TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ವಿನೂತನ ವಿನ್ಯಾಸಗಳೊಂದಿಗೆ 2018ರ ದಟ್ಸನ್ ಗೊ ಮತ್ತು ಗೊ ಪ್ಲಸ್ ಕಾರುಗಳು ಬಿಡುಗಡೆ
ನಿಸ್ಸಾನ್ ಸಂಸ್ಥೆಯ ಅಂಗಸಂಸ್ಥೆಯಾದ ದಟ್ಸನ್ ಇಂಡಿಯಾ ಸಂಸ್ಥೆಯು ತನ್ನ ಬಹುನಿರೀಕ್ಷಿತ 2018ರ ಗೊ ಮತ್ತು ಗೊ ಪ್ಲಸ್ ಕಾರುಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ಆವೃತ್ತಿಗಿಂತ ಹೊಸ ಕಾರುಗಳಲ್ಲಿ ನೂರಕ್ಕೂ ಹೆಚ್ಚು ನವೀಕೃತ ವಿನ್ಯಾಸಗಳನ್ನು ಪಡೆದುಕೊಳ್ಳುವ ಮೂಲಕ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ.
ಕಳೆದ ಮೂರು ತಿಂಗಳ ಹಿಂದಷ್ಟೇ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಇದೇ ಕಾರುಗಳನ್ನು ಬಿಡುಗಡೆ ಮಾಡಿದ್ದ ದಟ್ಸನ್ ಸಂಸ್ಥೆಯು ಇದೀಗ ಭಾರತದಲ್ಲೂ ಹೊಸ ಗೊ ಮತ್ತು ಗೊ ಪ್ಲಸ್ ಕಾರುಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 3.29 ಲಕ್ಷಕ್ಕೆ(ಗೊ) ಮತ್ತು ರೂ. 3.83ಲಕ್ಷಕ್ಕೆ(ಗೊ ಪ್ಲಸ್) ದರ ನಿಗದಿ ಮಾಡಿದೆ.
#ExperienceChange ಎನ್ನುವ ಅಭಿಯಾನದೊಂದಿಗೆ ಹೊಸ ಗೊ ಮತ್ತು ಗೊ ಪ್ಲಸ್ ಕಾರುಗಳನ್ನು ಬಿಡುಗಡೆ ಮಾಡಲಾಗಿದ್ದು, ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವುದಕ್ಕಾಗಿ ಈ ಬಾರಿ ದಟ್ಸನ್ ವಿನೂತನ ಯೋಜನೆಗಳನ್ನು ಕೈಗೊಂಡಿದೆ.
ಹೊಸ ಕಾರುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದಕ್ಕಾಗಿ ಬಾಲಿವುಡ್ ಜನಪ್ರಿಯ ನಟ ಅಮೀರ್ ಖಾನ್ ಅವರನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿರುವ ದಟ್ಸನ್ ಸಂಸ್ಥೆಯು, ಪ್ರೀಮಿಯಂ ವೈಶಿಷ್ಟ್ಯತೆಗಳೊಂದಿಗೆ ವೈಯಕ್ತಿಯ ಕಾರು ಖರೀದಿದಾರರಿಗೆ ಉತ್ತಮ ಸೇವೆ ಒದಗಿಸುವ ಭರವಸೆ ನೀಡಿದೆ.
ಇನ್ನು ವಿಶ್ವದರ್ಜೆ ವಿನ್ಯಾಸಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಹೊಸ ಗೊ ಮತ್ತು ಗೊ ಪ್ಲಸ್ ಕಾರುಗಳು ಸ್ಪೋರ್ಟಿ ಲುಕ್‌ನೊಂದಿಗೆ ಗುಣಮಟ್ಟ, ಸ್ಟೈಲಿಷ್, ಡೈನಾಮಿಕ್ ವೈಶಿಷ್ಟ್ಯ ಹೊಂದಿದ್ದು, ಮರುವಿನ್ಯಾಸಗೊಳಿಸಿದ ಫ್ರಂಟ್ ಗ್ರೀಲ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್‌ಇಡಿ ಡಿಆರ್‌ಎಲ್ಎಸ್ ಒದಗಿಸಲಾಗಿದೆ.
ವಿಶೇಷ ಅಂದ್ರೆ ಪ್ರತಿ ವೆರಿಯೆಂಟ್‌ಗಳಲ್ಲೂ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸೌಲಭ್ಯ ನೀಡಲಾಗಿದ್ದು, ಧೀರ್ಘಕಾಲದ ಕಾರು ಚಾಲನೆಗೆ ಇವು ಸಹಕಾರಿಯಾಗಿರಲಿವೆ.
ಎಂಜಿನ್ ಸೌಲಭ್ಯ
ಗೊ ಮತ್ತು ಗೊ ಪ್ಲಸ್ ಕಾರುಗಳು 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68-ಬಿಎಚ್‌ಪಿ ಮತ್ತು 104-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು. ಜೊತೆಗೆ ಪ್ರತಿ ಕಾರಿನಲ್ಲೂ 5-ಸ್ಪೀಡ್ ಆಟೋ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಿರಲಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠವಾಗಿ 19.83ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲವು.
ಇದಲ್ಲದೆ ಹೊಸ ಕಾರುಗಳಲ್ಲಿ ಎಲೆಕ್ಟ್ರಾನಿಕ್ ಅಡ್ಜಸ್ಟ್ ಮಿರರ್, ರಿಯರ್ ಪಾರ್ಕಿಂಗ್ ಸೆನ್ಸಾರ್ಸ್, ಪವರ್ ವಿಂಡೋ, ಡ್ರೈವರ್ ಸೀಟ್ ರಿಮೆಂಡರ್, ರಿಯರ್ ವೈಪರ್ಸ್ ವೈಶಿಷ್ಟ್ಯತೆಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಮತ್ತು ಡ್ಯುಯಲ್ ಫ್ರಂಟ್ ಏರ್‍ಬ್ಯಾಗ್‍ಗಳನ್ನು ಅಳವಡಿಸಲಾಗಿದೆ.
ಖರೀದಿಗೆ ಲಭ್ಯವಿರುವ ಬಣ್ಣಗಳು
ಸದ್ಯ ಖರೀದಿಗೆ ಲಭ್ಯವಿರುವ ಪ್ರಮುಖ ಎರಡು ಬಣ್ಣಗಳ ಜೊತೆಗೆ ಹೆಚ್ಚುವರಿಯಾಗಿ ಆ್ಯಂಬೆರ್ ಆರೇಂಜ್ ಮತ್ತು ಸನ್ ಸ್ಟೋನ್ ಎನ್ನುವ ಬಣ್ಣಗಳಲ್ಲಿ ಲಭ್ಯವಿರಲಿದ್ದು, ಬೆಸ್ಟ್ ಇನ್ ಕ್ಲಾಸ್ ಮಾದರಿಯಲ್ಲಿ ಹೊಸ ಡಿಸೈನ್ ಗ್ರಾಹಕರನ್ನು ಸೆಳೆಯಲಿವೆ.
MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!
ಈ ಬಗ್ಗೆ ಮಾತನಾಡಿರುವ ನಿಸ್ಸಾನ್ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಥಾಮಸ್ ಕೂಹೆಲ್ ಅವರು, ಹೊಸ ಕಾರುಗಳನ್ನು ಜಪಾನ್ ತಂತ್ರಜ್ಞಾನದೊಂದಿಗೆ ಅತ್ಯುತ್ತಮ ಮಾದರಿಯಲ್ಲಿ ಸಿದ್ದಗೊಳಿಸಲಾಗಿದ್ದು, ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸಿದ್ದವಾಗಿರುವ ಈ ಕಾರು ಮುಂಬರುವ ದಿನಗಳಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ ಎಂದಿದ್ದಾರೆ.
ಒಟ್ಟಿನಲ್ಲಿ ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನದೊಂದಿಗೆ ಸಿದ್ದವಾಗಿರುವ ಗೊ ಮತ್ತು ಗೊ ಪ್ಲಸ್ ಕಾರುಗಳು ಮುಂಬರುವ ದಿನಗಳಲ್ಲಿ ಹೊಸ ಮುನ್ನಡೆ ಕಾಯ್ದುಕೊಳ್ಳುವ ನೀರಿಕ್ಷೆಯಿದ್ದು, ಬಜೆಟ್ ಕಾರು ಖರೀದಿಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಲಿದೆ ಎನ್ನಬಹುದು.