TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ದೇಶಿಯ ಆಟೋಮೊಬೈಲ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದ ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್
ದೇಶಿಯ ಆಟೋಮೊಬೈಲ್ ಜಗತ್ತಿನಲ್ಲಿ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಕಾರು ಹೊಸ ದಾಖಲೆಯನ್ನು ಬರೆದಿದೆ. ಮಾರುತಿ ಸುಜುಕಿ ಸಂಸ್ಥೆಯು ಕಳೆದ ವರ್ಷ ತಮ್ಮ ಮೂರನೆಯ ತಲೆಮಾರಿನ ಡಿಜೈರ್ ಕಾರುಗಳನ್ನು ಬಿಡುಗಡೆಗೊಳಿಸಿದ್ದು, ಬಿಡುಗಡೆಗೊಂಡಾಗಿನಿಂದಲೂ ಸೆಡಾನ್ ಕಾರುಗಳ ಸೇಲ್ಸ್ ಚಾರ್ಟ್‍ನಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
ಹೌದು, ಹೊಸ ಮಾರುತಿ ಸುಜುಕಿ ಡಿಜೈರ್ ಕಾರುಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ ಎಂದರೇ ನೀವು ನಂಬಲೇಬೇಕು. ಏಕೆಂದರೆ ಬಿಡುಗಡೆಗೊಂಡ ಸುಮಾರು ಒಂದು ವರ್ಷವಾದರೂ ಈ ಕಾರು ಮಾರುಕಟ್ಟೆಯಲ್ಲಿ ಹುಟ್ಟುಹಾಕಿದ ಕ್ರೇಜ್ ಅಷ್ಟಿಷ್ಟಲ್ಲ.
ಇದೀಗ ಮಾರುತಿ ಸುಜುಕಿ ಡಿಜೈರ್ ಕಾರು ಆಟೋಮೊಬೈಲ್ ಜಗತ್ತಿನ ಸೇಲ್ಸ್ ಚಾರ್ಟ್‍ನಲ್ಲಿ ಅಗ್ರ ಸ್ಥಾನ ಮತ್ತು ಧೀರ್ಘಕಾಲದಲ್ಲಿ ಅದೇ ಸ್ಥಾನದಲ್ಲಿ ಉಳಿದಿದೆ. ಅದಲ್ಲದೇ ಹೊಸ ಡಿಜೈರ್ ಸೆಡಾನ್ ಕಾರುಗಳು ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಅತೀ ವೇಗದಲ್ಲಿ ಮಾರಾಟಗುಳ್ಳುತ್ತಿರುವ ಕಾರಾಗಿದೆ.
ಮಾರುತಿ ಸುಜುಕಿ ಸಂಸ್ಥೆಯು 17 ತಿಂಗಳಿನಲ್ಲಿ ಸುಮಾರು 3 ಲಕ್ಷಕ್ಕು ಹೆಚ್ಚು ಡಿಜೈರ್ ಕಾರುಗಳನ್ನು ಮಾರಾಟಗೊಳಿಸಿದೆ. ಅಂದರೆ ಪ್ರತೀ ತಿಂಗಳಿಗೆ ಸುಮಾರು 17,000 ಸಾವಿರದ ಡಿಜೈರ್ ಕಾರುಗಳು ಮಾರಟವಾಗುತ್ತಿದೆಯಂತೆ.
ಡಿಜೈರ್ ಕಾರುಗಳು ಸ್ವಂತ ಬಳಕೆಗೆ ಮಾತ್ರವಲ್ಲದೆ ಕ್ಯಾಬ್ ಆಪರೇಟರ್‍ಗಳು ಕೂಡಾ ಹೆಚ್ಚು ಬಳಸುವ ಕಾರಾಗಿದ್ದು, ಓಲಾ ಮತ್ತು ಊಬರ್ ಕ್ಯಾಬ್ ಸರ್ವಿಸ್‍ಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಸಂಸ್ಥೆಯು ಕೆಲ ದಿನಗಳ ನಂತರ ಎರಡನೆಯ ತಲೆಮಾರಿನ ಡಿಜೈರ್ ಟೂರ್ ಕಾರನ್ನು ಬಿಡುಗಡೆಗೊಳಿಸಿ ಕೇವಲ ಕ್ಯಾಬ್ ಚಾಲಕರಿಗೆ ಸಹಾಯವಾಗುವಂತೆ ತಯಾರು ಮಾಡಲಾಗಿದೆ.
ಇದಲ್ಲದೆ ಸಂಸ್ಥೆಯು ಮೂರನೆಯ ತಲೆಮಾರಿನ ಡಿಜೈರ್ ಕಾರುಗಳನ್ನು ಕೂಡ ಬಿಡುಗಡೆಗೊಳಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಮಾದರಿಗಳಲ್ಲಿ ಲಭ್ಯವಿದೆ. ಮೂರನೆಯ ತಲೆಮಾರಿನ ಡಿಜೈರ್ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 5.56 ಲಕ್ಷಕ್ಕೆ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ.
ಮೂರನೆಯ ತಲೆಮಾರಿನ ಡಿಸೈರ್ ಕಾರುಗಳು 1.2 ಲೀಟರ್ ಕೇ ಸಿರೀಸ್ ಪೆಟ್ರೋಲ್ ಎಂಜಿನ್ ಸಹಾಯದಿಂದ 82 ಬಿಹೆಚ್‍ಪಿ ಮತ್ತು 113ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, 5 ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಇನ್ನು ಡೀಸೆಲ್ ಮಾದರಿಯ ಡಿಜೈರ್ ಕಾರುಗಳು 1.3 ಲೀಟರ್ ಫಿಯೆಟ್ ಮಲ್ಟಿಜೆಟ್ ಎಂಜಿನ್ ಸಹಾಯದಿಂದ 74ಬಿಹೆಚ್‍ಪಿ ಮತ್ತು 190ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಪೆಟ್ರೋಲ್ ಮಾದರಿಗಳಂತೆಯೆ 5 ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‍ಟಿ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಡಿಜೈರ್ ಕಾರಿನ ಎಲ್ಲಾ ವೇರಿಯಂಟ್‍ಗಳಲ್ಲಿಯು ಡ್ಯುಯಲ್ ಏರ್‍ಬ್ಯಾಗ್ಸ್ ಮತ್ತು ಎಬಿಎಸ್ ಅನ್ನು ಅಳವಡಿಸಲಾಗಿದ್ದು, ಟಾಪ್ ಎಂಡ್ ವೇರಿಯಂಟ್ ಕಾರುಗಳು ಮಾರುತಿ ಸುಜುಕಿ ಸಂಸ್ಥೆಯ ಸ್ಮಾರ್ಟ್ ಫೋನ್ ಕನೆಕ್ಟಿವಿಯನ್ನು ಹೊಂದಿರುವ ಸ್ಮಾರ್ಟ್‍ಪ್ಲೇ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಪಡೆದುಕೊಂಡಿರಲಿದೆ.