ಜುಲೈ ತಿಂಗಳಿನಲ್ಲಿ ದಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಇದೇ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆಯುತ್ತಿದೆ.

By Rahul Ts

ಇದೇ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆಯುತ್ತಿದೆ. ಹೋಂಡಾ ಕಾರ್‍ಸ್ ಇಂಡಿಯಾ ಲಿಮಿಟೆಡ್‍‍ನ ಅಂಕಿ ಅಂಶಗಳ ಪ್ರಕಾರ ಹೊಸ ಹೋಂಡಾ ಅಮೇಜ್ ಕಾರುಗಳು ಕೇವಲ ಎರಡು ತಿಂಗಳಿನಲ್ಲಿ 10,180 ಯೂನಿಟ್ ಮಾರಾಟಗೊಂಡಿದೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಕಂಪ್ಯಾಕ್ಟ್ ಸೆಡಾನ್ ಕಾರುಗಳ ಸರಣಿಯಲ್ಲಿ ಬಿಡುಗಡೆಗೊಂಡ ಅಮೇಜ್ ಕಾರುಗಳು ಹೋಂಡಾ ಸಂಸ್ಥೆಯ ಮಾರಾಟದಲ್ಲಿ ಶೇಕಡ 100ರಲ್ಲಿ 51ರಷ್ಟು ಅಮೇಜ್ ಕಾರುಗಳೆ ಮಾರಾಟಗೊಂಡಿದೆ. ಈ ಬಗ್ಗೆ ಸಂಸ್ಥೆಯು ಗ್ರಾಹಕರನ್ನು ಅಭಿನಂದಿಸುತ್ತಾ ಜುಲೈ ತಿಂಗಳಿನಲ್ಲಿ ಹೋಂಡಾ ಸಂಸ್ಥೆಯು 19,970 ಕಾರುಗಳನ್ನು ಮಾರಾಟ ಮಾಡಿದೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಮೇ 16 ರಂದು ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ.5.59ರ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಇನ್ನು ಉನ್ನತ್ತ ಮಟ್ಟದ ಆವೃತ್ತಿಯ ಬೆಲೆಯನ್ನು ರೂ.899 ಲಕ್ಷಕ್ಕೆ ಮಾರಾಟಗೊಳ್ಳುತ್ತಿದೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಹೋಂಡಾ ಸಂಸ್ಥೆಯು ಬಿಡುಗಡೆ ಮಾಡಿರುವ ಅಮೇಜ್ ಕಾರುಗಳು ಒಟ್ಟು ನಾಲ್ಕು ಮಾದರಿಯಲ್ಲಿ ಖರೀದಿ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ನಿಗದಿ ಮಾಡಲಾಗಿದೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್‍‍ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್‍ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಎಂಜಿನ್ ವೈಶಿಷ್ಟ್ಯತೆಗಳು

ಹೊಸ ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್‌ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ, 200-ಎನ್ಎಂ ಉತ್ಪಾದನೆ ಮಾಡಬಲ್ಲವು.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಇದಲ್ಲದೇ ಹೊಸ ಕಾರುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದು, ಮ್ಯಾನುವಲ್‌ಗಿಂತ ಡಿಸೇಲ್ ಆವೃತ್ತಿಗಿಂತ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಡಿಸೇಲ್ ಆವೃತ್ತಿಯು 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಮಾತ್ರ ಉತ್ಪಾದಿಸಲಿವೆಯೆಂತೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಕಾರಿನ ಒಳವಿನ್ಯಾಸ

ಹೊಸ ಅಮೇಜ್ ಕಾರುಗಳು ಎಲ್ಇಡಿ ಡಿಎಲ್‍ಆರ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.

ಜುಲೈ ತಿಂಗಳಿನಲ್ಲಿ ಧಾಖಲೆಯ ಮಾರಾಟ ಕಂಡ ಹೋಂಡಾ ಅಮೇಜ್ ಕಾರು..

ಜೊತೆಗಗೆ ಕೀ ಲೇಸ್ ಎಂಟ್ರಿ, ಎಬಿಎಸ್, ಇಬಿಡಿ, ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡಲಿದೆ.

Most Read Articles

Kannada
Read more on honda amaze sales sedan
English summary
New Amaze clocks highest ever monthly sales for a Honda car in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X