Just In
- 4 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 7 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 7 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಟಾ ಪ್ರತಿಸ್ಪರ್ಧಿ ಫೋಕ್ಸ್ವ್ಯಾಗನ್ ಟಿ-ಕ್ರಾಸ್ ಕಾರಿನ ಮಾಹಿತಿ ಬಹಿರಂಗ
ಜರ್ಮನ್ ಬ್ರಾಂಡ್ ಫೋಕ್ಸ್ವ್ಯಾಗನ್ ಸಂಸ್ಥೆಯು ದೇಶಿಯ ಮಾರುಕಟ್ಟೆ ಸೇರಿದಂತೆ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಸಲುವಾಗಿ ಬರೋಬ್ಬರಿ 8 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ತನ್ನ ಬಹುನೀರಿಕ್ಷಿತ ಟಿ-ಕ್ರಾಸ್ ಕಂಪ್ಯಾಕ್ಟ್ ಎಸ್ಯುವಿ ಕಾರು ಬಿಡುಗಡೆಗೆ ಸಜ್ಜುಗೊಳ್ಳುತ್ತಿದೆ.
ಭಾರತ ಸೇರಿದಂತೆ ಅಂತಾರಾಷ್ಟ್ರೀಯ ಪ್ರಮುಖ ಮಾರುಕಟ್ಟೆಗಳಿಗಾಗಿ ಟಿ-ಕ್ರಾಸ್ ಕಂಪ್ಯಾಕ್ಟಾ ಎಸ್ಯುವಿ ಮಾದರಿಯನ್ನು ಸಿದ್ದಗೊಳಿಸಿರುವ ಫೋಕ್ಸ್ವ್ಯಾಗನ್ ಸಂಸ್ಥೆಯು ಮೊದಲ ಬಾರಿಗೆ ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಬಹಿರಂಗಗೊಳಿಸಿದ್ದು, ಹ್ಯುಂಡೈ ಕ್ರೇಟಾ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ತ್ರೀವ ಪೈಪೋಟಿ ನೀಡುವ ತವಕದಲ್ಲಿದೆ.
ಫೋಕ್ಸ್ವ್ಯಾಗನ್ ಸಂಸ್ಥೆಯು ಬೃಹತ್ ಬಂಡವಾಳದೊಂದಿಗೆ ವಿವಿಧ ಮಾದರಿಯ 19 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಭಾರತದಲ್ಲೂ ತನ್ನ ಹೊಸ ಶಕೆ ಆರಂಭಿಸುತ್ತಿದೆ. ಇದರಲ್ಲಿ ಟಿ-ಕ್ರಾಸ್ ಕಂಪ್ಯಾಕ್ಟ್ ಮಾದರಿಯು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ದೇಶಿಯ ಗ್ರಾಹಕರ ಬೇಡಿಕೆ ಅನುಗುಣವಾಗಿ ಸಿದ್ದಗೊಳಿಸಲಾಗಿದೆ.
ಫೋಕ್ಸ್ವ್ಯಾಗನ್ ಬಿಡುಗಡೆಗೊಳಿಸಲಿರುವ 19 ಹೊಸ ಎಸ್ಯುವಿಗಳಲ್ಲಿ ಟಿ-ಕ್ರಾಸ್ ಕಾರು ಕೂಡಾ ಪ್ರಮುಖವಾಗಿದ್ದು, ಮುಂದಿನ ವರ್ಷದ ದ್ವಿತೀಯಾರ್ಧದಲ್ಲಿ ಈ ಕಾಂಪ್ಯಾಕ್ಟ್ ಎಸ್ಯುವಿ ಕಾರಿನ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಾಗುತ್ತದೆ ಎನ್ನಲಾಗಿದೆ.
ಸದ್ಯ ಕಾರಿನ ವಿನ್ಯಾಸಗಳ ಕುರಿತಾದ ಹೊರಾಂಗಣ ವಿನ್ಯಾಸಗಳ ಕುರಿತಾದ ಮಾಹಿತಿಯನ್ನು ಮಾತ್ರವೇ ಬಹಿರಂಗ ಮಾಡಿದ್ದು, ಟಿ-ರೋಕ್ ಎಸ್ಯುವಿಗೆ ಹೋಲಿಕೆ ಹೊಂದಿರುವ ಈ ಕಾಂಪ್ಯಾಕ್ಟ್ ಎಸ್ಯುವಿಯು ಟಿ-ಕ್ರಾಸ್ ಹೆಸರಿನೊಂದಿಗೆ ರಸ್ತೆಗಿಳಿಯಲಿವೆ.
ಜೊತೆಗೆ ಫೋಕ್ಸ್ವ್ಯಾಗನ್ ಟಿ-ಕ್ರಾಸ್ ಕಾರುಗಳ ಯಾಂತ್ರಿಕ ಘಟಕ, ಬಾಹ್ಯ ಮತ್ತು ಒಳಾಂಗಣ ಅಂಶಗಳನ್ನು ಹೊಸ ಪೊಲೊ ಮತ್ತು ವರ್ಟಸ್ ಕಾರುಗಳೊಂದಿಗೆ ಹಂಚಿಕೊಳ್ಳುವ ನಿರೀಕ್ಷೆಯಿದ್ದು, ಈ ಕಾರು ಸುಮಾರು 4.19 ಮೀಟರ್ ಉದ್ದಳತೆಯೊಂದಿಗೆ ಸುಮಾರು 2.65 ಮೀಟರ್ಗಳಷ್ಟು ವೀಲ್ ಬೇಸ್ ಹೊಂದಿದೆ.
ಟಿ-ಕ್ರಾಸ್ ಪರಿಕಲ್ಪನೆಯ ಆವೃತ್ತಿಯಲ್ಲಿ ಅಳವಡಿಸಿರುವ ಎಂಜಿನ್ ಮಾದರಿಯು1.0- ಲೀಟರ್ ಪೆಟ್ರೋಲ್ ಎಂಜಿನ್ ಇಲ್ಲವೇ 1.5-ಲೀಟರ್-ಡೀಸೆಲ್ 4 ಸಿಲಿಂಡರ್ ಎಂಜಿನ್ ಆಯ್ಕೆಯೆಯೊಂದಿಗೆ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಮಾದರಿಗಳು 94-ಬಿಎಚ್ಪಿ ಮತ್ತು 114-ಬಿಎಚ್ಪಿ ಉತ್ಪಾದನಾ ಶಕ್ತಿ ಹೊಂದಿವೆ.
ಮುಂದಿನ ಚಕ್ರಗಳಿಗೂ ಶಕ್ತಿ ಪೂರೈಸುವ 7-ಸ್ಪೀಡ್ ಡುಯಲ್ ಕ್ಲಚ್ ಗೇರ್ಬಾಕ್ಸ್ ಸೌಲಭ್ಯ ಪಡೆದುಕೊಂಡಿರುವ ಈ ಫೋಕ್ಸ್ವ್ಯಾಗನ್ ಟಿ-ಕ್ರಾಸ್ ಹೊಸ ಕಾರುಗಳು ಟರ್ಬೊಚಾರ್ಜ್ಡ್ ಎಂಜಿನ್ ಆಯ್ಕೆಯನ್ನು ಸಹ ಪಡೆಯುವ ಸಾಧ್ಯತೆ ಇದೆ.
MOST READ: ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!
ಫೋಕ್ಸ್ವ್ಯಾಗನ್ ಸಂಸ್ಥೆಯು ದಕ್ಷಿಣ ಅಮೆರಿಕದಂತಹ ಉದಯೋನ್ಮುಖ ಮಾರುಕಟ್ಟೆಗಳಿಗಾಗಿ 6-ಸ್ಪೀಡ್ ಆಟೊಮ್ಯಾಟಿಕ್ ಟ್ರಾನ್ಸ್ಮಿಷನ್ ಜೊತೆಗೆ 5-ಸ್ಪೀಡ್ ಮ್ಯಾನ್ಯುವಲ್ ಗೇರ್ಬಾಕ್ಸ್ ನೀಡಲು ಸಾಧ್ಯತೆ ಇದ್ದು, ಭಾರತದಲ್ಲಿ ಈ ಕಾರಿನ ವೆಚ್ಚ ತಗ್ಗಿಸಲು ಕೆಲವು ವಿಶೇಷತೆಗಳನ್ನು ಕಡಿಮೆಗೊಳಿಸುವ ಸಂಭವ ಕೂಡಾ ಇದೆ.
ಫೋಕ್ಸ್ವ್ಯಾಗನ್ ಸಂಸ್ಥೆಯು ದಕ್ಷಿಣ ಅಮೆರಿಕದಂತಹ ಉದಯೋನ್ಮುಖ ಮಾರುಕಟ್ಟೆಗಳಿಗಾಗಿ 6-ಸ್ಪೀಡ್ ಆಟೊಮ್ಯಾಟಿಕ್ ಟ್ರಾನ್ಸ್ಮಿಷನ್ ಜೊತೆಗೆ 5-ಸ್ಪೀಡ್ ಮ್ಯಾನ್ಯುವಲ್ ಗೇರ್ಬಾಕ್ಸ್ ನೀಡಲು ಸಾಧ್ಯತೆ ಇದ್ದು, ಭಾರತದಲ್ಲಿ ಈ ಕಾರಿನ ವೆಚ್ಚ ತಗ್ಗಿಸಲು ಕೆಲವು ವಿಶೇಷತೆಗಳನ್ನು ಕಡಿಮೆಗೊಳಿಸುವ ಸಂಭವ ಕೂಡಾ ಇದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾದ ಹ್ಯುಂಡೈ ಹೊಸ ಸ್ಯಾಂಟ್ರೋ