ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಭಾರತದಲ್ಲಿ ಮಾರುತಿ ಸುಜುಕಿ ನಂತರ 2ನೇ ಅತಿದೊಡ್ಡ ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹ್ಯುಂಡೈ ಇಂಡಿಯಾ ಸಂಸ್ಥೆಯು ಭವಿಷ್ಯ ಯೋಜನೆಗಳಿಗೆ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾಗಿದ್ದು, ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಹೊಸ ಕಾರು ಉತ್ಪನ್ನಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಇರಾದೆಯಲ್ಲಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಹ್ಯುಂಡೈ ಸಂಸ್ಥೆಯು ಸದ್ಯ ಭಾರತದಲ್ಲಿ ಎಂಟ್ರಿ ಲೆವಲ್ ಸ್ಯಾಂಟ್ರೋ ಜೊತೆಗೆ ಪ್ರಮುಖ 8 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ನಾಲ್ಕು ಕಾರು ಮಾದರಿಗಳು ಸದ್ಯ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿವೆ. ಇದೇ ಕಾರಣಕ್ಕೆ ತನ್ನ ಭವಿಷ್ಯದ ಕಾರು ಮಾದರಿಗಳನ್ನು ಪರಿಚಯಿಸುವ ಬಗ್ಗೆ ಮಹತ್ವದ ಸುಳಿವು ನೀಡಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಮೇಲೆ ದೊಡ್ಡಮಟ್ಟದ ಹೂಡಿಕೆ ಮಾಡುತ್ತಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಭಾರತದಲ್ಲಿ ಸದ್ಯ ತಮಿಳುನಾಡಿನ ಚೆನ್ನೈ ಬಳಿ ಒಂದೇ ಒಂದು ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಬೀಡಿಭಾಗಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಕಾರು ಮಾರಾಟ ಮಾಡುತ್ತಿದೆ. ಇದೀಗ ಇದೇ ಘಟಕವನ್ನು ವಿಸ್ತರಿಸಲು ನಿರ್ಧರಿಸಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಸಹಕಾರಿಯಾಗುವಂತೆ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸುತ್ತಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಹ್ಯುಂಡೈ ಸಂಸ್ಥೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಹೊಸ ಘಟಕಗಳಿಗೆ ಚಾಲನೆ ನೀಡಿದ್ದು, ಭಾರತದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸುವ ಹೊಸ ಘಟಕದ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಬರೋಬ್ಬರಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಇನ್ನು ಹ್ಯುಂಡೈ ಸಂಸ್ಥೆಯು ಭಾರತದಲ್ಲಿ ಬಿಡುಗಡೆ ಮಾಡಲಿರುವ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಈಗಾಗಲೇ ಮಾಹಿತಿ ಬಿಚ್ಚಿಟ್ಟಿದ್ದು, ಮೊದಲ ಹಂತವಾಗಿ ಕೋನಾ ಇವಿ ಕಾರು ಭಾರತೀಯ ರಸ್ತೆಗಳಲ್ಲಿ ಭಾರೀ ಜನಪ್ರಿಯತೆ ಸಾಧಿಸುವ ನಿರೀಕ್ಷೆಯಲ್ಲಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಇದಕ್ಕೆ ಪೂರಕ ಎನ್ನುವಂತೆ ಹ್ಯುಂಡೈ ಸಂಸ್ಥೆಯು ಕಳೆದ ವಾರವಷ್ಟೇ ಕೊನಾ ಎಲೆಕ್ಟ್ರಿಕ್ ಕಾರುಗಳನ್ನು ರಾಜಧಾನಿ ದೆಹಲಿಯಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಮುಂದಿನ ಕೆಲವೇ ತಿಂಗಳ ಅಂತರದಲ್ಲಿ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುವುದು ಖಚಿತವಾಗಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 299 ಕಿ.ಮೀ ಮತ್ತು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿವೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಮಾಹಿತಿಗಳ ಪ್ರಕಾರ ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಕೊನಾ ಇವಿ 39.2 ಕಿಲೋವ್ಯಾಟ್ಸ್ ಮತ್ತು 64 ಕಿಲೋವ್ಯಾಟ್ಸ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಹುಂಡೈ ಸಂಸ್ಥೆಯು ತನ್ನ ಮೊದಲ ಇವಿ ಕಾರನ್ನು 2019ರ ಮೊದಲಾರ್ಧದಲ್ಲೇ ಪರಿಚಯಿಸುವ ಇರಾದೆಯಲ್ಲಿದ್ದು, ಜೊತೆಗೆ ಲೋನಿಕ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಮಾದರಿಯನ್ನು 2018ರ ಆಟೋ ಎಕ್ಸ್ ಪೋನಲ್ಲಿ ಪ್ರದರ್ಶಿಸಲಾಗಿತ್ತು. ಹೀಗಾಗಿ ಹೈಬ್ರಿಡ್ ಕಾರನ್ನು ಭಾರತದಲ್ಲಿ ಪರಿಚಯಿಸುವ ಯಾವುದೇ ಸುಳಿವು ಇಲ್ಲಾವಾದರೂ ಎಲೆಕ್ಟ್ರಿಕ್ ಕಾರನ್ನು ಮಾತ್ರ ಭಾರತದಲ್ಲಿ ಪರಿಚಯಿಸುವುದು ಖಚಿತವಾಗಿದೆ.

MOST READ: 7 ಸಾವಿರ ಕೋಟಿ ವೆಚ್ಚದಲ್ಲಿ ತಲೆಎತ್ತಿದ ಕಿಯಾ ಮೋಟಾರ್ಸ್ ಮೊದಲ ಕಾರು ಉತ್ಪಾದನಾ ಘಟಕ

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಬ್ಯಾಟರಿ ವೈಶಿಷ್ಟ್ಯತೆ

ಕೋನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರು ಬೇಡಿಕೆಗೆ ಅನುಗುಣವಾಗಿ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೋನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕೋನಾ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

39.2 ಕೆವಿ ಬ್ಯಾಟರಿ ಪ್ರೇರಿಕ ಕೊನಾ ಕಾರುಗಳು ಪೂರ್ಣಪ್ರಮಾಣದಲ್ಲಿ ಚಾರ್ಜಿಂಗ್‌ಗೊಳ್ಳಲು 6 ತಾಸು 10 ನಿಮಿಷ ಸಮಯ ತೆಗೆದುಕೊಳ್ಳವುದಲ್ಲದೇ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್‌ ಮಾಡಬಹುದು. ಹಾಗೆಯೇ 64 ಕೆವಿ ಬ್ಯಾಟರಿ ಪ್ರೇರಿತ ಕೊನಾ ಕಾರುಗಳು ಸಹ ಪೂರ್ಣಪ್ರಮಾಣದ ಚಾರ್ಜಿಂಗ್‌ಗಾಗಿ 9 ತಾಸು 40 ನಿಮಿಷ ಸಮಯ ತೆಗೆದುಕೊಂಡರೇ, ಕೆವಲ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್ ಮಾಡಬಹುದು.

MOST READ: ಭಾರತದ ಐಫೆಲ್ ಟವರ್ ಖ್ಯಾತಿಯ ಸಿಗ್ನೇಚರ್ ಸೇತುವೆಯ ಸ್ಪೆಷಾಲಿಟಿ ಏನು ಗೊತ್ತಾ?

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಕೊನಾ ಕಾರುಗಳ ಬೆಲೆ(ಅಂದಾಜು)

ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ರೂ.15 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಭವಿಷ್ಯದ ಯೋಜನೆಗಳಿಗಾಗಿ ಭಾರತದಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಹ್ಯುಂಡೈ

ಹೀಗಾಗಿ ಹ್ಯುಂಡೈ ಸಂಸ್ಥೆಯು ಬಿಡುಗಡೆ ಮಾಡುತ್ತಿರುವ ಕೋನಾ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಹೊಸ ಕಾರುಗಳನ್ನು ಸದ್ಯಕ್ಕೆ ಸಿಕೆಡಿ ಮೂಲಕ ಆಮದು ಮಾಡಿಕೊಂಡು ಬಳಿಕ ಚೆನ್ನೈ ಬಳಿ ಸಿದ್ದವಾಗುವ ಹೊಸ ಘಟಕದಲ್ಲೇ ಪೂರ್ಣ ಪ್ರಮಾಣದಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಿದೆ.

Most Read Articles

Kannada
English summary
Hyundai To Invest INR 7,000 Cr in Chennai Plant.
Story first published: Tuesday, November 13, 2018, 19:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X