TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಬಿಡುಗಡೆಗೆ ಸಜ್ಜುಗೊಳ್ಳುತ್ತಿರುವ ಹ್ಯುಂಡೈ ಗ್ರಾಂಡ್ ಐ10 ಫೇಸ್‍ಲಿಫ್ಟ್ ಕಾರು
ಹ್ಯುಂಡೈ ಮೋಟರ್ಸ್ ಸಂಸ್ಥೆಯು 2020ರ ವೇಳೆಗೆ 8 ಹೊಸ ಕಾರುಗಳನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಅವುಗಳಲ್ಲಿ 5 ಹೊಸ ತಲೆಮಾರಿನ ಕಾರುಗಳಾಗಿದ್ದು, ಮಾರುತಿ ಸ್ವಿಫ್ಟ್ ಹ್ಯಾಚ್‍ಬ್ಯಾಕ್ ಕಾರಿಗೆ ಪೈಪೋಟಿಯಾಗಿ ಮುಂದಿನ ತಲೆಮಾರಿನ ಗ್ರಾಂಡ್ ಐ10 ಕಾರನ್ನು ಕೂಡಾ ಪರಿಚಯಿಸುತ್ತಿದೆ.
ಮೊದಲ ಬಾರಿಗೆ ಹ್ಯುಂಡೈ ಗ್ರಾಂಡ್ ಐ10 ಕಾರು ಮೊದಲ ಬಾರಿಗೆ ಪುಣೆ ನಗರದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್‍ನ ವೇಳೆ ಕಾಣಿಸಿಕೊಂಡಿದೆ. 2013ರಲ್ಲಿ ಬಿಡುಗಡೆಗೊಂಡ ಈ ಕಾರು ಎರಡು ವರ್ಷಗಳ ಹಿಂದೆ ಜಾಗತಿಕವಾಗಿ ನವೀಕರಣವನ್ನು ಪಡೆದುಕೊಂಡಿತ್ತು. ಇದೀಗ ಸಂಸ್ಥೆಯು ಈ ಕಾರಿಗೆ ಹೊಸ ಫ್ಲಾಟ್‍ಫಾರ್ಮ್ ಅನ್ನು ಹೊಸ ಚಾಸಿಸ್‍ನ ಅಡಿಯಲ್ಲಿ ನಿರ್ಮಿಸುತ್ತಿದೆ.
ಪುಣೆಯಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾನಿಸಿಕೊಂಡ ಹ್ಯುಂಡೈ ಗ್ರಾಂಡ್ ಐ10 ಕಾರು ಪ್ರೊಟೊ ಟೈಪ್ ಉತ್ಪಾದನಾ ಸಿದ್ಧ ಮಾದರಿಯಂತೆ ಕಾಣುತ್ತದೆ. ಪ್ರಸ್ತುತ ಗ್ರಾಂಡ್ ಐ10 ಗೆ ಹೋಲಿಸಿದರೆ ಹೊಸ ಗ್ರ್ಯಾಂಡ್ ಐ10 ಸ್ಪೋರ್ಟಿ ವಿನ್ಯಾಸವನ್ನು ಪಡೆದುಕೊಂಡಿರಲಿದ್ದು, ಹಿಂದಿನ ತಲೆಮಾರಿನ ಗ್ರಾಂಡ್ ಐ10 ಕಾರಿಗಿಂತ ಅಧಿಕ ಸುತ್ತಳತೆಯನ್ನು ಹೊಂದಿರಲಿದೆ.
ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಹ್ಯುಂಡೈ ಗ್ರಾಂಡ್ ಐ10 ಕಾರಿನ ಮುಂಭಾಗದಲ್ಲಿ ಬದಲಾವಣೆಗಳನ್ನು ಕಾಣಬಹುದಾಗಿದ್ದು, ಹೆಕ್ಸಾಗನಲ್ ಗ್ರಿಲ್, ಕ್ರೋಮ್ ಅಕ್ಕ್ಸೆಂಟ್ ಮತ್ತು ಸ್ಪೋರ್ಟಿ ಬಂಪರ್‍ಗಳನ್ನು ನೀಡಲಾಗಿದೆ. ಆದರೆ ಕೊರಿಯಾ ದೇಶದಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಕಾರಿನ ಹೊರಭಾಗದಲ್ಲಿ ಎಲ್ಇಡಿ ಡಿಆರ್‍ಎಲ್ ಅನ್ನು ಪಡೆದುಕೊಂಡಿದೆ.
ಪುಣೆಯಲ್ಲಿ ಕಾಣಿಸಿಕೊಂಡ ಕಾರಿನಲ್ಲಿ ಹ್ಯಾಲೊಗನ್ ಹೆಡ್‍ಲ್ಯಾಂಪ್ಸ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಹಿಂಭಾಗದಲ್ಲಿಯು ಬದಲಾವಣೆಯನ್ನು ಕಾಣಬಹುದಾಗಿದ್ದು, ಅಗಲವಾದ ಟೈಲ್‍ಲ್ಯಾಂಪ್ಸ್, ಹೊಸ ಬಾಗಿಲುಗಳು ಮತ್ತು ಕಾರಿನ ಟಾಪ್ ಸ್ಪೆಕ್ ಮಾಡಲ್‍ನಲ್ಲಿ 15 ಇಂಚಿನ ಡೈಮಂಡ್ ಕಟ್ ಅಲಾಯ್ ಚಕ್ರಗಳನ್ನು ಅಳವಡಿಸಲಾಗಿದೆ.
ಕಾರಿನ ಹೊರ ಭಾಗವು ಈ ಬಾರಿ ವಿಶಾಲವಾಗಿರಲಿದ್ದು, ಸೌಕರ್ಯವಂತವಾದ ಲೆಗ್‍ರೂಂ ಮತ್ತು ಹೆಡ್‍ರೂಂ ಅನ್ನು ನೀಡಲಾಗಿದೆ. ಇದಲ್ಲದೆ ಲೆದರ್‍ನಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್, ಹೊಸ ಇನ್ಸ್ಟ್ರೂಮೆಂಟ್ ಕ್ಲಸ್ಟರ್‍ನೊಂಡಿಗೆ ಮಲ್ಟಿ ಇನ್ಫಾರ್‍ಮೇಷನ್ ಡಿಸ್ಪ್ಲೆ, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಆಯ್ಕೆಯನ್ನು ಸಪೋರ್ಟ್ ಮಾಡಬಲ್ಲ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ನೀಡಲಿದೆ ಎಂಬ ಭರವಸೆ ಇದೆ.
ಎಂಜಿನ್ ಸಾಮರ್ಥ್ಯ
ಬಿಡುಗಡೆಗೊಳ್ಳಲಿರುವ ಮುಂದಿನ ತಲೆಮಾರಿನ ಹೊಸ ಹ್ಯುಂಡೈ ಗ್ರಾಂಡ್ ಐ10 ಕಾರಿನ ತಾಂತ್ರಿಕ ಅಂಶಗಳಾ ಬಗ್ಗೆ ಮಾಹಿತಿ ಇನ್ನು ಬಹಿರಂಗಗೊಂಡಿಲ್ಲ. ಆದರೆ ಹಿಂದಿನ ತಲೆಮಾರಿನಲ್ಲಿ ಬಳಸಲಾದ ಎಂಜಿನ್ ಅನ್ನು ಬಳಸಲಾಗಲಿದೆ ಎಂಬ ಭರವಸೆಯಿದೆ.
ಹಿಂದಿನ ತಲೆಮಾರು ಹ್ಯುಂಡೈ ಗ್ರಾಂಡ್ ಐ10 ಕಾರಿನ 1.2 ಲೀಟರ್ 4ಸಿಲೆಂಡರ್ ಕಪ್ಪಾ ಪೆಟ್ರೋಲ್ ಎಂಜಿನ್‍ಗಳು, 83 ಬಿಹೆಚ್‍ಪಿ ಮತ್ತು 113.6 ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 4 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಅಲ್ಲದೇ 1.2 ಲೀಟರ್ ಯು2 ಸಿಆರ್‍ಡಿಐ ಡೀಸೆಲ್ ಎಂಜಿನ್‍ಗಳು 75ಬಿಹೆಚ್‍ಪಿ ಮತ್ತು 190ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಹೊಸ ಕಾರಿನ ಬೆಲೆಗಳನ್ನು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ.5 ರಿಂದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, ಈ ಕಾರು ಒಮ್ಮೆ ಬಿಡುಗಡೆಗೊಂಡಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಾಟಾ ಟಿಯಾಗೊ, ಮಾರುತಿ ಸುಜುಕಿ ಸ್ವಿಫ್ಟ್ ಮತ್ತು ಮಾರುತಿ ಸುಜುಕಿ ಸೆಲೆರಿಯೊ ಕಾರುಗಳಿಗೆ ಪೈಪೋಟಿ ನೀಡಲಿದೆ.