ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ನಿರ್ಮಾಣದ ಹೊಸ ಜನರೇಷನ್ ಎರ್ಟಿಗಾ ಎಂಪಿವಿ ಕಾರು ಇದೇ ತಿಂಗಳು 21ರಂದು ಬಿಡುಗಡೆಯಾಗುತ್ತಿದ್ದು, ಇಷ್ಟು ದಿನಗಳ ಕಾಲ ಹೊಸ ಕಾರು ನೆಕ್ಸಾ ಶೋರೂಂನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ ಎಂದಿದ್ದ ಮಾರುತಿ ಸುಜುಕಿಯು ಇದೀಗ ತನ್ನ ಯೋಜನೆಯನ್ನು ಬದಲಾಯಿಸಲು ಚಿಂತನೆ ನಡೆಸಿದೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಸದ್ಯ ಮಾರುತಿ ಸುಜುಕಿ ನಿರ್ಮಾಣದ ಕಾರು ಎರಡು ವಿಧದಲ್ಲಿ ಕಾರು ಮಾರಾಟ ಪ್ರಕ್ರಿಯೆಯನ್ನು ಹೊಂದಿದ್ದು, ಸಾಮಾನ್ಯ ಮಾದರಿಯ ಕಾರುಗಳನ್ನು ಮಾರುತಿ ಸುಜುಕಿ ಅರೆನಾ ಮತ್ತು ಪ್ರೀಮಿಯಂ ಕಾರುಗಳನ್ನು ನೆಕ್ಸಾ ಶೋರೂಂನಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಪ್ರೀಮಿಯಂ ವೈಶಿಷ್ಟ್ಯತೆಯ ಹೊಸ ಎರ್ಟಿಗಾ ಕಾರನ್ನು ಮಾತ್ರ ನೆಕ್ಸಾ ಬದಲಾಗಿ ಅರೆನಾ ಶೋರೂಂನಲ್ಲೇ ಮಾರಾಟ ಮಾಡುವ ಸಾಧ್ಯತೆಗಳಿವೆಯೆಂತೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಇದಕ್ಕೆ ಕಾರಣ, ಈಗಾಗಲೇ ಸುಮಾರು 10 ಸಾವಿರಕ್ಕೂ ಹೆಚ್ಚು ಗ್ರಾಹಕರು ಹೊಸ ಎರ್ಟಿಗಾ ಬಿಡುಗಡೆಗೂ ಮುನ್ನವೇ ಖರೀದಿಗಾಗಿ ಮುಂಗಡ ಪಾವತಿಸಿದ್ದು, ಇದರಲ್ಲಿ ಶೇ.80ಕ್ಕೂ ಹೆಚ್ಚು ಗ್ರಾಹಕರು ನೆಕ್ಸಾ ಬದಲಿಗೆ ಅರೆನಾ ಶೋರೂಂ ಮೂಲಕವೇ ಹಣ ಪಾವತಿ ಮಾಡಿರುವುದೇ ಮಾರುತಿ ಸುಜುಕಿ ಈ ನಿರ್ಧಾರಕ್ಕೆ ಬಂದಿದೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಜೊತೆಗೆ ದೇಶದ ಪ್ರಮುಖ ನಗರಗಳಲ್ಲಿ ನೆಕ್ಸಾ ಶೋರೂಂಗಳು ಇದ್ದರೂ ಕೂಡಾ ಅರೆನಾ ಶೋರೂಂ ಜಾಲವು ಹೆಚ್ಚು ಜನಪ್ರಿಯತೆ ಹೊಂದಿರುವುದು ಗ್ರಾಹಕರ ಸೇವೆಗಳಿಗೆ ಅನುಕೂಲಕವಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಇನ್ಮುಂದೆ ಎರ್ಟಿಗಾ ಕಾರು ಖರೀದಿ ಮತ್ತು ಸೇವೆಗಳು ಅರೆನಾ ಶೋರೂಂನಲ್ಲೇ ಲಭ್ಯವಿರಲಿವೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಕಾರು ಖರೀದಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್

ಇನ್ನು ಎರ್ಟಿಗಾ ಕಾರು ಈ ಬಾರಿ ಹಲವು ಹೊಸ ವಿನ್ಯಾಸವನ್ನು ಪಡೆದುಕೊಂಡಿದ್ದು, ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಕಾರಿನ ಸೈಡ್‍ ಪ್ರೋಫೈಲ್‌ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ ಮತ್ತು 15 ಇಂಚಿನ ಅಲಾಯ್ ಚಕ್ರಗಳನ್ನು ನೀಡಲಾಗಿದೆ. ಇನ್ನು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದ್ದು, ಒಟ್ಟಾರೆಯಾಗಿ ಈ ಕಾರು ಎಂಪಿವಿ ಕಾರಿಗಿಂತಲೂ ಇದು ಎಸ್‍‍ಯುವಿ ಮಾದರಿಯ ವಿನ್ಯಾಸವನ್ನು ಪಡೆದಿರಲಿದೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ವಿಶಾಲವಾದ ಆಕಾರ

ಹಳೆಯ ಮಾದರಿಯ ಎರ್ಟಿಗಾ ಕಾರಿಗೆ ಹೋಲಿಕೆ ಮಾಡಿದ್ದಲ್ಲಿ ಬಿಡುಗಡೆಗೊಳ್ಳಲಿರುವ ಹೊಸ ಎರ್ಟಿಗಾ ಕಾರು 110-ಎಂಎಂ ಉದ್ದ, 50-ಎಂಎಂ ಅಗಲ ಮತ್ತು 5-ಎಂಎಂ ಎತ್ತರವನ್ನು ಅಧಿಕ ಸುತ್ತಳತೆಯನ್ನು ಪಡೆದುಕೊಂಡಿದ್ದು, ಈ ಬದಲಾವಣೆಯು ಮೂರನೆಯ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲಕರವಾಗಲಿದೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಹೊಸ ಇಂಟೀರಿಯರ್

ಎರ್ಟಿಗಾ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‍‍ಬೋರ್ಡ್ ಅನ್ನು ಅಳವಡಿಸಲಾಗಿದ್ದು, ಹೊಸ ಸಿಯಾಜ್ ಕಾರಿನಲ್ಲಿ ಒದಗಿಸಲಾಗಿರುವ ಡ್ಯುಯಲ್ ಟೋನ್ ಡ್ಯಾಶ್‍ಬೋರ್ಡ್ ಮತ್ತು ವುಡನ್ ಟ್ರಿಮ್ ಅನ್ನು ನೀಡಲಾಗಿದೆ. ಇನ್ನು ಕಾರಿನ ಟಾಪ್ ಎಂಡ್ ಟ್ರಿಮ್‍‍ನಲ್ಲಿ ಲೆದರ್ ಸೀಟ್‍‍ಗಳನ್ನು ನೀಡುವ ಭರವಸೆ ಇದೆ ಎನ್ನಲಾಗಿದೆ.

MOST READ: ಹರಾಜಿಗಿಡಲಾಗಿರುವ ಕಾಶ್ಮೀರ ಮಹಾರಾಜ ಹರಿ ಸಿಂಗ್ ಕಾರಿನ ಬೆಲೆ ಎಷ್ಟು ಗೊತ್ತಾ?

ನೆಕ್ಸಾ ಡೀಲರ್ಸ್

ಕಾರಿನಲ್ಲಿರುವ ಪ್ರೀಮಿಯಂ ಸೌಲಭ್ಯಗಳು

ಈ ಹಿಂದೆ ಬಿಡುಗಡೆಗೊಂಡಿದ್ದ ಡಿಜೈರ್ ಕಾರಿನಲ್ಲಿ ಬಳಸಲಾದ 6.8-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಸ ಎರ್ಟಿಗಾ ಕೂಡಾ ಪಡೆದಿದ್ದು, ಅಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ.

ನೆಕ್ಸಾ ಡೀಲರ್ಸ್

ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳುಳ್ಳ ಲೆದರ್‍‍ನಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಅನ್ನು ಜೋಡಿಸಲಾಗಿದೆ.

MOST READ: ದೀಪಾವಳಿ ಹಬ್ಬಕ್ಕಾಗಿ ಉದ್ಯೋಗಿಗಳಿಗೆ 1600 ಕಾರುಗಳನ್ನು ಗಿಫ್ಟ್ ನೀಡಿದ ಉದ್ಯಮಿ..!

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಎಂಪಿವಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ಸ್ ಅನ್ನು ಒದಗಿಸಲಾಗಿದೆ.

ನೆಕ್ಸಾ ಡೀಲರ್ಸ್ ಬಳಿ ಹೊಸ ಎರ್ಟಿಗಾ ಮಾರಾಟ ಮಾಡದಿರಲು ನಿರ್ಧರಿಸಿದ ಮಾರುತಿ ಸುಜುಕಿ

ಎಂಜಿನ್ ಸಾಮರ್ಥ್ಯ

ಮಾಹಿತಿಗಳ ಪ್ರಕಾರ ಹೊಸ ಎರ್ಟಿಗಾ ಕಾರುಗಳಲ್ಲಿ ಈ ಹಿಂದಿನ 1.3-ಲೀಟರ್ ಡೀಸೆಲ್ ಎಂಜಿನ್ ಬದಲಾಗಿ 1.5-ಲೀಟರ್ ಡೀಸೆಲ್ ಎಂಜಿನ್ ನೀಡಲಾಗಿದೆ ಎನ್ನಲಾಗಿದ್ದು, ಹಾಗೆಯೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಕೂಡಾ ಖರೀದಿಗೆ ಲಭ್ಯವಿರಲಿದೆ. ವಿಶೇಷ ಅಂದ್ರೆ, ಎರಡು ಮಾದರಿಯ ಎಂಜಿನ್‍ಗಳನ್ನು ಸಹ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಹೈಬ್ರಿಡ್ ಸಿಸ್ಟಮ್ ಅನ್ನು ಒದಗಿಸುವುದು ಖಚಿತವಾಗಿದೆ.

Article Published On: Monday, November 5, 2018, 10:58 [IST]
English summary
Maruti Suzuki Ertiga Not To Be Sold Through The Nexa Dealership.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+