ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ತನ್ನ ವಾಹನಗಳಿಂದ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವ ಮಾರುತಿ ಸುಜುಕಿ ಸಂಸ್ಥೆಯು ಈಗ ಮತ್ತೊಂದು ಹೆಗ್ಗಳಿಕೆಗೆ ಕಾರಣವಾಗಿದೆ.

By Rahul Ts

ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ತನ್ನ ವಾಹನಗಳಿಂದ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವ ಮಾರುತಿ ಸುಜುಕಿ ಸಂಸ್ಥೆಯು ಈಗ ಮತ್ತೊಂದು ಹೆಗ್ಗಳಿಕೆಗೆ ಕಾರಣವಾಗಿದೆ. 2018ರ ನ್ಯೂಯಾರ್ಕ್ ಮೋಟಾರ್ ಶೋನಲ್ಲಿ ಅರ್ಬನ್ ಕಾರುಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ತನ್ನ ಹಳೆಯ ಮಾದರಿಗಿಂತ ಹೊಸ ವೈಶಿಷ್ಟ್ಯತೆಗಳನ್ನು ಪಡೆದ ಸ್ವಿಫ್ಟ್ ಕಾರು 2018ರ ದೆಹಲಿಯ ಆಟೋ ಎಕ್ಸ್ ಪೋ ಮೇಳದಲ್ಲಿ ಬಿಡುಗಡೆಗೊಂಡಿದ್ದು, ಕಳೆದ ತಿಂಗಳು ಸುಮಾರು 75,000 ಕ್ಕಿಂತ ಹೆಚ್ಚು ಕಾರುಗಳು ಮಾರಾಟಗೊಂಡು ಹೊಸ ದಾಖಲೆ ಸೃಷ್ಠಿ ಮಾಡಿತ್ತು.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಈಗ ಮತ್ತೆ 2018ರ ನ್ಯೂಯಾರ್ಕ್ ಆಟೋ ಶೋನಲ್ಲಿ ಅರ್ಬನ್ ಕಾರುಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದ್ದು, ಫೋಕ್ಸ್‌ವ್ಯಾಗನ್ ಸಂಸ್ಥೆಯು ಪೋಲೊ ಕಾರುಗಳ ಮೂಲಕ ಪ್ರಥಮ ಸ್ಥಾನವನ್ನು ಪಡೆದಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಐದನೇ ತಲೆಮಾರಿನ ಹೆರ್ಟೆಕ್ಟ್ (Heartect) ತಳಹದಿಯಲ್ಲಿ ನೂತನ ಸ್ವಿಫ್ಟ್ ನಿರ್ಮಾಣ ಮಾಡಲಾಗಿದ್ದು, ಇದು ಹೆಚ್ಚು ಶಕ್ತಿಶಾಲಿ, ಬಿಗಿತವನ್ನು ಪಡೆಯಲಿದೆ. ಜೊತೆಗೆ ಅತ್ಯುತ್ತಮ ಚಾಲನಾ ಅನುಭವದೊಂದಿಗೆ ಗರಿಷ್ಠ ಇಂಧನ ಕ್ಷಮತೆಯನ್ನು ಕಾಪಾಡಿಕೊಳ್ಳಲಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಎಂಜಿನ್ ಸಾಮರ್ಥ್ಯ

ಹೊಸ ಸ್ವಿಫ್ಟ್ ವಿನೂತನ ಕಾರುಗಳು 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, ಪೆಟ್ರೋಲ್ ಆವೃತ್ತಿಗಳು 83 ಬಿಎಚ್‌ಪಿ ಮತ್ತು 115ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಡೀಸೆಲ್ ಆವೃತ್ತಿಯು 74 ಬಿಎಚ್‌ಪಿ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸುತ್ತವೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಜೊತಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದ್ದು, ಡಿಜೈರ್ ಮತ್ತು ಬಲೆನೊ ಕಾರುಗಳಿಂತಲೂ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಕಾರಿನ ಒಳ ಮತ್ತು ಹೊರ ವಿನ್ಯಾಸ ಸ್ಪೋರ್ಟಿ ಇಂಟಿರಿಯರ್ ಲುಕ್ ಪಡೆದಿರುವ ಹೊಸ ಸ್ವಿಫ್ಟ್ ಕಾರುಗಳು ಅತ್ಯಾಕರ್ಷಕ ಹೆಕ್ಷಾಗೊನಲ್ ಗ್ರಿಲ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ನ್ಯೂ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಎಲ್‌ಇಡಿ ಸಿಗ್ನಿಚರ್ ಟೈಲ್ ಲೈಟ್ ಕೂಡಾ ನೀಡಲಾಗಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಇನ್ನು ಸ್ಮಾರ್ಟ್ ಕನೆಕ್ಟಿವಿಟಿಗೂ ಹೊಸ ಕಾರುಗಳಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 7 ಇಂಚಿನ ಇನ್ಪೋಟೈನ್‌ಮೆಂಟ್, ಆಪಲ್ ಕಾರ್ ಪ್ಲೇ, ಅಂಡ್ರಾಯ್ಡ್ ಆಟೋ, ಮಿರರ್ ಲಿಂಕ್ ಮತ್ತು ಕ್ಲೈಮೆಟ್ ಕಂಟ್ರೋಲರ್ ಸಿಸ್ಟಂ ಒದಗಿಸಲಾಗಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಸುರಕ್ಷಾ ಸಾಧನಗಳು ಎಂಜಿನ್ ಸ್ಟಾರ್ಟ್ ಆ್ಯಂಡ್ ಸ್ಟಾಪ್ ಬಟನ್ ಒದಗಿಸಲಾಗಿದ್ದು, ಆಟೋ ಹೆಡ್‌ಲ್ಯಾಂಪ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಕೀ ಲೇಸ್ ಎಂಟ್ರಿ, ಎಲೆಕ್ಟ್ರಿಕ್ ಆಪರೇಟಿಂಗ್ ರಿಯರ್ ವ್ಯೂವ್ ಮಿರರ್, ಎಬಿಎಸ್ ಸೇರಿದಂತೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಸೌಲಭ್ಯವಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

2018ರ ಸ್ವಿಫ್ಟ್ ಕಾರಿನ ಬೆಲೆಗಳನ್ನು ದೆಹಲಿ ಎಕ್ಸ್ ಶೋರಂ ಪ್ರಕಾರ ಆರಂಭಿಕ ಕಾರು ಮಾದರಿಯನ್ನು ರೂ. 4.99 ಲಕ್ಷಕ್ಕೆ ಮತ್ತು ಟಾಪ್ ಕಾರು ಮಾದರಿಯನ್ನು ರೂ. 8.39 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಥರ್ಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಹೊಸ ಕಾರುಗಳನ್ನು ಅಭಿವೃದ್ಧಿ ಮಾಡಿದೆ.

ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್..!!

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

1. ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಮರಳಿ ಬಂದ ಮಾರುತಿ ಓಮ್ನಿ ಮತ್ತು ಇಕೋ..

2. ಇನ್ಮುಂದೆ ರಾಂಗ್ ರೂಟ್‌ನಲ್ಲಿ ಹೋದ್ರೆ ನಿಮ್ಮ ವಾಹನಗಳ ಕಥೆ ಅಷ್ಟೇ...

3. ರಾಜಧಾನಿಯಲ್ಲಿ ಇನ್ಮುಂದೆ ವಾಹನಗಳಿಗೆ ಬಿಎಸ್ 6 ಇಂಧನ ಪೂರೈಕೆ...

4. ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..

5. ವಾಹನ ಪ್ರಿಯರಿಗೆ ಸಿಹಿ ಸುದ್ಧಿ ನೀಡಿದ ಸಾರಿಗೆ ಇಲಾಖೆ..

Most Read Articles

Kannada
Read more on maruti suzuki swift
English summary
World Car Of The Year 2018 — Suzuki Swift Is The Runner-Up In The Urban Car Category.
Story first published: Friday, March 30, 2018, 13:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X