ಸೌತ್ ಆಫ್ರಿಕಾದಲ್ಲೂ ಕಮಾಲ್ ಮಾಡುತ್ತಿದೆ ಮೆಡ್ ಇನ್ ಇಂಡಿಯಾ ಸ್ವಿಫ್ಟ್
ಕಳೆದ ಫೆಬ್ರುವರಿ 8ರಂದು ಭಾರತದಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಮಾರುತಿ ಸುಜುಕಿ ಸ್ವಿಫ್ಟ್ ಕಾರುಗಳು ಇದೀಗ ದಕ್ಷಿಣ ಆಫ್ರಿಕಾದಲ್ಲೂ ಬಿಡುಗಡೆಯಾಗಿದ್ದು, ದಾಖಲೆ ಮಟ್ಟದಲ್ಲಿ ಹೊಸ ಕಾರುಗಳಿಗೆ ಬೇಡಿಕೆ ಬಂದಿದೆ.
ಕಳೆದ ಫೆಬ್ರುವರಿ 8ರಂದು ಭಾರತದಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಮಾರುತಿ ಸುಜುಕಿ ಸ್ವಿಫ್ಟ್ ಕಾರುಗಳು ಇದೀಗ ದಕ್ಷಿಣ ಆಫ್ರಿಕಾದಲ್ಲೂ ಬಿಡುಗಡೆಯಾಗಿದ್ದು, ದಾಖಲೆ ಮಟ್ಟದಲ್ಲಿ ಹೊಸ ಕಾರುಗಳಿಗೆ ಬೇಡಿಕೆ ಬಂದಿದೆ.

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ನಂ.01 ಸ್ಥಾನದಲ್ಲಿ ಮಾರುತಿ ಸುಜುಕಿ ಸಂಸ್ಥೆಯು ವಿದೇಶಿ ಮಾರುಕಟ್ಟೆಗಳಲ್ಲೂ ತನ್ನ ಹಿಡಿತ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಸ್ವಿಫ್ಟ್ ಕಾರುಗಳಿಗೆ ಬಂದಿರುವ ಭಾರೀ ಪ್ರಮಾಣದ ಬೇಡಿಕೆಯೇ ಇದಕ್ಕೆ ಸಾಕ್ಷಿ. ವಿಶೇಷ ಅಂದ್ರೆ ಸೌತ್ ಆಫ್ರಿಕಾದಲ್ಲಿ ಮಾರಾಟವಾಗುತ್ತಿರುವ ಹೊಸ ಸ್ವಿಫ್ಟ್ ಕಾರುಗಳು ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಸಿದ್ದವಾಗಿ ಗ್ರಾಹಕರ ಸೇರುತ್ತಿವೆ.

ಇನ್ನು ಭಾರತದಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಕಾರುಗಳಿಗೂ ಮತ್ತು ಸೌತ್ ಆಫ್ರಿಕಾದಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಕಾರುಗಳಿಗೂ ಕೆಲವು ತಾಂತ್ರಿಕ ವ್ಯತ್ಯಾಸಗಳಿದ್ದು, ಆಫ್ರಿಕಾದಲ್ಲಿನ ಕೆಲವು ಕಠಿಣ ನಿಯಮಗಳ ಹಿನ್ನೆಲೆ ಪೆಟ್ರೋಲ್ ವರ್ಷನ್‌ಗಳನ್ನು ಮಾತ್ರ ರಫ್ತು ಮಾಡುತ್ತಿದೆ.

ಜಿಎ ಮತ್ತು ಜಿಎಲ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಮಾರುತಿ ಸುಜುಕಿ ಕಾರುಗಳು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದ್ದು, ಭಾರತದಲ್ಲಿ ಮಾರಾಟವಾಗುತ್ತಿರುವ ಎಲ್ಎಕ್ಸ್ಐ ಟ್ರಿಮ್ ವೆರಿಯೆಂಟ್‌ಗಳಿಗೆ ಇವು ಸಮವಾಗಿರಲಿವೆ.

ಎಂಜಿನ್ ಸಾಮರ್ಥ್ಯ
1.2-ಲೀಟರ್ ಕೆ ಸೀರಿಸ್ ಪೆಟ್ರೋಲ್ ಎಂಜಿನ್ ಹೊಂದಿರುವ ಆಫ್ರಿಕನ್ ಮಾದರಿಗಳು 5-ಸ್ಪಿಡ್ ಆಟೋಮ್ಯಾಟೆಡ್ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿದ್ದು, ಭಾರತದಿಂದ ರಫ್ತು ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಗಿಂತ ಅಲ್ಲಿ ತುಸು ದುಬಾರಿ ಎನ್ನಿಸಲಿವೆ.

ಇದರ ಹೊರತಾಗಿ ಕಾರಿನ ಗುಣಲಕ್ಷಣಗಳು ಇಂಡಿಯನ್ ಮಾಡೆಲ್ ಮತ್ತು ಆಫ್ರಿಕನ್ ಮಾಡೆಲ್ ಎರಡು ಒಂದೇ ಎನ್ನಿಸಲಿದ್ದು, ಸುಧಾರಿತ ತಂತ್ರಜ್ಞಾನಗಳ ತಳಹದಿಯಲ್ಲಿ ನಿರ್ಮಾಣವಾಗಿರುವ 2018 ಸ್ವಿಫ್ಟ್ ಕಾರುಗಳು ಕಾರು ವಿಭಾಗದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟುಹಾಕಿದ್ದು, ಯುವ ಹಾಗೂ ಹಿರಿಯ ವಾಹನ ಪ್ರೇಮಿಗಳು ಒಂದೇ ರೀತಿಯಲ್ಲಿ ಇಷ್ಟಪಡುವ ಕಾರು ಇದಾಗಿದೆ.

ಐದನೇ ತಲೆಮಾರಿನ ಹರ್ಟೆಕ್ಟ್ (Heartect) ತಳಹದಿಯಲ್ಲಿ ನೂತನ ಸ್ವಿಫ್ಟ್ ನಿರ್ಮಾಣ ಮಾಡಲಾಗಿದ್ದು, ಇದು ಹೆಚ್ಚು ಶಕ್ತಿಶಾಲಿ, ಬಿಗಿತವನ್ನು ಪಡೆಯಲಿದೆ. ಜೊತೆಗೆ ಅತ್ಯುತ್ತಮ ಚಾಲನಾ ಅನುಭವದೊಂದಿಗೆ ಗರಿಷ್ಠ ಇಂಧನ ಕ್ಷಮತೆಯನ್ನು ಕಾಪಾಡಿಕೊಳ್ಳಲಿದೆ.

ಹೀಗಾಗಿಯೇ ಗ್ರಾಹಕರ ಆಯ್ಕೆಗೆ ಅನುಗುಣವಾಗಿ ವಿವಿಧ ಮಾದರಿಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ 6 ಮತ್ತು ಡೀಸೆಲ್ ಆವೃತ್ತಿಗಳಲ್ಲಿ ವಿವಿಧ 6 ವಿಭಿನ್ನ ಕಾರು ಶೈಲಿಗಳನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ ದ.ಆಫ್ರಿಕಾ ಮಾರುಕಟ್ಟೆಯಲ್ಲಿ ಎರಡು ವೆರಿಯೆಂಟ್‌ಗಳನ್ನು ಮಾತ್ರ ಪರಿಚಯಿಸಲಾಗಿದೆ.

ಕಾರಿನ ಒಳ ಮತ್ತು ಹೊರ ವಿನ್ಯಾಸ ಸ್ಪೋರ್ಟಿ ಇಂಟಿರಿಯರ್ ಲುಕ್ ಪಡೆದಿರುವ ಹೊಸ ಸ್ವಿಫ್ಟ್ ಕಾರುಗಳು ಅತ್ಯಾರ್ಷಕ ಹೆಕ್ಷಾಗೊನಲ್ ಗ್ರಿಲ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ನ್ಯೂ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಎಲ್‌ಇಡಿ ಸಿಗ್ನಿಚರ್ ಟೈಲ್ ಲೈಟ್ ಕೂಡಾ ನೀಡಲಾಗಿದೆ.

ಇನ್ನು ಸ್ಮಾರ್ಟ್ ಕನೆಕ್ಟಿವಿಟಿಗೂ ಹೊಸ ಕಾರುಗಳಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 7 ಇಂಚಿನ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ, ಅಂಡ್ರಾಯ್ಡ್ ಆಟೋ, ಮಿರರ್ ಲೀಂಕ್ ಮತ್ತು ಕ್ಲೈಮೆಟ್ ಕಂಟ್ರೋಲರ್ ಸಿಸ್ಟಂ ಒದಗಿಸಲಾಗಿದೆ.

ಸುರಕ್ಷಾ ಸಾಧನಗಳು
ಎಂಜಿನ್ ಸ್ಟಾರ್ಟ್ ಆ್ಯಂಡ್ ಸ್ಟಾಪ್ ಬಟನ್ ಒದಗಿಸಲಾಗಿದ್ದು, ಆಟೋ ಹೆಡ್‌ಲ್ಯಾಂಪ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಕೀ ಲೇಸ್ ಎಂಟ್ರಿ, ಎಲೆಕ್ಟ್ರಿಕ್ ಆಪರೇಟಿಂಗ್ ರಿರ್ ವ್ಯೂವ್ ಮಿರರ್, ಎಬಿಎಸ್ ಸೇರಿದಂತೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಸೌಲಭ್ಯವಿದೆ.


Click it and Unblock the Notifications