ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಹೋಂಡಾ ಅಮೇಜ್ ಹೊಸತನದೊಂದಿಗೆ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಸಜ್ಜಾಗುತ್ತಿದ್ದು, ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಸೌಲಭ್ಯಗಳು ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿವೆ.

By Praveen Sannamani

ಕಂಪ್ಯಾಕ್ಟ್ ಸೆಡಾನ್ ಆವೃತ್ತಿಗಳಲ್ಲಿ ಉತ್ತಮ ಬೇಡಿಕೆ ಗಳಿಸುವಲ್ಲಿ ಯಶಸ್ವಿಯಾಗಿರುವ ಹೋಂಡಾ ಅಮೇಜ್ ಹೊಸತನದೊಂದಿಗೆ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಸಜ್ಜಾಗುತ್ತಿದ್ದು, ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಸೌಲಭ್ಯಗಳು ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿವೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಈ ಹಿಂದೆ 2018ರ ದೆಹಲಿ ಆಟೋ ಎಕ್ಸ್‌ಪೋ ಪ್ರದರ್ಶನಗೊಳ್ಳುವ ಮೂಲಕ ಕಾರು ಉತ್ಪಾದಕರಲ್ಲಿ ಕುತೂಹಲ ಹುಟ್ಟುಹಾಕಿದ್ದ ನ್ಯೂ ಹೋಂಡಾ ಅಮೇಜ್ ಕಾರುಗಳು ಮುಂದಿನ ತಿಂಗಳು ಖರೀದಿಗೆ ಲಭ್ಯವಾಗುತ್ತಿದ್ದು, ಇದರ ಜೊತೆಗೆ ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿರುವುದಲ್ಲದೇ ಹೊಸ ಕಾರಿನ ಮತ್ತಷ್ಟು ತಾಂತ್ರಿಕ ಅಂಶಗಳನ್ನು ಹೊರಹಾಕಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಹೋಂಡಾ ಅಮೇಜ್ ಕಾರು ಹೋಂಡಾ ಸಿಟಿ ಕಾರಿನ ವಿನ್ಯಾಸವನ್ನು ಹೋಲಲಿದ್ದು, ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿವೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಕಾಂಪ್ಯಾಕ್ಟ್ ಸೆಡಾನ್ ಆದ ಹೋಂಡಾ ಅಮೇಜ್ ಕಾರು 15 ಇಂಚಿನ ವೀಲ್‍‍ಗಳನ್ನು ಪಡೆದಿದೆ. ಕಾರಿನ ಹಿಂಭಾಗವು ದಪ್ಪದಾದ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್‍ ಲೈಟ್ಸ್ ಗಳನ್ನು ಪಡೆದಿದ್ದು, ಇನ್ನಷ್ಟು ಆಕರ್ಷಕವಾದ ವಿನ್ಯಾಸದಿಂದ ಸಜ್ಜುಗೊಂಡಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಎಂಜಿನ್ ಸಾಮರ್ಥ್ಯ

ಬಿಡುಗಡೆಗೊಳ್ಳುತ್ತಿರುವ ಹೊಸ ಹೋಂಡಾ ಅಮೇಜ್ ಕಾರು ಪೆಟ್ರೋಲ್ ಹಾಗು ಡೀಸೆಲ್ ಆವೃತ್ತಿಗಳಲ್ಲಿ ಲಭ್ಯವಿರಲಿದ್ದು, ಇದರ 1.2 ಲೀಟರ್ ಪೆಟ್ರೋಲ್ ಎಂಜಿನ್ 88ಬಿಹೆಚ್‍ಪಿ ಹಾಗು 108ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಇನ್ನು ಇದರ 1.5 ಲೀಟರ್ ಡೀಸೆಲ್ ಎಂಜಿನ್ 100ಬಿಹೆಚ್‍ಪಿ ಹಾಗು 200ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‍‍ಗಳನ್ನು ಸಿವಿಟಿ ಟ್ರಾನ್ಸ್ ಮಿಷನ್ ಆಯ್ಕೆಯೊಂದಿಗೆ 5 ಸ್ಪೀಡ್ ಗೇರ್‍‍ಬಾಕ್ಸ್ ಗೆ ಜೋಡಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಇನ್ನು ಹೋಂಡಾ ಕಾರಿನ ವಿನ್ಯಾಸಗಳ ಬಗ್ಗೆ ಹೇಳುವುದಾದರೇ ಎಲ್ಇಡಿ ಡಿಎಲ್‍ಆರ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಜೊತೆಗಗೆ ಕೀ ಲೇಸ್ ಎಂಟ್ರಿ, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡಲಿದೆ.

ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ ನ್ಯೂ ಹೋಂಡಾ ಅಮೇಜ್

ಹೋಂಡಾ ಸಂಸ್ಥೆಯು ತಮ್ಮ ಸೆಡಾನ್ ಕಾರುಗಳ ಸಣಿಯಲ್ಲಿ ಮಾರಾಟಗಳನ್ನು ಇನ್ನಷ್ಟು ಹೆಚ್ಚಿಸಲು ಅಮೇಜ್ ಕಾರನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಬೆಲೆ ಹಾಗೂ ವೇರಿಯಂಟ್‍‍ಗಳ ಬಗ್ಗೆ ಸಂಸ್ಥೆಯು ಯಾವುದೇ ಮಾಹಿತಿಯನ್ನು ಹೊರಹಾಕಲಿಲ್ಲ.

More from DriveSpark

Article Published On: Tuesday, April 24, 2018, 11:17 [IST]
English summary
New Honda Amaze Key Features Revealed Ahead Of Launch.
Read more on honda amaze
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+