ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಕಿಯಾ ಮೋಟಾರ್ಸ್ ಭಾರತದಲ್ಲಿ ಮೊದಲ ಬಾರಿಗೆ ತನ್ನ ವಿನೂತನ ಎಂಪಿವಿ ಕಾರು ಒಂದನ್ನು ಪರಿಚಯಿಸುವುದರ ಬಗೆಗೆ ನಿಮ್ಮ ಡ್ರೈವ್‌ಸ್ಪಾರ್ಕ್ ತಂಡ ವರದಿ ಮಾಡಿತ್ತು.

By Praveen Sannamani

ಕಳೆದ ವಾರದ ಹಿಂದಷ್ಟೇ ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಮೊದಲ ಬಾರಿಗೆ ತನ್ನ ವಿನೂತನ ಎಂಪಿವಿ ಕಾರು ಒಂದನ್ನು ಪರಿಚಯಿಸುವುದರ ಬಗೆಗೆ ನಿಮ್ಮ ಡ್ರೈವ್‌ಸ್ಪಾರ್ಕ್ ತಂಡ ವರದಿ ಮಾಡಿತ್ತು. ಈಗ ಅದೇ ಕಾರು ಭಾರತದಲ್ಲಿ ಬಿಡುಗಡೆಯ ಉದ್ದೇಶದಿಂದ ದೇಶದ ಪ್ರಮುಖ ನಗರಗಳಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

2018ರ ದೆಹಲಿ ಆಟೋ ಮೇಳದಲ್ಲಿ ತನ್ನ ಬಹುನೀರಿಕ್ಷಿತ ಎಸ್‌ಪಿ ಕಾನ್ಸೆಪ್ಟ್ ಎಸ್‌ಯುವಿ ಮಾದರಿಯನ್ನು ಪ್ರದರ್ಶಿಸಿ ಇದೀಗ ಬಿಡುಗಡೆಗೆ ಸಜ್ಜಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಇದರ ಮಧ್ಯೆ ಮತ್ತೆರಡು ಹೊಸ ಕಾರುಗಳನ್ನು ಸಹ ಬಿಡುಗಡೆ ಮಾಡುತ್ತಿರುವಾಗಿ ಸುಳಿವು ನೀಡಿದೆ. ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾದ ಸ್ಟೊನಿಕ್ ಮತ್ತು ಇನೋವಾ ಕ್ರಿಸ್ಟಾ ವಿನ್ಯಾಸ ಹೋಲುವ ಗ್ರ್ಯಾಂಡ್ ಕಾರ್ನಿವಾಲ್ ಎಂಬ ಎಂಪಿವಿ ಕಾರನ್ನು ಪರಿಚಯಿಸುತ್ತಿರುವುದು ಖಚಿತವಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ತನ್ನ ಮೊದಲ ಕಾರನ್ನು ಬಿಡುಗಡೆ ಮಾಡುತ್ತಿರುವ ಕಿಯಾ ಸಂಸ್ಥೆಯು ತದನಂತರ ಸ್ಟೊನಿಕ್ ಕ್ರಾಸ್ ಓವರ್ ಎಸ್‌ಯುವಿ ಮತ್ತು ಗ್ರ್ಯಾಂಡ್ ಕಾರ್ನಿವಾಲ್ ಕಾರನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಇದಕ್ಕಾಗಿಯೇ ವಿದೇಶಿ ಮಾರುಕಟ್ಟೆಗಳಲ್ಲಿ ಜನಪ್ರಿಯವಾಗಿ ತನ್ನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಪರಿಚಯಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದು, ಇದೀಗ ಗ್ರ್ಯಾಂಡ್ ಕಾರ್ನಿವಾಲ್ ಎಂಪಿವಿ ಕಾರುಗಳನ್ನು ತೆಲಂಗಾಣದ ಪ್ರಮುಖ ಕಡೆಗಳಲ್ಲಿ ಸ್ಪಾರ್ಟ್ ಟೆಸ್ಟಿಂಗ್ ನಡೆಸಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ವರದಿಗಳ ಪ್ರಕಾರ, ಕಿಯಾ ನಿರ್ಮಾಣದ ಸ್ಟೊನಿಕ್ ಕ್ರಾಸ್‍ಓವರ್ ಮತ್ತು ಗ್ರ್ಯಾಂಡ್ ಕಾರ್ನಿವಾಲ್ ಎಂಪಿವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸಿದ್ದಗೊಳಿಸಲು ಯೋಜನೆ ರೂಪಿಸಿದ್ದು, ಸ್ಟೊನಿಕ್ ಕಾರುಗಳು ಹ್ಯುಂಡೈ ನಿರ್ಮಾಣದ ಕೋನಾ ಎಸ್‌ಯುವಿ ಹೋಲಿಕೆಯನ್ನು ಪಡೆದಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಅದೇ ರೀತಿಯಾಗಿ ಟೊಯೊಟಾ ಇನೋವಾ ಕ್ರಿಸ್ಟಾಗೆ ಪೈಪೋಟಿ ನೀಡುವ ಉದ್ದೇಶದಿಂದ ಗ್ರ್ಯಾಂಡ್ ಕಾರ್ನಿವಾಲ್ ಅಭಿವೃದ್ಧಿ ಮಾಡಲಾಗುತ್ತಿದ್ದು, ಇದು ಬರೋಬ್ಬರಿ 11 ಸೀಟರ್ ವೈಶಿಷ್ಟ್ಯತೆಯನ್ನು ಹೊಂದಿಯಂತೆ. ಹೀಗಾಗಿ ಈ ಕಾರು ಟೂರಿಸ್ಟ್ ಬಳಕೆಯ ವಾಹನ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ಸಾಧ್ಯತೆಯಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಸದ್ಯ ಇದೇ ಮಾದರಿಯ ಕಾರುಗಳು ಉತ್ತರ ಅಮೆರಿಕದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟವಾಗುತ್ತಿದ್ದು, ಸೆಡೊನಾ ಹೆಸರಿನಲ್ಲಿ ಜನಪ್ರಿಯತೆ ಪಡೆದಿದೆ. ಇದಲ್ಲದೇ ಇವುಗಳು ಐದು ಬಾಗಿಲು ವಿನ್ಯಾಸದೊಂದಿಗೆ ಪವರ್ ಸ್ಲಿಡಿಂಗ್ ಡೋರ್ ಸಿಸ್ಟಂ ಪಡೆದುಕೊಂಡಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಕೇವಲ ಬಟನ್ ಪುಶ್ ಮಾಡಿ ಡೋರ್ ಎಳೆದುಕೊಳ್ಳಬಹುದಾದ ವ್ಯವಸ್ಥೆಯಿದ್ದು, ಇದರ ಜೊತೆಗೆ ಡ್ಯುಯಲ್ ಸನ್‌ರೂಫ್, ತ್ರಿ ಜೋನ್ ಏರ್ ಕಂಡಿಷನ್ ಸಿಸ್ಟಂ ಸೇರಿದಂತೆ ಹಲವು ವಿಶ್ವದರ್ಜೆ ಸೌಲಭ್ಯವನ್ನು ಪಡೆದಿರುವುದು ಎಂಪಿವಿ ಪ್ರಿಯರ ಆಕರ್ಷಣೆಗೆ ಕಾರಣವಾಗಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ ಗ್ರ್ಯಾಂಡ್ ಕಾರ್ನಿವಾಲ್ ಕಾರುಗಳು 2.2 -ಲೀಟರ್ ಡಿಸೇಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, 6-ಸ್ಪೀಡ್ ಆಟೋ ಮ್ಯಾಟಿಕ್ ಗೇರ್‌ಬಾಕ್ಸ್ ವಿನ್ಯಾಸ ಹೊಂದಿವೆ. ಹಾಗೆಯೇ ಕ್ರಾಸ್ಓವರ್ ಸ್ಟೊನಿಕ್ ಕಾರುಗಳು 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.6-ಲೀಟರ್ ಡಿಸೇಲ್ ಎಂಜಿನ್ ಪಡೆದುಕೊಂಡಿವೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಕಿಯಾ ನಿರ್ಮಾಣದ ಗ್ರ್ಯಾಂಡ್ ಕಾರ್ನಿವಾಲ್ ಕಾರುಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 8-ಸೀಟರ್ ಮತ್ತು 11 ಸೀಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಕಿಯಾ ಸಂಸ್ಥೆಯು ಭಾರತದಲ್ಲಿ ಯಾವ ಮಾದರಿಯನ್ನು ಬಿಡುಗಡೆ ಮಾಡಲಿದೆ ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಒಟ್ಟಿನಲ್ಲಿ ಕಿಯಾ ಬಿಡುಗಡೆ ಮಾಡಲಿರುವ ಗ್ರ್ಯಾಂಡ್ ಕಾರ್ನಿವಾಲ್ ಕಾರುಗಳು ಇನೋವಾ ಕ್ರಿಸ್ಟಾ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದ್ದು, ಸ್ಟೊನಿಕ್ ಕಾರಿನ ಬೆಲೆಯು 14 ಲಕ್ಷದಿಂದ 18 ಲಕ್ಷ ಮತ್ತು ಗ್ರ್ಯಾಂಡ್ ಕಾರ್ನಿವಾಲ್ ಕಾರುಗಳ ಬೆಲೆಯು 17 ಲಕ್ಷದಿಂದ 21 ಲಕ್ಷದ ತನಕ ಇರಬಹುದೆಂದು ಅಂದಾಜಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಹೀಗಾಗಿ ಕಿಯಾ ಗ್ರ್ಯಾಂಡ್ ಕಾರ್ನಿವಾಲ್ ಭಾರತದಲ್ಲಿ ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಗೊಂಡಿದ್ದೆ ಆದಲ್ಲಿ ಹಲವು ವಿಶೇಷತೆಗಳಿಗೆ ಕಾರಣವಾಗಲಿದ್ದು, 2019ರ ಮಧ್ಯಂತರ ವೇಳೆಗೆ ಭಾರತದಲ್ಲಿ ಕಿಯಾ ಪರ್ವ ಆರಂಭವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್....

ಇದಕ್ಕಾಗಿಯೇ ತೆಲಂಗಾಣದಲ್ಲಿ 10 ಸಾವಿರ ಕೋಟಿ ಬಂಡವಾಳದೊಂದಿಗೆ ಹೊಸ ಕಾರು ಉತ್ಪಾದನಾ ಘಟಕವನ್ನು ಆರಂಭಗೊಳಿಸಿರುವ ಕಿಯಾ ಸಂಸ್ಥೆಯು ಮಾರುತಿ ಸುಜುಕಿ ಮತ್ತು ಟೊಯೊಟಾ ಜೊತೆ ತೀವ್ರ ಪೈಪೋಟಿ ನಡೆಸುವ ತವಕದಲ್ಲಿದೆ ಎಂದ್ರೆ ನೀವು ನಂಬಲೇಬೇಕು.

More from DriveSpark

Article Published On: Saturday, May 26, 2018, 10:51 [IST]
English summary
Kia Grand Carnival MPV Spotted Testing In India — To Rival Toyota Innova Crysta.
Read more on kia motors mpv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+