ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಕೆಲವು ದಿನಗಳ ಹಿಂದಷ್ಟೆ ಅಲ್ಟುರಾಸ್ ಜಿ4 ಐಷಾರಾಮಿ ಎಸ್‌ಯುವಿ ಕಾರುನ್ನು ಬಿಡುಗಡೆ ಮಾಡಿರುವ ಮಹೀಂದ್ರಾ ಸಂಸ್ಥೆಯು ಮುಂಬರುವ ಕೆಲವೇ ದಿನಗಳಲ್ಲಿ ಮತ್ತೊಂದು ತನ್ನ ಬಹುನೀರಿಕ್ಷಿತ ಎಸ್201(ಎಕ್ಸ್‌ಯುವಿ 300) ಹೆಸರಿನ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಮಹೀಂದ್ರಾ ಸಂಸ್ಥೆಯು ಕಾರು ಮಾರಾಟದಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ವಿವಿಧ ನಮೂನೆಯ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿರುವುದು ಗ್ರಾಹಕರ ಆಕರ್ಷಣೆ ಕಾರಣವಾಗಿದೆ. ಸ್ಯಾಂಗ್‌ಯಾಂಗ್ ಜೊತೆಗೂಡಿ ಅಭಿವೃದ್ಧಿ ಪಡಿಸಲಾಗಿರುವ ಹೊಸ ಎಸ್‌ಯುವಿ ಕಾರು ಇದೀಗ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದ್ದು, ಬಿಡುಗಡೆಗಾಗಿ ವಿವಿಧ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಮಧ್ಯಮ ಗಾತ್ರದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ನಮೂನೆಯ ಕಾರು ಉತ್ಪನ್ನಗಳನ್ನು ಅಭಿವೃದ್ಧಿ ಪಡೆಸುತ್ತಿದ್ದು, ಸ್ಯಾಂಗ್‌ಯಾಂಗ್ ಟಿವೊಲಿ ಕಾರಿನ ಹೊಲಿಕೆಯಲ್ಲಿ ಉತ್ಪಾದನೆ ಮಾಡಲಾಗಿರುವ ಹೊಸ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯ ಸುಳಿವು ನೀಡಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಜನಪ್ರಿಯ ಬ್ರೆಝಾ ಕಾರಿನ ಡಿಸೈನ್ ಆಧರಿಸಿರುವ ಮಹೀಂದ್ರ ಹೊಸ ಕಾರನ್ನು ಸದ್ಯ ಎಸ್201 ಕೋಡ್ ಆಧಾರದ ಮೇಲೆ ಎಂಜಿನ್ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು ಎಕ್ಸ್‌ಯುವಿ300 ಎಂದು ನಾಮಕರಣ ಮಾಡಬಹುದು ಎನ್ನಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಹೀಗಾಗಿ ಮುಂದಿನ ತಿಂಗಳು ಹೊಸ ಕಾರಿನ ಅಧಿಕೃತ ಹೆಸರು ಬಹಿರಂಗಪಡಿಸುವ ಸಾಧ್ಯತೆಗಳಿದ್ದು, ಹೊಸ ಕಾರುಗಳು ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಫ್ಲಕ್ಸ್ ಅಲ್ಯುಮಿನಿಯಂ ಪ್ಯಾನೆಲ್, ಸುಧಾರಿತ ಆಡಿಯೋ ಸಿಸ್ಟಂ, ಬ್ಯೂಟೂಥ್ ಕನೆಕ್ಟಿವಿಟಿ, ಸ್ಟಿರಿಂಗ್ ಮೇಲೆ ಎಸ್201 ಕೋಡ್ ನೇಮ್ ಪ್ಲೇಟ್ ಬಳಕೆ ಮಾಡಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಕಾರು ಪ್ರಯಾಣಕ್ಕೆ ಅನುಕೂಲಕರವಾಗುವ ಇನ್‌ಸ್ಟ್ರುಮೆಂಟಲ್ ಕ್ಲಸ್ಟರ್, ಮಲ್ಟಿ ಫಂಕ್ಷನಲ್ ಸೇಂಟರ್ ಡಿಸ್‌ಫ್ಲೇ, ಸ್ಯಾಂಗ್‌ಯಾಂಗ್‌ ಟಿವೊಲಿ ಮಾದರಿಯಲ್ಲೇ ಬಹುತೇಕ ಇಂಟಿರಿಯರ್ ಡಿಸೈನ್‌ಗಳನ್ನು ಹೊಸ ಮಹೀಂದ್ರಾ ಕಂಪ್ಯಾಕ್ಟ್ ಎಸ್‌ಯುವಿಯಲ್ಲೂ ಬಳಕೆ ಮಾಡಿರುವುದನ್ನು ಸೆರೆ ಸಿಕ್ಕ ಚಿತ್ರಗಳಲ್ಲಿ ನೋಡಬಹುದಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

7-ಇಂಚಿನ ಟಚ್‌ಸ್ಕ್ರೀನ್ ಇನ್ಪೋ‌ಟೈನ್‌ಮೆಂಟ್ ಬಳಕೆ ಮಾಡಲಾಗಿದ್ದು, ಸ್ಮಾರ್ಟ್ ಫೋನ್ ಕನೆಕ್ಟ್ ಮಾಡಿಕೊಳ್ಳುವ ಮೂಲಕ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ನಿಯಂತ್ರಣ ಮಾಡಬಹುದಾಗಿದೆ. ಜೊತೆಗೆ ನ್ಯಾವಿಗೇಷನ್ ಮತ್ತು ರಿವರ್ಸ್ ಕ್ಯಾಮೆರಾ ಡಿಸ್‌ಫ್ಲೇ ಸಹ ಇದರಲ್ಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಇನ್ನು ಹೆಚ್ಚುವರಿಯಾಗಿ ಕಾರಿನ ಒಳಭಾಗದ ಮಧ್ಯದಲ್ಲಿ ವಿಸ್ತರಿತ ಕನ್ಸೋಲ್ ಬಳಕೆ ಮಾಡಲಾಗಿದ್ದು, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಯುಎಸ್‌ಬಿ ಫೋರ್ಟ್ಸ್, ಆಕ್ಸ್ ಇನ್‌ಫುಟ್ ಜಾಕ್ಸ್, ವರ್ಟಿಕಲ್ ಎಸಿ ವೆಂಟ್, ಮಧ್ಯದಲ್ಲಿ ಟಚ್ ಸ್ಕ್ರಿನ್ ಸಿಸ್ಟಂ ಸೇರಿಸಲಾಗಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಹಾಗೆಯೇ ಕಾರಿನ ಹೊರ ವಿನ್ಯಾಸಗಳ ಬಗೆಗೆ ಹೇಳುವುದಾದರೇ, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಡಿಆರ್‌ಎಲ್ಎಸ್, ಎಲ್ಇಡಿ ಟೈಲ್ ಗೇಟ್, ORVMs,ಟರ್ನ್ ಇಂಡಿಕೇಟರ್ಸ್, ರೂಫ್ ರೈಲ್ಸ್, ರಿಯರ್ ಸ್ಪಾಯ್ಲರ್, ರಿಯರ್ ವೈಪರ್, 17-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಮಹೀಂದ್ರಾ ಸಂಸ್ಥೆಯ ಹೊಸ ಕಾರು

ಒಟ್ಟಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಮಹೀಂದ್ರಾ ಹೊಸ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಎಕ್ಸ್‌ಯುವಿ500ಗಿಂತ ಕೆಳ ಹಂತದ ಕಾರು ಆವೃತ್ತಿಯಾಗಿ ಅಭಿವೃದ್ಧಿ ಹೊಂದಲಿದ್ದು, ಬಿಡುಗಡೆಯ ನಂತರ ಮಾರುತಿ ಸುಜುಕಿ ವಿಟಾರಾ ಬ್ರೇಝಾ, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಗುಣಲಕ್ಷಣ ಪಡೆದಿದೆ.

Source: Rushlane

Most Read Articles

Kannada
English summary
Mahindra XUV300 spied. Read In Kannada
Story first published: Wednesday, December 12, 2018, 18:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X