ಬರಲಿರುವ ಹೋಂಡಾ ಹೊಸ ಸಿವಿಕ್ ಡಿಸೇಲ್ ಮೈಲೇಜ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು...
2018ರ ಆಟೋ ಎಕ್ಸ್ ಪೋದಲ್ಲಿ ಹೊಸ ಶೈಲಿಯ ಸಿವಿಕ್ ಕಾರುಗಳನ್ನು ಅನಾವರಣಗೊಳಿಸಲಾಗಿದೆ. ಹೀಗಾಗಿ ಬಿಡುಗಡೆಗಾಗಿ ಸಿದ್ದವಾಗಿರುವ ಸಿವಿಕ್ ಕಾರುಗಳು ಡಿಸೇಲ್ ಮೈಲೇಜ್ ವಿಚಾರವಾಗಿ ಸದ್ದು ಮಾಡುತ್ತಿವೆ.
Recommended Video

ಈ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆ ಸಾಧಿಸಿ ಕಾರಣಾಂತರಗಳಿಂದ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದ ಹೋಂಡಾ ಸಿವಿಕ್ ಸೆಡಾನ್ ಕಾರುಗಳು ಮತ್ತೆ ಖರೀದಿಗೆ ಲಭ್ಯವಾಗುತ್ತಿದ್ದು, ಇದಕ್ಕೂ ಮುನ್ನ 2018ರ ಆಟೋ ಎಕ್ಸ್ ಪೋದಲ್ಲಿ ಹೊಸ ಶೈಲಿಯ ಸಿವಿಕ್ ಕಾರುಗಳನ್ನು ಅನಾವರಣಗೊಳಿಸಲಾಗಿದೆ. ಹೀಗಾಗಿ ಬಿಡುಗಡೆಗಾಗಿ ಸಿದ್ದವಾಗಿರುವ ಸಿವಿಕ್ ಕಾರುಗಳು ಡಿಸೇಲ್ ಮೈಲೇಜ್ ವಿಚಾರವಾಗಿ ಸದ್ದು ಮಾಡುತ್ತಿವೆ.

ಸೆಡಾನ್ ಆವೃತ್ತಿಗಳಿಗೆ ವಿಶೇಷ ಬೇಡಿಕೆ ಹಿನ್ನೆಲೆ ಹೋಂಡಾ ಇಂಡಿಯಾ ಸಂಸ್ಥೆಯು ತನ್ನ ಸಿವಿಕ್ ಮಾದರಿಗಳನ್ನು ಹೊಸತನದೊಂದಿಗೆ ಮರು ಅಭಿವೃದ್ಧಿಗೊಳಿಸಿದ್ದು, ನವೆಂಬರ್ ಇಲ್ಲವೇ ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

10ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಸಿವಿಕ್ ಕಾರುಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ವಿದೇಶಿ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಲಭ್ಯವಿರುವ ಸಿವಿಕ್ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಸಿವಿಕ್ ಆವೃತ್ತಿಗಳನ್ನು ಹೊರತರುತ್ತಿದೆ.

ಸದ್ಯ ವಿದೇಶಿ ಮಾರುಕಟ್ಟೆಯಲ್ಲಿರುವ ಸಿವಿಕ್ ಕಾರುಗಳು 4 ಸಿಲಿಂಡರ್ ಸೌಲಭ್ಯದೊಂದಿಗೆ ಮೂರು ವಿವಿಧ ಪೆಟ್ರೋಲ್ ಆವೃತ್ತಿಗಳು ಮತ್ತು ಡೀಸೆಲ್ ಆವೃತ್ತಿಯಲ್ಲಿ ಒಂದು ಆವೃತ್ತಿ ಲಭ್ಯವಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಸಿವಿಕ್ ಕಾರುಗಳು ಕೊಂಚ ಬದಲಾವಣೆ ಹೊಂದಲಿವೆ.

ಮಾಹಿತಿಗಳ ಪ್ರಕಾರ ಭಾರತೀಯ ಮಾದರಿಯ ಸಿವಿಕ್ ಕಾರುಗಳು 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1. 6- ಡೀಸೆಲ್ ಎಂಜಿನ್ ಹೊಂದಿರಲಿದ್ದು, ಪೆಟ್ರೋಲ್ ವರ್ಷನ್ 158 ಬಿಎಚ್‌ಪಿ, 187 ಎನ್ಎಂ ಟಾರ್ಕ್ ಮತ್ತು ಡೀಸೆಲ್ ವರ್ಷನ್ 118 ಬಿಎಚ್‌ಪಿ, 300 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಸುಧಾರಿತ ತಂತ್ರಜ್ಞಾನಗಳ ಅಳವಡಿಕೆಯಲ್ಲಿ ಒಂದು ಹೆಜ್ಜೆ ಮುನ್ನಡೆ ಸಾಧಿಸಿರುವ ಹೋಂಡಾ ಸಂಸ್ಥೆಯು ಹೊಸ ಸಿವಿಕ್ ಕಾರುಗಳ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಿದ್ದು, ಪ್ರತಿ ಲೀಟರ್ ಡೀಸೆಲ್‌ಗೆ 30 ಕಿಮಿ ಮೈಲೇಜ್ ನೀಡಲಿವೆ ಎಂದು ಹೇಳಿಕೊಂಡಿದೆ.

ಜೊತೆಗೆ 10ನೇ ಜನರೇಷನ್ ವೈಶಿಷ್ಟ್ಯತೆ ಹೊಂದಿರುವ ಸಿವಿಕ್ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಇಲ್ಲವೇ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅಳವಡಿಕೆ ಇರಲಿದ್ದು, ಎಲ್ಇಡಿ ಟೈಲ್ ಲೈಟ್ಸ್, ಡ್ಯುಯಲ್ ಟೋನ್ ಇಂಟಿರಿಯರ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಇರಲಿದೆ.

ಇನ್ನು ಹೊಸ ಕಾರುಗಳಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಲಾರ್ಜ್ ಕ್ರೋಮ್ ಗ್ರಿಲ್, ಅಲಾಯ್ ಚಕ್ರಗಳು ಮತ್ತು 8 ಏರ್ ಬ್ಯಾಗ್ ವ್ಯವಸ್ಥೆ ಇರುವುದು ಸೆಡಾನ್ ಪ್ರಿಯರ ಆಯ್ಕೆಗೆ ಮತ್ತೊಂದು ಪ್ಲಸ್ ಪಾಯಿಂಟ್ ಆಗಲಿದೆ.

ಹೀಗಾಗಿ ಹೊಸ ಕಾರಿನ ಬೆಲೆಯು ದೆಹೆಲಿ ಎಕ್ಸ್ ಶೋರಂ ಪ್ರಕಾರ 22 ಲಕ್ಷದಿಂದ 24 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ವರ್ಷಾಂತ್ಯದಲ್ಲಿ ಬಿಡುಗಡೆಯಾಗುವ ಹೊಸ ಕಾರುಗಳು ಎಷ್ಟರ ಮಟ್ಟಿಗೆ ಬೇಡಿಕೆ ಪಡೆಯಲಿವೆ ಎನ್ನುವುದನ್ನು ಕಾಯ್ದು ನೋಡಬೇಕಿದೆ.
Trending On DriveSpark Kannada:
ಮುಖೇಶ್ ಅಂಬಾನಿ ಮಕ್ಕಳ ಲಗ್ಷುರಿ ಕಾರುಗಳ ಕಲೆಕ್ಷನ್ ಹೇಗಿದೆ ಗೊತ್ತಾ?
ವಯಸ್ಸು 103, ಆದ್ರು ಕಡಿಮೆ ಆಗಿಲ್ಲಾ ಇವರ ಕ್ಯಾಬ್ ಚಾಲನೆಯಲ್ಲಿನ ಹುಮ್ಮಸ್ಸು...
ಇದೇ ತಿಂಗಳು 28ಕ್ಕೆ ಬಿಡುಗಡೆಯಾಗಲಿವೆ ರಾಯಲ್ ಎನ್‌ಫೀಲ್ಡ್‌ನ ಮತ್ತೇರಡು ಹೊಸ ಬೈಕ್‌ಗಳು...


Click it and Unblock the Notifications








