ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಹಿಂದಿಕ್ಕಲು ಸಜ್ಜುಗೊಳ್ಳುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯದಲ್ಲೇ ಎಕ್ಸ್‌ಯುವಿ700 ಹೊಸ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗಡೆ ಮಾಡಲಿದೆ.

By Praveen Sannamani

ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಹಿಂದಿಕ್ಕಲು ಸಜ್ಜುಗೊಳ್ಳುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯದಲ್ಲೇ ಎಕ್ಸ್‌ಯುವಿ700 ಹೊಸ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗಡೆ ಮಾಡಲಿದ್ದು, ಈ ಹಿನ್ನೆಲೆ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು ದೇಶದ ವಿವಿಧ ಕಡೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ಕೂಡಾ ನಡೆಸುತ್ತಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಸದ್ಯ ಭಾರತೀಯ ಮಾರುಕಟ್ಟೆಗಳಲ್ಲಿ ಫುಲ್ ಸೈಜ್ ಎಸ್‌ಯುವಿ ಆವೃತ್ತಿಗಳಿಗೆ ವಿಶೇಷ ಬೇಡಿಕೆಯಿದ್ದು, ಇದೇ ಉದ್ದೇಶದಿಂದ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಕ್ಸ್‌ಯುವಿ700 ಕಾರನ್ನು ಪರಿಚಯಿಸಲು ಮುಂದಾಗಿದ್ದು, ಸದ್ಯ ಮಹೀಂದ್ರಾ ಚಾಕನ್ ಕಾರು ಬಿಡಿಭಾಗಗಳ ಜೋಡಣಾ ಕೇಂದ್ರದಲ್ಲಿ ಹೊಸ ಕಾರುಗಳ ತಾಂತ್ರಿಕ ಅಂಶಗಳ ಬಗೆಗೆ ಪರಿಶೀಲನೆ ಮಾಡಲಾಗುತ್ತಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ದಕ್ಷಿಣ ಕೊರಿಯಾದ ಮೂಲದ ಸ್ಯಾಂಗ್‌ಯಾಂಗ್‌ ಜೊತೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ಮಾದರಿಯ ಎಕ್ಸ್‌ಯುವಿ700 ಅಭಿವೃದ್ಧಿಗೊಳಿಸಿದ್ದು, ಕ್ವಾಡ್ ಫ್ರೇಮ್ ತಂತ್ರಜ್ಞಾನದಡಿ ಈ ಕಾರನ್ನು ನಿರ್ಮಾಣ ಮಾಡಲಾಗಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಇದರಿಂದ ಕಾರಿನ ತೂಕವು ಸಾಕಷ್ಟು ಹಗುರವಾಗಿದರಲ್ಲದೇ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಹೆಚ್ಚಿದ್ದು, ಎಸ್‌ಯುವಿ ಪ್ರಿಯರಿಗೆ ಉತ್ತಮ ಚಾಲನಾ ಅನುಭವ ನೀಡಲಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಹೀಗಾಗಿ ಮಹೀಂದ್ರಾ ಸಂಸ್ಥೆಯು ತನ್ನ ಟಾಪ್ ಎಂಡ್ ಕಾರು ಆವೃತ್ತಿಯು ಗ್ರಾಹಕರಲ್ಲಿ ಕುತೂಹಲ ಹುಟ್ಟುಹಾಕಿದ್ದು, ಜನಪ್ರಿಯ ಫಾರ್ಚೂನರ್, ಎಂಡೀವರ್‌ಗೆ ತೀವ್ರ ಸ್ಪರ್ಧೆ ಒಡ್ಡವುದರಲ್ಲಿ ಯಾವುದೇ ಸಂದೇಹವಿಲ್ಲ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಮಹೀಂದ್ರಾ ಈ ಹಿಂದೆ ಬಿಡುಗಡೆ ಮಾಡಿದ್ದ ಟೀಸರ್‌ ಪ್ರಕಾರ ಎಕ್ಸ್‌ಯುವಿ700 ಕಾರು ಮಾದರಿಯು 7 ಸೀಟರ್ ಮಾದರಿಯಾಗಿದ್ದು, ಆಪ್ ರೋಡ್ ಕೌಶಲ್ಯದೊಂದಿಗೆ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಪ್ರಿಮಿಯಂ ಲೆದರ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ ವ್ಯವಸ್ಥೆ ಹೊಂದಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಇದಷ್ಟೇ ಅಲ್ಲದೇ ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್ ಸೇರಿದಂತೆ ಅತ್ಯಾಧುನಿಕ ಸುರಕ್ಷಾ ಸೌಲಭ್ಯಗಳನ್ನು ಹೊಂದಿರಲಿದ್ದು, ಎಸ್‌ಯುವಿ ಕಾರು ಮಾದರಿಗಳಲ್ಲಿ ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎನ್ನಬಹುದು.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಎಂಜಿನ್ ಸಾಮರ್ಥ್ಯ

ಆಪ್ ರೋಡಿಂಗ್ ಕೌಶಲ್ಯ ಹೊಂದಿರುವ ಎಕ್ಸ್‌ಯುವಿ700 ಕಾರುಗಳು 2.2-ಲೀಟರ್ ಯುರೊ 6 ಡೀಸೆಲ್ ಎಂಜಿನ್ ಹೊಂದಿರಲಿದ್ದು, 7-ಸ್ಪೀಡ್ ಮರ್ಸಿಡಿಸ್ ಬೆಂಝ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 178- ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಜೊತೆಗೆ ಪೆಟ್ರೋಲ್ ಆವೃತ್ತಿಗಳು ಸಹ ಲಭ್ಯವಿರಲಿದ್ದು, 2 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 222-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದಿಸಲಿವೆ ಎಂದು ಹೇಳಲಾಗಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಆಪ್ ರೋಡ್ ವೈಶಿಷ್ಟ್ಯತೆ ಹೊಂದಿರುವ ಎಕ್ಸ್‌ಯುವಿ 700 ಕಾರುಗಳಲ್ಲಿ ಹಿಂಬದಿ ಚಕ್ರಗಳಿಗೂ ಗೇರ್‌ಬಾಕ್ಸ್ ಶಕ್ತಿ ಪೂರೈಕೆಯ ಸೌಲಭ್ಯವಿದ್ದು, ಇದು ಕಠಿಣ ಪರಿಸ್ಥಿತಿಗಳಲ್ಲೂ ಸರಾಗವಾಗಿ ನುಗ್ಗಬಲ್ಲ ಬಲಿಷ್ಠ ಕಾರು ಮಾದರಿಯಾಗಲಿದೆ.

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಬೆಲೆ ಮತ್ತು ಬಿಡುಗಡೆಯ ದಿನಾಂಕ

ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಎಕ್ಸ್‌ಯುವಿ700 ಕಾರುಗಳು ಬೆಲೆಯು ರೂ. 22 ಲಕ್ಷದಿಂದ ರೂ. 25 ಲಕ್ಷದ ತನಕ ಇರಬಹುದೆಂದು ಅಂದಾಜಿಸಲಾಗಿದ್ದು, ವರ್ಷಾಂತ್ಯಕ್ಕೆ ಮಾರುಕಟ್ಟೆಗೆ ಲಗ್ಗೆಯಿಡುವುದು ಖಚಿತವಾಗಿದೆ.

Source: Carwale

ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ ಮಹೀಂದ್ರಾ ಎಕ್ಸ್‌ಯುವಿ700

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಸದ್ಯ ಮಹೀಂದ್ರಾ ನಿರ್ಮಾಣದ ಕಾರುಗಳಲ್ಲಿ ಎಕ್ಸ್‌ಯುವಿ 500 ಕಾರು ಮಾದರಿಗಳೇ ಹೈ ಎಂಡ್ ಕಾರು ಆವೃತ್ತಿಯಾಗಿದ್ದು, ಹೆಚ್ಚಿನ ಗುಣಮಟ್ಟ ಮತ್ತು ಆಪ್ ರೋಡ್ ಕೌಶಲ್ಯ ಭರಿತ ಕಾರು ಮಾದರಿ ಪರಿಚಯಿಸುವ ಉದ್ದೇಶದಿಂದ ಎಕ್ಸ್‌ಯುವಿ 700 ಆವೃತ್ತಿಯನ್ನು ಅಭಿವೃದ್ಧಿಗೊಳಿಸಲಾಗಿದೆ.

Most Read Articles

Kannada
Read more on mahindra suv ssangyong
English summary
Mahindra XUV700/new flagship SUV spotted on test in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X