ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ದೇಶಿಯ ಮಾರುಕಟ್ಟೆಯಲ್ಲಿ ಎಂಪಿವಿ ಕಾರುಗಳ ಬೇಡಿಕೆಯು ಹೆಚ್ಚುತ್ತಿದ್ದು, ಮಹೀಂದ್ರಾ ಸಂಸ್ಥೆಯು ಗ್ರಾಹಕರಿಗೆ ಅನುಗುಣವಾಗಿ ಹೊಸ ವೈಶಿಷ್ಟ್ಯತೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಸೆಪ್ಟೆಂಬರ್ 5ರಂದು ತಮ್ಮ ಮರಾಜೊ ಕಾರನ್ನು ಮಾರುತಿ ಸುಜುಕಿ ಎರ್ಟಿಗಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿತ್ತು.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಬಿಡುಗಡೆಗಡೆ ಆದ ಸಮಯದಿಂದಲು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಬಿಟ್ಟು ಮರಾಜೊ ಕಾರಿನ ಕಡೆಗೆ ಒಲವನ್ನು ತೋರಿದರು. ಈ ನಿಟ್ಟಿನಲ್ಲಿ ಮಾರುಕಟ್ಟೆಯಲ್ಲಿ ಎರ್ಟಿಗಾ ಎಂಪಿವಿ ಕಾರಿನ ಮಾರಾಟವು ಕಡಿಮೆಗೊಂಡಿದ್ದು, ಅಧಿಕವಾಗಿ ಮರಾಜೊ ಕಾರುಗಳನ್ನು ಬುಕ್ಕಿಂಗ್ ಅನ್ನು ಪಡೆದುಕೊಳ್ಳುತ್ತಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿ ಸುಮಾರು 2,829 ಕಾರುಗಳು ಮಾರಾಟವಾಗಿದ್ದರೆ ಇನ್ನು, ಅಕ್ಟೋಬರ್ ತಿಂಗಳಿನಲ್ಲಿ 3,810 ಮರಾಜೊ ಕಾರುಗಳು ಮಾರಾಟಗೊಂಡಿದೆ. ಅಂದರೆ ಮಾರಾಟದಲ್ಲಿ ಶೇಕಡ 35ರಷ್ಟು ಬೆಳವಣಿಗೆಯನ್ನು ಕಂಡಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಕೇವಲ 1,387 ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಮಾರಾಟಗೊಂಡಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಮಾರುತಿ ಸುಜುಕಿ ಸಂಸ್ಥೆಯು ಮತ್ತೆ ಎಂಪಿವಿ ಕಾರುಗಳ ಸರಣಿಯಲ್ಲಿ ಮತ್ತೆ ಜನಪ್ರಿಯತೆಯನು ಪಡೆಯಲು ಮುಂದಿನ ತಲೆಮಾರಿನ ಎರ್ಟಿಗಾ ಕಾರನ್ನು ಇದೇ ತಿಂಗಳಿನ 21ರಂದು ಬಿಡುಗಡೆಗೊಳಿಸಲಿದ್ದು, ಈಗಾಗಲೆ ಹೊಸ ಎರ್ಟಿಗಾ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಸಹ ಪ್ರಾರಂಭಿಸುವುದರ ಜೊತೆಗೆ ಹಿಂದಿನ ತಲೆಮಾರಿನ ಎರ್ಟಿಗಾ ಕಾರುಗಳ ಮೇಲೆ ಭಾರೀ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಮಾಸದಿಂದ ಮಾಸಕ್ಕೆ ಅಧಿಕವಾಗುತ್ತಿರುವ ಮರಾಜೊ ಕಾರಿನ ಮಾರಾಟದ ಹಿಂದೆ ಇರುವ ಕಾರಣ ಮತ್ತು ಗ್ರಾಹಕರು ಮಹಿಂದ್ರಾ ಮರಾಜೊ ಕಾರನ್ನು ಖರೀದಿಸಲು ಏಕೆ ಮುಂದಾಗುತ್ತಿದ್ದಾರೆ ಎಂದು ತಿಳಿಯಲು ಮುಂದಕ್ಕೆ ಓದಿರಿ..

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಎಂ 2, ಎಂ 4, ಎಂ 6 ಮತ್ತು ಎಂ 8 ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಅಭಿವೃದ್ಧಿಗೊಂಡಿರುವ ಮಾರಾಜೊ ಕಾರುಗಳು ತಾಂತ್ರಿಕ ಸೌಲಭ್ಯಗಳ ಆಧಾರದ ಮೇಲೆ ಆರಂಭಿಕವಾಗಿ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13 .90 ಲಕ್ಷ ಬೆಲೆ ಪಡೆದುಕೊಂಡಿವೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಹೊಂದಿರುವ ಮರಾಜೊ ಕಾರುಗಳು ಗುಣಮಟ್ಟದಲ್ಲಿ ಇತರೆ ಎಂಪಿವಿ ಕಾರುಗಳಿಂತಲೂ ಭಿನ್ನವಾಗಿದ್ದು, ಶಾರ್ಕ್ ಡಿಸೈನ್ ಡಿಸೈನ್ ಪ್ರೇರಿತ ಈ ಕಾರಿನ ಮುಂಭಾಗದ ಗ್ರಿಲ್ ಕೂಡಾ ಶಾರ್ಕ್ ಹಲ್ಲುಗಳ ಆಕಾರವನ್ನೇ ಹೊಂದಿರುವುದನ್ನು ನೀವು ಗಮನಿಸಬಹುದು.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಜೊತೆಗೆ ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್ಸ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ಚಕ್ರಗಳು, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೈಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರಿಯರ್ ಬಂಪರ್ ಪಡೆದಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಕಾರಿನ ಒಳಾಂಗಣ ವಿನ್ಯಾಸ ಮಹೀಂದ್ರಾ ಮರಾಜೊ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಕ್ಲಟರ್ ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಪೋರ್ಟ್ ಮಾಡುವ 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಎಂಜಿನ್ ಸಾಮರ್ಥ್ಯ

ಮಹೀಂದ್ರಾ ಮರಾಜೊ ಕಾರುಗಳು 1.5-ಲೀಟರ್(1500 ಸಿಸಿ) ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 120-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಆದ್ರೆ ಮರಾಜೊ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒದಗಿಸಿಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿರುವ ಮಹೀಂದ್ರಾ ಸಂಸ್ಥೆಯು ಹೊಸ ಕಾರನ್ನು 7- ಸೀಟರ್ ಮತ್ತು 8-ಸೀಟರ್ ಮಾದರಿಯಾಗಿ ಪರಿಚಯಿಸಿದೆ.

ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಹಿಂದಿಕ್ಕಿದ ಮಹೀಂದ್ರಾ ಮರಾಜೊ

ಸುರಕ್ಷಾ ಸೌಲಭ್ಯಗಳು

ಹೊಸ ಮರಾಜೊ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಪ್ರತಿ ಚಕ್ರಕ್ಕೂ ಡಿಸ್ಕ್‌ಬ್ರೇಕ್, ISOFIX ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಎಂ6 ಹಾಗೂ ಎಂ8 ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ರಿಯರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ಸ್ ಮತ್ತು ತುರ್ತು ಮಾಹಿತಿ ಕಾಲಿಂಗ್ ಸೌಲಭ್ಯವನ್ನ ಇರಿಸಲಾಗಿದೆ.

Most Read Articles

Kannada
Read more on mahindra new car mpv sales
English summary
Mahindra Marazzo sales grow 35% ahead of new Maruti Ertiga launch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X