TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಭಾರತದಲ್ಲಿ 7 ಸೀಟರ್ ವ್ಯಾಗನ್ ಆರ್ ಬಿಡುಗಡೆಯಾಗುವುದು ಪಕ್ಕಾ ಅಂತೆ..!!
ದೇಶಿಯ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆ ಸಾಧಿಸಿರುವ ಮಾರುತಿ ಸುಜುಕಿ ಕಾರುಗಳು ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ. ಆಲ್ಟೋ 800ನಿಂದ ಎಸ್ ಕ್ರಾಸ್ ತನಕ ಅತ್ಯುತ್ತಮ ಬೇಡಿಕೆ ಸಾಧಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಇದೀಗ ವಿನೂತನ 7 ಸೀಟರ್ ವ್ಯಾಗನ್ ಆರ್ ಪರಿಚಯಿಸುವ ಇರಾದೆಯಲ್ಲಿದೆ.
ಹೌದು, ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ವಾಣಿಜ್ಯ ಬಳಕೆಯ ಉದ್ದೇಶಗಳಿಗಾಗಿ 7 ಆಸನವುಳ್ಳ ಎಂಪಿವಿ ಕಾರುಗಳಿಗೆ ಉತ್ತಮ ಬೇಡಿಕೆಯಿದ್ದು, ಈ ಹಿನ್ನೆಲೆ ಯುರೋಪ್ ರಾಷ್ಟ್ರಗಳಲ್ಲಿ ಜನಪ್ರಿಯತೆ ಸಾಧಿಸಿರುವ ಸೊಲಿಯೊ ಕಾರು ಮಾದರಿಯಲ್ಲೇ 7 ಸೀಟರ್ ವ್ಯಾಗನ್ ಆರ್ ಆವೃತ್ತಿಯನ್ನು ಭಾರತದಲ್ಲೂ ಬಿಡುಗಡೆಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ.
ಮೂಲಗಳ ಪ್ರಕಾರ ಹೊಸ ಕಾರು ಬಿಡುಗಡೆಯ ಸಾಧಕ ಬಾಧಕಗಳ ಕುರಿತು ಅಧ್ಯಯನ ನಡೆಸಿರುವ ಮಾರುತಿ ಸುಜುಕಿ ಸಂಸ್ಥೆಯು ಮುಂದಿನ ಒಂದು ವರ್ಷದ ಒಳಗಾಗಿ ಹೊಸ ವ್ಯಾಗನ್ ಆರ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ.
ಈ ಹಿನ್ನೆಲೆ ದೆಹಲಿ ಸೇರಿದಂತೆ ಗುರುಗ್ರಾಮ್ ಹೊರ ವಲಯದಲ್ಲಿ ವ್ಯಾಗನ್ ಆರ್ 7 ಸೀಟರ್ ಕಾರುಗಳನ್ನು ಸ್ಪಾಟ್ ಟೆಸ್ಟಿಂಗ್ ನಡೆಸಲಾಗಿದ್ದು, ಸುದ್ಧಿ ಸಂಸ್ಥೆಯಾದ ಟಿಮ್ ಬಿಎಚ್‌ಪಿ ತಂಡಕ್ಕೆ ಹೊಸ ಕಾರಿನ ರಹಸ್ಯ ಚಿತ್ರಗಳು ಕೂಡಾ ಲಭ್ಯವಾಗಿವೆ.
ಸ್ಪಾಟ್ ಟೆಸ್ಟಿಂಗ್ ವೇಳೆ ಸಿಕ್ಕಿರುವ ಮಾಹಿತಿ ಪ್ರಕಾರ ಸುಜುಕಿ ನಿರ್ಮಾಣದ ವ್ಯಾಗನ್ ಆರ್ ಹೊಸ ಕಾರುಗಳು 5 ಪ್ಲಸ್ 2 ಆಸನ ಸೌಲಭ್ಯ ಹೊಂದಿದ್ದು, ಮಿನಿ ಎಂಪಿವಿ ಕಾರು ಮಾದರಿಯಾಗಿ ಜನಪ್ರಿಯತೆ ಹೊಂದಲಿದೆಯೆಂತೆ.
ಒಂದು ವೇಳೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ 7 ಸೀಟರ್ ವ್ಯಾಗನ್ ಆರ್ ಮಾದರಿಗಳು ನಿಗದಿತ ಅವಧಿ ಒಳಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದ್ದೇ ಆದಲ್ಲಿ ಎಂಪಿವಿ ಕಾರುಗಳ ವಿಭಾಗದಲ್ಲಿ ಹೊಸ ಸಂಚಲಯ ಸೃಷ್ಠಿಸಲಿದ್ದು, ವಾಣಿಜ್ಯ ಬಳಕೆಗಾಗಿ ಕೂಡಾ ಉತ್ತಮ ಕಾರು ಮಾದರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಆದ್ರೆ ಹೊಸ ಕಾರಿನ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಡದ ಮಾರುತಿ ಸುಜುಕಿ ಸಂಸ್ಥೆಯು, ಸಾಧಕ ಬಾಧಕಗಳನ್ನು ಚರ್ಚಿಸಿದ ನಂತರವೇ ಹೊಸ ಕಾರಿನ ಬಗೆಗಿನ ಮಹತ್ವದ ಮಾಹಿತಿಗಳನ್ನು ಬಹಿರಂಗ ಮಾಡಲಿದೆ.
ಎಂಜಿನ್ ಸಾಮರ್ಥ್ಯ
7 ಸೀಟರ್ ವ್ಯಾಗನ್ ಆರ್ ಕಾರುಗಳು 1.2-ಲೀಟರ್ ಸಾಮರ್ಥ್ಯದ 4 ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 90-ಬಿಎಚ್‌ಪಿ 118-ಎನ್ಎಂ ಉತ್ಪಾದಿಸಬಲ್ಲ ಅತ್ಯುತ್ತಮ ಮಾದರಿಯಾಗಿರಲಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಸದ್ಯ ಭಾರತದಲ್ಲಿ ಹಲವು ಮಾದರಿಯ ಕಾರುಗಳನ್ನು ಪರಿಚಯಿಸಿ ಜನಪ್ರಿಯಗೊಂಡಿರುವ ಮಾರುತಿ ಸುಜುಕಿ ಸಂಸ್ಥೆಯು, 7 ಸೀಟರ್ ವ್ಯಾಗನ್ ಆರ್ ಬಿಡುಗಡೆ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಯಾಕೇಂದ್ರೆ ಸಾಲಿಯೋ ಕಾರುಗಳ ಜನಪ್ರಿಯತೆ ಭಾರತದಲ್ಲೂ ವರ್ಕೌಟ್ ಆಗಲಿದೆ ಎನ್ನುವುದು ಮಾರುತಿ ಸುಜುಕಿ ಲೆಕ್ಕಾಚಾರ.
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
01. ರೀ ಸೇಲ್ ಮೌಲ್ಯವಿಲ್ಲದ ಈ ಕಾರುಗಳನ್ನು ಖರೀದಿ ಮಾಡುವ ಮುನ್ನ 10 ಬಾರಿ ಯೋಚಿಸಿ...
02. ಬೆಂಗಳೂರಿನ ಪ್ರತಿಷ್ಠಿತ ಮಾರುತಿ ಸರ್ವಿಸ್ ಸ್ಟೇಷನ್ ಕರ್ಮಕಾಂಡ ಬಯಲು ಮಾಡಿದ ಗ್ರಾಹಕ !! ವಿಡಿಯೋ
03. ವಾಹನ ಪ್ರಿಯರಿಗೆ ಸಿಹಿ ಸುದ್ಧಿ ನೀಡಿದ ಸಾರಿಗೆ ಇಲಾಖೆ..
04.ಏಪ್ರಿಲ್ 1ರಿಂದಲೇ 125ಸಿಸಿ ಮೇಲ್ಪಟ್ಟ ಬೈಕ್‌ಗಳಿಗೆ ಹೊಸ ರೂಲ್ಸ್..!!
05. ವೇಗದ ಚಾಲನೆಯಲ್ಲಿದ್ದಾಗ ಪಂಚರ್- ಮೂರು ಬಾರಿ ಪಲ್ಟಿ ಹೊಡೆದ ಟಾಟಾ ನೆಕ್ಸಾನ್