ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಕಿಯಾ ಮೋಟಾರ್ಸ್ ಭಾರತದಲ್ಲಿ ಮೊದಲ ಬಾರಿಗೆ ತನ್ನ ವಾಣಿಜ್ಯ ವಹಿವಾಟು ಆರಂಭಿಸುತ್ತಿದ್ದು, ದೇಶಿಯ ಮಾರುಕಟ್ಟೆಗೆ ಅನುಗುಣವಾಗಿ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಕಿಯಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಭಾರತೀಯ ಆಟೋ ಉದ್ಯಮದಲ್ಲಿ ಬಹುದೊಡ್ಡ ಬದಲಾವಣೆ ತರಲಿರುವ ಬಹುನೀರಿಕ್ಷಿತ ಕಾರು ಉತ್ಪಾದನಾ ಸಂಸ್ಥೆಯಾಗಿದೆ ಅಂದ್ರೆ ತಪ್ಪಾಗುದಿಲ್ಲ. ಈಗಾಗಲೇ ಭಾರತದಲ್ಲಿ ಮೊದಲ ಹಂತವಾಗಿ ಬಿಡುಗಡೆಯಾಗುವ ತನ್ನ ಹೊಸ ಕಾರು ಉತ್ಪನ್ನಗಳ ಬಗ್ಗೆ ಮಾಹಿತಿ ಹೊರಹಾಕಿರುವ ಕಿಯಾ ಸಂಸ್ಥೆಯು ಸದ್ಯದಲ್ಲೇ ಮಾರುಕಟ್ಟೆಗೆ ಪ್ರವೇಶಿಸುವ ತವಕದಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಜಗತ್ತಿನ 8ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತದಲ್ಲಿ ಇದೇ ಮೊದಲ ಬಾರಿಗೆ ತನ್ನ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ವಿವಿಧ ಮಾದರಿಯ ಆರು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಕಿಯಾ ಮೋಟಾರ್ಸ್ ಸಂಸ್ಥೆಯು ಸದ್ಯಕ್ಕೆ ಭಾರತದಲ್ಲಿ ಮೊದಲ ಕಾರು ಉತ್ಪಾದನಾ ಘಟಕವನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಪೆನುಕೊಂಡದ ಬಳಿ ನಿರ್ಮಾಣ ಮಾಡಿದ್ದು, ಬರೋಬ್ಬರಿ 540 ಎಕರೆ ವಿಸ್ತಿರ್ಣದಲ್ಲಿ ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಹೊಸ ಘಟಕವನ್ನು ಸಿದ್ದಗೊಳಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಬಿಡಿಭಾಗಗಳು, ಎಂಜಿನ್ ಅಭಿವೃದ್ಧಿ, ಸಂಶೋಧನೆ ಸೇರಿದಂತೆ ವಿವಿಧ ತಾಂತ್ರಿಕ ಅಂಶಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವಿಭಾಗಗಳನ್ನು ಹೊಂದಿರುವ ಕಿಯಾ ಇಂಡಿಯಾ ಸಂಸ್ಥೆಯು ಇದಕ್ಕಾಗಿಯೇ ಈಗಾಗಲೇ 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಕಿಯಾ ಸಂಸ್ಥೆಯು 2018ರ ದೆಹಲಿ ಆಟೋ ಮೇಳದಲ್ಲೂ ಸಹ ತನ್ನ ಬಹುನೀರಿಕ್ಷಿತ ಹೊಸ ಕಾರುಗಳನ್ನು ಪ್ರದರ್ಶನ ಮಾಡುವ ಮೂಲಕ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದು, ಕೈಗೆಟುಕುವ ಬೆಲೆಗಳಲ್ಲಿ ಮಧ್ಯಮ ಗಾತ್ರದ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇವುಗಳಲ್ಲಿ ಎಸ್‌ಪಿ ಕಾನ್ಸೆಪ್ಟ್ ಎಸ್‌ಯುವಿಯು ಮುಂದಿನ ವರ್ಷದ ಆರಂಭದಲ್ಲೇ ಬಿಡುಗಡೆ ಸಜ್ಜಾಗುತ್ತಿದ್ದು, ಈ ನಡುವೆ ಮತ್ತೆರಡು ಹೊಸ ಕಾರುಗಳನ್ನು ಸಹ ಬಿಡುಗಡೆ ಮಾಡುತ್ತಿರುವಾಗಿ ಸುಳಿವು ನೀಡಿದೆ. ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾದ ಸ್ಟೊನಿಕ್ ಮತ್ತು ಇನೋವಾ ಕ್ರಿಸ್ಟಾ ಮಾದರಿಯ ಗ್ರ್ಯಾಂಡ್ ಕಾರ್ನಿವಾಲ್ ಎಂಪಿವಿ ಕಾರನ್ನು ಪರಿಚಯಿಸುತ್ತಿರುವುದು ಖಚಿತವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇದರ ಜೊತೆಗೆ ಕಿಯಾ ಸ್ಟಿಂಗರ್ ಜಿಟಿ ಎಸ್, ಸಿಡ್ ಮತ್ತು ನಿಯೊ ಎನ್ನುವ ಎಲೆಕ್ಟ್ರಿಕ್ ಕಾರನ್ನು ಸಹ ಬಿಡುಗಡೆ ಮಾಡುತ್ತಿದ್ದು, ಈ ಸಂಬಂಧ ಆಂಧ್ರಪ್ರದೇಶ ಸರ್ಕಾರದೊಂದಿಗೆ ಹೊಸ ಒಡಂಬಡಿಕೆಗೆ ಸಹಿ ಹಾಕಿದೆ. ಭವಿಷ್ಯ ವಾಹನಗಳ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಕಿಯಾ ಸಂಸ್ಥೆಗೆ ಆಂಧ್ರ ಸರ್ಕಾರವು ಮೂಲಭೂತ ಸೌಕರ್ಯಗಳನ್ನು ಒದಗಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಹೀಗಾಗಿ ಭವಿಷ್ಯದಲ್ಲಿ ಹೊಸ ಸಂಚಲನ ಸೃಷ್ಠಿಸಲಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿ ಮೇಲೂ ಹೆಚ್ಚಿನ ಗಮನಹರಿಸಿದ್ದು, ನಿನ್ನೆಯಷ್ಟೇ ನಡೆದ ಕಾರ್ಯಕ್ರಮದಲ್ಲಿ ನಿಯೊ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಪ್ರದರ್ಶನ ಮಾಡಿದ್ದು ಸಾಕಷ್ಟು ವಿಶೇಷತೆ ಕಾರಣವಾಯ್ತು.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

455 ಕಿ.ಮಿ ಮೈಲೇಜ್ ರೇಂಜ್..!

ಕಿಯಾ ಸಂಸ್ಥೆಯು ತನ್ನ ಭವಿಷ್ಯದ ಎಲೆಕ್ಟ್ರಿಕ್ ನಿಯೊ ಕಾರನ್ನು ಸುಧಾರಿತ ಬ್ಯಾಟರಿ ಸೌಲಭ್ಯದೊಂದಿಗೆ ಅಭಿವೃದ್ಧಿಗೊಳಿಸಿದ್ದು, ಈ ಕಾರು ಟೆಸ್ಲಾ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸುವುದು ಖಚಿತವಾಗಿದೆ.

MOST READ: ದರೋಡೆಕೋರರ ಹೆಡೆಮುರಿ ಕಟ್ಟಲು ಡಿಸಿಪಿ ಅಣ್ಣಾಮಲೈ ಮಾಡಿದ ಪ್ಲ್ಯಾನ್ ಹೇಗಿತ್ತು ಗೊತ್ತಾ?

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಪ್ರತಿ ಜಾರ್ಜ್‌ಗೆ ಬರೋಬ್ಬರಿ 455ಕಿ.ಮಿ ಮೈಲೇಜ್ ರೇಂಜ್ ಹೊಂದಿರುವ ನಿಯೊ ಕಾರುಗಳು ಐಷಾರಾಮಿ ಸೌಲಭ್ಯಗಳನ್ನು ಹೊತ್ತುಬರಲಿದ್ದು, ಮೈಲೇಜ್ ಹೊರತು ಪಡಿಸಿ ಕಾರಿನ ಯಾವುದೇ ವೈಶಿಷ್ಟ್ಯತೆಗಳು ಮತ್ತು ಬೆಲೆ ಮಾಹಿತಿಯನ್ನು ಕಿಯಾ ಬಿಟ್ಟುಕೊಟ್ಟಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇನ್ನು ಕಿಯಾ ಸಂಸ್ಥೆಯು ನಿರ್ಮಾಣಗೊಳಿಸಿರುವ ಹೊಸ ಕಾರು ಉತ್ಪಾದನಾ ಘಟಕದಲ್ಲಿ ವರ್ಷಕ್ಕೆ ಮೂರು ಲಕ್ಷ ಕಾರುಗಳನ್ನು ಅಭಿವೃದ್ಧಿಗೊಳಿಸಬಹುದಾದಷ್ಟು ಸಾಮರ್ಥ್ಯವನ್ನು ಹೊಂದಿದ್ದು, ಮೂರು ಹಂತದ ಪಾಳೆಯಲ್ಲಿ ಕಾರು ಉತ್ಪಾದನಾ ಕಾರ್ಯ ನಡಲಿಯಲಿದೆ.

MOST READ: ಭಾರತದ ಐಫೆಲ್ ಟವರ್ ಖ್ಯಾತಿಯ ಸಿಗ್ನೇಚರ್ ಸೇತುವೆಯ ಸ್ಪೆಷಾಲಿಟಿ ಏನು ಗೊತ್ತಾ?

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇದರೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಸ್‌ಯುವಿ, ಸೆಡಾನ್ ಮತ್ತು ಐಷಾರಾಮಿ ಕಾರುಗಳನ್ನು ಸಿದ್ದಗೊಳಿಸಿದ್ದು, ಇನೋವಾ ಕ್ರಿಸ್ಟಾ ಕಾರುಗಳ ಪ್ರತಿಸ್ಪರ್ಧಿಯಾಗಿರುವ ಗ್ರ್ಯಾಂಡ್ ಕಾರ್ನಿವಾಲ್ ಕಾರಿನ ಭಾರೀ ನೀರಿಕ್ಷೆ ಇಟ್ಟುಕೊಳ್ಳಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಿಯಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇದರಿಂದ ಕಿಯಾ ಮೋಟಾರ್ಸ್ ಸಂಸ್ಥೆಯು ಮಾರುತಿ ಸುಜುಕಿ, ಹ್ಯುಂಡೈ, ಟೊಯೊಟಾ ಮತ್ತು ಟಾಟಾ ಮೋಟಾರ್ಸ್ ನಿರ್ಮಾಣದ ಕಾರುಗಳಿಗೆ ಭಾರೀ ಪೈಪೋಟಿ ನೀಡುವುದು ಸ್ಪಷ್ಟವಾಗಿದ್ದು, ಗ್ರಾಹಕರನ್ನು ಸೆಳೆಯಲು ಕಿಯಾ ಕೈಗೊಳ್ಳುವ ಮುಂದಿನ ಯೋಜನೆಗಳ ಬಗ್ಗೆ ಮತ್ತಷ್ಟು ಕುತೂಹಲವಿದೆ ಎನ್ನಬಹುದು.

Most Read Articles

Kannada
English summary
Kia Sign MOU With Andhra Pradesh Government. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X