ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಸಂಸ್ಥೆಯು ತನ್ನ ಉತ್ಪನ್ನಗಳ ಮಾರಾಟದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದೆ.

By Praveen Sannamani

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಸಂಸ್ಥೆಯು ತನ್ನ ಉತ್ಪನ್ನಗಳ ಮಾರಾಟದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದ್ದು, ವಿಟಾರಾ ಬ್ರೆಝಾ ಮಾರಾಟದಲ್ಲಿನ ಏರಿಕೆಯು ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

2016ರ ಮಾರ್ಚ್‌ನಲ್ಲಿ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದ್ದ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು 28 ತಿಂಗಳ ಅವಧಿಯಲ್ಲಿ ಬರೋಬ್ಬರಿ 3 ಲಕ್ಷ ಕಾರುಗಳು ಮಾರಾಟಗೊಂಡಿದ್ದು, ಎಸ್‌ಯುವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ಮೂಲಕ ಸದ್ಯ ಭಾರತೀಯ ಆಟೋ ಉದ್ಯಮದಲ್ಲಿ ಅಗ್ರಸ್ಥಾನದತ್ತ ಹೆಜ್ಜೆಹಾಕುತ್ತಿದೆ.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಈ ಮೂಲಕ 2018ರ ಮೊದಲಾರ್ಧದಲ್ಲಿ ಅತಿ ಹೆಚ್ಚು ಮಾರಾಟಗೊಂಡ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ವಿಟಾರಾ ಬ್ರೆಝಾ ಕಾರುಗಳು ಬಿಡುಗಡೆಗೊಂಡ ಮೊದಲ ದಿನದಿಂದಲೂ ಈ ತನಕ ಒಂದೇ ಪ್ರಮಾಣದ ಬೇಡಿಕೆಯನ್ನು ಕಾಯ್ದುಕೊಂಡು ಬಂದಿರುವುದು ಅದರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಹೀಗಾಗಿ 2016ರ ಮಾರ್ಚ್‌ನಿಂದ ಇದುವರೆಗೆ ಪ್ರತಿ ತಿಂಗಳು ಸರಾಸರಿ 11 ಸಾವಿರ ಕಾರುಗಳು ಮಾರಾಟಗೊಂಡಿದ್ದು, ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗರಿಷ್ಠವಾಗಿ 15,243 ಕಾರುಗಳು ಮಾರಾಟಗೊಳ್ಳುವ ಮೂಲಕ ಹೊಸ ದಾಖಲೆಯನ್ನು ಹುಟ್ಟುಹಾಕಿತ್ತು.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಇದಕ್ಕೆಲ್ಲಾ ಪ್ರಮುಖ ಕಾರಣ ಏನೆಂದರೆ ಕೈಗೆಟುಕುವ ಬೆಲೆಗಳಲ್ಲಿ ಲಭ್ಯವಿರುವ ಜನಪ್ರಿಯ ಎಸ್‌ಯುವಿಗಳಲ್ಲಿ ವಿಟಾರಾ ಬ್ರೆಝಾ ಮುಂಚೂಣಿಯಲ್ಲಿದ್ದು, ಮಧ್ಯಮ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿರುವ ಕಾರು ಮಾದರಿ ಇದಾಗಿದೆ.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಜೊತೆಗೆ ಮೊದಲ ಬಾರಿಗೆ ಬಿಡುಗಡೆಯಾದಾಗ ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯ ಹೊಂದಿದ್ದ ವಿಟಾರಾ ಬ್ರೇಝಾ ಕಾರುಗಳು ಇದೀಗ ಎಎಂಟಿ (ಆಟೋಮ್ಯಾಟಿಕ್ ಗೇರ್‌ಬಾಕ್ಸ್) ಸೌಲಭ್ಯದೊಂದಿಗೆ ಬಿಡುಗಡೆಯಾಗಿದ್ದು, ದೆಹಲಿ ಎಕ್ಸ್‌ಶೋರಂ ಪ್ರಕಾರ ಎಎಂಟಿ ವರ್ಷನ್ ವಿಟಾರಾ ಬ್ರೇಝಾ ಕಾರುಗಳನ್ನು ಆರಂಭಿಕವಾಗಿ ರೂ.8.54 ಲಕ್ಷಕ್ಕೆ ಬಿಡುಗಡೆಗೊಳಿಸಲಾಗಿದೆ.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಎಂಜಿನ್ ಸಾಮರ್ಥ್ಯ

ಡಿಸೇಲ್ ಎಂಜಿನ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ವಿಟಾರಾ ಬ್ರೇಝಾ ಕಾರುಗಳು 1.3-ಲೀಟರ್ ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 88-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ವರ್ಷನಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ಲೀಟರ್ ಡಿಸೇಲ್‌ಗೆ 24.3 ಮೈಲೇಜ್ ನೀಡಬಲ್ಲವು.

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಹೀಗಾಗಿ ತಾಂತ್ರಿಕವಾಗಿಯೂ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಉತ್ತಮ ಗುಣಮಟ್ಟ ಹೊಂದಿರುವ ವಿಟಾರಾ ಬ್ರೇಝಾ ಕಾರುಗಳು ಬೆಲೆ ವಿಚಾರದಲ್ಲೂ ಗ್ರಾಹಕರನ್ನು ಸೆಳೆಯದೇ ಇರಲಾರವು.

Source:economictimes

ಕಡಿಮೆ ಅವಧಿಯಲ್ಲಿ ದಾಖಲೆಯ ಮಾರಾಟ ಕಂಡ ಮಾರುತಿ ಸುಜುಕಿ ವಿಟಾರಾ ಬ್ರೆಝಾ..!!

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಉತ್ತಮ ಕಾರ್ಯನಿರ್ವಹಣೆ ಹಾಗೂ ಬ್ರ್ಯಾಂಡ್ ಮೌಲ್ಯದೊಂದಿಗೆ ಮಾರುಕಟ್ಟೆಯಲ್ಲಿ ಅತಿಹೆಚ್ಚು ಜನಪ್ರಿಯತೆ ಪಡೆಯುತ್ತಿರುವ ವಿಟಾರಾ ಬ್ರೆಝಾ ಹಲವು ವಿಶೇಷತೆ ಹೊಂದಿದೆ. ಹೀಗಾಗಿ ಟಾಟಾ ಮೋಟಾರ್ಸ್ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಹ್ಯುಂಡೈ ಕ್ರೇಟಾ ಎಸ್‌ಯುವಿ ಆವೃತ್ತಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿದೆ.

Most Read Articles

Kannada
Read more on maruti suzuki suv
English summary
Maruti Suzuki Vitara Brezza clocks fastest 3 lakh sales.
Story first published: Tuesday, July 3, 2018, 19:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X