ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಎಸ್‌ಯುವಿ ಕಾರು ವಿಭಾಗದಲ್ಲಿ ಮುನ್ನಡೆ ಸಾಧಿಸುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯ ಟಿಯುವಿ300 ಪ್ಲಸ್ ಬಿಡುಗಡೆಗಾಗಿ ಎದುರು ನೋಡುತ್ತಿದೆ.

By Rahul Ts

ಎಸ್‌ಯುವಿ ಕಾರು ವಿಭಾಗದಲ್ಲಿ ಮುನ್ನಡೆ ಸಾಧಿಸುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯ ಟಿಯುವಿ300 ಪ್ಲಸ್ ಬಿಡುಗಡೆಗಾಗಿ ಎದುರು ನೋಡುತ್ತಿದೆ. ಈಗಾಗಲೆ ಡೀಲರ್‍‍ಗಳ ಕೈ ಸೇರಿರುವ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು ಇದೇ ಜೂನ್ ತಿಂಗಳಿನಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಪ್ರಸ್ತುತ ಮಾರುಕಟ್ಟೆಯಲ್ಲಿ ಟಿಯುವಿ300 ಮಾದರಿಗಿಂತ ಪ್ಲಸ್ ಆವೃತ್ತಿಯು ಅತಿ ಹೆಚ್ಚು ಆಕರ್ಷಣೆ ಪಡೆದುಕೊಂಡಿದ್ದು, ಕ್ಯಾಬಿನ್ ಭಾಗ ಮತ್ತು ಕಾರಿನ ಎಡ್ಜ್‌ಗಳಲ್ಲಿ ವಿಶೇಷ ವಿನ್ಯಾಸವನ್ನು ಕೈಗೊಂಡಿರುವುದು ಹೊಸ ಕಾರಿನ ಹೊರ ನೋಟಕ್ಕೆ ಮೆರಗು ತಂದಿದೆ. ಮಾಹಿತಿಗಳ ಪ್ರಕಾರ ಹೊಸ ಕಾರುಗಳ ವಿನ್ಯಾಸದಲ್ಲಿ ಈ ಹಿಂದಿನ ಟಿಯುವಿ300 ವೈಶಿಷ್ಟ್ಯತೆಗಳನ್ನೇ ಮುಂದುವರಿಸಲಾಗಿದೆ.

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಇನ್ನು ಹೆಚ್ಚುವರಿಯಾಗಿ ಟಿಯುವಿ300 ಪ್ಲಸ್ ಮಾದರಿಯಲ್ಲಿ ಆಟೋಮೆಟಿಕ್ ಕ್ಲೈಮೆಟ್ ಕಂಟ್ರೊಲರ್, ಹಿಂಭಾಗದ ಕ್ಯಾಬಿನ್‌ನಲ್ಲೂ ಎಸಿ ವ್ಯವಸ್ಥೆ ಸೇರಿದಂತೆ ಸುಧಾರಿತ ಸುರಕ್ಷಾ ವೈಶಿಷ್ಟ್ಯತೆಗಳನ್ನು ಒದಗಿಸಲಾಗಿದ್ದು, ಚಾಲಕ ಸೇರಿ ಒಟ್ಟು 9 ಜನ ಆರಾಮವಾಗಿ ಪ್ರಯಾಣ ಮಾಡಬಹುದಾಗಿದೆ.

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಎಂಜಿನ್ ಸಾಮರ್ಥ್ಯ

ಈ ಹಿಂದಿನ ಮಾದರಿಯಂತೆ ಟಿಯುವಿ300 ಪ್ಲಸ್ ಮಾದರಿಯು 1.99-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ 119-ಬಿಎಚ್‌ಪಿ ಉತ್ಪಾದಿಸಬಲ್ಲ ಗುಣಹೊಂದಿದೆ. ಹಾಗು ಎಂಜಿನ್‍‍ಗಳನ್ನು 5 ಸ್ಪೀಡ್ ಮಾನುವಲ್ ಅಥವ ಆಟೋ ಶಿಫ್ಟ್ ಎಎಮ್‍‍ಟಿಯೊಂದಿಗೆ ಜೋಡಿಸಲಾಗಿದೆ.

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಕಾರಿನ ಬೆಲೆಗಳು

ಹೊಸ ಕಾರಿನ ಬೆಲೆಗಳ ಕುರಿತಾದ ಕೈಪಿಡಿಯೊಂದು ದೊರೆತಿದ್ದು, ಟಿಯುವಿ300 ಪ್ಲಸ್ ಬೆಲೆಯನ್ನು ರೂ.9.46 ಲಕ್ಷಕ್ಕೆ ನಿಗದಿ ಮಾಡುವ ಮೂಲಕ ಇನ್ಸುರೆನ್ಸ್ ಮತ್ತು ಲೈಫ್ ಟ್ಯಾಕ್ಸ್, ರಿಜಿಸ್ಟೇಷನ್ ಸೇರಿ ಆನ್ ರೋಡ್ ಬೆಲೆಯನ್ನು ರೂ.11.15 ಲಕ್ಷಕ್ಕೆ ಮಾರಾಟ ಮಾಡಲಿದೆ ಎಂಬ ಮಾಹಿತಿ ದೊರೆತಿದೆ.

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಇದರಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪ್ರಮುಖ ಎಸ್‌ಯುವಿಗಳಿಗೆ ಪೈಪೋಟಿ ನೀಡಲಿರುವ ಟಿಯುವಿ300 ಪ್ಲಸ್ ಆವೃತ್ತಿಯು 2018ರ 2ನೇ ತ್ರೈಮಾಸಿಕ ಅಂತ್ಯಕ್ಕೆ ಖರೀದಿಗೆ ಲಭ್ಯವಾಗುವ ನೀರಿಕ್ಷೆಯಿದೆ.

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಕ್ಸ್‌ಯುವಿ500 ಫೇಸ್‌ಲಿಫ್ಟ್ ಮತ್ತು ಹೊಸ ಎಂಪಿವಿ ಒಂದನ್ನು ಬಿಡುಗಡೆ ಮಾಡುವ ತವಕದಲ್ಲಿರುವ ಮಹೀಂದ್ರಾ ಸಂಸ್ಥೆಯು ಟಿಯುವಿ300 ಪ್ಲಸ್ ಮಾದರಿಯನ್ನು ಕೂಡಾ ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಬಿಡುಗಡೆಯ ಸಂಪೂರ್ಣ ಮಾಹಿತಿ ನಿಮ್ಮ ಡ್ರೈವ್ ಸ್ಪಾರ್ಕ್‌ನಲ್ಲಿ ಲಭ್ಯವಾಗಲಿದೆ.

Source : Rushlane

ಡೀಲರ್‍‍‍ಗಳ ಕೈ ಸೇರಿದ 9 ಸೀಟರ್ ಮಹೀಂದ್ರಾ ಟಿಯುವಿ300 ಪ್ಲಸ್ ಕಾರು..

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಸಿಗ್ನಲ್ ಜಂಪ್ ವೇಳೆ ಎಡವಟ್ಟು- ಲಾರಿ ಗುದ್ದಿದ ರಭಸಕ್ಕೆ ಜಖಂಗೊಂಡ ರೇಂಜ್ ರೋವರ್...

ವಿದ್ಯುತ್ ವಾಹನಗಳ ಖರೀದಿಯ ಅನುಕೂಲತೆ ಮತ್ತು ಅನಾನುಕೂಲತೆಗಳು..

ಪೆಟ್ರೋಲ್ ಬಂಕ್‌ಗಳಲ್ಲಿ ನಿಲ್ಲದ ಹಗಲು ದರೋಡೆ- ಇಂಧನ ತುಂಬಿಸುವ ಮುನ್ನ ಹುಷಾರ್..!!

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ವಿಡಿಯೋ- ಟೊಯೊಟಾ ಇನೋವಾ ಗುದ್ದಿದ ರಭಸಕ್ಕೆ 30 ಅಡಿ ದೂರ ಹೋಗಿ ಬಿದ್ದ ಯುವಕ...

Article Published On: Friday, May 25, 2018, 8:45 [IST]
English summary
Mahindra TUV300 Plus P4 arrives at dealerships.
Read more on mahindra
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+