ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ

ಮಹೀಂದ್ರಾ ಆಂಡ್ ಮಹೀಂದ್ರಾ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೆ ತಮ್ಮ ಹೊಸ ಮರಾಜೊ ಎಂಪಿವಿ ಕಾರನ್ನು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 9.99 ಲಕ್ಷದ ಪ್ರಾರಂಭಿಕ ಬೆಲೆಯೊಂದಿಗೆ ಬಿಡುಗಡೆಗೊಳಿಸಿದ್ದು, ಈ ಕಾರು ಕೇವೆಲ ಮ್ಯಾನುವಲ್ ಗೇರ್‍‍ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ. ಅಲ್ಲದೆ ಸಂಸ್ಥೆಯು ಬಿಎಸ್-6 ಎಮಿಷನ್ ನಿಯಮಗಳ ನಂತರ ಕಾರಿನ ಪೆಟ್ರೋಲ್ ಮಾದರಿಗಳನ್ನು ಪರಿಚಯಿಸಲಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಹೊಸ ವಿಷಯ ಏನು ಅಂದ್ರೆ ಮಾಹಿತಿಗಳ ಪ್ರಕಾರ ಮಹೀಂದ್ರಾ ಸಂಸ್ಥೆಯು ತಮ್ಮ ಮರಾಜೊ ಕಾರಿಗೆ ಎಎಂಟಿ ಗೇರ್‍‍ಬಾಕ್ಸ್ ಆಯ್ಕೆಯನ್ನು ನೀಡಲು ಮುಂದಾಗಿದೆ. ಹೌದು, ಮಹೀಂದ್ರಾ ಸಂಸ್ಥೆಯು ಮ್ಯಾಗ್ನೆಟ್ಟಿ ಮರೆಲ್ಲಿಯೊಂದಿಗೆ ಕೈಜೋಡಿಸಿ ಎಎಂಟಿ ಗೇರ್‍‍ಬಾಕ್ಸ್ ಅನ್ನು ತಯಾರುಮಾಡುವ ಕಾರ್ಯದಲ್ಲಿದ್ದು, 2020ರ ವೇಳೆಗೆ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ ಎನ್ನಲಾಗಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಹೊಸ ಮಹೀಂದ್ರಾ ಮರಾಜೊ ಕಾರು 1.5 ಲೀಟರ್ 4 ಸಿಲೆಂಡರ್ ಡೀಸೆಲ್ ಎಂಜಿನ್ ಸಹಾಯದಿಂದ 121ಬಿಹೆಚ್‍ಪಿ ಮತ್ತು 300ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಆಲದೇ ಮೇಲೆ ಹೇಳಿರುವ ಹಾಗೆ ಮಹೀಂದ್ರಾ ಸಂಸ್ಥೆಯು ಭವಿಷ್ಯದ ದಿನಗಳಲ್ಲಿ ಪೆಟ್ರೋಲ್ ಮಾದರಿಯ ಮರಾಜೊ ಕಾರನ್ನು ಕೂಡಾ ಬಿಡುಗಡೆಗೊಳಿಸಲಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಹೊಂದಿರುವ ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾ ಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಕಾರಿನ ಒಳಾಂಗಣ ವಿನ್ಯಾಸ

ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್‌ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್‌ ಕಮಾಂಡ್‌ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ತುರ್ತುನಿರ್ವಹಣಾ ಕರೆ ಸೌಲಭ್ಯ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಸೌಲಭ್ಯವನ್ನು ಇರಿಸಲಾಗಿದೆ.

ಎಎಂಟಿ ಗೇರ್‍‍ಬಾಕ್ಸ್ ಆಯ್ಕೆ ಪಡೆಯಲಿದೆ ಹೊಸ ಮಹೀಂದ್ರಾ ಮರಾಜೊ ಎಂಪಿವಿ

ಈ ಮೂಲಕ ಟೊಯೊಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಎರ್ಟಿಗಾ, ಟಾಟಾ ಹೆಕ್ಸಾ, ರೆನಾಲ್ಟ್ ಲೋಡ್ಜಿ ಸೇರಿದಂತೆ ವಿವಿಧ ಎಂಪಿವಿ ಕಾರುಗಳಿಗೆ ನೇರ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಸ್ವಂತ ಬಳಕೆ ಹಾಗೂ ಟೂರಿಸ್ಟ್ ವಿಭಾಗದಲ್ಲಿ ಈ ಹೊಸ ಕಾರು ಭಾರೀ ಬೇಡಿಕೆ ದಾಖಲಿಸುವ ನೀರಿಕ್ಷೆಗಳಿವೆ.

More from DriveSpark

Article Published On: Monday, September 24, 2018, 12:00 [IST]
English summary
Mahindra Marazzo MPV To Get AMT Gearbox.
Read more on mahindra mpv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+