ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಮಹೀಂದ್ರಾ ಸಂಸ್ಥೆಯು ಇನೋವಾ ಕ್ರಿಸ್ಟಾ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಮರಾಜೊ ಎಂಪಿವಿ ಕಾರು ಮಾದರಿಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ್ದು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಬೇಡಿಕೆಗೆ ಕಾರಣವಾಗಿರುವ ಮರಾಜೊ ಕಾರುಗಳ ಖರೀದಿಗಾಗಿ ಗ್ರಾಹಕರು ಮುಗಿಬಿದ್ದಿದ್ದಾರೆ. ಹೀಗಿರುವಾಗಲೇ ಮಹೀಂದ್ರಾ ಸಂಸ್ಥೆಯು ಮರಾಜೊ ಕಾರುಗಳ ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಶಾರ್ಕ್ ಡಿಸೈನ್ ಪ್ರೇರಿತ ಮರಾಜೊ ಕಾರುಗಳ ಖರೀದಿಗಾಗಿ ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ದಿನಂಪ್ರತಿ 200ಕ್ಕೂ ಹೆಚ್ಚು ಬುಕ್ಕಿಂಗ್‌ಗಳು ದಾಖಲಾಗುತ್ತಿದ್ದು, ಟೊಯೊಟಾ ಖರೀದಿ ಕಷ್ಟಸಾಧ್ಯ ಎನ್ನುವಂತಹ ಗ್ರಾಹಕರು ಇದೀಗ ಮರಾಜೊದತ್ತ ಮುಖ ಮಾಡಿದ್ದಾರೆ. ಇದರಿಂದ ಸಹಜವಾಗಿ ಬೇಡಿಕೆ ಹೆಚ್ಚಿದಂತೆ ಮಹೀಂದ್ರಾ ಸಂಸ್ಥೆಯು ಕಾರಿನ ಬೆಲೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಮಾಹಿತಿಗಳ ಪ್ರಕಾರ, ಮುಂದಿನ ಜನವರಿ ಆರಂಭದಿಂದಲೇ ಬೆಲೆ ಹೆಚ್ಚಳವಾಗಲಿದ್ದು, ರೂ.30 ಸಾವಿರದಿಂದ ರೂ.40 ಸಾವಿರ ಹೆಚ್ಚಳ ಸಾಧ್ಯತೆಗಳಿವೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಇನ್ನು ಮರಾಜೊ' ಅಂದ್ರೆ ಸ್ಪಾನಿಷ್ ಭಾಷೆಯಲ್ಲಿ ತಿಮಿಂಗಿಲ ಎಂದರ್ಥ. ಇದೇ ಆಕಾರವನ್ನು ಹೊಂದಿರುವ ಈ ಕಾರು ಸಹ ಸದ್ದುಗದ್ದಲವಿಲ್ಲದೇ ಸರಾಗವಾಗಿ ನುಗ್ಗಬಲ್ಲ ಗುಣಹೊಂದಿದ್ದು, ಎಂಟ್ರಿ ಲೆವಲ್ ಎಂಪಿವಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ದುಬಾರಿ ಬೆಲೆಯ ಇನೋವಾ ಕ್ರಿಸ್ಟಾ ಕಾರುಗಳ ನಡುವಿನ ಅಂತರವನ್ನು ತುಂಬಲು ಈ ಹೊಸ ಉತ್ಪನ್ನವನ್ನು ಸಿದ್ದಗೊಳಿಸಲಾಗಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಎಂ2, ಎಂ4, ಎಂ6 ಮತ್ತು ಎಂ8 ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಮರಾಜೊ ಕಾರುಗಳು ಆರಂಭಿಕವಾಗಿ ರೂ. 9.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಗೆ ರೂ.13.90 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಸದ್ಯ ಹೊಸ ಮರಾಜೊ ಕಾರುಗಳಿಗಾಗಿ ದಾಖಲಾಗುತ್ತಿರುವ ಬುಕ್ಕಿಂಗ್‌ಗಳಲ್ಲಿ ಶೇ.80ಕ್ಕೂ ಹೆಚ್ಚು ಗ್ರಾಹಕರು ಟಾಪ್ ಎಂಡ್ ಮಾದರಿಯಾದ ಎಂ8 ವೆರಿಯೆಂಟ್‌ಗಳಿಗೆ ಹೆಚ್ಚು ಬೇಡಿಕೆ ಸಲ್ಲಿಸುತ್ತಿದ್ದು, ಪ್ರೀಮಿಯಂ ವೈಶಿಷ್ಟ್ಯತೆಗಳಿಂದಾಗಿ ಗ್ರಾಹಕರು ಮರಾಜೊ ಖರೀದಿಗೆ ಒಲವು ತೋರುತ್ತಿದ್ದಾರೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾ ಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಕಾರಿನ ಒಳಾಂಗಣ ವಿನ್ಯಾಸ

ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್‌ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್‌ ಕಮಾಂಡ್‌ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ. ಇದೀಗ ಹೆಚ್ಚುವರಿಯಾಗಿ ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಪ್ರಮುಖ ಬದಲಾವಣೆ ಮುಂದಾಗಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ತುರ್ತುನಿರ್ವಹಣಾ ಕರೆ ಸೌಲಭ್ಯ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತುಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

MOST READ: ವಾಹನ ಮಾಲೀಕರೇ ಇತ್ತ ಕಡೆ ಗಮನಹರಿಸಿ- ಇಲ್ಲವಾದ್ರೆ ನಿಮ್ಮ ವಾಹನವೂ ಸೀಜ್ ಆಗಬಹುದು..!

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಹೊಸ ಮರಾಜೊ ಕಾರು 7- ಸೀಟರ್ ಮತ್ತು 8-ಸೀಟರ್ ಮಾದರಿಗಳು ಖರೀದಿಸಬಹುದಾಗಿದ್ದು, ಸದ್ಯದಲ್ಲೇ ಎಎಂಟಿ(ಆಟೋಮ್ಯಾಟಿಕ್ ಗೇರ್‌ಬಾಕ್ಸ್) ವರ್ಷನ್‌ಗಳು ಬಿಡುಗಡೆಯಾಗುವ ಬಗ್ಗೆ ಮಹೀಂದ್ರಾ ಸುಳಿವು ನೀಡಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಕಾರಿನ ಮೇಲೆ ಗರಿಷ್ಠ ವಾರಂಟಿ

ಹೊಸ ಕಾರಿನ ಮೇಲೆ 3 ವರ್ಷ ಅಥವಾ 1 ಲಕ್ಷ ಕಿ.ಮೀ ವರೆಗೆ ವಾರಂಟಿ ದೊರೆಯಲಿದ್ದು, ಹೊಸ ಕಾರುಗಳು ಪ್ರತಿ ಲೀಟರ್ ಡೀಸೆಲ್‌ಗೆ 17.6 ಕಿ.ಮೀ ಮೈಲೇಜ್ ನೀಡುವ ಮೂಲಕ ಅತಿ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರಲಿವೆ.

MOST READ: ಕಿಸೆಯಲ್ಲಿ 5 ಸಾವಿರ ಇಲ್ಲ ಎಂದಿದ್ದ ಈ ನಟ ಇವತ್ತು 4 ಕೋಟಿ ಮೌಲ್ಯದ ಕಾರಿನ ಒಡೆಯ

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಸೌಲಭ್ಯವನ್ನು ಇರಿಸಲಾಗಿದೆ.

ಬೇಡಿಕೆಯಲ್ಲಿ ಟ್ರೆಂಡ್- ಮಾರಾಜೊ ಕಾರಿನ ಬೆಲೆ ಹೆಚ್ಚಳ ಮಾಡಿದ ಮಹೀಂದ್ರಾ

ಈ ಮೂಲಕ ಟೊಯೊಟಾ ಇನೋವಾ ಕ್ರಿಸ್ಟಾ, ಮಾರುತಿ ಸುಜುಕಿ ಎರ್ಟಿಗಾ ಕಾರುಗಳಿಗೆ ತೀವ್ರ ಪೈಪೋಟಿ ನೀಡುತ್ತಿರುವ ಮರಾಜೊ ಕಾರುಗಳು ಸ್ವಂತ ಬಳಕೆ ಹಾಗೂ ಟೂರಿಸ್ಟ್ ವಿಭಾಗದಲ್ಲಿ ಭಾರೀ ಬೇಡಿಕೆ ಹುಟ್ಟುಹಾಕಿವೆ ಎನ್ನಬಹುದು.

Most Read Articles

Kannada
English summary
Mahindra Marazzo Prices To Be Increased — Price Hike Effective From January 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X