ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಭಾರತದ ನಂ.1 ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆಯಾದ ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ವಿವಿಧ ಮಾದರಿಯ ವಾಹನಗಳ ಮೂಲಕ ಹೊಸ ದಾಖಲೆಗೆ ಕಾರಣವಾಗಿದ್ದು, ಇದೀಗ ಭವಿಷ್ಯದ ವಾಹನ ಮಾದರಿಗಳಾದ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ಕಾರುಗಳ ಉತ್ಪಾದನೆ ಮೇಲೆ ವಿಶೇಷ ಆಸಕ್ತಿ ತೊರುತ್ತಿದೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಮಾರುತಿ ಸುಜುಕಿ ತಮ್ಮ ಮೊದಲ ಎಲೆಕ್ಟ್ರಿಕ್ ಕಾರನ್ನು 2020ರ ವೇಳೆಗೆ ಬಿಡುಗಡೆಗೊಳಿಸುವುದರ ಬಗ್ಗೆ ಸುಳಿವು ನೀಡಿದ್ದು, ಸಂಸ್ಥೆಯು ತನ್ನ ಪ್ರಥಮ ಎಲೆಕ್ಟ್ರಿಕ್ ಆವೃತ್ತಿಯಾದ ವ್ಯಾಗನ್ ಆರ್ ಕಾರನ್ನು ಬಹಿರಂಗಗೊಳಿಸಿರುವುದಲ್ಲದೇ ಇದೀಗ ಟೆಸ್ಟಿಂಗ್ ಪ್ರಕ್ರಿಯೆಗೂ ಅಧಿಕೃತವಾಗಿ ಚಾಲನೆ ನೀಡಿದೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಮಾರುತಿ ಸುಜುಕಿ ಸಂಸ್ಥೆಯ ಇ-ವರ್ಷನ್ ವ್ಯಾಗನ್ ಆರ್ ಕಾರನ್ನು ಟೊಯೊಟಾ ಜೊತೆ ಕೈ ಜೋಡಿಸಿ ಉತ್ಪಾದನೆ ಮಾಡುತ್ತಿದೆ ಎನ್ನಲಾಗಿದ್ದು, ಈ ಕಾರಿನ ಬೆಲೆಯು ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಸ್ಪರ್ಧಾತ್ಮಕವಾಗಿ ಇರಲಿದೆ ಎನ್ನಲಾಗಿದೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಲೀಥಿಯಂ ಅಯಾನ್ ಬ್ಯಾಟರಿಗಳ ಬೆಲೆ ಅಧಿಕವಿರುವ ಕಾರಣ ರೆಗ್ಯೂಲರ್ ಮಾಡೆಲ್ ವ್ಯಾಗನ್ ಆರ್ ಮಾದರಿಗಿಂತಲೂ ಬೆಲೆ ಎರಡರಷ್ಟು ಜಾಸ್ತಿ ಇರಲಿದ್ದು, ಪ್ರತಿ ಚಾರ್ಜಿಂಗ್‌ಗೆ ಕನಿಷ್ಠ 200ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ಸಾಮರ್ಥ್ಯದ ಬ್ಯಾಟರಿ ಜೋಡಣೆ ಹೊಂದಿರಲಿವೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ವ್ಯಾಗನ್ ಆರ್ ಇವಿ ಕಾರುಗಳು 2020ರ ಏಪ್ರಿಲ್‌ನಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿರುವ ಮಾರುತಿ ಸುಜುಕಿ ಸಂಸ್ಥೆಯು, ಹೊಸ ಎಲೆಕ್ಟ್ರಿಕ್ ಕಾರನ್ನು ದೆಹಲಿ ಬಳಿ ಇರುವ ಗುರುಗ್ರಾಮ್ ಕಾರು ಉತ್ಪಾದನಾ ಘಟಕದಲ್ಲಿ ತಯಾರಿಸಲಿದೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಜೊತೆಗೆ ಎಲೆಕ್ಟ್ರಿಕ್ ಮಾದರಿಯ ವ್ಯಾಗನ್‍ ಆರ್ ಕಾರು ಮಾರುತಿ ಸುಜುಕಿ ಮತ್ತು ಟೊಯೊಟಾ ಪಾಲುದಾರಿಕೆಯಲ್ಲಿ ತಯಾರಾಗಲಿರುವ ಮೊದಲ ಎಲೆಕ್ಟ್ರಿಕ್ ಕಾರು ಇದಾಗಿದ್ದು, ಟೊಯೊಟಾ ಈಗಾಗಲೇ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿಗಾಗಿ ಅಲ್ಟ್ರಾ ಹೈ ಎಫಿಶಿಯೆನ್ಸಿ ಪವರ್‌ಟ್ರೈನ್ ಬ್ಯಾಟರಿಯನ್ನು ತಯಾರಿಸುವುದಾಗಿ ಹೇಳಿಕೊಂಡಿದೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಇದಲ್ಲದೇ ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಮುಂದಿನ ತಲೆಮಾರಿನ ವ್ಯಾಗನ್‍ಆರ್ ಕಾರನ್ನು ಇದೇ ವರ್ಷಾಂತ್ಯಕ್ಕೆ ಬಿಡುಗಡೆಗೊಳಿಸುವ ಯೋಜನೆಯಲಿದ್ದು, ಈ ಹಿನ್ನೆಲೆ ಹೊಸ ಕಾರಿನ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಎಲೆಕ್ಟ್ರಿಕ್ ಮಾದರಿಯ ವ್ಯಾಗನ್‍ಆರ್ ಕಾರನ್ನು ಸಹ ನಿರ್ಮಾಣ ಮಾಡುವ ಯೋಜನೆಯಿದೆ.

MOST READ: ರಾಜಧಾನಿಯಲ್ಲಿ ಗುಜುರಿ ಸೇರಲಿವೆ 2.80 ಕೋಟಿ ಹಳೆಯ ಕಾರುಗಳು

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಸದ್ಯ ಮಾರುತಿ ಸುಜುಕಿ ಸಂಸ್ಥೆಯು ದೇಶಿಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನೆ ಮಾಡುವ ಸಂಬಂಧ ಬರೋಬ್ಬರಿ ರೂ.700 ಕೋಟಿ ವೆಚ್ಚದಲ್ಲಿ ಗುಜರಾತ್‌ನಲ್ಲಿ ಬ್ಯಾಟರಿ ಉತ್ಪಾದನಾ ಘಟಕ ತೆರೆಯಲು ಈಗಾಗಲೇ ಕೇಂದ್ರದಿಂದ ಅನುಮತಿ ಪಡೆದಿದ್ದು, ಎಲೆಕ್ಟ್ರಿಕ್ ಕಾರುಗಳ ಬೆಲೆ ತಗ್ಗಿಸಲು ಇದು ಮಹತ್ವದ ಯೋಜನೆ ಎನ್ನಬಹುದು.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಕಾರಣ, ಬೆಲೆಯಲ್ಲಿ ದುಬಾರಿ ಎನ್ನಿಸುವ ಲೀಥಿಯಂ ಅಲಾಯ್ ಬ್ಯಾಟರಿಗಳನ್ನು ಸದ್ಯಕ್ಕೆ ವಿದೇಶಿ ಮಾರುಕಟ್ಟೆಗಳಾದ ಚೀನಾ, ತೈವಾನ್ ಮತ್ತು ಥೈಲ್ಯಾಂಡ್‌ನಿಂದಲೇ ಶೇ.100ರಷ್ಟು ಆಮದು ಮಾಡಿಕೊಳ್ಳಲಾಗುತ್ತಿದ್ದು, ದೇಶದಲ್ಲಿ ಯಾವುದೇ ಕಾರು ಉತ್ಪಾದನಾ ಸಂಸ್ಥೆಯು ಸ್ವಂತ ಬ್ಯಾಟರಿ ಉತ್ಪಾದನಾ ಸೌಲಭ್ಯವನ್ನು ಹೊಂದಿಲ್ಲ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಇದರಿಂದಾಗಿ ಎಲೆಕ್ಟ್ರಿಕ್ ಕಾರುಗಳು ಸಾಮಾನ್ಯ ಕಾರುಗಳಿಂತಲೂ ಎರಡು ಮೂರು ಪಟ್ಟು ಹೆಚ್ಚು ದುಬಾರಿ ದರಗಳಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರಣದಿಂದಲೇ ಬಹುತೇಕ ಕಾರು ಖರೀದಿದಾರರು ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಆಸಕ್ತಿ ಇದ್ದರೂ ದುಬಾರಿ ಬೆಲೆಯಿಂದಾಗಿ ಹಿಂದೆ ಸರಿಯುತ್ತಿದ್ದಾರೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಇದನ್ನು ಗಂಭೀರವಾಗಿ ಪರಿಣಿಸಿರುವ ಸುಜುಕಿ ಸಂಸ್ಥೆಯು ಭಾರತದಲ್ಲಿ ಸ್ಥಳೀಯವಾಗಿ ಲೀಥಿಯಂ ಬ್ಯಾಟರಿ ಉತ್ಪಾದನೆ ಮಾಡಿ ತನ್ನದೇ ಕಾರುಗಳಿಗೆ ಅಷ್ಟೇ ಅಲ್ಲದೇ ಇತರೆ ಸಂಸ್ಥೆಗಳಿಗೂ ಬ್ಯಾಟರಿ ಪೂರೈಕೆ ಮಾಡುವ ಯೋಜನೆ ರೂಪಿಸಿದ್ದು, 2020ರ ವೇಳೆಗೆ ದೇಶದಲ್ಲಿ ಮಾರಾಟವಾಗುವ ಕಾರುಗಳ ಪ್ರಮಾಣದಲ್ಲಿ ಹೊಸ ಬದಲಾಣೆ ತರುವುದೇ ಇದರ ಮೂಲಉದ್ದೇಶವಾಗಿದೆ.

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಒಟ್ಟಿನಲ್ಲಿ ಬೃಹತ್ ಯೋಜನೆಯೊಂದಿಗೆ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೆ ಕೈ ಹಾಕಿರುವ ಮಾರುತಿ ಸುಜುಕಿ ಸಂಸ್ಥೆಯು ಸಾಮಾನ್ಯ ಕಾರುಗಳ ಮಾರಾಟದಲ್ಲಿ ಯಶಸ್ಸು ಸಾಧಿಸಿರುವಂತೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಅಧಿಪತ್ಯ ಹೊಂದುವ ತವಕದಲ್ಲಿದ್ದು, ಕೈಗೆಟುಕುವ ಬೆಲೆಗಳಲ್ಲಿ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಬ್ಯಾಟರಿ ಬಳಕೆ ಮಾಡಿದ್ದಲ್ಲಿ ಹೊಸ ಯೋಜನೆ ಯಶಸ್ವಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

MOST READ: ವಾಹನಗಳಲ್ಲಿ ಯಾಕೆ ಕಡ್ಡಾಯವಾಗಿ ಎಬಿಎಸ್ ಇರಬೇಕು? ಈ ವಿಡಿಯೋ ನೋಡಿ...

ಬಿಡುಗಡೆಗೆ ಸಿದ್ದಗೊಂಡ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಹೇಗಿರಲಿವೆ ಗೊತ್ತಾ?

ಇನ್ನು ಮಾರುತಿ ಸುಜುಕಿ ವ್ಯಾಗನ್‍ ಆರ್ ಕಾರು 1999ರಲ್ಲಿ ಬಿಡುಗಡೆಗೊಂಡಿದ್ದು, ಹ್ಯಾಚ್‌ಬ್ಯಾಕ್ ವೈಶಿಷ್ಟ್ಯತೆಯ ಈ ಕಾರು ಈಗಾಗಲೇ 20 ಲಕ್ಷಕ್ಕೂ ಹೆಚ್ಚು ಯೂನಿಟ್‌ಗಳು ಮಾರಾಟಗೊಂಡಿವೆ. ಈ ಕಾರು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವರ್ಷನ್‌ನಲ್ಲೂ ಲಭ್ಯವಾಗುತ್ತಿರುವುದು ಗ್ರಾಹಕರ ಆಯ್ಕೆಗೆ ಮತ್ತಷ್ಟು ಸಹಕಾರಿಯಾಗಲಿದೆ.

More from DriveSpark

ಪ್ರತಿ ಚಾರ್ಜ್‌ಗೆ 250 ಕಿ.ಮಿ ಮೈಲೇಜ್ ನೀಡಬಲ್ಲ ಕ್ವಿಡ್ ಎಲೆಕ್ಟ್ರಿಕ್ ಕಾರು ಪ್ರದರ್ಶಿಸಿದ ರೆನಾಲ್ಟ್..!

Article Published On: Thursday, October 11, 2018, 11:15 [IST]
English summary
Maruti WagonR Electric Car Testing Begins in India — To Be Launched By 2020.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+