TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಮುಂದಿನ ಎರಡು ವರ್ಷಗಳಲ್ಲಿ ಆರು ಹೊಸ ಕಾರುಗಳನ್ನು ಪರಿಚಯಿಸಲಿದೆ ಕಿಯಾ
ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಮೊದಲ ಬಾರಿಗೆ ತನ್ನ ವಾಣಿಜ್ಯ ವಹಿವಾಟು ಆರಂಭಿಸುತ್ತಿದ್ದು, ದೇಶಿಯ ಮಾರುಕಟ್ಟೆಗೆ ಅನುಗುಣವಾಗಿ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಇರಾದೆಯಲ್ಲಿದೆ.
ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಭಾರತೀಯ ಆಟೋ ಉದ್ಯಮದಲ್ಲಿ ಬಹುದೊಡ್ಡ ಬದಲಾವಣೆ ತರಲಿರುವ ಬಹುನೀರಿಕ್ಷಿತ ಕಾರು ಉತ್ಪಾದನಾ ಸಂಸ್ಥೆ ಅಂದ್ರೆ ತಪ್ಪಾಗುದಿಲ್ಲ. ಈಗಾಗಲೇ ಭಾರತದಲ್ಲಿ ಮೊದಲ ಹಂತವಾಗಿ ಬಿಡುಗಡೆಯಾಗುವ ತನ್ನ ಹೊಸ ಕಾರು ಉತ್ಪನ್ನಗಳ ಬಗ್ಗೆ ಮಾಹಿತಿ ಹೊರಹಾಕಿರುವ ಕಿಯಾ ಸಂಸ್ಥೆಯು ಸದ್ಯದಲ್ಲೇ ಮಾರುಕಟ್ಟೆಗೆ ಪ್ರವೇಶಿಸುವ ತವಕದಲ್ಲಿದೆ.
ಜಗತ್ತಿನ 8ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತದಲ್ಲಿ ಇದೇ ಮೊದಲ ಬಾರಿಗೆ ತನ್ನ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ವಿವಿಧ ಮಾದರಿಯ ಆರು ಹೊಸ ಕಾರು ಉತ್ಪನ್ನವನ್ನು ಬಿಡುಗಡೆ ಮಾಡಲಿದೆ.
ತೆಲಂಗಾಣದಲ್ಲಿ ತನ್ನ ಮೊದಲ ಕಾರು ಉತ್ಪಾದನಾ ಘಟಕವನ್ನು ತೆರೆಯುವ ಮೂಲಕ ಈಗಾಗಲೇ ಕಾರು ಉತ್ಪಾದನೆಯನ್ನು ಆರಂಭಗೊಳಿರುವ ಕಿಯಾ ಸಂಸ್ಥೆಯು ಮುಂಬರುವ 2019ರ ಆರಂಭದಲ್ಲೇ ಹೊಸ ಕಾರುಗಳ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಲಿದೆ.
ಕಿಯಾ ಸಂಸ್ಥೆಯು 2018ರ ದೆಹಲಿ ಆಟೋ ಮೇಳದಲ್ಲೂ ಸಹ ತನ್ನ ಬಹುನೀರಿಕ್ಷಿತ ಹೊಸ ಕಾರುಗಳನ್ನು ಪ್ರದರ್ಶನ ಮಾಡಿ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದು, ಕೈಗೆಟುಕುವ ಬೆಲೆಗಳಲ್ಲಿ ಮಧ್ಯಮ ಗಾತ್ರದ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.
ಇವುಗಳಲ್ಲಿ ಎಸ್‌ಪಿ ಕಾನ್ಸೆಪ್ಟ್ ಎಸ್‌ಯುವಿಯು ಮುಂದಿನ ವರ್ಷದ ಆರಂಭದಲ್ಲೇ ಬಿಡುಗಡೆ ಸಜ್ಜಾಗುತ್ತಿದ್ದು, ಈ ನಡುವೆ ಮತ್ತೆರಡು ಹೊಸ ಕಾರುಗಳನ್ನು ಸಹ ಬಿಡುಗಡೆ ಮಾಡುತ್ತಿರುವಾಗಿ ಸುಳಿವು ನೀಡಿದೆ. ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾದ ಸ್ಟೊನಿಕ್ ಮತ್ತು ಇನೋವಾ ಕ್ರಿಸ್ಟಾ ಮಾದರಿಯ ಗ್ರ್ಯಾಂಡ್ ಕಾರ್ನಿವಾಲ್ ಎಂಪಿವಿ ಕಾರನ್ನು ಪರಿಚಯಿಸುತ್ತಿರುವುದು ಖಚಿತವಾಗಿದೆ.
ಇದರ ಜೊತೆಗೆ ಕಿಯಾ ಸ್ಟಿಂಗರ್ ಜಿಟಿ ಎಸ್, ಸಿಡ್ ಎನ್ನುವ ಕಾರುಗಳು ಲಗ್ಷುರಿ ಸೆಡಾನ್ ಅಂಶಗಳೊಂದಿಗೆ ಕಾರು ಪ್ರಿಯರನ್ನು ಸೆಳೆಯುತ್ತಿದ್ದು, 19-ಇಂಚಿನ ಫೈವ್ ಸ್ಪೋಕ್ ಅಲಾಯ್ ಚಕ್ರಗಳು, ಬ್ರಿಂಬೋ ಬ್ರೇಕಿಂಗ್ ಸಿಸ್ಟಂ ಮತ್ತು ಎಲೆಕ್ಟ್ರಾನಿಕ್ ಡ್ರೈವಿಂಗ್ ಸೌಲಭ್ಯಗಳನ್ನು ಪಡೆದಿರುವುದು ಬಹಿರಂಗವಾಗಿದೆ.
ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಸ್‌ಯುವಿ, ಸೆಡಾನ್ ಮತ್ತು ಐಷಾರಾಮಿ ಕಾರುಗಳನ್ನು ಸಿದ್ದಗೊಳಿಸಿದ್ದು, ಇನೋವಾ ಕ್ರಿಸ್ಟಾ ಕಾರುಗಳ ಪ್ರತಿಸ್ಪರ್ಧಿಯಾಗಿರುವ ಗ್ರ್ಯಾಂಡ್ ಕಾರ್ನಿವಾಲ್ ಕಾರಿನ ಭಾರೀ ನೀರಿಕ್ಷೆ ಇಟ್ಟುಕೊಳ್ಳಲಾಗಿದೆ.
ಇದರೊಂದಿಗೆ ಕಿಯಾ ಎಸ್‌ಪಿ ಕಾನ್ಸೆಪ್ಟ್, ಸ್ಟೊನಿಕ್, ಗ್ರ್ಯಾಂಡ್ ಕಾರ್ನಿವಾಲ್, ಸ್ಟಿಂಗರ್, ಸೆರಾಟೊ ಕಾರುಗಳು ಗ್ರಾಹಕರ ಅಭಿರುಚಿಗೆ ತಕ್ಕಂತೆ ಸಿದ್ದವಾಗಿದ್ದು, ಹ್ಯುಂಡೈ ಮಾದರಿಯಲ್ಲೇ ಕಿಯಾ ಕಾರುಗಳು ಸಹ ಬೆಲೆ ಪಟ್ಟಿ ಸಿದ್ದವಾಗುವ ಸಾಧ್ಯತೆಗಳಿವೆ.
MOST READ: 7 ಸಾವಿರ ಕೋಟಿ ವೆಚ್ಚದಲ್ಲಿ ತಲೆಎತ್ತಿದ ಕಿಯಾ ಮೋಟಾರ್ಸ್ ಮೊದಲ ಕಾರು ಉತ್ಪಾದನಾ ಘಟಕ
ಒಟ್ಟಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆ ತರುವ ಉದ್ದೇಶದೊಂದಿದೆ ಬೃಹತ್ ಯೋಜನೆ ಹೊತ್ತು ಬಂದಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಮಾರುತಿ ಸುಜುಕಿ ಮತ್ತು ಹ್ಯುಂಡೈ ಸಂಸ್ಥೆಗಳಿಗೆ ತ್ರೀವ ಪೈಪೋಟಿ ನೀಡುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದೆ ಅಂದ್ರೆ ತಪ್ಪಾಗುವುದಿಲ್ಲ.
2019ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ತನ್ನ ಮೊದಲ ಎಸ್‌ಪಿ ಕಾನ್ಸೆಪ್ಟ್ ಕಾರನ್ನು ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ತದನಂತರ ಸೊರೆಂಟೊ, ಸ್ಟೊನಿಕ್ ಕ್ರಾಸ್ ಓವರ್ ಎಸ್‌ಯುವಿ ಮತ್ತು ಗ್ರ್ಯಾಂಡ್ ಕಾರ್ನಿವಾಲ್ ಕಾರನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.
MOST READ: ಅಯ್ಯೋ ದೇವರೇ.. ಜಿಪಿಎಸ್ ನಂಬಿಕೊಂಡು ಹೋದ್ರೆ ಹೀಗಾ ಆಗೋದು..!
ಇದರಲ್ಲಿ ಟೊಯೊಟಾ ಇನೋವಾ ಕ್ರಿಸ್ಟಾಗೆ ಪೈಪೋಟಿ ನೀಡುವ ಉದ್ದೇಶದಿಂದ ಗ್ರ್ಯಾಂಡ್ ಕಾರ್ನಿವಾಲ್ ಅಭಿವೃದ್ಧಿ ಮಾಡಲಾಗುತ್ತಿದ್ದು, ಇದು 7 ಸೀಟರ್, 9 ಸೀಟರ್ ಮತ್ತು 11 ಸೀಟರ್ ವೈಶಿಷ್ಟ್ಯತೆಯನ್ನು ಹೊಂದಿಯಂತೆ. ಹೀಗಾಗಿ ಈ ಕಾರು ಟೂರಿಸ್ಟ್ ಬಳಕೆಯ ವಾಹನ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ಸಾಧ್ಯತೆಯಿದೆ.
ಇದರಿಂದ ಕಿಯಾ ಮೋಟಾರ್ಸ್ ಸಂಸ್ಥೆಯು ಮಾರುತಿ ಸುಜುಕಿ, ಹ್ಯುಂಡೈ, ಟೊಯೊಟಾ ಮತ್ತು ಟಾಟಾ ಮೋಟಾರ್ಸ್ ನಿರ್ಮಾಣದ ಕಾರುಗಳಿಗೆ ಭಾರೀ ಪೈಪೋಟಿ ನೀಡುವುದು ಸ್ಪಷ್ಟವಾಗಿದ್ದು, ಗ್ರಾಹಕರನ್ನು ಸೆಳೆಯಲು ಕಿಯಾ ಕೈಗೊಳ್ಳುವ ಮುಂದಿನ ಯೋಜನೆಗಳ ಬಗ್ಗೆ ಮತ್ತಷ್ಟು ಕುತೂಹಲವಿದೆ ಎನ್ನಬಹುದು.