ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

By Praveen Sannamani

ಮಹೀಂದ್ರಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಹೊಸ ಕಾರು ಉತ್ಪನ್ನಗಳ ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಇದೀಗ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದ ಮಾರಾಜೊ ಹೊಸ ಎಂಪಿವಿ ಕಾರನ್ನು ಬಿಡುಗಡೆ ಮಾಡಿದೆ. ಶಾರ್ಕ್ ಡಿಸೈನ್ ಆಧಾರಿತ ಈ ಕಾರು ನೇರವಾಗಿ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಬಲ್ಲ ವಿನ್ಯಾಸ ಹೊಂದಿದ್ದು, ಕಾರಿನ ಬೆಲೆ , ಬಣ್ಣ, ಎಂಜಿನ್ ಮತ್ತು ವೆರಿಯೆಂಟ್ ಕುರಿತಾಗಿ ಮುಂದಿನ ಸ್ಲೈಡರ್‌ಗಳನ್ನು ನೋಡಿ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಮಹೀಂದ್ರಾ ಸಂಸ್ಥೆಯು ಎಸ್‌ಯುವಿ ಕಾರು ಮಾರಾಟದಲ್ಲಿ ಈಗಾಗಲೇ ಹಲವು ಪ್ರಯೋಗಗಳ ಮೂಲಕ ಯಶಸ್ವಿ ಕಂಡುಕೊಂಡಿದ್ದು, ಹತ್ತು ಹಲವು ವಿಶೇಷತೆಗಳನ್ನು ಹೊತ್ತು ಬಂದಿರುವ ಮರಾಜೊ ಎಂಪಿವಿ ಮಾದರಿಯು ಇದೀಗ ಮತ್ತಷ್ಟು ಆಕರ್ಷಣೆಗೆ ಕಾರಣವಾಗಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯಲಿರುವ ಮರಾಜೊ ಕಾರುಗಳ ಬೆಲೆ ಪಟ್ಟಿಯು ಸಹ ಗ್ರಾಹಕರ ಪರವಾಗಿದೆ ಎನ್ನಬಹುದು.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಎಂ 2, ಎಂ 4, ಎಂ 6 ಮತ್ತು ಎಂ 8 ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಅಭಿವೃದ್ಧಿಗೊಂಡಿರುವ ಮಾರಾಜೊ ಕಾರುಗಳು ತಾಂತ್ರಿಕ ಸೌಲಭ್ಯಗಳ ಆಧಾರದ ಮೇಲೆ ಆರಂಭಿಕವಾಗಿ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13 .90 ಲಕ್ಷ ಬೆಲೆ ಪಡೆದುಕೊಂಡಿವೆ.

MOST READ:ಆರ್‌ಇಯಿಂದ ಮೋಸದ ವ್ಯಾಪಾರ- ದುಬಾರಿ ಬೆಲೆಯ ಪೆಗಾಸಸ್ ಬೈಕ್ ತಿಪ್ಪೆಗೆ ಎಸೆದ ಬೈಕ್ ಮಾಲೀಕ

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಮಾರಾಜೊ ಕಾರುಗಳು ಬೆಲೆ ಪಟ್ಟಿ(ಎಕ್ಸ್‌ಶೋರೂಂ ಪ್ರಕಾರ)

ವೆರಿಯೆಂಟ್‌ಗಳು ಬೆಲೆಗಳು
ಮರಾಜೊ ಎಂ2 ರೂ. 9,99,000

ಮರಾಜೊ ಎಂ4 ರೂ. 10,95,000

ಮರಾಜೊ ಎಂ6 ರೂ. 12,40,000

ಮರಾಜೊ ಎಂ8 ರೂ. 13,90,000

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಹೊಂದಿರುವ ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಕಾರಿನ ಒಳಾಂಗಣ ವಿನ್ಯಾಸ

ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

Most Read:ಕೇರಳದಲ್ಲಿನ ಪ್ರವಾಹದಿಂದ ಕಾರು ಡೀಲರ್‍‍ಗಳಿಗೆ ಬರೊಬ್ಬರಿ 1,000 ಸಾವಿರ ಕೋಟಿ ನಷ್ಟ..!!

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಆದ್ರೆ ಮರಾಜೊ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒದಗಿಸಿಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿರುವ ಮಹೀಂದ್ರಾ ಸಂಸ್ಥೆಯು ಹೊಸ ಕಾರನ್ನು 7- ಸೀಟರ್ ಮತ್ತು 8-ಸೀಟರ್ ಮಾದರಿಯಾಗಿ ಪರಿಚಯಿಸಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

7-ಸೀಟರ್ ಮರಾಜೊ ಕಾರಿಗೂ ಮತ್ತು 8-ಸೀಟರ್ ಮರಾಜೊ ಮಾದರಿಗಳಿಗೂ ಕೇವಲ ರೂ.5 ಸಾವಿರ ಬೆಲೆ ವ್ಯತ್ಯಾಸಗಳಿದ್ದು, ಮೇಲೆ ನೀಡಲಾಗಿರುವ ಬೆಲೆ ಪಟ್ಟಿಯು 7-ಸೀಟರ್ ಕಾರುಗಳಿಗೆ ಮಾತ್ರವೇ ಅನ್ವಯವಾಗುತ್ತೆ. ಹೀಗಾಗಿ 8-ಸೀಟರ್ ಖರೀದಿಸುವ ಗ್ರಾಹಕರು ಹೆಚ್ಚುವರಿ ದರ ಪಾವತಿಸಬೇಕಾಗುತ್ತೆ.

Most Read:ಪಾಸ್‍‍ಪೋರ್ಟ್‍ಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಹಾಗಿದ್ರೆ ಈ ಸ್ಟೋರಿ ಓದಿ..

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಮತ್ತು ತುರ್ತು ಮಾಹಿತಿ ಕಾಲಿಂಗ್ ಸೌಲಭ್ಯವನ್ನ ಇರಿಸಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಖರೀದಿಗೆ ಲಭ್ಯವಿರುವ ಬಣ್ಣಗಳು

ಆರು ವಿವಿಧ ಬಣ್ಣಗಳಲ್ಲಿ ಲಭ್ಯವಿರುವ ಮರಾಜೊ ಎಂಪಿವಿ ಕಾರುಗಳು ಮ್ಯಾರಿನರ್ ಮರೂನ್, ಸ್ವಿಮ್ಮರಿಂಗ್ ಸಿಲ್ವರ್, ಅಕ್ವಾ ಮರಿನ್, ಓಸಿನಿಕ್ ಬ್ಲ್ಯಾಕ್, ಪೊಸೈಡಾನ್ ಪರ್ಪಲ್ ಮತ್ತು ಐಸ್‌ಬರ್ಗ್ ವೈಟ್ ಎಂಬ ವಿವಿಧ ಆಯ್ಕೆ ಹೊಂದಿದೆ.

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಈ ಮೂಲಕ ಟೊಯೊಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಎರ್ಟಿಗಾ, ಟಾಟಾ ಹೆಕ್ಸಾ, ರೆನಾಲ್ಟ್ ಲೋಡ್ಜಿ ಸೇರಿದಂತೆ ವಿವಿಧ ಎಂಪಿವಿ ಕಾರುಗಳಿಗೆ ನೇರ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಕಾರಿನ ಬೇಡಿಕೆಯ ಆಧಾರದ ಮೇಲೆ ಮತ್ತಷ್ಟು ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ.

Most Read:ಅಪಘಾತದಲ್ಲಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ರೆ ಸಿಗಲಿದೆ ಭಾರೀ ಬಹುಮಾನ..

ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಮರಾಜೊ ಹೊಸ ಎಂಪಿವಿ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಮಹೀಂದ್ರಾ ಸಂಸ್ಥೆಯು ಪೆಟ್ರೋಲ್ ಮಾದರಿಗಳಿಂತ ಡೀಸೆಲ್ ಕಾರುಗಳಿಗೆ ಹೆಚ್ಚಿನ ಒತ್ತು ನೀಡುವುದು ಬಹುತೇಕ ವಾಹನ ಮಾಲೀಕರಿಗೆ ಗೊತ್ತಿರುವ ವಿಚಾರ. ಹೀಗಾಗಿಯೇ ಸದ್ಯ ಬಿಡುಗೆಡೆ ಮಾಡಲಾಗಿರುವ ಮರಾಜೊ ಎಂಪಿವಿ ಕಾರುಗಳು ಸಹ ಡಿಸೇಲ್ ವರ್ಷನ್‌ಗಳಲ್ಲಿ ಮಾತ್ರವೇ ಬಿಡುಗಡೆಯಾಗಿದ್ದು, ಸ್ವಂತ ಬಳಕೆ ಹಾಗೂ ಟೂರಿಸ್ಟ್ ವಿಭಾಗದಲ್ಲಿ ಈ ಹೊಸ ಕಾರು ಭಾರೀ ಬೇಡಿಕೆ ದಾಖಲಿಸುವ ನೀರಿಕ್ಷೆಗಳಿವೆ.

{document1}

Most Read Articles

Kannada
English summary
Mahindra Marazzo Launched In India At Rs 9.9 Lakh — To Rival The Toyota Innova Crysta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X