ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಹಿಂದಿಕ್ಕಲು ಸಜ್ಜುಗೊಳ್ಳುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯದಲ್ಲೇ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆ ಮಾಡಲಿದ್ದು, ಇದೀಗ ಭಾರತೀಯ ರಸ್ಥೆಗಳಲ್ಲಿ ಹೊಸ ಬಣ್ಣದಲ್ಲಿ ಈ ಕಾರು ಎಂಜಿನ್ ಕಾರ್ಯಕ್ಷ

By Rahul Ts

ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಹಿಂದಿಕ್ಕಲು ಸಜ್ಜುಗೊಳ್ಳುತ್ತಿರುವ ಮಹೀಂದ್ರಾ ಸಂಸ್ಥೆಯು ಸದ್ಯದಲ್ಲೇ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆ ಮಾಡಲಿದ್ದು, ಇದೀಗ ಭಾರತೀಯ ರಸ್ಥೆಗಳಲ್ಲಿ ಹೊಸ ಬಣ್ಣದಲ್ಲಿ ಈ ಕಾರು ಎಂಜಿನ್ ಕಾರ್ಯಕ್ಷಮತೆಯನ್ನು ಪರೀಕ್ಷಿಸಲು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಮಹೀಂದ್ರಾ ಸಂಸ್ಥೆಯು ಇದೇ ವರ್ಷದ ನಾಲ್ಕನೆಯ ತ್ರೈಮಾಸಿಕ ಅವದಿಯಲ್ಲಿ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗಡೆ ಮಾಡಲಿದ್ದು, ಸದ್ಯ ಭಾರತೀಯ ಮಾರುಕಟ್ಟೆಗಳಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳಿಗೆ ವಿಶೇಷ ಬೇಡಿಕೆಯಿದೆ. ಇದೇ ಉದ್ದೇಶದಿಂದ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಕ್ಸ್‌ಯುವಿ700 ಕಾರನ್ನು ಪರಿಚಯಿಸಲು ಮುಂದಾಗಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ದಕ್ಷಿಣ ಕೊರಿಯಾದ ಮೂಲದ ಸ್ಯಾಂಗ್‌ಯಾಂಗ್‌ ಜೊತೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ಮಾದರಿಯ ಎಕ್ಸ್‌ಯುವಿ700 ಅಭಿವೃದ್ಧಿಗೊಳಿಸಿದ್ದು, ಕ್ವಾಡ್ ಫ್ರೇಮ್ ತಂತ್ರಜ್ಞಾನದಡಿ ಈ ಕಾರನ್ನು ನಿರ್ಮಾಣ ಮಾಡಲಾಗಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಇದರಿಂದ ಕಾರಿನ ತೂಕವು ಸಾಕಷ್ಟು ಹಗುರವಾಗಿದರಲ್ಲದೇ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಹೆಚ್ಚಿದ್ದು, ಎಸ್‌ಯುವಿ ಪ್ರಿಯರಿಗೆ ಉತ್ತಮ ಚಾಲನಾ ಅನುಭವ ನೀಡಲಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಮಹೀಂದ್ರಾ ಬಿಡುಗಡೆ ಮಾಡಿರುವ ಟೀಸರ್‌ ಪ್ರಕಾರ ಎಕ್ಸ್‌ಯುವಿ700 ಕಾರು ಮಾದರಿಯು 7 ಸೀಟರ್ ಮಾದರಿಯಾಗಿದ್ದು, ಆಫ್ ರೋಡ್ ಕೌಶಲ್ಯದೊಂದಿಗೆ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಪ್ರಿಮಿಯಂ ಲೆದರ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ ವ್ಯವಸ್ಥೆ ಹೊಂದಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಇದಷ್ಟೇ ಅಲ್ಲದೇ ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್ ಸೇರಿದಂತೆ ಅತ್ಯಾಧುನಿಕ ಸುರಕ್ಷಾ ಸೌಲಭ್ಯಗಳನ್ನು ಹೊಂದಿರಲಿದ್ದು, ಎಸ್‌ಯುವಿ ಕಾರು ಮಾದರಿಗಳಲ್ಲಿ ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎನ್ನಬಹುದು.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಎಂಜಿನ್ ಸಾಮರ್ಥ್ಯ

ಆಫ್ ರೋಡಿಂಗ್ ಕೌಶಲ್ಯ ಹೊಂದಿರುವ ಎಕ್ಸ್‌ಯುವಿ700 ಕಾರುಗಳು 2.2-ಲೀಟರ್ ಯುರೊ 6 ಡೀಸೆಲ್ ಎಂಜಿನ್ ಹೊಂದಿರಲಿದ್ದು, 7-ಸ್ಪೀಡ್ ಮರ್ಸಿಡಿಸ್ ಬೆಂಝ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 178- ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಜೊತೆಗೆ ಪೆಟ್ರೋಲ್ ಆವೃತ್ತಿಗಳು ಸಹ ಲಭ್ಯವಿರಲಿದ್ದು, 2 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 222-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದಿಸಲಿವೆ ಎಂದು ಹೇಳಲಾಗಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಪ್ರಯಾಣಿಕರ ಸುರಕ್ಷತೆಗಾಗಿ ಮಹೀಂದ್ರಾ ಎಕ್ಸ್‌ಯುವಿ700 ಕಾರಿನಲ್ಲಿ 9 ಏರ್‍‍ಬ್ಯಾಗ್ಸ್, ಅಡ್ವಾನ್ಸ್ಡ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಮ್, ಲೇನ್ ಡಿಪಾರ್ಚುರ್ ವಾರ್ನಿಂಗ್, ಲೇನ್ ಚೇಂಜ್ ಅಸ್ಸಿಸ್ಟ್, ಟ್ರಾಫಿಕ್ ಸೇಫ್ಟಿ ಅಸ್ಸಿಸ್ಟ್ ಮತ್ತು ಹೈ ಬೀಮ್ ಅಸ್ಸಿಸ್ಟ್ ಅನ್ನು ಅಳವಡಿಸಲಾಗಿದೆ.

ಹೊಸ ಬಣ್ಣದಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700 ಕಾರು..

ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಎಕ್ಸ್‌ಯುವಿ700 ಕಾರುಗಳು ಬೆಲೆಯು22 ಲಕ್ಷದಿಂದ 25 ಲಕ್ಷದ ತನಕ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
Read more on mahindra suv
English summary
Mahindra XUV700 blue colour shows how long it is in new spy shots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X