ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ತನ್ನ ಜನಪ್ರಿಯ ಕಾರುಗಳ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಹೊಸ 2018ರ ಹ್ಯುಂಡೈ ಕ್ರೆಟಾ ಕಾರ್ ಅನ್ನು ಬಿಡುಗಡೆಗೊಳಿಸಲು ಸಜಾಗುತಿದ್ದು, ಮೇ ತಿಂಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದೆ.
ಬಿಡುಗಡೆಗು ಮುನ್ನವೆ ಹ್ಯುಂಡೈ ಕ್ರೆಟಾ ಕಾರಿನ ರಹಸ್ಯ ಚಿತ್ರವೊಂದು ಸೋರಿಕೆಯಾಗಿದ್ದು, ಭಾರತೀಯ ರಸ್ಥೆಗಳಲ್ಲಿ ಯಾವುದೆ ಮುಸುಕಿಲ್ಲದೆ ಕಾಣಿಸಿಕೊಂಡಿದೆ. ಚಿತ್ರದಲ್ಲಿ ನೋಡುವುದಾದರೆ ದಕ್ಷಿಣ ಅಮೇರಿಕಾದಲ್ಲಿ ಮಾರಾಟಾವಾಗುತ್ತಿರುವ ಕಾರಿನ ವಿನ್ಯಾಸವನ್ನೆ ಆದರಿಸಿದೆ.
ಬಿಡುಗಡೆಗೊಳ್ಳಲಿರುವ ಹೊಸ ಕ್ರೆಟಾ ಕಾರುಗಳು 1.6-ಲೀಟರ್ ಪೆಟ್ರೋಲ್, 1.4 ಮತ್ತು 1.6-ಲೀಟರ್ ಡೀಸೆಲ್ ಆವೃತ್ತಿಗಳಲ್ಲಿ ಲಭ್ಯವಿರಲಿದೆ ಎನ್ನಲಾಗಿದೆ.1.6 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 121-ಬಿಹೆಚ್‍ಪಿ ಮತ್ತು 154-ಎನ್ಎಂ ಟಾರ್ಕ್ ಉತ್ಪಾದಿಸಿದಲ್ಲಿ 1.4 ಲೀಟರ್ ಡೀಸೆಲ್ ಎಂಜಿನ್ ಮಾದರಿಯು 89-ಬಿಹೆಚ್‍ಪಿ ಮತ್ತು 224-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.
ಹಾಗೆಯೇ 1.6 ಲೀಟರ್ ಡೀಸೆಲ್ ಎಂಜಿನ್ ಮಾದರಿಯು 126-ಬಿಹೆಚ್‍ಪಿ ಮತ್ತು 256-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಎಲ್ಲಾ ಎಂಜಿನ್‍ಗಳನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 1.6-ಡೀಸೆಲ್ ಎಂಜಿನ್ ಮಾದರಿಗಳನ್ನು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿವೆ.
ಇನ್ನು ಹೊಸ ಕ್ರೆಟಾ ಫೇಸ್‍ಲಿಫ್ಟ್ ಕಾರುಗಳು ನವಿಕರಿಸಲಾಗಿರುವ ಹೆಡ್‍ಲ್ಯಾಂಪ್‍ಗಳು, ಹೊಸ ಬಂಪರ್ ಮತ್ತು ಎಲ್ಇಡಿ ಡಿಎಲ್‍ಆರ್ ಗಳನ್ನು ಪಡೆದಿದ್ದು, ರಿಯರ್ ಭಾಗವು ಕೂಡ ಹೊಸ ಬಂಪರ್‍ನೊಂದಿಗೆ ಪರಿಷ್ಕರಿಸಿದ ಟೈಲ್‍ಲೈಟ್ ಗಳನ್ನು ಪಡೆದಿದೆ.
ಇನ್ನುಳಿದಂತೆ ಕಾರಿನ ಒಳಭಾಗದಲ್ಲಿ 8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂನೊಂದಿಗೆ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಆಯ್ಕೆಯನ್ನು ನೀಡಲಾಗಿದ್ದು, ಇವು ಎಸ್‌ಯುವಿ ಪ್ರಿಯರಿಗೆ ಹೊಸ ಚಾಲನಾ ಅನುಭೂತಿ ನೀಡಲಿವೆ.
ಇದರ ಜೊತೆಗೆ ಹೊಸ ಕಾರು ಸನ್‍ರೂಫ್, ರೈನ್ ಸೆಂಸಿಂಗ್ ವೈಪರ್ಸ್, ಕ್ರೂಸ್ ಕಂಟ್ರೋಲ್ ಮತ್ತು ಆಟೋಮ್ಯಾಟಿಕ್ ಹೆಡ್‍ಲ್ಯಾಂಪ್ ಗಳನ್ನು ಪಡೆದಿದ್ದು, ಸುರಕ್ಷಾ ವೈಶಿಷ್ಟ್ಯತೆಗಳಿಗೂ ಹೆಚ್ಚಿನ ಒತ್ತು ನೀಡಲಾಗಿದೆ.
ಹೊಸ ಕ್ರೆಟಾ ಫೇಸ್‍ಲಿಫ್ಟ್ ಕಾರುಗಳ ಬೆಲೆಯು ಪ್ರಸ್ಥುತ ಮಾದರಿಗಿಂತ ಹೊಂಚ ಹೆಚ್ಚಿರಲಿದ್ದು, ಬಿಡುಗಡೆಯ ನಂತರ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್, ರೆನಾಲ್ಟ್ ಕ್ಯಾಪ್ಚರ್, ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಆಡಿ ಆರ್‌ಎಸ್5 ಸ್ಪೋರ್ಟ್ ಕೂಪೆ ಮೊದಲ ಗ್ರಾಹಕರಾದ ವಿರಾಟ್ ಕೊಹ್ಲಿ..
ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..
ರಾತ್ರಿ ವೇಳೆ ಡ್ರೈವಿಂಗ್ ಮಾಡುವ ಮುನ್ನ ಈ ಅಮೂಲ್ಯ ಟಿಪ್ಸ್‌ಗಳನ್ನು ತಪ್ಪದೇ ಪಾಲಿಸಿ...
ಇಲ್ಲಿ ಇದ್ದವರಿಗೆ ಒಂದು ಕಾನೂನು.. ಇಲ್ಲದವರಿಗೆ ಇನ್ನೊಂದು ಕಾನೂನು..
ಅತಿ ಕಡಿಮೆ ಬೆಲೆಯಲ್ಲಿ ಸಿದ್ದವಾದ ಹ್ಯಾಂಡ್ ಮೆಡ್ 1000 ಸಿಸಿ ಬೈಕ್ ಇದು..
ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Subscribe to Kannada DriveSpark