ಭಾರತದಲ್ಲಿ ಫೋರ್ಡ್ ಆಸ್ಫೈರ್ ಕಾರು ಬಿಡುಗಡೆ ಯಾವಾಗ.?
ಮಾಹಿತಿಗಳ ಪ್ರಕಾರ ಫೋರ್ಡ್ ಸಂಸ್ಥೆಯು ನ್ಯೂ ಜನರೇಷನ್ ಮಾದರಿಯ ಆಸ್ಫೈರ್ ಕಾರಿನ ಉತ್ಪಾದನೆಯನ್ನು ಶೀಘ್ರದಲ್ಲೇ ಶುರುಮಾಡಲಿದ್ದು, ಇದೇ ವರ್ಷ ಜೂನ್ ತಿಂಗಳಿನಲ್ಲಿ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸುವ ಇರಾದೆಯಲ್ಲಿದೆ.
ಅಮೆರಿಕ ಮೂಲದ ವಾಹನ ತಯಾರಕ ಸಂಸ್ಥೆಯಾದ ಫೋರ್ಡ್ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರಸ್ತುತ ತಲೆಮಾರಿ ಆಸ್ಫೈರ್ ಸೆಡಾನ್ ಕಾರಿನ ಉತ್ಪಾದನೆಯನ್ನು ನಿಲ್ಲಿಸುತ್ತಿರುವುದಾಗಿ ಹೆಳಿಕೊಂಡಿತ್ತು. ಇದರ ಬೆನ್ನೆಲ್ಲೇ ನ್ಯೂ ಜನರೇಷನ್ ಮಾದರಿ ಆಸ್ಪೈರ್ ಸೆಡಾನ್ ಬಿಡುಗಡೆಗೆ ಸಜ್ಜಾಗುತ್ತಿದೆ.

ಮಾಹಿತಿಗಳ ಪ್ರಕಾರ ಫೋರ್ಡ್ ಸಂಸ್ಥೆಯು ನ್ಯೂ ಜನರೇಷನ್ ಮಾದರಿಯ ಆಸ್ಫೈರ್ ಕಾರಿನ ಉತ್ಪಾದನೆಯನ್ನು ಶೀಘ್ರದಲ್ಲೇ ಶುರುಮಾಡಲಿದ್ದು, ಇದೇ ವರ್ಷ ಜೂನ್ ತಿಂಗಳಿನಲ್ಲಿ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸುವ ಇರಾದೆಯಲ್ಲಿದೆ.

ಹೀಗಾಗಿ ಹೊಸ ಫೋರ್ಡ್ ಆಸ್ಫೈರ್ ಸೆಡಾನ್ ಕಾರು ಪ್ರಸ್ತುತ ತಲೆಮಾರಿನೊಂದಿಗೆ ಹೋಲಿಸಿದರೆ ಹಲವಾರು ಹೊಸ ನವೀಕರಣಗಳೊಂದಿಗೆ ಸಿದ್ದಗೊಂಡಿದ್ದು, ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಹೊಸ ಬಂಪರ್ ಮತ್ತು ಟ್ವೀಕ್ಡ್ ರಿಯರ್ ಪ್ರೊಫೈಲ್ ಹಾಗೆಯೇ ಅಲಾಯ್ ಚಕ್ರಗಳನ್ನೂ ಕೂಡ ಪಡೆದಿರಲಿವೆ.

ಇನ್ನು ಕಾರಿನ ಒಳಭಾಗದಲ್ಲಿ ಫೋರ್ಡ್ ಇಕೊ ಸ್ಪೋರ್ಟ್ ಮಾದರಿಯಲ್ಲೇ ಮೊದಲ ಬಾರಿಗೆ ಬಳಸಲಾದ ಎಸ್‍ವೈಎನ್‍ಸಿ3 ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಬಳಸಲಾಗಿದ್ದು, ಇದರಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಕನೆಕ್ಟಿವಿಟಿ ಅಂಶಗಳನ್ನು ಕೂಡಾ ಅಳವಡಿಸಲಾಗಿದೆ.

ಹೊಸದಾಗಿ ಬಿಡುಗಡೆಗೊಳ್ಳಲಿರುವ ಆಸ್ಫೈರ್ ಕಾರು, ಎಕೋ ಸ್ಪೋರ್ಟ್ಸ್ ಫೇಸ್‍ಲಿಫ್ಟ್ ಕಾರಿನಲ್ಲಿ ಬಳಸಲಾದಂತೆ 1.5 ಲೀಟರ್ ಮೂರು ಸಿಲಿಂಡರ್ ಡ್ರಾಗನ್ ಸರಣಿಯ ಪೆಟ್ರೋಲ್ ಎಂಜಿನ್ ಅನ್ನು ಪಡೆದಿದ್ದು, 121 ಬಿಹೆಚ್‍ಪಿ ಮತ್ತು 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದೆ.

ಹಾಗೆಯೇ ಡೀಸೆಲ್ ಆವೃತ್ತಿಯು 1.5 ಲೀಟರ್ ಡೀಸೆಲ್ ಎಂಜಿನ್ 98.9 ಬಿಹೆಚ್‍ಪಿ ಮತ್ತು 215ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿರಲಿದ್ದು, ಈ ಎರಡೂ ಎಂಜಿನ್‍ಗಳನ್ನು 5 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಗಳನ್ನು ಕೂಡ ಪಡೆದಿರಲಿದೆ.

ಹೊಸ ಅವತಾರದಲ್ಲಿ ಬಿಡಗಡೆಗೊಳ್ಳಲಿರುವ ಫೋರ್ಡ್ ಆಸ್ಪೈರ್ ಕಾರಿನ ಬಗ್ಗೆ ಸಂಸ್ಥೆಯು ಇನ್ನು ಹೆಚ್ಚು ಮಾಹಿತಿಯನ್ನು ಬಹಿರಂಗಗೊಳಿಸಲಿಲ್ಲವಾದರೂ, ಹೆಚ್ಚು ನವೀಕರಣಗೊಂಡ ಈ ಕಾರು ಮಾರುಕಟ್ಟೆಗೆ ಲಗ್ಗೆಯಿಟ್ಟಲ್ಲಿ ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ ಸೆಂಟ್, ಫೋಕ್ಸ್‌ವ್ಯಾಗನ್ ಎಮಿಯೊ ಮತ್ತು ಮುಂದಿನ ತಲೆಮಾರಿನ ಹೋಂಡಾ ಅಮೇಜ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
1. ಈ ನಗರದಲ್ಲಿ ಇನ್ಮುಂದೆ ಶಾಪಿಂಗ್ ಮಾಲ್‌ಗಳಲ್ಲಿ ಉಚಿತ ಪಾರ್ಕಿಂಗ್ ಸೌಲಭ್ಯ..
2. 127 ಬಾರಿ ಓವರ್ ಸ್ಪೀಡ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಈ ಕಾರಿಗೆ ಬಿದ್ದ ದಂಡ ಎಷ್ಟು ಗೊತ್ತಾ?
3. 2018ರ ಬಹುನೀರಿಕ್ಷಿತ ಹೋಂಡಾ ಸಿಬಿ ಹಾರ್ನೆಟ್ 160ಆರ್ ಬಿಡುಗಡೆ
4. ಇಲ್ಲಿ ಇದ್ದವರಿಗೆ ಒಂದು ಕಾನೂನು.. ಇಲ್ಲದವರಿಗೆ ಇನ್ನೊಂದು ಕಾನೂನು..
5. ಬಿಡುಗಡೆಯಾಗಲಿರುವ ಹೊಸ ಬಜಾಜ್ ಪಲ್ಸರ್ 150 ಬೈಕ್ ಬೆಲೆ ಎಷ್ಟು ಗೊತ್ತಾ?


Click it and Unblock the Notifications