ಹೊಸದಾಗಿ ಬಿಡುಗಡೆಗೊಂಡ ಮಹೀಂದ್ರಾ ಮರಾಜೊ ಕಾರಿಗೆ ಫುಲ್ ಡಿಮ್ಯಾಂಡ್
ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ಮಾರುಕಟ್ಟೆಯಲ್ಲಿ ಎಂಪಿಪಿ ಕಾರಿನ ಬೇಡಿಕೆಯು ಹೆಚ್ಚುತ್ತಿರುವ ಕಾರಣ ಗ್ರಾಹಕರಿಗೆ ಅನುಕುಣವಾಗಿ ಮರಾಜೊ ಎಂಪಿವಿ ಕಾರನ್ನು ಸೆಪ್ಟೆಂಬರ್ 3ರಂದು ಬಿಡುಗಡೆಗೊಳಿಸಿತ್ತು.
ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ಮಾರುಕಟ್ಟೆಯಲ್ಲಿ ಎಂಪಿಪಿ ಕಾರಿನ ಬೇಡಿಕೆಯು ಹೆಚ್ಚುತ್ತಿರುವ ಕಾರಣ ಗ್ರಾಹಕರಿಗೆ ಅನುಕುಣವಾಗಿ ಮರಾಜೊ ಎಂಪಿವಿ ಕಾರನ್ನು ಸೆಪ್ಟೆಂಬರ್ 3ರಂದು ಬಿಡುಗಡೆಗೊಳಿಸಿತ್ತು. ಶಾರ್ಕ್ ವಿನ್ಯಾಸವನ್ನು ಮತು ಪ್ರೀಮಿಯಮ್ ಫೀಚರ್‍ಗಳಿಂದ ಸಜ್ಜುಗೊಂಡ ಈ ಕಾರಿಗೆ ಇದೀಗ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದೆ.

ಹೌದು, ಮಹೀಂದ್ರಾ ಸಂಸ್ಥೆಯು ತಮ್ಮ ಮರಾಜೊ ಕಾರನ್ನು ಬಿಡುಗಡೆಗೊಳಿಸುವ ಮುನ್ನವೇ, ಈ ಕಾರಿನ ಬುಕ್ಕಿಂಗ್ ಹೆಚ್ಚುತ್ತಿರುವ ಕಾರಣ ಆಗಸ್ಟ್ ತಿಂಗಳಿನಲ್ಲಿ ಸುಮಾರು 1,762 ಯೂನಿಟ್ ಕಾರುಗಳನ್ನು ತಮ್ಮ ಡೀಲರ್‍ಗಳ ಯಾರ್ಡ್‍ಗೆ ತಲುಪಿಸಲಾಗಿದೆ.

ಇನ್ನು ಈ ತಿಂಗಳು ಕೂಡ ಕಾರಿನ ಬೇಡಿಕೆಯು ಹೆಚ್ಚುತ್ತಿದ್ದು, ಎಂಪಿವಿ ಸೆಗ್ಮೆಂಟ್‍ನಲ್ಲಿರುವ ಟೊಯೊಟಾ ಇನೊವಾ ಕ್ರಿಸ್ಟಾ 6,680 ಮತ್ತು ಮಾರುತಿ ಎರ್ಟಿಗಾ 3,515 ಕಾರುಗಳು ಡಿಸ್ಪ್ಯಾಚ್ ಆಗಿದೆ.

ಈ ತಿಂಗಳು ಮಹೀಂದ್ರಾ ಮರಾಜೊ ಕಾರುಗಳು ಮಾರುತಿ ಎರ್ಟಿಗಾ ಕಾರಿಗಳನ್ನು ಹಿಂಡಿಕ್ಕಲಿದೆ. ಏಕೆಂದರೆ ಮೊದಲಿಗೆ ಮಾರುತಿ ಸುಜುಕಿ ಸಂಸ್ಥೆಯು ಮುಂದಿನ ತಿಂಗಳು ಹೊಸ ಎರ್ಟಿಗಾ ಕಾರನ್ನು ಬಿಡುಗಡೆಗೊಳಿಸಲಿದ್ದು, ಕಾರಿನ ಉತ್ಪಾದನೆಯನ್ನು ಕಡಿಮೆ ಮಾಡಲಿದೆ. ಎರಡನೆಯದಾಗಿ ಮಹೀಂದ್ರಾ ಸಂಸ್ಥೆಯು ಮರಾಜೊ ಕಾರಿನ ಪೆಂಡಿಂಗ್ ಬುಕ್ಕಿಂಗ್ ಅನ್ನು ಸ್ವೀಕರಿಸುತ್ತಿದೆ.

ಮಹೀಂದ್ರಾ ಸಂಸ್ಥೆಯು ಬೆಲೆಯಲ್ಲಿ ತಮ್ಮ ಮರಾಜೊ ಕಾರನ್ನು ಬಹಳ ಉಪಾಯದಿಂದ ಇನೊವಾ ಕ್ರಿಸ್ಟಾ ಮತ್ತು ಎರ್ಟಿಗಾ ಕಾರುಗಳ ನಡುವೆ ಇರಿಸಲಾಗಿದೆ. ಎಕೆಂದರೆ ಪ್ರಸ್ತುತ ಮಹೀಂದ್ರಾ ಮರಾಜೊ ಕಾರುಗಳು ಮಾರುಕಟ್ಟೆಲ್ಲಿ ರೂ. 9.99 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ.

ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಹೊಂದಿರುವ ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾ ಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಕಾರಿನ ಒಳಾಂಗಣ ವಿನ್ಯಾಸ
ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್ ಕಮಾಂಡ್ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ.

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ತುರ್ತುನಿರ್ವಹಣಾ ಕರೆ ಸೌಲಭ್ಯ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

ಎಂಜಿನ್ ಸಾಮರ್ಥ್ಯ
ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಸುರಕ್ಷಾ ಸೌಲಭ್ಯಗಳು
ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಸೌಲಭ್ಯವನ್ನು ಇರಿಸಲಾಗಿದೆ.

ಈ ಮೂಲಕ ಟೊಯೊಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಎರ್ಟಿಗಾ, ಟಾಟಾ ಹೆಕ್ಸಾ, ರೆನಾಲ್ಟ್ ಲೋಡ್ಜಿ ಸೇರಿದಂತೆ ವಿವಿಧ ಎಂಪಿವಿ ಕಾರುಗಳಿಗೆ ನೇರ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಸ್ವಂತ ಬಳಕೆ ಹಾಗೂ ಟೂರಿಸ್ಟ್ ವಿಭಾಗದಲ್ಲಿ ಈ ಹೊಸ ಕಾರು ಭಾರೀ ಬೇಡಿಕೆ ದಾಖಲಿಸುವ ನೀರಿಕ್ಷೆಗಳಿವೆ.


Click it and Unblock the Notifications








