ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಹೋಂಡಾ ಅಮೇಜ್ ಹೊಸತನದೊಂದಿಗೆ ಮತ್ತೊಮ್ಮೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಕಾರಿನ ಆರಂಭಿಕ ಬೆಲೆಯನ್ನು ಎಕ್ಸ್‌ಶೋರಂ ಪ್ರಕಾರ ರೂ.5.59 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯ ಬೆಲೆಯನ್ನು ರೂ.8.99 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

By Praveen Sannamani

ಕಂಪ್ಯಾಕ್ಟ್ ಸೆಡಾನ್ ಆವೃತ್ತಿಗಳಲ್ಲಿ ಉತ್ತಮ ಬೇಡಿಕೆ ಗಳಿಸುವಲ್ಲಿ ಯಶಸ್ವಿಯಾಗಿರುವ ಹೋಂಡಾ ಅಮೇಜ್ ಹೊಸತನದೊಂದಿಗೆ ಮತ್ತೊಮ್ಮೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಕಾರಿನ ಆರಂಭಿಕ ಬೆಲೆಯನ್ನು ಎಕ್ಸ್‌ಶೋರಂ ಪ್ರಕಾರ ರೂ.5.59 ಲಕ್ಷಕ್ಕೆ ಮತ್ತು ಉನ್ನತ ಆವೃತ್ತಿಯ ಬೆಲೆಯನ್ನು ರೂ.8.99 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

2018ರ ದೆಹಲಿ ಆಟೋ ಎಕ್ಸ್‌ಪೋ ಪ್ರದರ್ಶನಗೊಳ್ಳುವ ಮೂಲಕ ಕಾರು ಉತ್ಪಾದಕರಲ್ಲಿ ಕುತೂಹಲ ಹುಟ್ಟುಹಾಕಿದ್ದ ನ್ಯೂ ಹೋಂಡಾ ಅಮೇಜ್ ಕಾರುಗಳು ಇದೀಗ ವಿನೂತನ ತಾಂತ್ರಿಕ ಅಂಶಗಳೊಂದಿಗೆ ಮರಳಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸ ಕಾರುಗಳು ಸಿಟಿ ಸೆಡಾನ್ ಮಾದರಿಯಲ್ಲೇ ವಿನ್ಯಾಸಗಳನ್ನು ಪಡೆದುಕೊಂಡಿರುವುದು ಆಕರ್ಷಣೆಗೆ ಕಾರಣವಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಹೋಂಡಾ ಸಂಸ್ಥೆಯು ಬಿಡುಗಡೆ ಮಾಡಿರುವ ಅಮೇಜ್ ಕಾರುಗಳು ಒಟ್ಟು ನಾಲ್ಕು ಮಾದರಿಯಲ್ಲಿ ಖರೀದಿ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ನಿಗದಿ ಮಾಡಲಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಹೋಂಡಾ ಅಮೇಜ್ ಕಾರುಗಳ ಬೆಲೆ ಪಟ್ಟಿ (ಎಕ್ಸ್‌ಶೋರಂ ಪ್ರಕಾರ)

ಕಾರ್ ವೆರಿಯೆಂಟ್‌ಗಳು ಪೆಟ್ರೋಲ್ ಆವೃತ್ತಿ ಡೀಸೆಲ್ ಆವೃತ್ತಿ
ಇ ಎಂಟಿ ರೂ. 5,59,900 ರೂ.6,69,900
ಎಸ್ ಎಂಟಿ ರೂ. 6,49,900 ರೂ. 7,59,900
ವಿ ಎಂಟಿ ರೂ. 7,09,900 ರೂ. 8,19,900
ವಿಎಕ್ಸ್ ಎಂಟಿ ರೂ. 7,57,900 ರೂ. 8,67,900
ಎಸ್ ಸಿವಿಟಿ ರೂ. 7,39,900 ರೂ. 8,39,900
ವಿ ಸಿವಿಟಿ ರೂ. 7,99,900 ರೂ. 8,99,900

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಕಾರಿನ ವಿನ್ಯಾಸಗಳು

ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್‍‍ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್‍ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಎಂಜಿನ್ ವೈಶಿಷ್ಟ್ಯತೆಗಳು

ಹೊಸ ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್‌ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ, 200-ಎನ್ಎಂ ಉತ್ಪಾದನೆ ಮಾಡಬಲ್ಲವು.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಇದಲ್ಲದೇ ಹೊಸ ಕಾರುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದು, ಮ್ಯಾನುವಲ್‌ಗಿಂತ ಡಿಸೇಲ್ ಆವೃತ್ತಿಗಿಂತ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಡಿಸೇಲ್ ಆವೃತ್ತಿಯು 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಮಾತ್ರ ಉತ್ಪಾದಿಸಲಿವೆಯೆಂತೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಇನ್ನು ಕಾರಿನ ವಿನ್ಯಾಸಗಳ ಬಗೆಗೆ ಹೇಳುವುದಾದರೇ, ನ್ಯೂ ಜನರೇಷನ್ ಪ್ಯಾಟ್‌ಫಾರ್ಮ್‌ ಮೇಲೆ ಸಿದ್ದಗೊಂಡಿರುವ ಹೊಸ ಅಮೇಜ್ ಕಾರುಗಳು ಹಿಂದಿನ ಮಾದರಿಗಿಂತ 134 ಕೆಜಿ ತೂಕ ಕಡಿತಗೊಂಡಿದ್ದು, ಇದು ಇಂಧನ ಕಾರ್ಯಕ್ಷಮತೆ ಹೆಚ್ಚಿಸಲು ಇದು ಪರೋಕ್ಷವಾಗಿ ಸಹಕಾರಿಯಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಅಮೇಜ್ ಕಾರಿನ ಮೈಲೇಜ್

* ಮ್ಯಾನುವಲ್ ಗೇರ್‌ಬಾಕ್ಸ್ ಕಾರುಗಳು- ಪೆಟ್ರೋಲ್ ಆವೃತ್ತಿ- 19.5 ಕಿ.ಮೀ (ಪ್ರತಿ ಲೀಟರ್‌ಗೆ), ಡಿಸೇಲ್ ಆವೃತ್ತಿ- 27.8 ಕಿ.ಮಿ (ಪ್ರತಿ ಲೀಟರ್‌ಗೆ)

* ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕಾರುಗಳು- ಪೆಟ್ರೋಲ್ ಆವೃತ್ತಿ- 19 ಕಿ.ಮೀ (ಪ್ರತಿ ಲೀಟರ್‌ಗೆ), ಡಿಸೇಲ್ ಆವೃತ್ತಿ- 23.8 ಕಿ.ಮಿ (ಪ್ರತಿ ಲೀಟರ್‌ಗೆ)

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಕಾರಿನ ಇಂಟಿರಿಯರ್ ವಿನ್ಯಾಸಗಳು

ಹೊಸ ಅಮೇಜ್ ಕಾರುಗಳು ಎಲ್ಇಡಿ ಡಿಎಲ್‍ಆರ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಜೊತೆಗಗೆ ಕೀ ಲೇಸ್ ಎಂಟ್ರಿ, ಎಬಿಎಸ್, ಇಬಿಡಿ, ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡಲಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಖರೀದಿಗೆ ಲಭ್ಯವಿರುವ ಬಣ್ಣಗಳು

ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಒಟ್ಟು 5 ಬಣ್ಣಗಳಲ್ಲಿ ಲಭ್ಯವಿರುವ ಹೊಸ ಅಮೇಜ್ ಕಾರುಗಳು ರೆಡಿಯೆಂಟ್ ರೆಡ್, ವೈಟ್ ಆರ್ಕಿಡ್ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್, ಗೊಲ್ಡನ್ ಬ್ರೌನ್ ಮೆಟಾಲಿಕ್ ಮತ್ತು ಮಾರ್ಡನ್ ಸ್ಟ್ರಿಲ್ ಮೆಟಾಲಿಕ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಚ್ಚ ಹೊಸ ಹೋಂಡಾ ಅಮೇಜ್ ಕಂಪ್ಯಾಕ್ಟ್ ಸೆಡಾನ್

ಒಟ್ಟಿನಲ್ಲಿ 2ನೇ ತಲೆಮಾರಿನ ವೈಶಿಷ್ಟ್ಯತೆಗಳನ್ನು ಹೊತ್ತು ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಅಮೇಜ್ ಕಾರುಗಳು ಪ್ರಿಮಿಯಂ ವೈಶಿಷ್ಟ್ಯತೆಗಳೊಂದಿಗೆ ಮಿಂಚುತ್ತಿದ್ದು, ಕಂಪ್ಯಾಕ್ಟ್ ಸೆಡಾನ್ ಖರೀದಿಸುವ ಗ್ರಾಹಕರನ್ನು ಹೊಸ ಅಮೇಜ್‌ ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
Read more on amaze
English summary
Honda Amaze 2018 Launched In India; Prices Start At Rs 5.59 Lakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X