ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆಯೊಂದಿಗೆ ಮುನ್ನುಗ್ಗುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಸದ್ಯದಲ್ಲೇ ಓಮ್ನಿ ವಾಹನ ಮಾರಾಟಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದು, 34 ವರ್ಷಗಳ ಜನಪ್ರಿಯತೆ ಹೊಂದಿರುವ ಓಮ್ನಿ ಉತ್ಪಾದನೆ ಮತ್ತು ಮಾರಾಟವನ್ನು ಮುಂದಿನ ಕೆಲವೇ ದಿನಗಳಲ್ಲಿ ಬಂದ್ ಮಾಡುವುದಾಗಿ ಹೇಳಿಕೊಂಡಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ದೇಶಿಯ ಮಾರುಕಟ್ಟೆಯಲ್ಲಿ ಈ ಹಿಂದೆ 1984ರಲ್ಲಿ ಬಿಡುಗಡೆಗೊಂಡಿದ್ದ ಓಮ್ನಿ ವಾಹನವು ಭಾರೀ ಜನಪ್ರಿಯತೆಯೊಂದಿಗೆ ಆಟೋ ಉದ್ಯಮದಲ್ಲಿ ಇಂದಿಗೂ ಬಹುಬೇಡಿಕೆ ವಾಹನವಾಗಿ ಮಾರಾಟಗೊಳ್ಳುತ್ತಿದ್ದು, ಇತ್ತೀಚೆಗೆ ಆಟೋ ಉದ್ಯಮದಲ್ಲಿ ಬದಲಾಗುತ್ತಿರುವ ಪ್ರಮುಖ ಬೆಳವಣಿಗೆಯಿಂದಾಗಿ ಓಮ್ನಿ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಗೆ ಕುತ್ತು ಬಂದಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಹೌದು, ದೇಶದಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ ಆಟೋ ಉದ್ಯಮದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಮಾರುತಿ ಸುಜುಕಿ ನಿರ್ಮಾಣದ ಪ್ರಮುಖ ವಾಹನಗಳಲ್ಲಿ ಕನಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸಂಸ್ಥೆಯು ಸದ್ಯ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ನಂ.1 ಸ್ಥಾನದಲ್ಲಿದ್ದು, ಮಾರಾಟಕ್ಕೆ ಲಭ್ಯವಿರುವ 15ಕ್ಕೂ ಹೆಚ್ಚು ಕಾರು ಉತ್ಪನ್ನಗಳಲ್ಲಿ ಬಹುತೇಕ ಮಾದರಿಗಳು ಜನಪ್ರಿಯತೆ ಸಾಧಿಸಿವೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಆದ್ರೆ ಕಾರುಗಳಲ್ಲಿನ ಸುರಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ಮಾರುತಿ ಸುಜುಕಿ ಸಂಸ್ಥೆಗೆ ಇದೀಗ ಹಿನ್ನೆಡೆಯಾಗಿದ್ದು, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಜನಪ್ರಿಯ ಕಾರುಗಳೇ ರೇಟಿಂಗ್‌ನಲ್ಲಿ ಸೊನ್ನೆ ಸುತ್ತಿವೆ ಎಂದ್ರೆ ನೀವು ನಂಬಲೇಬೇಕು.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಕೇಂದ್ರ ಸರ್ಕಾರವು ಮುಂಬರುವ 2019ರಿಂದ ಪ್ರತಿ ಕಾರು ಮಾದರಿಯಲ್ಲೂ ನಿರ್ದಿಷ್ಟ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಹೊಂದಿದ್ದರೇ ಮಾತ್ರವೇ ಕಾರು ಮಾರಾಟಕ್ಕೆ ಅವಕಾಶ ನೀಡುವ ಉದ್ದೇಶದಿಂದ ಇಂಡಿಯನ್ ಕ್ರ್ಯಾಶ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಮಾರುತಿ ಸುಜುಕಿಗೆ ಈಗಲೇ ತಳಮಳ ಶುರುವಾಗಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಕಳೆದ ತಿಂಗಳು ಹಿಂದಷ್ಟೆ ನಡೆದಿದ್ದ ಮಾರುತಿ ಸುಜುಕಿ ನಿರ್ಮಾಣದ 15 ಪ್ರಮುಖ ಕಾರುಗಳು ಈ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹತ್ತಕ್ಕೂ ಹೆಚ್ಚು ಕಾರು ಉತ್ಪನ್ನಗಳಲ್ಲಿ ಕನಿಷ್ಠ ಮಟ್ಟದ ಸುರಕ್ಷತೆ ಇಲ್ಲದಿರುವುದು ಖರೀದಿಗೆ ಯೋಗ್ಯವಲ್ಲದ ಎಂಬುವುದು ಸಾಬೀತಾಗಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಕಾರುಗಳು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಮಾದರಿ ಎಂದು ಕರೆಯಲಾಗುತ್ತದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಇದರಲ್ಲಿ ಮಾರುತಿ ಸುಜುಕಿ ನಿರ್ಮಾಣದ ಸೆಲೆರಿಯೊ, ಇಗ್ನಿಸ್, ಸ್ವಿಫ್ಟ್, ಡಿಜೈರ್, ಎರ್ಟಿಗಾ, ಬಲೆನೊ, ವಿಟಾರಾ ಬ್ರೆಝಾ, ಸಿಯಾಜ್ ಮತ್ತು ಎಸ್-ಕ್ರಾಸ್ ಕಾರುಗಳು ಮಾತ್ರವೇ ಉತ್ತಮವಾದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಇನ್ನುಳಿದ ಆಲ್ಟೊ, ವ್ಯಾಗನ್ ಆರ್, ಒಮ್ನಿ, ಇಕೊ ಮತ್ತು ರಫ್ತು ವಾಹನ ಮಾದರಿಯಾದ ಜಿಪ್ಸಿ ಕಾರು ರೇಟಿಂಗ್ ಪಾಯಿಂಟ್‌ನಲ್ಲಿ ಸೊನ್ನೆ ಪಡೆದಿರುವುದು ಭಾರೀ ಚರ್ಚೆಗೆ ಕಾರಣವಾಗಿವೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ವಾಸ್ತಾವವಾಗಿ ಸೊನ್ನೆ ರೇಟಿಂಗ್ ಹೊಂದಿರುವ ಕಾರುಗಳನ್ನು ಮಾರಾಟ ಮಾಡಲು ವಿದೇಶಿ ಮಾರುಕಟ್ಟೆಗಳಲ್ಲಿ ಅನುಮತಿಯೇ ಇಲ್ಲದಿರುವ ಸಂದರ್ಭದಲ್ಲಿ ಮಾರುತಿ ಸುಜುಕಿ ಸಂಸ್ಥೆಯು ಮಾತ್ರ ಭಾರತೀಯ ಮಾರುಕಟ್ಟೆಯಲ್ಲಿ ಆಲ್ಟೊ, ವ್ಯಾಗನ್ ಆರ್ ಕಾರುಗಳನ್ನ ಹಾಟ್ ಚಿಪ್ಸ್‌ನಂತೆ ಮಾರಾಟ ಮಾಡುತ್ತಿರುವುದು ದೃಷ್ಠಕರ ಸಂಗತಿ ಅಂದ್ರೆ ತಪ್ಪಾಗುದಿಲ್ಲ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಕನಿಷ್ಠ ಮಟ್ಟದ ಸುರಕ್ಷೆತೆಯನ್ನು ನೀಡಲು ಹಿಂದೆ ಮುಂದೆ ನೋಡುವ ಮಾರುತಿ ಸುಜುಕಿಗೆ ಇದೀಗ ಸಂಕಷ್ಟ ಎದುರಾಗಿದ್ದು, 2019ರಿಂದ ಜಾರಿಗೆ ಬರಲಿರುವ ಹೊಸ ಕಾಯ್ದೆಯಿಂದ ಸೊನ್ನೆ ರೇಟಿಂಗ್ ಪಡೆದಿರುವ ಕಾರುಗಳು ಮೂಲೆಗುಂಪಾಬೇಕಾದ ಅನಿವಾರ್ಯತೆಗಳಿವೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಇಲ್ಲವಾದ್ರೆ, ಗುಣಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಅಳವಡಿಸಿದ ನಂತರವೇ ಮಾರಾಟ ಮಾಡಬಹುದಾದ ಅವಕಾಶವಿದ್ದು, ಇದುವರೆಗೆ ಆಲ್ಟೊ, ವ್ಯಾಗನ್ ಆರ್, ಒಮ್ನಿ, ಇಕೊ ಖರೀದಿ ಮಾಡಿರುವ ಗ್ರಾಹಕರ ಪರಿಸ್ಥಿತಿ ಉಹಿಸಲು ಅಸಾಧ್ಯ.

MOST READ: ಇನ್ಮುಂದೆ ನೀವು ಹಿಗೆಲ್ಲಾ ಮಾಡಿದ್ರೆ ವಾಹನ ವಿಮೆ ಮೊತ್ತದ ಕಥೆ ಅಷ್ಟೇ..!

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಯಾಕೆಂದ್ರೆ ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಯಾವುದೇ ಕನಿಷ್ಠ ಮಟ್ಟದ ಸುರಕ್ಷೆ ಇಲ್ಲದಿರುವ ಕಾರುಗಳಿಂದ ಅಪಘಾತದ ತೀವ್ರತೆ ಮತ್ತಷ್ಟು ಏರಿಕೆಯಾಗಲಿದ್ದು, ಇದೇ ಕಾರಣಕ್ಕೆ ಕಠಿಣ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಕನಿಷ್ಠ ಸುರಕ್ಷಾ ಸೌಲಭ್ಯಗಳನ್ನು ಅಳವಡಿಸಿ ಮಾರಾಟ ಮಾಡಿ ಇಲ್ಲವೇ ಕಳಪೆ ಗುಣಮಟ್ಟದ ಕಾರುಗಳನ್ನು ವಾಪಸ್ ಪಡೆಯಿರಿ ಎಂದು ಕಾರು ಉತ್ಪಾದನಾ ಸಂಸ್ಥೆಗಳಿಗೆ ಖಡಕ್ ವಾರ್ನ್ ಮಾಡಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಹೀಗಾಗಿಯೇ ಮಹತ್ವದ ನಿರ್ಧಾರಕ್ಕೆ ಬಂದಿರುವ ಮಾರುತಿ ಸುಜುಕಿ ಸಂಸ್ಥೆಯು ಡೆಡ್ ಲೈನ್‌ಗೂ ಮುನ್ನವೇ ಪ್ರತಿ ಕಾರಿನಲ್ಲೂ ಗುಣಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಅಳವಡಿಸುವ ನಿರ್ಧಾರಕ್ಕೆ ಬಂದಿದ್ದು, ಗ್ರಾಹಕರ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಒಪ್ಪಿಗೆ ಸೂಚಿಸಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಓಮ್ನಿಯಲ್ಲಿ ಹೊಸ ತಂತ್ರ ಅಳವಡಿಕೆ ಅಸಾಧ್ಯ..!

ಮಾರುತಿ ಸುಜುಕಿ ಸಂಸ್ಥೆಯು ಸದ್ಯ ಸುರಕ್ಷತೆಯಲ್ಲಿ ಸೊನ್ನೆ ಸುತ್ತಿರುವ ವಾಹನಗಳಲ್ಲಿ ಹೊಸ ಸುರಕ್ಷಾ ಸೌಲಭ್ಯಗಳನ್ನು ಒದಗಿಸಿ ಮಾರಾಟ ಮಾಡಲು ಸಾಧ್ಯವಾದ್ರು, ಓಮ್ನಿ ವಾಹನಗಳಲ್ಲಿ ಈ ಅವಕಾಶ ಇಲ್ಲದಿರುವುದು ಪ್ರಮುಖ ವಿಚಾರವಾಗಿದೆ.

MOST READ: ದೀಪಾವಳಿ ಹಬ್ಬಕ್ಕಾಗಿ ಉದ್ಯೋಗಿಗಳಿಗೆ 1600 ಕಾರುಗಳನ್ನು ಗಿಫ್ಟ್ ನೀಡಿದ ಉದ್ಯಮಿ..!

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಯಾಕೆಂದ್ರೆ ಓಮ್ನಿ ವಾಹನದಲ್ಲಿ ಮುಂಭಾಗದ ವಿನ್ಯಾಸವನ್ನು ಸುರಕ್ಷಾ ದೃಷ್ಠಿಯಿಂದ ನೋಡುವುದಾದರೇ ಹೆಚ್ಚು ಅಪಾಯಕಾರಿ ಡಿಸೈನ್ ಹೊಂದಿದ್ದು, ಚಾಲಕ ಸೀಟು ಮತ್ತು ವಾಹನ ಫ್ರಂಟ್ ಗ್ರೀಲ್ ನಡುವಿನ ಅಂತರ ಅತಿ ಕಡಿಮೆ ಇರುವುದು ಅಪಘಾತದ ವೇಳೆ ಹೆಚ್ಚು ಹಾನಿಉಂಟು ಮಾಡುತ್ತವೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಹೀಗಾಗಿ ಹೊಸ ಸುರಕ್ಷಾ ಸೌಲಭ್ಯಗಳಾದ ಏರ್‌ಬ್ಯಾಗ್, ಎಬಿಎಸ್, ಇಬಿಡಿ ಸೇರಿಸಿದರು ಸಹ ಮುಂಭಾಗದ ವಿನ್ಯಾಸ ಸರಿಇಲ್ಲದಿರುವುದು ಮಾರುತಿ ಸಂಸ್ಥೆಗೆ ಸಂಕಷ್ಟ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಓಮ್ನಿ ಉತ್ಪಾದನೆ ಮತ್ತು ಮಾರಾಟಕ್ಕೆ ಬ್ರೇಕ್ ಹಾಕಿ ಮತ್ತೊಂದು ಜನಪ್ರಿಯ ಮಾದರಿಯಾದ ಇಕೋ ವಾಹನದ ಮೇಲೆ ಹೆಚ್ಚಿನ ಒತ್ತು ನೀಡಲು ಮುಂದಾಗಿದೆ.

ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಈ ಬಗ್ಗೆ ಮಾರುತಿ ಸುಜುಕಿಯ ಸಂಸ್ಥೆಯ ಚೇರ್‌ಮನ್ ಆರ್.ಸಿ.ಭಾರ್ಗವ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ ಓಮ್ನಿ ಮಾರಾಟಕ್ಕೆ ಬ್ರೇಕ್ ಅನಿವಾರ್ಯತೆ ಇದೆ ಎಂದಿದ್ದಾರೆ. ಇದರ ಜೊತೆಗೆ ಆಲ್ಟೊ 800 ಕೂಡಾ ಇದೇ ಸಂಕಷ್ಟದಲ್ಲಿದ್ದು, ಆಲ್ಟೊ ಬಂದ್ ಮಾಡುವ ಬಗ್ಗೆಯು ಮುಂದಿನ ಕೆಲವೇ ದಿನಗಳಲ್ಲಿ ಸ್ಪಷ್ಟನೆ ಸಿಗಲಿದೆ ಎನ್ನಬಹುದು. ಹಾಗಾದ್ರೆ ಕೇಂದ್ರ ಸರ್ಕಾರದ ಹೊಸ ನಿರ್ಧಾರದ ಬಗ್ಗೆ ನಿಮ್ಮಅಭಿಪ್ರಾಯಗಳನ್ನು ಕಮೆಂಟ್ ಮಾಡಿ.

More from DriveSpark

ಭಾರತದಲ್ಲಿ ಬಿಡುಗಡೆಯಾದ ಹೊಸ ತಲೆಮಾರಿನ ಸ್ಯಾಂಟ್ರೋ ಕಾರಿನ ಫೋಟೋ ಗ್ಯಾಲರಿ..!

Article Published On: Friday, October 26, 2018, 17:48 [IST]
English summary
Maruti Omni To Be Discontinued In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+