TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಇನೋವಾ ಕಾರಿಗೆ ಟಕ್ಕರ್ ನೀಡಲು ಬರುತ್ತಿದೆ ಮಹಿಂದ್ರಾ ಹೊಸ ಎಂಪಿವಿ
ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ಕೆಲ ದಿನಗಳ ಹಿಂದಷ್ಟೆ ತನ್ನ ಹೊಸ ಎಕ್ಸ್‌ಯುವಿ500 ಫೇಸ್‍ಲಿಫ್ಟ್ ಕಾರುಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದ್ದು, ಇದೀಗ ಹೊಸ ಮಾದರಿಯ ಎಂಪಿವಿ ಕಾರನ್ನು ಇದೇ ವರ್ಷದ ನಾಲ್ಕನೆಯ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆಗೊಳಿಸಲು ಸಜ್ಜುಗೊಂಡಿದೆ.
ಮಹೀಂದ್ರಾ ನಿರ್ಮಾಣದ ಹೊಸ ಎಂಪಿವಿ ಕಾರನ್ನು ಯು321 ಕೋಡ್‌ನೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಇದೀಗ ಮತ್ತೆ ಬಿಳಿ ಬಣ್ಣದ ಆಯ್ಕೆಯನ್ನು ಹೊಂದಿರುವ ಮಾದರಿಯು ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ಚೆನ್ನೈ ಬಳಿ ಕಾಣಿಸಿಕೊಂಡಿದೆ. ಇದರೊಂದಿಗೆ ಮೊದಲ ಬಾರಿಗೆ ಹೊಸ ಕಾರಿನ ಬಣ್ಣದ ಆಯ್ಕೆಗಳು ಬಹಿರಂಗವಾಗಿದ್ದು, ಇನೋವಾ ಕಾರುಗಳನ್ನು ಗುರಿಯಾಗಿಸಿ ಯು321 ಕಾರನ್ನು ಅಭಿವೃದ್ಧಿ ಮಾಡಲಾಗುತ್ತಿದೆ.
ಈ ಹಿಂದೆ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಕಾರುಗಳಲ್ಲೊಂದು ಯು 081 ಮತ್ತು ಇನ್ನೊಂದು ಕಾರು ಯು-079 ಬ್ಯಾಡ್ಜಿಂಗ್ ಅನ್ನು ಪಡೆದುಕೊಂಡಿದೆ. ಹೊಸ ಯು321 ಎಂಪಿವಿ ಕಾರು ಮಹಿಂದ್ರಾ ಸಂಸ್ಥೆಯ ಮೊದಲ ಮೊನೊಕ್ಯೂ ಬಾಡಿ ಕಿಟ್ ಹೊಂದಿರುವ ಕಾರಾಗಿದ್ದು, ಪ್ರಸ್ಥುತ ಜೈಲೋ ಕಾರುಗಳಲ್ಲಿ ಬಳಸಲಾಗಿರುವ ಬಾಡಿ ಆನ್ ಫ್ರೇಮ್ ಶೈಲಿಗಿಂತ ವಿಭಿನ್ನವಾಗಿರಲಿದೆ.
ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಕಾರುಗಳು 6 ಸ್ಪ್ಲಿಟ್ ಸ್ಪೋಕ್ ಎರಡು ಟೋನ್‍ಗಳುಳ್ಳ ಅಲಾಯ್ ಚಕ್ರಗಳು, ಕಪ್ಪು ಹೆಡ್‍ಲ್ಯಾಂಪ್ ಬೆಜೆಲ್ಸ್ ಮತ್ತು ಮುಂಭಾಗದ ಗ್ರೀಲ್‍ನಲ್ಲಿ ಮಹಿಂದ್ರಾ ಸಂಸ್ಥೆಯ ಸಿಗ್ನೇಚರ್‍ನಿಂದ ಸಜ್ಜುಗೊಂಡಿದೆ.
ಮಹೀಂದ್ರಾ ಯು321 ಎಂಪಿವಿ ಕಾರು ಏಳು ಲಂಬಾಕಾರದ ಗ್ರಿಲ್, ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಹೊಸ ಬಂಪರ್, ಫಾಗ್ ಲ್ಯಾಂಪ್ಸ್, ಬೂಮರಾಂಗ್ ಆಕಾರದ ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ಸ್ ವೈಶಿಷ್ಟ್ಯತೆಗಳನ್ನು ಪಡೆದಿದೆ.
ಕಾರಿನ ಒಳವಿನ್ಯಾಸದ ಬಗ್ಗೆ ಹೇಳುವುದಾದರೇ, ಎತ್ತರವಾದ ಏಳು ಲೆದರ್ ಸೀಟ್‍ಗಳು, ಆಂಡ್ರಾಯ್ಡ್ ಆಟೋ ಆಪ್ ಕನೆಕ್ಟಿವಿಟಿ ಆಯ್ಕೆಯನ್ನು ಪಡೆದ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಮತ್ತು ಅನಲಾಗ್ ಡಿಜಿಟಲ್ ಇನ್ಸ್ಟ್ರೂಮೆಂಟಲ್ ಕ್ಲಸ್ಟರ್ ಅನ್ನು ಪಡೆದಿರಲಿವೆ.
ಪರಿಕ್ಷಾ ವಾಹನದಲ್ಲಿ ಕಾಣಿಸುವಂತೆ ಯು321 ಎಂಪಿವಿ ಕಾರುಗಳು ಸ್ಟ್ರಾಂಗ್ ಬೆಲ್ಟ್ ಲೈನ್, 16 ಇಂಚಿನ ವೀಲ್‍ಗಳೊಂದಿಗೆ ಐದು ಸ್ಪೋಕ್ ವೀಲ್ ಆರ್ಚೆಸ್ ಅನ್ನು ಪಡೆದುಕೊಂಡಿದೆ. ಹಿಂಭಾಗದಲ್ಲಿ ಲಂಬಾಕಾರದ ಟೈಲ್ ಲೈಟ್ಸ್ ಅನ್ನು ಅಳವಡಿಸಲಾಗಿದೆ.
ಎಂಜಿನ್ ಸಾಮರ್ಥ್ಯ
ಮಹಿಂದ್ರಾ ಯು321 ಕಾರುಗಳು 2.0 ಲೀಟರ್ ಎಂಜಿನ್ ಸಹಾಯದಿಂದ 140ಬಿಹೆಚ್‍ಪಿ ಮತ್ತು 320ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆಯಲಿದ್ದು, 6 ಸ್ಪೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್‍ನೊಂದಿಗೆ ಜೋಡಿಸಲಾಗಿದೆ ಎನ್ನಲಾಗಿದೆ.
ಇನ್ನು ಮಹೀಂದ್ರಾ ಯು321 ಎಂಪಿವಿ ಬೇಸ್ ಮಾಡಲ್ ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದ್ದು, ಇನ್ನು ಟಾಪ್ ಎಂಡ್ ವೇರಿಯಂಟ್ ಕಾರುಗಳಲ್ಲಿ ಎರಡು ಬದಿಗಳಲ್ಲೂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.
ಇದಲ್ಲದೆ ಎಬಿಎಸ್‍ನೊಂದಿಗೆ ಇಬಿಡಿ ಮತ್ತು ಡ್ಯುಯಲ್ ಏರ್‍ಬ್ಯಾಗ್‍ಗಳನ್ನು ಕಾರಿನ ಎಲ್ಲಾ ವೇರಿಯಂಟ್‍ನಲ್ಲಿ ಅಳವಡಿಸಲಾಗಿದ್ದು, ಇನ್ನು ಟಾಪ್ ಎಂಡ್ ವೇರಿಯಂಟ್ ಕಾರುಗಳು ಕರ್ಟೈನ್ ಏರ್‍ಬ್ಯಾಗ್‍ಗಳನ್ನು ಕೂಡಾ ಪಡೆದುಕೊಂಡಿರಲಿವೆ. ಇವುಗಳಲ್ಲದೆ ಪಾರ್ಕಿಂಗ್ ಅಸ್ಸಿಸ್ಟ್, ಪಾರ್ಕಿಂಗ್ ಸೆನ್ಸಾರ್ಸ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಸಹ ಅಳವಡಿಸಲಾಗಿದೆ.
ಹೀಗಾಗಿ ಹೊಸ ಎಂಪಿವಿ ಕಾರು ಬಿಡಗಡೆಗೊಂಡಲ್ಲಿ ಮಾರುತಿ ಎರ್ಟಿಗಾ ಮತ್ತು ಟೊಯೊಟಾ ಇನೊವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ. ಇನ್ನು ಕಾರಿನ ಬೆಲೆಯ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲವಾದರೂ ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 10 ರಿಂದ 15 ಲಕ್ಷದ ವರೆಗು ಇರಬಹುದೆಂದು ಅಂದಾಜಿಸಲಾಗಿದೆ.
Spy Image Source: TeamBHP