ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ದೇಶಾದ್ಯಂತ ಸದ್ಯ ಬಿಎಸ್-4 ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ತಾಂತ್ರಿಕ ಗುಣವೈಶಿಷ್ಟ್ಯ ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದ್ದು, ಇದು ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ನಿಷೇಧವಾಗುವುದು ಖಚಿತವಾಗಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಈ ಹಿಂದೆ ಕೇಂದ್ರ ಸರ್ಕಾರವು 2017ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದೇಶಾದ್ಯಂತ ಬಿಎಸ್-3 (ಭಾರತ್ ಸ್ಟೇಜ್) ಸೌಲಭ್ಯಗಳನ್ನು ಒಳಗೊಂಡ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ಮೇಲೆ ನಿಷೇಧ ನಿಷೇಧ ಹೇರಿದ್ದಲ್ಲದೆ ಬಿಎಸ್-4 ಮತ್ತು ಅದಕ್ಕೂ ಮೇಲ್ಪಟ್ಟ ವಾಹನ ಮಾದರಿಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಿತ್ತು.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿಡುತ್ತಿರುವ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಸೂಚನೆಯೆಂತೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ನಿಷೇಧ ಹೇರುವುದು ಖಚಿತವಾಗಿದ್ದು, ಬಿಎಸ್-6 ವಾಹನಗಳು ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ವಾಹನ ಮಾದರಿಗಳಿಗೆ ಮಾತ್ರವೇ ಅವಕಾಶ ನೀಡಲಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಹೀಗಾಗಿ ಕೇಂದ್ರ ಸರ್ಕಾರದ ಡೆಡ್‌ಲೈನ್‌ಗೂ ಮುನ್ನವೇ ಬಿಎಸ್ 6 ವೈಶಿಷ್ಟ್ಯತೆಯುಳ್ಳ ಎಂಜಿನ್ ಪ್ರೇರಿತ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಮಾರುತಿ ಸುಜುಕಿ ಸಂಸ್ಥೆಯು, ಈ ಮೂಲಕ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಬಹುದೊಡ್ಡ ಬದಲಾವಣೆ ಮಾಡುತ್ತಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಈ ಬಗ್ಗೆ ಮಾಹಿತಿ ನೀಡಿರುವ ಮಾರುತಿ ಸುಜುಕಿ ಸಂಸ್ಥೆಯ ಅಧ್ಯಕ್ಷ ಆರ್‌ಸಿ ಭಾರ್ಗವ್ ಅವರು, ಮುಂದಿನ ನಾಲ್ಕು ತಿಂಗಳ ಕಾಲ ಬಿಎಸ್ 6 ವಾಹನಗಳ ಎಂಜಿನ್ ನಿರ್ಮಾಣದ ಕುರಿತು ಹೊಸ ಅಧ್ಯಯನಗಳನ್ನು ನಡೆಸಲಾಗುತ್ತಿದ್ದು, ಹೊಸ ಎಂಜಿನ್ ವೈಶಿಷ್ಟ್ಯತೆಯ ವಾಹನಗಳು 2020ರ ಆರಂಭದಿಂದಲೇ ಮಾರಾಟಕ್ಕೆ ಸಿದ್ದವಾಗಿರಲಿವೆ ಎಂದಿದ್ದಾರೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಇದಲ್ಲದೇ ಬಿಎಸ್ 4 ವಾಹನಗಳಿಂತ ಬಿಎಸ್ 6 ವಾಹನಗಳು ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯ ಪಡೆಯುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಬೆಲೆಯಲ್ಲಿ ಸರಾಸರಿ ರೂ. 2.50 ಲಕ್ಷ ಏರಿಕೆಯಾಗಲಿದ್ದು,ಇದರಿಂದ ಅಗ್ಗದ ಬೆಲೆಯ ಕಾರು ಮಾರಾಟ ಮಾಡುವ ಮಾರುತಿ ಸುಜುಕಿ ಇದು ಹಿನ್ನಡೆಯಾಗುವ ಸಾಧ್ಯತೆಗಳಿವೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಹೀಗಾಗಿ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಡೀಸೆಲ್ ಕಾರುಗಳ ಬದಲಾಗಿ ಪೆಟ್ರೋಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳತ್ತ ಹೆಚ್ಚಿನ ಒತ್ತು ಕೊಡಲು ಮುಂದಾಗಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

2019ರ ಆರಂಭದಿಂದಲೇ ಡೀಸೆಲ್ ಕಾರುಗಳಿಂತ ಪೆಟ್ರೋಲ್ ಮತ್ತು ಸಿಎನ್‌ಜಿ ಆಧರಿತ ವಾಹನ ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೆಲವು ಮಹತ್ವದ ನಿರ್ಧಾರ ಪ್ರಕಟಿಸಲಾಗುತ್ತಿದ್ದು, ಇದರಿಂದ ಡೀಸೆಲ್ ಕಾರುಗಳನ್ನು ಖರೀದಿಸುವ ಗ್ರಾಹಕರು ಪೆಟ್ರೋಲ್ ಕಾರುಗಳತ್ತ ಆಕರ್ಷಣೆಯಾಗುವಂತೆ ಮಾಡಲಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಅಂದ್ರೆ ಡೀಸೆಲ್ ಕಾರುಗಳಿಗೆ ಸರಿಸಮಾನವಾದ ಮೈಲೇಜ್ ಸೇರಿದಂತೆ ಎಂಜಿನ್ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಡಿಸೇಲ್ ಕಾರುಗಳ ಮೇಲಿನ ಅವಲಂಬನೆಯನ್ನು ತಗ್ಗಿಸಲಿರುವ ಮಾರುತಿ ಸುಜುಕಿಯು ಇತರೆ ಕಾರು ಉತ್ಪಾದನಾ ಸಂಸ್ಥೆಗಳಿಗೆ ಮತ್ತೊಮ್ಮೆ ಟಾಂಗ್ ನೀಡುವ ತವಕದಲ್ಲಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಹೊಸ ನಿಯಮ ಜಾರಿ ಉದ್ದೇಶ ಏನು?

ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳಿಗೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ ಬಿಎಸ್-6 ವಾಹನಗಳು ರಸ್ತೆಗಿಳಿಯಲಿವೆ.

MOST READ: ಶಾಕಿಂಗ್ ಸುದ್ದಿ- ಭಾರತದಲ್ಲಿ ಬ್ಯಾನ್ ಆಗಲಿವೆ ಈ ಒಂಬತ್ತು ಜನಪ್ರಿಯ ಕಾರುಗಳು..!

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಯುರೋಪ್‌ನಲ್ಲಿ ಈ ಹಿಂದೆ 2016ರಿಂದಲೇ ಯುರೋ-6 ತಾಂತ್ರಿಕ ಅಂಶಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದ್ದು, ಇದು ಬಿಎಸ್-6 ವೈಶಿಷ್ಟ್ಯತೆಗೆ ಸರಿಸಮನಾಗಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಹೊಸ ನಿಯಮ ಜಾರಿಯಿಂದಾಗಿ ವಾಹನ ಎಂಜಿನ್ ಮಾದರಿಗಳಲ್ಲಿ ಭಾರೀ ಬದಲಾವಣೆಯಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್ ಮಾದರಿಗಿಂತಲೂ ಬಿಎಸ್-6 ಹೆಚ್ಚಿನ ಗುಣಮಟ್ಟದೊಂದಿಗೆ ಹೊಗೆ ಉಗುಳುವ ಪ್ರಮಾಣದಲ್ಲಿ ಪರಿಣಾಮಕಾರಿ ತಗ್ಗಿಸಲಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.

MOST READ: 8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಒಡತಿಯಾದ ಭಾರತದ ಮೊದಲ ಮಹಿಳೆ..!

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ತೀರ್ಪಿನ ಪ್ರಕಾರ, ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆಯಲು ಬಿಎಸ್-6 ತಾಂತ್ರಿಕ ಅಂಶಗಳ ಅಳವಡಿಕೆ ಅವಶ್ಯವಿದ್ದು, 2020ರ ಏಪ್ರಿಲ್ 1ರಿಂದಲೇ ಹೊಸ ನಿಯಮ ಜಾರಿಗೆ ಸಿದ್ದತೆ ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಇದರಲ್ಲಿ ಗಮನಿಸಬೇಕಾದ ಮತ್ತೊಂದು ಪ್ರಮುಖ ವಿಚಾರ ಅಂದ್ರೆ, ಭಾರೀ ಗಾತ್ರದ ವಾಣಿಜ್ಯ ಬಳಕೆಯ ವಾಹನಗಳಿಗೆ ಕೆಲವು ವಿನಾಯ್ತಿ ನೀಡಲಾಗಿದ್ದು, 2020ರ ಏಪ್ರೀಲ್ 1ರ ಬದಲಾಗಿ 2020ರ ಸೆಪ್ಟೆಂಬರ್ 1ರಿಂದ ಭಾರೀ ಗಾತ್ರದ ಬಿಎಸ್-4 ವಾಹನಗಳಿಗೆ ಹೊಸ ನೀತಿ ಅನ್ವಯವಾಗಲಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಇದಕ್ಕೆ ಕಾರಣ, ಭಾರೀ ಗಾತ್ರದ ವಾಣಿಜ್ಯ ವಾಹನಗಳ ಮಾರಾಟ ಪ್ರಕ್ರಿಯೆಯು ಪ್ರಯಾಣಿಕ ವಾಹನಗಳಿಂತ ಕಡಿಮೆ ಪ್ರಮಾಣದಿಂದಾಗಿ ಸುಪ್ರೀಂ ಡೆಡ್‌ಲೈನ್ ಒಳಗಾಗಿ ಸ್ಟಾಕ್ ಮಾರಾಟ ಸಾಧ್ಯವಾದು. ಇದರಿಂದ ಇಂತಹ ಬಿಎಸ್-4 ವಾಹನಗಳನ್ನು ಮಾರಾಟ ಮಾಡಲು ಹೆಚ್ಚುವರಿ ಅವಕಾಶ ನೀಡಲಾಗಿದೆ.

MOST READ: ನ್ಯಾನೋ ಬರುವುದಕ್ಕೂ ಮುನ್ನ ಬಂದು ಹೋದ 'ಮೀರಾ' ಕಾರಿನ ಕಥೆ ಗೊತ್ತಾ?

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಆದ್ರೆ ಕಾರು ಉತ್ಪಾದನಾ ಸಂಸ್ಥೆಗಳಿಗೆ ಯಾವುದೇ ವಿನಾಯ್ತಿ ಇಲ್ಲದಿರುವುದರಿಂದ ಡೆಡ್‌ಲೈನ್‌ಗೂ ಮುನ್ನವೇ ಹೊಸ ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸಬೇಕಿದ್ದು, ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮೇಲೂ ಹೆಚ್ಚಿನ ಗಮನಹರಿಸಬೇಕಿದೆ.

ಹೊಸ ರೂಲ್ಸ್ ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳಲಿದೆ ಮಾರುತಿ ಸುಜುಕಿ?

ಬೆಲೆ ಏರಿಕೆಯ ಬಿಸಿ..!

ಹೌದು, ಬಿಎಸ್ 4 ವಾಹನಗಳಿಂತಲೂ ಬಿಎಸ್ 6 ಎಂಜಿನ್ ಪ್ರೇರಿತ ವಾಹನಗಳ ಎಂಜಿನ್ ಮಾದರಿಯು ಹೆಚ್ಚಿನ ಗುಣಮಟ್ಟ ಪಡೆದುಕೊಂಡಿರಲಿದ್ದು, ಇದರಿಂದ ಸಹಜವಾಗಿಯೇ ಸದ್ಯ ರೂ.5 ಲಕ್ಷಕ್ಕೆ ದೊರೆಯುತ್ತಿರುವ ಕಾರುಗಳು ಮುಂಬರುವ ದಿನಗಳಲ್ಲಿ ರೂ. 7 ಲಕ್ಷದಿಂದ ರೂ. 8 ಲಕ್ಷಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
Maruti To Halt Diesel Engine Production? Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X