ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಕಳೆದ ಎರಡು ದಿನಗಳ ಹಿಂದಷ್ಟೇ ಮಹೀಂದ್ರಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಅಲ್ಟುರಾಸ್ ಜಿ4 ಐಷಾರಾಮಿ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬಂದಿರುವ ಹೊಸ ಕಾರು ಸುರಕ್ಷತೆಯ ವಿಚಾರದಲ್ಲೂ ಅತ್ಯುತ್ತಮ ಮಾದರಿಯಾಗಿ ಹೊರಹೊಮ್ಮಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಹೊಸ ಕಾರು ಖರೀದಿಗೂ ಮುನ್ನ ಅದರ ವಿನ್ಯಾಸ ಮತ್ತು ಬೆಲೆಗಳು ಎಷ್ಟು ಮುಖ್ಯವೋ ಸುರಕ್ಷಾ ವಿಧಾನಗಳು ಅಷ್ಟೇ ಮುಖ್ಯ. ಹೀಗಾಗಿ ಕಾರು ಮಾದರಿಯಲ್ಲಿರುವ ಸುರಕ್ಷಾ ಸೌಲಭ್ಯಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಹೀಂದ್ರಾ ಅಲ್ಟುರಾಸ್ ಜಿ4 ಉತ್ತಮ ರೇಟಿಂಗ್ ಪಡೆದಿದ್ದು, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷೆ ಒದಗಿಸಿರುವುದು ಕ್ರ್ಯಾಶ್ ಟೆಸ್ಟಿಂಗ್ ವೇಳೆ ಖಾತ್ರಿಯಾಗಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಅಲ್ಟುರಾಸ್ ಜಿ4 ಕಾರನ್ನು ಅಭಿವೃದ್ಧಿಗೊಳಿಸಿರುವ ಮಹೀಂದ್ರಾ ಸಂಸ್ಥೆಯು ಸ್ಯಾಂಗ್‌ಯಾಂಗ್ ರೆಕ್ಸಾಟನ್ ಜಿ4 ಕಾರಿನ ಪ್ರೇರಣೆಯೊಂದಿಗೆ ಅಲ್ಟುರಾಸ್ ಜಿ4 ಕಾರನ್ನು ನಿರ್ಮಾಣ ಮಾಡಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಭಾರತದಲ್ಲಿ ಹೊಸ ಕಾರು ಬಿಡುಗಡೆಯಾಗುವುದಕ್ಕೂ ಮುನ್ನ ದಕ್ಷಿಣ ಕೊರಿಯಾದಲ್ಲಿ ನಡೆದ ಕೆ-ಎನ್‌‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹೊಸ ಅಲ್ಟುರಾಸ್ ಜಿ4 ಸುರಕ್ಷತೆಯ ಬಗ್ಗೆ ಪರೀಕ್ಷೆ ನಡೆಸಲಾಗಿತ್ತು. ಇದೀಗ ಅದರ ಫಲಿತಾಂಶ ಪ್ರಕಟವಾಗಿದ್ದು, ಸುರಕ್ಷಾ ರೇಟಿಂಗ್‌ನಲ್ಲಿ ಐದಕ್ಕೆ ಐದು ಅಂಕಗಳನ್ನು ತನ್ನದಾಸಿಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 0 ಸ್ಟಾರ್ ರೇಟಿಂಗ್ ಬಂದಲ್ಲಿ ಅದು ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ. ಇದೀಗ ಮಹೀಂದ್ರಾ ಅಲ್ಟುರಾಸ್ ಜಿ4 ಕಾರು 5 ಸ್ಟಾರ್ ರೇಟಿಂಗ್ ತನ್ನದಾಗಿಸಿಕೊಂಡಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ಸಿಗುತ್ತದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಸುರಕ್ಷಾ ಸೌಲಭ್ಯಗಳು

ಪ್ರಯಾಣಿಕರ ಸುರಕ್ಷತೆಗೆ ಅಲ್ಟುರಾಸ್ ಜಿ4 ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 9 ಏರ್‍‍ಬ್ಯಾಗ್, ಎಬಿಎಸ್, ಇಬಿಡಿ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಅಡ್ವಾನ್ಸ್ಡ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಮ್, ಲೇನ್ ಡಿಪಾರ್ಚುರ್ ವಾರ್ನಿಂಗ್, ಲೇನ್ ಚೇಂಜ್ ಅಸ್ಸಿಸ್ಟ್, ಟ್ರಾಫಿಕ್ ಸೇಫ್ಟಿ ಅಸ್ಸಿಸ್ಟ್, ಐಎಸ್ಒಎಫ್ಐಎಕ್ಸ್ ಚೈಲ್ಡ್-ಸೀಟ್ ಮೌಂಟ್ ಸೀಟ್, ಹಿಲ್ ಕ್ಲೈಮ್ / ಡಿಸೆಂಟ್ ಅಸಿಸ್ಟ್ಸ್ ಮತ್ತು ಹೈ ಬೀಮ್ ಅಸ್ಸಿಸ್ಟ್ ಅನ್ನು ಅಳವಡಿಸಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಕಾರಿನ ಡಿಸೈನ್‌ನಲ್ಲಿ ಈ ಹಿಂದಿನ ಸ್ಯಾಂಗ್‌ಯಾಂಗ್ ರೆಕ್ಸ್‌ಸ್ಟಾನ್ ಜಿ4 ಕಾರಿನ ಕೆಲವು ವಿನ್ಯಾಸಗಳನ್ನು ಎರವಲು ಪಡೆಯಲಾಗಿದ್ದು, ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೈಬೀಮ್ ಮತ್ತು ಲೋ ಬೀಮ್ ಲೈಟ್ಸ್, 18-ಇಂಚಿನ ಫೈವ್ ಸ್ಪೋಕ್ ಅಲಾಯ್ ವೀಲ್ಹ್‌ಗಳು, ಫಾಗ್ ಲ್ಯಾಂಪ್ ಜೊತೆ ಕಾರ್ನರ್ ಲೈಟಿಂಗ್ ಸೌಲಭ್ಯ ಪಡೆದಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಎಂಜಿನ್ ಸಾಮರ್ಥ್ಯ

ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಕಾರು 2.2-ಲೀಟರ್(2,200ಸಿಸಿ) 4 ಸಿಲಿಂಡರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಪಡೆದುಕೊಂಡಿದ್ದು, 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ 178-ಬಿಹೆಚ್‍‍ಪಿ ಮತ್ತು 420-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿವೆ.

MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಅಲ್ಟುರಾಸ್ ಜಿ4 ಕಾರುಗಳು ಕೇವಲ ಪ್ರೀಮಿಯಂ ಎಸ್‌ಯುವಿ ಮಾದರಿಯಷ್ಟೇ ಅಲ್ಲದೇ ಆಫ್ ರೋಡ್ ವೈಶಿಷ್ಟ್ಯತೆಯನ್ನು ಸಹ ಹೊಂದಿರುವ ಈ ಕಾರುಗಳಲ್ಲಿ ಹಿಂಬದಿ ಚಕ್ರಗಳಿಗೂ ಗೇರ್‌ಬಾಕ್ಸ್ ಶಕ್ತಿ ಪೂರೈಕೆಯ ಸೌಲಭ್ಯವಿದ್ದು, ಇದು ಕಠಿಣ ಪರಿಸ್ಥಿತಿಗಳಲ್ಲೂ ಸರಾಗವಾಗಿ ನುಗ್ಗಬಲ್ಲ ಬಲಿಷ್ಠ ಕಾರು ಮಾದರಿಯಾಗಲಿದೆ.

ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡ ಮಹೀಂದ್ರಾ ಅಲ್ಟುರಾಸ್ ಜಿ4

ಕಾರಿನ ಬೆಲೆಗಳು(ಎಕ್ಸ್‌ಶೋರೂಂ ಪ್ರಕಾರ)

ಅಲ್ಟುರಾಸ್ ಜಿ4 ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ(2x2 ವರ್ಷನ್) ರೂ. 26.95 ಲಕ್ಷಕ್ಕೆ ಹಾಗೂ ಟಾಪ್ ಎಂಡ್(4x4 ವರ್ಷನ್) ಮಾದರಿಯನ್ನು ರೂ. 29.95 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

MOST READ: ಕಿಸೆಯಲ್ಲಿ 5 ಸಾವಿರಕ್ಕೂ ಗತಿ ಇಲ್ಲ ಎಂದಿದ್ದ ಈ ನಟ ಈಗ 4 ಕೋಟಿ ಬೆಲೆಯ ಬೆಂಟ್ಲಿ ಒಡೆಯ

ಒಟ್ಟಿನಲ್ಲಿ ಐಷಾರಾಮಿ ಎಸ್‌ಯುವಿ ವಿಭಾಗದಲ್ಲಿ ಅಲ್ಟುರಾಸ್ ಜಿ4 ಪರಿಚಯಿಸುವ ಮೂಲಕ ಹೊಸ ಅಧ್ಯಾಯ ಆರಂಭಿಸಿರುವ ಮಹೀಂದ್ರಾ ಸಂಸ್ಥೆಯು ಮುಂಬರುವ ದಿನಗಳಲ್ಲಿ ಯಾವ ಮಟ್ಟಿಗೆ ಹೊಸ ಕಾರಿನಲ್ಲಿ ಯಶಸ್ವಿಯಾಗಲಿದೆ ಎನ್ನುವುದನ್ನು ಕಾಯ್ದು ನೋಡಬೇಕಿದ್ದು, ಕ್ರ್ಯಾಶ್ ಟೆಸ್ಟಿಂಗ್ ಉತ್ತಮ ಪ್ರದರ್ಶನ ತೋರಿರುವುದು ಮಾತ್ರ ಕಾರು ಖರೀದಿದಾರರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
Mahindra Alturas G4 Global NCAP & K-NCAP Crash Test Results Revealed — Gets A Five-Star Rating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X