ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಸ್ಯಾಂಟ್ರೋ ಕಾರು ಬಿಡುಗಡೆಗೊಂಡು 20 ವರ್ಷವಾದ್ರು ಇನ್ನು ಕೂಡಾ ಜನಪ್ರಿಯತೆಯಲ್ಲಿ ಮುಂಚೂಣಿಯಲ್ಲಿರುವ ಏಕೈಕ ಕಾರು ಮಾದರಿಯಾಗಿದ್ದು, ಇದೀಗ ಮಹತ್ತರ ಬದಲಾವಣೆಯೊಂದಿಗೆ ಮತ್ತೆ ಮರಳಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಬಿಡುಗಡೆಗೊಂಡು ಕೆಲವೇ ದಿನಗಳಲ್ಲಿ 30 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಈ ಮಧ್ಯೆ ಹೊಸ ಕಾರಿನ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಮೂಲಗಳ ಪ್ರಕಾರ ಹ್ಯುಂಡೈ ಸಂಸ್ಥೆಯು ಡಿಸೆಂಬರ್ 1 ರಿಂದ ಹೊಸ ಕಾರಿನ ಬೆಲೆಯಲ್ಲಿ ಏರಿಕೆ ಮಾಡಲಿದೆ ಎನ್ನಲಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಹೊಸ ಸ್ಯಾಂಟ್ರೋ ಕಾರು ಆರಂಭಿಕವಾಗಿ ರೂ.3.89 ಲಕ್ಷಕ್ಕೆ ಹಾಗೂ ಟಾಪ್ ಎಂಡ್ ಮಾದರಿಯು ರೂ. 5.64 ಲಕ್ಷಕ್ಕೆ ಖರೀದಿಗೆ ಲಭ್ಯವಿವೆ. ಒಂದು ವೇಳೆ ಬೆಲೆ ಏರಿಕೆಯಾದಲ್ಲಿ ಹೊಸ ಸ್ಯಾಂಟ್ರೋ ಆರಂಭಿಕವಾಗಿ ರೂ. 3.99 ಲಕ್ಷಕ್ಕೆ ಹಾಗೂ ಟಾಪ್ ಎಂಡ್ ಮಾದರಿಯು 5.85 ಲಕ್ಷಕ್ಕೆ ಬೆಲೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಇನ್ನು ಬಿಡುಗಡೆಯಾಗಿರುವ ಹೊಸ ಸ್ಯಾಂಟ್ರೋ ಕಾರು ಐದು ಪ್ರಮುಖ ವೆರಿಯೆಂಟ್‌ಗಳಲ್ಲಿ ಲಭ್ಯವಿದ್ದು, ಸೌಲಭ್ಯಗಳಿಗೆ ಅನುಗುಣವಾಗಿ ಡಿ-ಲೈಟ್, ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಮತ್ತು ಆಸ್ಟ್ರಾ ವೆರಿಯೆಂಟ್‌‌ಗಳೊಂದಿಗೆ ಸಿಎನ್‌ಜಿ ಇಂಧನ ಆಯ್ಕೆಯನ್ನು ಕೂಡಾ ನೀಡಲಾಗಿದೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಹಳೆಯ ಮಾದರಿಯ ಸ್ಯಾಂಟ್ರೋ ಕಾರಿಗೂ ಮತ್ತು ಹೊಸ ಸ್ಯಾಂಟ್ರೋ‌ ಕಾರಿಗೂ ಸಾಕಷ್ಟು ಭಿನ್ನತೆಯಿದ್ದು, ಹೊಸ ಕಾರಿನ ಹೊರ ಮತ್ತು ಒಳ ಭಾಗದ ಡಿಸೈನ್‌ನಲ್ಲಿ ಮಹತ್ವದ ಬದಲಾವಣೆ ಕಂಡಿರುವ ಹೊಸ ಸ್ಯಾಂಟ್ರೋ ಕಾರು ಹೊಚ್ಚ ಹೊಸ ಡಿಸೈನ್ ಪ್ರೇರಿತ ಕಾಸ್‌ಕ್ಯಾಡಿಂಗ್ ಬ್ಲ್ಯಾಕ್ ಗ್ರಿಲ್, ಸ್ವೆಪ್ಟ್‌ಬ್ಯಾಕ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಬ್ಲ್ಯಾಕ್ ಪ್ಲ್ಯಾಸ್ಟಿಕ್ ಕ್ಲ್ಯಾಡಿಂಗ್, ಸ್ಪೋರ್ಟಿ ಬಂಪರ್ ಪಡೆದುಕೊಂಡಿದೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಹಾಗೆಯೇ ಪ್ರೀಮಿಯಂ ಇಂಟಿರಿಯರ್ ವೈಶಿಷ್ಟ್ಯತೆಗಳನ್ನು ಹೊತ್ತು ಬಂದಿರುವ ಹೊಸ ಸ್ಯಾಂಟ್ರೋ ಕಾರು ಒಳಭಾಗದ ವಿನ್ಯಾಸಗಳು ಸಹ ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷವಾಗಿದ್ದು, ವೀಲ್ಹ್ ಆರ್ಚ್‌ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಕಾರಿನ ಕ್ಯಾಬಿನ್ ಸ್ಥಳಾವಕಾಶ ಕೂಡಾ ಹೆಚ್ಚಿದೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಕಾರಿನ ಒಳಭಾಗದಲ್ಲಿ ಅಳವಡಿಸಲಾಗಿರುವ ಡ್ಯುಯಲ್ ಥೀಮ್ ಡ್ಯಾಶ್ ಬೋರ್ಡ್, ಡೋರ್ ಟ್ರಿಮ್, ಗ್ರಾಂಡ್ ಐ10 ಮಾದರಿಯಲ್ಲಿ ಎಸಿ ವೆಂಟ್ಸ್ ಮತ್ತು ಸ್ಟೀರಿಂಗ್ ವೀಲ್ಹ್, ಸಿಲ್ವರ್ ಅಕ್ಸೆಂಟ್ ಮತ್ತು ಹಿಂಬದಿಯ ಪ್ರಯಾಣಿಕರಿಗೂ ಪ್ರತ್ಯೇಕ ಎಸಿ ವೆಂಟ್ಸ್ ನೀಡಲಾಗಿದೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಪ್ರೀಮಿಯಂ ವೈಶಿಷ್ಟ್ಯತೆಗಳಾದ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ, ಆ್ಯಪಲ್ ಕಾರ್ ಪ್ಲೇ, ಮಿರರ್‌ ಲಿಂಕ್, ಎಲೆಕ್ಟ್ರಿಕ್ ಅಡ್ಜೆಸ್ಟ್‌ಮೆಂಟ್ ರಿಯರ್ ವ್ಯೂವ್ ಮಿರರ್, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ರಿಯರ್ ವೈಪರ್ ಮತ್ತು ರಿಯರ್ ಡಿಫಾಗರ್ ಸೌಲಭ್ಯವಿದೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಎಂಜಿನ್ ಸಾಮರ್ಥ್ಯ

ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರು 1.1-ಲೀಟರ್ (1,100 ಸಿಸಿ) ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಆಯ್ಕೆಯೊಂದಿಗೆ 68-ಬಿಎಚ್‌ಪಿ ಮತ್ತು 99-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

MOST READ: 7 ಸಾವಿರ ಕೋಟಿ ವೆಚ್ಚದಲ್ಲಿ ತಲೆಎತ್ತಿದ ಕಿಯಾ ಮೋಟಾರ್ಸ್ ಮೊದಲ ಕಾರು ಉತ್ಪಾದನಾ ಘಟಕ

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಮೈಲೇಜ್

ಹ್ಯುಂಡೈ ಸಂಸ್ಥೆಯ ಅಧಿಕೃತ ಮಾಹಿತಿ ಪ್ರಕಾರ ಪೆಟ್ರೋಲ್ ಎಂಜಿನ್ ಸ್ಯಾಂಟ್ರೋ ಕಾರುಗಳು ಪ್ರತಿ ಲೀಟರ್‌ಗೆ 20.3 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಸಿಎನ್‌ಜಿ ಇಂಧನ ಆಯ್ಕೆ ಹೊಂದಿರುವ ಸ್ಯಾಂಟ್ರೋ ಕಾರು ಪ್ರತಿ ಕೆಜಿ ಸಿಎನ್‌ಜಿಗೆ 30.5 ಕಿ.ಮಿ ಗರಿಷ್ಠ ಮೈಲೇಜ್ ನೀಡಲಿವೆ.

ಬಿಡುಗಡೆಯಾಗಿ 15 ದಿನವಾಗಿಲ್ಲ ಆಗಲೇ ಹೊಸ ಸ್ಯಾಂಟ್ರೋ ಕಾರಿನ ಬೆಲೆಯಲ್ಲಿ ಏರಿಕೆ

ಜೊತೆಗೆ ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಡ್ರೈವರ್ ಸೈಡ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಹೊಂದಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚುವರಿಯಾಗಿ ಪ್ಯಾಸೆಂಜರ್ ಸೈಡ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮೆರಾ, ಸ್ಪೀಡ್ ಸೆಸ್ಸಿಂಗ್ ಆಟೋ ಡೋರ್ ಲಾಕ್ ಮತ್ತು ಸೆಂಟ್ರಲ್ ಲಾಕಿಂಗ್ ಸೌಲಭ್ಯಗಳನ್ನು ನೀಡಿರುವುದು ಗ್ರಾಹಕರ ಆಯ್ಕೆಯನ್ನು ಹೆಚ್ಚಿಸಲಿವೆ.

MOST READ: ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

Most Read Articles

Kannada
English summary
Hyundai had announced at the launch of the car that the introductory pricing would be only for the first 50,000 units. With 30,000 bookings done in just around 15 days, the Hyundai Santro will soon cross the 50,000 bookings milestone and Hyundai will then hike prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X