ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೆ ತಮ್ಮ ಮರಾಜೊ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿದ್ದು, ಇದೀಗ ಟೊಯೊಟಾ ಫಾರ್ಚುನರ್, ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲು ತಮ್ಮ ಎಕ್ಸ್‌ಯುವಿ700 ಕಾರನ್ನು ಅಕ್ಟೋಬರ್ 9ರಂದು ಮಾರುಕಟ್ಟೆಗೆ ಪರಿ

By Rahul Ts

ಮಹೀಂದ್ರಾ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೆ ತಮ್ಮ ಮರಾಜೊ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿದ್ದು, ಇದೀಗ ಟೊಯೊಟಾ ಫಾರ್ಚುನರ್, ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲು ತಮ್ಮ ಎಕ್ಸ್‌ಯುವಿ700 ಕಾರನ್ನು ಅಕ್ಟೋಬರ್ 9ರಂದು ಮಾರುಕಟ್ಟೆಗೆ ಪರಿಚಯಿಸಲಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ದಕ್ಷಿಣ ಕೊರಿಯಾದ ಮೂಲದ ಸ್ಯಾಂಗ್‌ಯಾಂಗ್‌ ಜೊತೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸುಧಾರಿತ ಮಾದರಿಯ ಎಕ್ಸ್‌ಯುವಿ700 ಅಭಿವೃದ್ಧಿಗೊಳಿಸಿದ್ದು, ಕ್ವಾಡ್ ಫ್ರೇಮ್ ತಂತ್ರಜ್ಞಾನದಡಿ ಈ ಕಾರನ್ನು ನಿರ್ಮಾಣ ಮಾಡಲಾಗಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಇದರಿಂದ ಕಾರಿನ ತೂಕವು ಸಾಕಷ್ಟು ಹಗುರವಾಗಿದರಲ್ಲದೇ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಹೆಚ್ಚಿದ್ದು, ಎಸ್‌ಯುವಿ ಪ್ರಿಯರಿಗೆ ಉತ್ತಮ ಚಾಲನಾ ಅನುಭವ ನೀಡಲಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಬಿಡುಗಡೆ ಮಾಡಲಿರುವ ಎಕ್ಸ್‌ಯುವಿ700 ಕಾರು ಮಾದರಿಯು 7 ಸೀಟರ್ ಮಾದರಿಯಾಗಿದ್ದು, ಆಪ್ ರೋಡ್ ಕೌಶಲ್ಯದೊಂದಿಗೆ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಪ್ರಿಮಿಯಂ ಲೆದರ್ ಸೀಟುಗಳು, 360 ಡಿಗ್ರಿ ಕ್ಯಾಮೆರಾ ವ್ಯವಸ್ಥೆ ಹೊಂದಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಇದಷ್ಟೇ ಅಲ್ಲದೇ ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್ ಸೇರಿದಂತೆ ಅತ್ಯಾಧುನಿಕ ಸುರಕ್ಷಾ ಸೌಲಭ್ಯಗಳನ್ನು ಹೊಂದಿರಲಿದ್ದು, ಎಸ್‌ಯುವಿ ಕಾರು ಮಾದರಿಗಳಲ್ಲಿ ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎನ್ನಬಹುದು.

MOST READ: ಪ್ರವಾಹ ಸಂತ್ರಸ್ತರ ಪಾಲಿನ ಹೀರೋ ಆಗಿದ್ದ ಮೀನುಗಾರನಿಗೆ ಮಹೀಂದ್ರಾ ಕಡೆಯಿಂದ ಭರ್ಜರಿ ಉಡುಗೊರೆ

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಎಂಜಿನ್ ಸಾಮರ್ಥ್ಯ

ಬಿಡುಗಡೆಗೊಳ್ಳಲಿರುವ ಹೊಸ ಮಹೀಂದ್ರಾ ಎಕ್ಸ್‌ಯುವಿ700 ಯೂರೊ 2.2 ಲೀಟರ್, 4 ಸಿಲೆಂಡರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 178ಬಿಹೆಚ್‍‍ಪಿ ಮತ್ತು 420 ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪದೆದಿದ್ದು, 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಜೊತೆಗೆ ಪೆಟ್ರೋಲ್ ಆವೃತ್ತಿಗಳು ಸಹ ಲಭ್ಯವಿರಲಿದ್ದು, 2 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 222-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದಿಸಲಿವೆ ಎಂದು ಹೇಳಲಾಗಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಆಫ್ ರೋಡ್ ವೈಶಿಷ್ಟ್ಯತೆ ಹೊಂದಿರುವ ಎಕ್ಸ್‌ಯುವಿ 700 ಕಾರುಗಳಲ್ಲಿ ಹಿಂಬದಿ ಚಕ್ರಗಳಿಗೂ ಗೇರ್‌ಬಾಕ್ಸ್ ಶಕ್ತಿ ಪೂರೈಕೆಯ ಸೌಲಭ್ಯವಿದ್ದು, ಇದು ಕಠಿಣ ಪರಿಸ್ಥಿತಿಗಳಲ್ಲೂ ಸರಾಗವಾಗಿ ನುಗ್ಗಬಲ್ಲ ಬಲಿಷ್ಠ ಕಾರು ಮಾದರಿಯಾಗಲಿದೆ.

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಪ್ರಯಾಣಿಕರ ಸುರಕ್ಷತೆಗಾಗಿ ಮಹೀಂದ್ರಾ ಎಕ್ಸ್‌ಯುವಿ700 ಕಾರಿನಲ್ಲಿ 9 ಏರ್‍‍ಬ್ಯಾಗ್ಸ್, ಅಡ್ವಾನ್ಸ್ಡ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಮ್, ಲೇನ್ ಡಿಪಾರ್ಚುರ್ ವಾರ್ನಿಂಗ್, ಲೇನ್ ಚೇಂಜ್ ಅಸ್ಸಿಸ್ಟ್, ಟ್ರಾಫಿಕ್ ಸೇಫ್ಟಿ ಅಸ್ಸಿಸ್ಟ್ ಮತ್ತು ಹೈ ಬೀಮ್ ಅಸ್ಸಿಸ್ಟ್ ಅನ್ನು ಅಳವಡಿಸಲಾಗಿದೆ.

MOST READ: ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿನ ಚರಂಡಿಗೆ ಜಾರಿದ ಹೊಸ ರೋಲ್ಸ್ ರಾಯ್ಸ್ ಕಾರು..

ಅಕ್ಟೋಬರ್ 9ಕ್ಕೆ ಬಿಡುಗಡೆಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

7 ಆಸನ ಹೊತ್ತು ಮಾರುಕಟ್ಟೆಗೆ ಲಗ್ಗೆಯಿಡಲಿರುವ ಮಹೀಂದ್ರಾ ಎಕ್ಸ್‌ಯುವಿ700 ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 22 ರಿಂದ 25 ಲಕ್ಷದ ವರೆಗು ಇರಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Monday, September 10, 2018, 16:02 [IST]
English summary
New Mahindra Y400 SUV India Launch Date Revealed.
Read more on mahindra suv new car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+