ್ರಾಹಕರಿಗೆ ಶಾಕಿಂಗ್ ವಿಚಾರವನ್ನ ನೀಡಿರುವ ಹ್ಯುಂಡೈ ಸಂಸ್ಥೆಯು ಉತ್ಪಾದನೆಯ ಸಂಖ್ಯೆಗಿಂತ ಹೆಚ್ಚಾಗಿರುವ ಬುಕ್ಕಿಂಗ್ ಪ್ರಕ್ರಿಯೆಗೆ ತಡೆಹಿಡಿದಿದ್ದು, ಸ್ಯಾಂಟೋ ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ನಿರಾಶೆ ಮೂಡಿಸಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಹೌದು, ಬಿಡುಗಡೆಗೊಂಡ ಕೇವಲ ಒಂದು ತಿಂಗಳಿನ ಅವಧಿಯಲ್ಲಿ ಹ್ಯುಂಡೈ ಸ್ಯಾಂಟ್ರೋ ದಾಖಲೆಯ ಬುಕ್ಕಿಂಗ್ ಅನ್ನು ಪಡೆದುಕೊಂಡಿದ್ದು, ಈ ವರೆಗೆ ಸುಮಾರು 35 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಹರಿದುಬಂದಿದ್ದು, ಈ ಹಿನ್ನೆಲೆ ಬುಕ್ಕಿಂಗ್ ಮಾಡಿದ ಗ್ರಾಹಕರು ಹೊಸ ಸ್ಯಾಂಟ್ರೋ ಪಡೆದುಕೊಳ್ಳಲು ಇನ್ನು ಮೂರು ತಿಂಗಳು ಕಾಲ ಕಾಯಲೇಬೇಕಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಇನ್ನು ಹೊಸ ಸ್ಯಾಂಟ್ರೋ ಕಾರು ಪೆಟ್ರೋಲ್ ಎಂಜಿನ್ ಮತ್ತು ಸಿಎನ್‌ಜಿ ಇಂಧನ ಆಯ್ಕೆಯನ್ನು ಹೊಂದಿದ್ದು, ಟಾಲ್-ಬಾಯ್ ಡಿಸೈನ್ ಹೊಂದಿರುವ ಹೊಸ ಕಾರು ವ್ಯಯಕ್ತಿಕ ಬಳಕೆಯ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳುತ್ತಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಬಿಡುಗಡೆಯಾಗಿರುವ ಹೊಸ ಸ್ಯಾಂಟ್ರೋ ಕಾರು ಐದು ಪ್ರಮುಖ ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಿದ್ದು, ಸೌಲಭ್ಯಗಳಿಗೆ ಅನುಗುಣವಾಗಿ ಡಿ-ಲೈಟ್, ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಮತ್ತು ಆಸ್ಟ್ರಾ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ
Variants Prices
DLite Rs 3.89 Lakh
Era Rs 4.24 Lakh
Magna Rs 4.57 Lakh
Magna AMT Rs 5.18 Lakh
Sportz Rs 4.99 Lakh
Sportz AMT Rs 5.46 Lakh
Asta Rs 5.45 Lakh
Magna CNG Rs 5.23 Lakh
Sportz CNG Rs 5.64 Lakh
ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಹಳೆಯ ಮಾದರಿಯ ಸ್ಯಾಂಟ್ರೋ ಕಾರಿಗೂ ಮತ್ತು ಹೊಸ ಸ್ಯಾಂಟ್ರೋ‌ ಕಾರಿಗೂ ಸಾಕಷ್ಟು ಭಿನ್ನತೆಯಿದ್ದು, ಹೊಸ ಕಾರಿನ ಹೊರ ಮತ್ತು ಒಳ ಭಾಗದ ಡಿಸೈನ್‌ನಲ್ಲಿ ಮಹತ್ವದ ಬದಲಾವಣೆ ಕಂಡಿರುವ ಹೊಸ ಸ್ಯಾಂಟ್ರೋ ಕಾರು ಹೊಚ್ಚ ಹೊಸ ಡಿಸೈನ್ ಪ್ರೇರಿತ ಕಾಸ್‌ಕ್ಯಾಡಿಂಗ್ ಬ್ಲ್ಯಾಕ್ ಗ್ರಿಲ್, ಸ್ವೆಪ್ಟ್‌ಬ್ಯಾಕ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಬ್ಲ್ಯಾಕ್ ಪ್ಲ್ಯಾಸ್ಟಿಕ್ ಕ್ಲ್ಯಾಡಿಂಗ್, ಸ್ಪೋರ್ಟಿ ಬಂಪರ್ ಪಡೆದುಕೊಂಡಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಕಾರಿನ ಹಿಂಭಾಗ ಡಿಸೈನ್ ಕೂಡಾ ಗುರತರ ಬದಲಾವಣೆ ಪಡೆದುಕೊಂಡಿದ್ದು, ದೊಡ್ಡ ಗಾತ್ರದ ವಿಂಡ್ ಶಿಲ್ಡ್, ನವೀಕೃತ ಟೈಲ್ ಲೈಟ್ ಕ್ಲಸ್ಟರ್, ಹೈ ಸ್ಟಾಪ್ ಲ್ಯಾಂಪ್, ಹೊಸ ರಿಯರ್ ಬಂಪರ್ ಸೌಲಭ್ಯದಿಂದಾಗಿ ನೋಡಲು ಗ್ರಾಂಡ್ ಐ10 ನಂತೆಯೇ ಲುಕ್ ಪಡೆದುಕೊಂಡಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಹಾಗೆಯೇ ಪ್ರೀಮಿಯಂ ಇಂಟಿರಿಯರ್ ವೈಶಿಷ್ಟ್ಯತೆಗಳನ್ನು ಹೊತ್ತು ಬಂದಿರುವ ಹೊಸ ಸ್ಯಾಂಟ್ರೋ ಕಾರು ಒಳಭಾಗದ ವಿನ್ಯಾಸಗಳು ಸಹ ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷವಾಗಿದ್ದು, ವೀಲ್ಹ್ ಆರ್ಚ್‌ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಕಾರಿನ ಕ್ಯಾಬಿನ್ ಸ್ಥಳಾವಕಾಶ ಕೂಡಾ ಹೆಚ್ಚಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಇದರಿಂದ ಕಾರು ಚಾಲನೆಗೆ ಮತ್ತಷ್ಟು ಅನುಕೂಲಕರವಾಗಿದ್ದು, ದೂರದ ಪ್ರಯಾಣದ ವೇಳೆ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುವವರಿಗೆ ಕ್ಯಾಬಿನ್ ವಿಸ್ತರಣೆ ಮಾಡಿರುವುದು ಸಾಕಷ್ಟು ಸಹಕಾರಿಯಾಗಲಿದೆ ಎನ್ನಬಹುದು.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಕಾರಿನ ಒಳಭಾಗದಲ್ಲಿ ಅಳವಡಿಸಲಾಗಿರುವ ಡ್ಯುಯಲ್ ಥೀಮ್ ಡ್ಯಾಶ್ ಬೋರ್ಡ್, ಡೋರ್ ಟ್ರಿಮ್, ಗ್ರಾಂಡ್ ಐ10 ಮಾದರಿಯಲ್ಲಿ ಎಸಿ ವೆಂಟ್ಸ್ ಮತ್ತು ಸ್ಟೀರಿಂಗ್ ವೀಲ್ಹ್, ಸಿಲ್ವರ್ ಅಕ್ಸೆಂಟ್ ಮತ್ತು ಹಿಂಬದಿಯ ಪ್ರಯಾಣಿಕರಿಗೂ ಪ್ರತ್ಯೇಕ ಎಸಿ ವೆಂಟ್ಸ್ ನೀಡಲಾಗಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಪ್ರೀಮಿಯಂ ವೈಶಿಷ್ಟ್ಯತೆಗಳಾದ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ, ಆ್ಯಪಲ್ ಕಾರ್ ಪ್ಲೇ, ಮಿರರ್‌ ಲಿಂಕ್, ಎಲೆಕ್ಟ್ರಿಕ್ ಅಡ್ಜೆಸ್ಟ್‌ಮೆಂಟ್ ರಿಯರ್ ವ್ಯೂವ್ ಮಿರರ್, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ರಿಯರ್ ವೈಪರ್ ಮತ್ತು ರಿಯರ್ ಡಿಫಾಗರ್ ಸೌಲಭ್ಯವಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಎಂಜಿನ್ ಸಾಮರ್ಥ್ಯ

ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರು 1.1-ಲೀಟರ್ (1,100 ಸಿಸಿ) ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಆಯ್ಕೆಯೊಂದಿಗೆ 68-ಬಿಎಚ್‌ಪಿ ಮತ್ತು 99-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಇದಲ್ಲದೇ ಹೊಸ ಸ್ಯಾಂಟ್ರೋ ಕಾರಿನ ಮ್ಯಾಗ್ನಾ ಮತ್ತು ಸ್ಪೋರ್ಟ್ಜ್ ವೆರಿಯೆಂಟ್‌ಗಳಲ್ಲಿ ಸಿಎನ್‌ಜಿ ಇಂಧನ ಆಯ್ಕೆ ಲಭ್ಯವಿರಲಿದ್ದು, ಇದು ಅತ್ಯುತ್ತಮ ಮೈಲೇಜ್ ನೀಡಬಲ್ಲ ಕಾರು ಮಾದರಿಯಾಗಿ ಮತ್ತಷ್ಟು ಜನಪ್ರಿಯತೆ ಹೊಂದಲಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಮೈಲೇಜ್

ಹ್ಯುಂಡೈ ಸಂಸ್ಥೆಯ ಅಧಿಕೃತ ಮಾಹಿತಿ ಪ್ರಕಾರ ಪೆಟ್ರೋಲ್ ಎಂಜಿನ್ ಸ್ಯಾಂಟ್ರೋ ಕಾರುಗಳು ಪ್ರತಿ ಲೀಟರ್‌ಗೆ 20.3 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಸಿಎನ್‌ಜಿ ಇಂಧನ ಆಯ್ಕೆ ಸ್ಯಾಂಟ್ರೋ ಕಾರು ಪ್ರತಿ ಕೆಜಿ ಸಿಎನ್‌ಜಿಗೆ 30.5 ಕಿ.ಮಿ ಗರಿಷ್ಠ ಮೈಲೇಜ್ ನೀಡಲಿವೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಲಭ್ಯವಿರುವ ಬಣ್ಣಗಳು

ಗ್ರೀನ್, ಫೈರ್ಲಿ ರೆಡ್, ಇಂಪಿರಿಯರ್ ಬ್ಲಿಜ್, ಮರಿಯನ್ ಬ್ಲ್ಯೂ, ಸ್ಟಾರ್ ಡಸ್ಟ್, ಟೈಫೂನ್ ಸಿಲ್ವರ್ ಮತ್ತು ಪೊಲಾರ್ ವೈಟ್ ಬಣ್ಣಗಳಲ್ಲಿ ಹೊಸ ಸ್ಯಾಂಟ್ರೋ ಲಭ್ಯವಾಗಲಿದೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಜೊತೆಗೆ ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಡ್ರೈವರ್ ಸೈಡ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಹೊಂದಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚುವರಿಯಾಗಿ ಪ್ಯಾಸೆಂಜರ್ ಸೈಡ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮೆರಾ, ಸ್ಪೀಡ್ ಸೆಸ್ಸಿಂಗ್ ಆಟೋ ಡೋರ್ ಲಾಕ್ ಮತ್ತು ಸೆಂಟ್ರಲ್ ಲಾಕಿಂಗ್ ಸೌಲಭ್ಯಗಳನ್ನು ನೀಡಿರುವುದು ಗ್ರಾಹಕರ ಆಯ್ಕೆಯನ್ನು ಹೆಚ್ಚಿಸಲಿವೆ.

ಹೊಸ ಸ್ಯಾಂಟ್ರೋ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಯೋಜನೆಯಲ್ಲಿದ್ದೀರಾ.? ಹಾಗಾದರೆ ಇಲ್ಲಿದೆ ನಿಮಗೊಂದು ಕಹಿ ಸುದ್ದಿ

ಈ ಮೂಲಕ ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಸಂಸ್ಥೆಗೆ ತ್ರೀವ ಪೈಪೋಟಿ ನೀಡಲಿರುವ ಹ್ಯುಂಡೈ ಸಂಸ್ಥೆಯು ಮಾರುತಿ ಆಲ್ಟೊ 800, ಸೆಲೆರಿಯೊ ಮತ್ತು ಟಾಟಾ ಮೋಟಾರ್ಸ್ ನಿರ್ಮಾಣದ ಟಿಯಾಗೊ, ರೆನಾಲ್ಟ್ ಕ್ವಿಡ್ ಕಾರುಗಳ ಮಾರಾಟಕ್ಕೆ ಟಕ್ಕರ್ ನೀಡತ್ತಿದೆ.

Source: Cartoq

Kannada
English summary
Hyundai Santro bookings halted.
Story first published: Sunday, November 25, 2018, 11:00 [IST]
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more