ಮಾರುತಿ ಸುಜುಕಿ ವಿಟಾರಾ ಬ್ರೆಝಾ ಹಿಂದಿಕ್ಕುತ್ತಾ ಜೀಪ್ ಸಂಸ್ಥೆಯ ಹೊಸ ಎಸ್‌ಯುವಿ?
ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‌ಯುವಿ ಹಿಂದಿಕ್ಕಲು ಜೀಪ್ ಇಂಡಿಯಾ ಸಂಸ್ಥೆಯು ಮಹತ್ವದ ಯೋಜನೆಯೊಂದನ್ನು ರೂಪಿಸುತ್ತಿದ್ದು, ಕೈಗೆಟುವ ಬೆಲೆಯಲ್ಲಿ ಸಣ್ಣ ಗಾತ್ರದ ಎಸ್‌ಯುವಿ ಕಾರು ಒಂದನ್ನು ಬಿಡುಗಡೆ ಮಾಡುತ್ತಿದೆ.
ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಹಾಟ್ ಚಿಪ್ಸ್‌ನಂತೆ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‌ಯುವಿ ಹಿಂದಿಕ್ಕಲು ಜೀಪ್ ಇಂಡಿಯಾ ಸಂಸ್ಥೆಯು ಮಹತ್ವದ ಯೋಜನೆಯೊಂದನ್ನು ರೂಪಿಸುತ್ತಿದ್ದು, ಕೈಗೆಟುವ ಬೆಲೆಯಲ್ಲಿ ಸಣ್ಣ ಗಾತ್ರದ ಎಸ್‌ಯುವಿ ಕಾರು ಒಂದನ್ನು ಬಿಡುಗಡೆ ಮಾಡುತ್ತಿದೆ.

ಈ ಬಗ್ಗೆ ಜೀಪ್ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಸಂದರ್ಶನ ಒಂದರಲ್ಲಿ ಈ ಬಗ್ಗೆ ಸುಳಿವು ನೀಡಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿಗೆ ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆ ಇಂತದೊಂದು ಮಹತ್ವದ ಯೋಜನೆಯನ್ನು ಜಾರಿಗೊಳಿಸಲು ಜೀಪ್ ಸಂಸ್ಥೆಯು ಮುಂದಾಗಿದೆ.

ಮೊದಲ ಹಂತದಲ್ಲೇ ಜನಪ್ರಿಯ ವಿಟಾರಾ ಬ್ರೆಝಾ ಕಾರುಗಳನ್ನೇ ಟಾರ್ಗೆಟ್ ಮಾಡಿರುವ ಜೀಪ್ ಸಂಸ್ಥೆಯು, ತನ್ನದೇ ಆದ ಜೀಪ್ ರೆನೆಗ್ರೆಡ್ ಕಾರುಗಳ ತಳಹದಿಯಲ್ಲೇ ಸಣ್ಣ ಗಾತ್ರದ ಎಸ್‌ಯುವಿಗಳನ್ನು ಅಭಿವೃದ್ಧಿ ಮಾಡಲಿದೆ.

ಜೊತೆಗೆ ಜೀಪ್ ಸಂಸ್ಥೆಯು ನಿರ್ಮಾಣ ಮಾಡಲಿರುವ ಸಣ್ಣ ಗಾತ್ರ ಎಸ್‌ಯುವಿ ಕಾರುಗಳು ನೆಕ್ಸ್ಟ್ ಜನರೇಷನ್ ಫಿಯೆಟ್ ಪಾಂಡಾ ಕಾರಿನ ವೈಶಿಷ್ಟ್ಯತೆಗಳನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಏಕೆಂದರೇ, ಫಿಯೆಟ್ ಪಾಂಡಾ ಕಾರುಗಳು ಈಗಾಗಲೇ ಮುಂದುವರಿದ ಕೆಲ ರಾಷ್ಟ್ರಗಳಲ್ಲಿ ಭಾರೀ ಪ್ರಮಾಣದ ಜನಪ್ರಿಯತೆಯೊಂದಿಗೆ ಮಾರಾಟವಾಗುತ್ತಿದ್ದು, ಅದೇ ತಂತ್ರಗಾರಿಕೆಯನ್ನು ಜೀಪ್ ಸಂಸ್ಥೆಯು ತನ್ನ ಹೊಸ ಎಸ್‌ಯುವಿ ಕಾರಿನಲ್ಲೂ ಅಳವಡಿಸುವ ಇರಾದೆಯಲ್ಲಿದೆ.

ಇದಲ್ಲದೇ ಆಲ್ ವೀಲ್ಹ್ ಡ್ರೈವ್ ಟೆಕ್ನಾಲಜಿ ಸೇರಿದಂತೆ ಹಲವು ಸುರಕ್ಷಾ ವೈಶಿಷ್ಟ್ಯತೆಗಳನ್ನು ಹೊಂದಿರುವ ಫಿಯೆಟ್ ಪಾಂಡಾ ಕಾರುಗಳು ಅತಿ ಕಡಿಮೆಯಲ್ಲಿ ಮಾರಾಟವಾಗುತ್ತಿದ್ದು, ಈ ಹಿನ್ನೆಲೆ ಭಾರತದಲ್ಲಿ ಜೀಪ್ ಹೊಸ ಕಾರು ಕೂಡಾ ಜನಪ್ರಿಯತೆ ಹೊಂದುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದೆ.

ಮೂಲಗಳ ಪ್ರಕಾರ 2019ರ ಮೊದಲಾರ್ಧದಲ್ಲೇ ಹೊಸ ಕಾರುನ್ನು ಬಿಡುಗಡೆಗೊಳಿಸುವ ಯೋಜನೆ ರೂಪಿಸಿರುವ ಜೀಪ್, ಹೊಸ ಕಾರುಗಳಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಅಳವಡಿಸುವ ಸಾಧ್ಯತೆಗಳಿವೆ.

ಇದರಿಂದಾಗಿ ಸದ್ಯ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್ ಮತ್ತು ನೆಕ್ಸಾನ್ ಕಾರುಗಳಿಗೆ ತೀವ್ರ ಪ್ರತಿಸ್ಪರ್ಧಿಯಾಗಲಿದ್ದು, ಹೊಸ ಕಾರುಗಳ ಮೇಲೆ ವಿಧಿಸಲಾಗುವ ಬೆಲೆಗಳ ಆಧಾರದ ಮೇಲೆ ಹೊಸ ಕಾರುಗಳ ಭವಿಷ್ಯವು ನಿರ್ಧಾರವಾಗಲಿದೆ ಎನ್ನಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
30 ಕೋಟಿಗೂ ಹೆಚ್ಚು ಬೆಲೆಬಾಳುವ ಈ ಐಷಾರಾಮಿ ಎಸ್‌ಯುವಿ ಕಾರಿನ ವಿಶೇಷತೆ ಏನು?
ಹ್ಯುಂಡೈ ಕ್ರೇಟಾ ಹಿಂದಿಕ್ಕಲು ಬರುತ್ತಿರುವ ಟೊಯೊಟಾ ರಷ್ ಸ್ಪೆಷಲ್ ಏನು?
ಅತಿ ಕಡಿಮೆ ಬೆಲೆಯಲ್ಲಿ ಸಿದ್ದವಾದ ಹ್ಯಾಂಡ್ ಮೆಡ್ 1000 ಸಿಸಿ ಬೈಕ್ ಇದು...
ಟ್ರಾಫಿಕ್ಸ್ ರೂಲ್ಸ್ ಬ್ರೇಕ್- ಮಗನನ್ನೆ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..


Click it and Unblock the Notifications








