ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಬೃಹತ್ ಬಂಡವಾಳದೊಂದಿಗೆ ಕಳೆದ ವರ್ಷವಷ್ಟೇ ತನ್ನ ಮೊದಲ ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದಲ್ಲೇ ಇದೀಗ ಮತ್ತಷ್ಟು ಬಂಡವಾಳ ಹೂಡಿಕೆ ಮಾಡುತ್ತಿದೆ.

By Praveen Sannamani

ಬ್ರಿಟನ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಬೃಹತ್ ಬಂಡವಾಳದೊಂದಿಗೆ ಕಳೆದ ವರ್ಷವಷ್ಟೇ ತನ್ನ ಮೊದಲ ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದಲ್ಲೇ ಇದೀಗ ಮತ್ತಷ್ಟು ಬಂಡವಾಳ ಹೂಡಿಕೆ ಮಾಡುತ್ತಿದೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಎಲೆಕ್ಟ್ರಿಕ್ ಕಾರುಗಳು ಮತ್ತು ಕಾರುಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 5 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, 2019ರ ಎರಡನೇ ತ್ರೈಮಾಸಿಕ ಅವಧಿಗೆ ಹೊಸ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಸುಳಿವು ನೀಡಿದೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಎಂಜಿ ಮೋಟಾರ್ ಸಂಸ್ಥೆಯು ಕಳೆದ ಸಪ್ಟೆಂಬರ್‌ನಲ್ಲಿ 2 ಸಾವಿರ ಕೋಟಿ ವೆಚ್ಚದಲ್ಲಿ ಗುಜರಾತಿನಲ್ಲಿ ಮೊದಲ ಕಾರು ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದು, ಮಧ್ಯಮ ಗಾತ್ರದ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಸೆಡಾನ್ ಕಾರುಗಳನ್ನು ಪರಿಚಯಿಸುವ ತವಕದಲ್ಲಿದೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಇದಕ್ಕಾಗಿ 170 ಎಕರೆ ಭೂಮಿಯನ್ನು ಕೂಡಾ ಖರೀದಿಸಲಾಗಿದ್ದು, ಪ್ರತಿ ವರ್ಷ 80 ಸಾವಿರ ಕಾರುಗಳ ಉತ್ಪಾದನೆಯ ಗುರಿ ಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು 2019ರ ಮೊದಲ ತ್ರೈಮಾಸಿಕ ವೇಳೆಗೆ ತನ್ನ ಹೊಸ ಉತ್ಪನ್ನಗಳನ್ನು ಹೊರತರಲಿದೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಜೊತೆಗೆ ಏಪ್ರಿಲ್‌ನಿಂದ ದೇಶಾದ್ಯಂತ ಕಾರು ಮಾರಾಟ ಮಳಿಗೆಗಳನ್ನು ಉತ್ಪಾದಿಸುವ ಉದ್ದೇಶದಿಂದ ಡೀಲರ್ಸ್‌ಗಳೊಂದಿಗೆ ಸಭೆ ನಡೆಸಲಿರುವ ಎಂಜಿ ಮೋಟಾರ್ಸ್, ಭವಿಷ್ಯದಲ್ಲಿ ಸಿದ್ದವಾಗುವ ಹೊಸ ಉತ್ಪನ್ನಗಳ ಕುರಿತಾಗಿ ಮಹತ್ವದ ಚರ್ಚೆ ನಡೆಸಲಿದೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಈ ಬಗ್ಗೆ ಮಾತನಾಡಿರುವ ಎಂಜಿ ಮೋಟಾರ್ಸ್ ಇಂಡಿಯಾ ಎಂಡಿ ರಾಜೀವ್ ಛಾಬ್, ಮಧ್ಯಮ ಗಾತ್ರ ಕಾರುಗಳಿಗೆ ಭಾರತೀಯ ಮಾರುಕಟ್ಟೆ ಉತ್ತಮವಾಗಿದ್ದು, ಈ ಹಿನ್ನೆಲೆ ಬೃಹತ್ ಬಂಡವಾಳದೊಂದಿಗೆ ಸದ್ಯದಲ್ಲೇ ಹೊಸ ಉತ್ಪನ್ನಗಳನ್ನು ಹೊರತರುವುದಲ್ಲೇ ವಿಫುಲ ಉದ್ಯೋಗಾವಕಾಶಗಳನ್ನು ಸೃಷ್ಠಿಸಲಿದ್ದೇವೆ ಎಂದಿದ್ದಾರೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಇನ್ನು 1924ರಿಂದಲೇ ಎಂಜಿ ಮೋಟಾರ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಕಾರ್ಯಚರಣೆ ನಡೆಸುತ್ತಿದ್ದು, ಇತ್ತೀಚೆಗೆ ಹಣಕಾಸು ಮುಗ್ಗಟ್ಟು ಎದುರಿಸಿತ್ತು. ಈ ಹಿನ್ನೆಲೆ ನಷ್ಟದ ಸುಳಿಯಲ್ಲಿದ್ದ ಸಂಸ್ಥೆಯನ್ನು ಚೀನಾ ಮೂಲದ ಎಸ್‌ಎಐಸಿ( SAIC) ಸಂಸ್ಧೆಯು ಸ್ಪಾಧೀನಪಡಿಸಿಕೊಂಡು ಭಾರತದಲ್ಲಿ ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುತ್ತಿದೆ.

ಭಾರತದಲ್ಲಿ ಕಾರುಗಳ ಉತ್ಪಾದನೆಗಾಗಿ ಎಂಜಿ ಮೋಟಾರ್ಸ್‌ನಿಂದ 5 ಸಾವಿರ ಕೋಟಿ ಹೂಡಿಕೆ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಕಳೆದ 6 ದಶಕಗಳ ಅವಧಿಯಲ್ಲಿ ಹಲವು ಏರುಪೇರುಗಳು ಕಂಡಿರುವ ಎಂಜಿ ಮೋಟಾರ್ ಸಂಸ್ಥೆಯು ಸದ್ಯ ಭಾರತದಲ್ಲಿ ತನ್ನ ಹೊಸ ಅಧ್ಯಾಯವನ್ನು ತೆರೆಯುತ್ತಿದ್ದು, ಮೊದಲ ಹಂತದಲ್ಲೇ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಮಾದರಿಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿದೆ.

Most Read Articles

Kannada
English summary
MG Motors India To Invest Rs 5,000 Crore.
Story first published: Tuesday, March 20, 2018, 11:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X