ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಮಹೀಂದ್ರಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದ ಮಾರಾಜೊ ಹೊಸ ಎಂಪಿವಿ ಕಾರನ್ನು ಕಳೆದ ಸೆಪ್ಟೆಂಬರ್ 5ರಂದು ಬಿಡುಗಡೆಗೊಳಿಸಿತ್ತು. ಬಿಡುಗಡೆಗೊಂಡ ಒಂದು ತಿಂಗಳಲ್ಲಿಯೆ ಹೆಚ್ಚು ಸದ್ದು ಮಾಡಿದ ಈ ಕಾರು 10,000 ಸಾವಿರ ಯೂನಿಟ್‍ಗಳ ಬುಕ್ಕಿಂಗ್ ಪಡೆದು ಮಾರುಕಟ್ಟೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಎಂ 2, ಎಂ 4, ಎಂ 6 ಮತ್ತು ಎಂ 8 ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಅಭಿವೃದ್ಧಿಗೊಂಡಿರುವ ಮಾರಾಜೊ ಕಾರುಗಳು ತಾಂತ್ರಿಕ ಸೌಲಭ್ಯಗಳ ಆಧಾರದ ಮೇಲೆ ಆರಂಭಿಕವಾಗಿ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13 .90 ಲಕ್ಷ ಬೆಲೆ ಪಡೆದುಕೊಂಡಿವೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಹೊಂದಿರುವ ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಕಾರಿನ ಒಳಾಂಗಣ ವಿನ್ಯಾಸ ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಆದ್ರೆ ಮರಾಜೊ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒದಗಿಸಿಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿರುವ ಮಹೀಂದ್ರಾ ಸಂಸ್ಥೆಯು ಹೊಸ ಕಾರನ್ನು 7- ಸೀಟರ್ ಮತ್ತು 8-ಸೀಟರ್ ಮಾದರಿಯಾಗಿ ಪರಿಚಯಿಸಿದೆ.

ಮಹೀಂದ್ರಾ ಮರಾಜೊ ಎಂಪಿವಿ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಮತ್ತು ತುರ್ತು ಮಾಹಿತಿ ಕಾಲಿಂಗ್ ಸೌಲಭ್ಯವನ್ನ ಇರಿಸಲಾಗಿದೆ.

Most Read Articles

Kannada
Read more on mahindra sales mpv
English summary
Mahindra Marazzo Receives 10,000 Bookings Within A Month — Waiting Period Now Six Weeks.
Story first published: Saturday, October 20, 2018, 10:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X